ಧರ್ಮಾಶಾಲಾ: ಟೀಮ್ ಇಂಡಿಯಾದ ಯುವ ಆಟಗಾರ ಶುಭಮನ್ ಗಿಲ್ ಅವರು ಧರ್ಮಶಾಲಾದಲ್ಲಿ ನಡೆಯುವ ಇಂಗ್ಲೆಂಡ್(IND vs ENG) ವಿರುದ್ಧದ ಅಂತಿಮ ಟೆಸ್ಟ್ ಪಂದ್ಯಕ್ಕೂ(IND vs ENG 5th test) ಮುನ್ನ ಇಲ್ಲಿನ ಬೌದ್ಧ ದೇವಾಲಯಕ್ಕೆ ಭೇಟಿ ನೀಡಿ ಬೌದ್ಧ ಸನ್ಯಾಸಿಗಳ ಆಶೀರ್ವಾದ ಪಡೆದಿದ್ದಾರೆ. ಈ ಫೋಟೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಶುಭಮನ್ ಗಿಲ್ ಅವರು ಧರ್ಮಶಾಲಾದ ಬೌದ್ಧ ಸನ್ಯಾಸಿಗಳೊಂದಿಗೆ ಕಾಲ ಕಳೆಯುತ್ತಿರುವ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಪ್ರಕಟಿಸಿದ್ದಾರೆ. ಗಿಲ್ ಅವರು ಈ ಫೋಟೊದಲ್ಲಿ ಸನ್ಯಾಸಿಗಳು ಮಾತಮಾಡುತ್ತಿರುವುದನ್ನು ದೂದರಲ್ಲಿ ಕುಳಿತು ಶ್ರದ್ಧೆಯಿಂದ ಕೇಳುತ್ತಿರುವುದನ್ನು ನೋಡಬಹುದಾಗಿದೆ. ಗಿಲ್ ಅವರ ಧಾರ್ಮಿಕ ಶ್ರದ್ಧೆಗೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಜತೆಗೆ ಗಿಲ್ ಅವರ ಈ ಧಾರ್ಮಿಕ ಶ್ರದ್ಧೆಗೆ ಕೊಹ್ಲಿಯೇ ಪ್ರೇರಣೆ ಎಂದು ನೆಟ್ಟಿಗರು ಕಮೆಂಟ್ ಮಾಡಿದ್ದಾರೆ.
Shubman Gill at 'Namyang Monastery' in Dharamshala. pic.twitter.com/ubyVbzSsMM
— Mufaddal Vohra (@mufaddal_vohra) March 4, 2024
ವಿರಾಟ್ ಕೊಹ್ಲಿ ಕ್ರಿಕೆಟ್ಗೆ ಬಂದ ಆರಂಭದಲ್ಲಿ ದೇವರು ಮತ್ತು ಪೂಜೆಯ ಮೇಲೆ ನಂಬಿಕೆಯಿಲ್ಲ ಎಂದು ಬಹಿರಂಗವಾಗಿಯೇ ಹೇಳಿದ್ದರು. ಆದರೆ, ಅನುಷ್ಕಾ ಶರ್ಮ ಅವರನ್ನು ಮದುವೆಯಾದ ಬಳಿಕ ಕೊಹ್ಲಿ ಕೂಡ ದೈವ ಭಕ್ತರಾದರು. 2 ವರ್ಷಗಳ ಕಾಲ ಬ್ಯಾಟಿಂಗ್ ವೈಫಲ್ಯ ಕಂಡು ವಿಶ್ವಾದ್ಯಂತ ಟೀಕೆಗೆ ಗುರಿಯಾಗಿದ್ದ ಸಂದರ್ಭ ಕೊಹ್ಲಿ ಉಜ್ಜಯಿನಿಯ ಮಹಾಕಾಳೇಶ್ವರ ದೇವಸ್ಥಾನಕ್ಕೆ ಭೇಟಿ ವಿಶೇಷ ಪೂಜೆ ಸಲ್ಲಿಸಿದ್ದರು. ಇದಾದ ನಂತರ ಕೊಹ್ಲಿ ತಮ್ಮ ಬ್ಯಾಟಿಂಗ್ ಫಾರ್ಮ್ ಕಂಡುಕೊಂಡು ಹಲವು ದಾಖಲೆಗಳನ್ನು ನಿರ್ಮಿಸಿದ್ದರು. ಇದೀಗ ಕೊಹ್ಲಿ ಹಲವು ಧಾರ್ಮಿಕ ಕ್ಷೇತ್ರಕ್ಕೆ ಭೇಟಿ ನೀಡುವುದನ್ನು ಮುಂದುವರಿಸಿದ್ದಾರೆ. ಇದೀಗ ಗಿಲ್ ಕೂಡ ತಮ್ಮ ರೋಲ್ ಮಾಡೆಲ್ ಕೊಹ್ಲಿಯ ಹಾದಿಯನ್ನೇ ಹಿಡಿದಿದ್ದಾರೆ ಎಂದು ನೆಟ್ಟಿಗರು ಅಭಿಪ್ರಾಯಪಟ್ಟಿದ್ದಾರೆ.
ಅಂತಿಮ ಟೆಸ್ಟ್ಗೆ ಭಾರತ ತಂಡ
ರೋಹಿತ್ ಶರ್ಮಾ (ನಾಯಕ), ಜಸ್ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ರಜತ್ ಪಾಟಿದಾರ್, ಸರ್ಫರಾಜ್ ಖಾನ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ಕೆ.ಎಸ್ ಭರತ್ (ವಿಕೆಟ್ ಕೀಪರ್), ದೇವದತ್ ಪಡಿಕ್ಕಲ್, ಆರ್. ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಆಕಾಶ್ ದೀಪ್.
ಇತ್ತೀಚೆಗೆ ಶುಭಮನ್ ಗಿಲ್ ಅವರನ್ನು ಮುಂಬರುವ ಲೋಕಸಭಾ ಚುನಾವಣೆಗೆ ಪಂಜಾಬ್ನ ರಾಯಭಾರಿಯಾಗಿ ನೇಮಿಸಲಾಗಿತ್ತು. ಪ್ರತಿಭಾನ್ವಿತ ಬಲಗೈ ಬ್ಯಾಟರ್ ಪಂಜಾಬ್ ರಾಜ್ಯಕ್ಕೆ “ರಾಜ್ಯ ಐಕಾನ್” ಆಗಿ ಕಾರ್ಯನಿರ್ವಹಿಸಲಿದ್ದಾರೆ. ಪಂಜಾಬ್ನ ಮುಖ್ಯ ಚುನಾವಣಾ ಅಧಿಕಾರಿ ಸಿಬಿನ್ ಸಿ ಈ ಗೌರವವನ್ನು ಯುವ ಆಟಗಾರನಿಗೆ ನೀಡಿದ್ದಾರೆ. ಶುಬ್ಮನ್ ಗಿಲ್ ಅವರಂತಹ ಪ್ರಭಾವಿ ವ್ಯಕ್ತಿಗಳನ್ನು ತೊಡಗಿಸಿಕೊಳ್ಳುವ ಮೂಲಕ ಮುಂಬರುವ 2024 ರ ಚುನಾವಣೆಯಲ್ಲಿ 70% ಕ್ಕಿಂತ ಹೆಚ್ಚು ಮತದಾನವನ್ನು ಸಾಧಿಸುವ ಭರವಸೆಯನ್ನು ಚುನಾವಣಾ ಆಯೋಗ ಹೊಂದಿದೆ.