ಕರಾಚಿ: ಪಾಕಿಸ್ತಾನ ತಂಡದ ಎಡಗೈ ವೇಗಿ ಸೊಹೈಲ್ ತನ್ವೀರ್(Sohail Tanvir) ಮಂಗಳವಾರ(ಮಾರ್ಚ್ 7) ಎಲ್ಲ ಮಾದರಿಯ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ. ಆದರೆ ದೇಶೀಯ ಮತ್ತು ಫ್ರಾಂಚೈಸಿ ಕ್ರಿಕೆಟ್‌ನಲ್ಲಿ ಆಟ ಮುಂದುವರಿಸುವುದಾಗಿ ಸ್ಪಷ್ಟಪಡಿಸಿದ್ದಾರೆ.
“ಅಂತಾರಾಷ್ಟ್ರೀಯ ಕ್ರಿಕೆಟ್‌ನ ಎಲ್ಲ ಮಾದರಿಗೆ ನಿವೃತ್ತಿ ಘೋಷಿಸುತ್ತಿದ್ದೇನೆ, ಆದರೆ ದೇಶೀಯ ಕ್ರಿಕೆಟ್ ಹಾಗೂ ಫ್ರಾಂಚೈಸಿ ಕ್ರಿಕೆಟ್‌ನಲ್ಲಿ ಆಡುವುದನ್ನು ಮುಂದುವರಿಸಲಿದ್ದೇನೆ. ನನ್ನ ದೇಶದ ಪರವಾಗಿ ಆಡಲು ಅವಕಾಶ ನೀಡಿದ ಪಿಸಿಬಿಗೆ ಧನ್ಯವಾದಗಳು” ಎಂದು ತನ್ವೀರ್ ಟ್ವೀಟ್ ಮೂಲಕ ಹೇಳಿದ್ದಾರೆ.
2017ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಸೊಹೈಲ್ ತನ್ವೀರ್ ಅವರು ಕೊನೆಯ ಬಾರಿಗೆ ಪಾಕ್ ಪರ ಅಂತಾರಾಷ್ಟ್ರೀಯ ಪಂದ್ಯವನ್ನು ಆಡಿದ್ದರು. ಇದಾದ ಬಳಿಕ ಅವರು ಪಾಕ್ ತಂಡದಲ್ಲಿ ಸ್ಥಾನ ಪಡೆಯಲು ವಿಫಲರಾಗಿದ್ದರು. ಇದೀಗ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಗುಡ್ ಬೈ ಹೇಳಿದ್ದಾರೆ.
ಇದನ್ನೂ ಓದಿ Team India Holi: ಹೋಳಿ ಆಚರಿಸಿದ ಟೀಮ್ ಇಂಡಿಯಾ
2007ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ ಸೋಹೈಲ್ ವಿಭಿನ್ನ ಶೈಲಿಯ ಬೌಲಿಂಗ್ ಪ್ರದರ್ಶನದ ಮೂಲಕ ಬ್ಯಾಟರ್ಗಳಿಗೆ ಕಾಡುತ್ತಿದ್ದರು. ಅವರು 11 ಐಪಿಎಲ್ ಪಂದ್ಯಗಳನ್ನು ಆಡಿದ್ದು 22 ವಿಕೆಟ್ ಕಿತ್ತಿದ್ದಾರೆ. ಉದ್ಘಾಟನಾ ಆವೃತ್ತಿಯ ಐಪಿಎಲ್ ಚಾಂಪಿಯನ್ ರಾಜಸ್ಥಾನ ತಂಡದ ಸದಸ್ಯರಾಗಿದ್ದರು. ಐಪಿಎಲ್ನ ಒಂದು ಪಂದ್ಯದಲ್ಲಿ 6 ವಿಕೆಟ್ ಕಿತ್ತ ಸಾಧನೆಯೂ ಅವರ ಹೆಸರಿನಲ್ಲಿದೆ.