ಬೆಂಗಳೂರು: ಭಾರತದ ಆತಿಥ್ಯದಲ್ಲಿ ನಡೆಯುವ ಏಕದಿನ ವಿಶ್ವಕಪ್ ಟೂರ್ನಿಗೆ(ICC World Cup) ಇನ್ನು ಭರ್ತಿ 40 ದಿನಗಳು ಬಾಕಿ ಉಳಿದಿವೆ. ಈ ಮಹತ್ವದ ಟೂರ್ನಿ ಅಕ್ಟೋಬರ್ 5ರಿಂದ(icc world cup 2023 schedule) ಆರಂಭವಾಗಲಿದೆ. ಉದ್ಘಾಟನ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ಮತ್ತು ನ್ಯೂಜಿಲ್ಯಾಂಡ್ ತಂಡಗಳು ಮುಖಾಮುಖಿಯಾಗಲಿವೆ. ಈಗಾಗಲೇ ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ(ENG vs NZ) ಸಂಭಾವ್ಯ ತಂಡಗಳನ್ನು ಪ್ರಕಟಿಸಿದೆ. ಇದೀಗ ಸೌರವ್ ಗಂಗೂಲಿ(sourav ganguly) ಅವರು ವಿಶ್ವಕಪ್ಗೆ 15 ಸದಸ್ಯರ ತಂಡವೊಂದನ್ನು ಆಯ್ಕೆ ಮಾಡಿದ್ದಾರೆ.
ಚಹಲ್ಗೆ ಜಾಗವಿಲ್ಲ
ಟೀಮ್ ಇಂಡಿಯಾದ ಮಾಜಿ ನಾಯಕ ಮತ್ತು ಬಿಸಿಸಿಐ ಅದ್ಯಕ್ಷರಾಗಿದ್ದ ಗಂಗೂಲಿ ಆಯ್ಕೆ ಮಾಡಿದ ತಂಡದಲ್ಲಿ ಕನ್ನಡಿಗ ಕೆ.ಎಲ್ ರಾಹುಲ್ ಕೂಡ ಸ್ಥಾನ ಪಡೆದಿದ್ದಾರೆ. ಅಚ್ಚರಿ ಎಂದರೆ ತಿಲಕ್ ವರ್ಮಾ ಮತ್ತು ಅನುಭವಿ ಯಜುವೇಂದ್ರ ಚಹಲ್ ಅವರಿಗೆ ಪ್ರಧಾನ ತಂಡದಲ್ಲಿ ಅವಕಾಶ ನೀಡಿಲ್ಲ. ಈ ಉಭಯ ಆಟಗಾರರನ್ನು ಮೀಸಲು ಆಟಗಾರರಾಗಿ ಪರಿಗಣಿಸಿದ್ದಾರೆ. ಏಷ್ಯಾಕಪ್ನಲ್ಲಿಯೂ ಚಹಲ್ ಅವಕಾಶ ಪಡೆಯುವಲ್ಲಿ ವಿಫಲಾಗಿದ್ದರು.
5 ಮಂದಿ ಬ್ಯಾಟರ್ಗಳು
ತಂಡದಲ್ಲಿ 5 ಬ್ಯಾಟರ್ಗಳನ್ನು ಗಂಗೂಲಿ ಆಯ್ಕೆ ಮಾಡಿದ್ದಾರೆ. ರೋಹಿತ್ ಶರ್ಮಾ, ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ ಮತ್ತು ಕೆ.ಎಲ್ ರಾಹುಲ್ ಸೇರಿ ಒಟ್ಟು ಐವರು ಬ್ಯಾಟ್ಸ್‌ಮನ್‌ಗಳಿಗೆ ಅವಕಾಶ ನೀಡಿದ್ದಾರೆ. ಆಲ್ರೌಂಡರ್ ಕೋಟದಲ್ಲಿ ಒಟ್ಟು ಮೂವರನ್ನು ಆಯ್ಕೆ ಮಾಡಿದ್ದಾರೆ. ರವೀಂದ್ರ ಜಡೇಜಾ, ಹಾರ್ದಿಕ್ ಪಾಂಡ್ಯ ಮತ್ತು ಅಕ್ಷರ್ ಪಟೇಲ್ ಕಾಣಸಿಕೊಂಡಿದ್ದಾರೆ.
