ಹೈದರಾಬಾದ್ : ಭಾರತದ ಸ್ಟಾರ್ ಬ್ಯಾಡ್ಮಿಂಟನ್ ತಾರೆ ಪಿ.ವಿ ಸಿಂಧೂ ಸೆಪ್ಟೆಂಬರ್ ೨೯ರಂದು ಆರಂಭವಾಗಲಿರುವ ನ್ಯಾಷನಲ್ ಗೇಮ್ಸ್‌ನಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಹೇಳಿದ್ದಾರೆ. ಗಾಯದ ಸಮಸ್ಯೆಯಿಂದ ಇನ್ನೂ ನಾನು ಸುಧಾರಿಸಿಕೊಂಡಿಲ್ಲ. ಆದರೆ, ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದಾಗಿ ಅವರು ಹೇಳಿದ್ದಾರೆ.
ಕಳೆದ ಬರ್ಮಿಂಗ್ಹಮ್ ಕಾಮನ್ವೆಲ್ತ್ ಗೇಮ್ಸ್ ವೇಳೆ ಪಿ. ವಿ. ಸಿಂಧೂ ಅವರು ಗಾಯದ ಸಮಸ್ಯೆಗೆ ಒಳಗಾಗಿದ್ದರು. ಹೀಗಾಗಿ ಅವರು ಬಿಡಬ್ಲ್ಯುಎಫ್ ವಿಶ್ವ ಚಾಂಪಿಯನ್‌ಷಿಪ್‌ನಲ್ಲಿ ಪಾಲ್ಗೊಂಡಿರಲಿಲ್ಲ. ಆದರೆ, ಭಾರತೀಯ ಒಲಿಂಪಿಕ್ ಅಸೋಸಿಯೇಷನ್‌ಸೂಚನೆ ಪ್ರಕಾರ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಗಳುಗಳೂ ಈ ಕೂಟದಲ್ಲಿ ಪಾಲ್ಗೊಳ್ಳಬೇಕು. ಆದರೆ, ಸಿಂಧೂ ಗಾಯಗೊಂಡಿರುವ ಕಾರಣ ಅವರು ಈ ಬಾರಿ ಪಾಲ್ಗೊಳ್ಳುತ್ತಿಲ್ಲ ಎಂದು ಹೇಳಿದ್ದಾರೆ.
“ಗಾಯದ ಸಮಸ್ಯೆಯಿಂದಾಗಿ ನ್ಯಾಷನಲ್ ಗೇಮ್ಸ್‌ನಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ. ಒಂದು ವೇಳೆ ನಾನು ಫಿಟ್ ಆಗಿದ್ದರೆ ನನ್ನ ರಾಜ್ಯವನ್ನು ಪ್ರತಿನಿಧಿಸುತ್ತಿದ್ದೆ,” ಎಂಬುದಾಗಿ ಸಿಂಧೂ ಹೇಳಿದ್ದಾರೆ.