ಬಲಿಷ್ಠ ಬೌಲಿಂಗ್ ಲೈನ್
ಬೌಲಿಂಗ್ ವಿಭಾಗದಲ್ಲಿ ಜಸ್‌ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್ ಆಡುವ ಬಳಗಲ್ಲಿ ಕಾಣಿಸಿಕೊಳ್ಳಬೇಕು ಎಂದು ಗಂಗೂಲಿ ಅಭಿಪ್ರಾಯಪಟ್ಟಿದ್ದಾರೆ. ಈ ಮೂವರ ಬೌಲಿಂಗ್ ಕಾಂಬಿನೇಷನ್ ತಂಡಕ್ಕೆ ಹೆಚ್ಚು ಬಲ ತುಂಬಲಿದೆ ಎಂದಿದ್ದಾರೆ. ರಾಹುಲ್ ಅವರನ್ನು ಕೀಪರ್ ಕಮ್ ಬ್ಯಾಟರ್ ಆಗಿ ಆಯ್ಕೆ ಮಾಡಿದ್ದಾರೆ. ನಾಲ್ಕನೇ ಕ್ರಮಾಂಕವನ್ನು ಶ್ರೇಯಸ್ ಅಯ್ಯರ್ಗೆ ನೀಡಿದ್ದಾರೆ.
ಗಂಗೂಲಿ ಆಯ್ಕೆಯ ವಿಶ್ವಕಪ್ ತಂಡ
ರೋಹಿತ್ ಶರ್ಮಾ(ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್ (ಮೀಸಲು ವಿಕೆಟ್ ಕೀಪರ್), ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಜಸ್‌ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಶಾರ್ದುಲ್ ಠಾಕೂರ್. ಮೀಸಲು ಆಟಗಾರರು: ತಿಲಕ್ ವರ್ಮಾ, ಯಜುವೇಂದ್ರ ಚಹಲ್, ಪ್ರಸಿದ್ಧ್ ಕೃಷ್ಣ
ಸೆಪ್ಟೆಂಬರ್ 29 ರಿಂದ ಅಭ್ಯಾಸ ಪಂದ್ಯ
ವಿಶ್ವ ಕಪ್ ಟೂರ್ನಿ ಅಕ್ಟೋಬರ್ 5 ರಿಂದ ಆರಂಭವಾಗಿ ನವೆಂಬರ್ 19ರ ತನಕ ನಡೆಯಲಿದೆ. ರೌಂಡ್ ರಾಬಿನ್ ಮಾದರಿಯಲ್ಲಿ ನಡೆಯುವ ಈ ಕೂಟದಲ್ಲಿ ಎಲ್ಲ ತಂಡಗಳು ಮುಖಾಮುಖಿಯಾಗಲಿವೆ. ಒಟ್ಟು 48 ಪಂದ್ಯಗಳು ನಡೆಯಲಿವೆ(icc world cup 2023 total matches) ಸೆಪ್ಟೆಂಬರ್ 29 ರಿಂದ ಅಕ್ಟೋಬರ್ 3ರವರೆಗೆ 10 ಅಭ್ಯಾಸ ಪಂದ್ಯಗಳು(icc world cup 2023 practice match) ನಡೆಯಲಿದೆ.
ಇದನ್ನೂ ಓದಿ ICC World Cup: ವಿಶ್ವಕಪ್ನಲ್ಲಿ 4ನೇ ಕ್ರಮಾಂಕಕ್ಕೆ ಕೊಹ್ಲಿಪರ್ಫೆಕ್ಟ್; ಗೆಳೆಯನಿಂದ ಸಲಹೆ
ಅಭ್ಯಾಸ ಪಂದ್ಯದಲ್ಲಿ ಎಲ್ಲ ತಂಡಗಳು ಎರಡು ಪಂದ್ಯಗಳನ್ನು ಆಡಲಿವೆ. ಆತಿಥೇಯ ಭಾರತ(IND vs ENG) ತಂಡ ತನ್ನ ಮೊದಲ ಅಭ್ಯಾಸ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ತಂಡವನ್ನು ಎದುರಿಸಲಿದೆ. ಭಾರತ ತನ್ನ ಮೊದಲ ಲೀಗ್ ಪಂದ್ಯವನ್ನು ಆಸ್ಟ್ರೇಲಿಯಾ ವಿರುದ್ಧ ಅಕ್ಟೋಬರ್ 8 ರಂದು ಆಡಲಿದೆ.