Site icon Vistara News

IND vs SA: ಟಾಸ್​ ಗೆದ್ದ ದಕ್ಷಿಣ ಆಫ್ರಿಕಾ; ಭಾರತಕ್ಕೆ ಬ್ಯಾಟಿಂಗ್​ ಆಹ್ವಾನ

South Africa opt to bowl

ಗ್ಕೆಬರ್ಹಾ: ಪ್ರವಾಸಿ ಭಾರತ ವಿರುದ್ಧದ ದ್ವಿತೀಯ ಟಿ20 ಪಂದ್ಯದಲ್ಲಿ ಟಾಸ್​ ಗೆದ್ದ ದಕ್ಷಿಣ ಆಫ್ರಿಕಾ ಬೌಲಿಂಗ್​ ಆಯ್ಕೆ ಮಾಡಿಕೊಂಡಿದೆ. ಭಾರತ ತಂಡ ಮೊದಲು ಬ್ಯಾಟಿಂಗ್​ ನಡೆಸಲಿದೆ. ಏಕದಿನ ವಿಶ್ವಕಪ್​ ಆಡಿದ ಬಳಿಕ ವಿಶ್ರಾಂತಿಯಲ್ಲಿದ್ದ ಶುಭಮನ್​ ಗಿಲ್​, ರವೀಂದ್ರ ಜಡೇಜಾ ಮತ್ತು ಮೊಹಮ್ಮದ್​ ಸಿರಾಜ್​ ಈ ಪಂದ್ಯದ ಮೂಲಕ ಮತ್ತೆ ಕ್ರಿಕೆಟ್​ ಮೈದಾನಕ್ಕಿಳಿದರು. ಆಸೀಸ್​ ವಿರುದ್ಧದ ತವರಿನ ಟಿ20 ಪಂದ್ಯದಿಂದ ಇವರೆಲ್ಲ ಹೊರಗುಳಿದಿದ್ದರು.

ಟಿ20 ಮುಖಾಮುಖಿ

ಇತ್ತಂಡಗಳು ಇದುವರೆಗೆ 24 ಟಿ20 ಪಂದ್ಯಗಳಲ್ಲಿ ಪರಸ್ಪರ ಮುಖಾಮುಖಿಯಾಗಿದ್ದು, ಭಾರತವು 13 ಪಂದ್ಯಗಳನ್ನು ಗೆದ್ದಿದೆ. ದಕ್ಷಿಣ ಆಫ್ರಿಕಾ 10 ಪಂದ್ಯಗಳಲ್ಲಿ ಗೆಲುವು ಕಂಡಿದೆ. ಒಂದು ಪಂದ್ಯವು ಫಲಿತಾಂಶವಿಲ್ಲದೆ ಕೊನೆಗೊಂಡಿದೆ. ದಕ್ಷಿಣ ಆಫ್ರಿಕಾದಲ್ಲಿ, ‘ಮೆನ್ ಇನ್ ಬ್ಲೂ’ ಏಳು ಪಂದ್ಯಗಳನ್ನು ಆಡಿ ಐದರಲ್ಲಿ ಗೆದ್ದಿದ್ದರೆ, ಆತಿಥೇಯರು ಎರಡರಲ್ಲಿ ಗೆದ್ದಿದ್ದಾರೆ. ಬಲಾಬಲದ ಲೆಕ್ಕಾಚಾರದಲ್ಲಿ ಭಾರತ ಬಲಿಷ್ಠವಾಗಿದೆ.

ಡರ್ಬಾನ್​ನಲ್ಲಿ ಭಾನುವಾರ ನಡೆಯಬೇಕಿದ್ದ ಮೊದಲ ಪಂದ್ಯ ಟಾಸ್​ ಕೂಟ ಕಾಣದೆ ರದ್ದುಗೊಂಡಿತ್ತು. ಇದರಿಂದ ಕ್ರಿಕೆಟ್​ ಅಭಿಮಾನಿಗಳು ಬೇಸರಗೊಂಡಿದ್ದರು. ಆದರೆ ದ್ವಿತೀಯ ಪಂದ್ಯ ಮಳೆಯ ಭೀತಿ ಇದ್ದರೂ ಸದ್ಯ ಆರಂಭವಾಗಿದೆ. ದ್ವಿತೀಯ ಪಂದ್ಯಕ್ಕೂ ಶೇ.65ರಷ್ಟು ಮಳೆಯ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿತ್ತು. ಅಭಿಮಾನಗಳ ಬಯಕೆಯಂತೆ ವರುಣ ದೇವ ಈ ಪಂದ್ಯಕ್ಕೆ ಬಿಡುವ ಮಾಡಿಕೊಂಡಂತೆ ಕಾಣುತ್ತಿದೆ. ಆದರೂ ಸಣ್ಣ ಪ್ರಮಾಣದಲ್ಲಿ ಮಳೆ ಕಾಣಿಸಿಕೊಂಡಿದೆ.

ಪಿಚ್​ ರಿಪೋರ್ಟ್​

ಸೇಂಟ್ ಜಾರ್ಜ್ ಪಾರ್ಕ್‌ನಲ್ಲಿನ ಪಿಚ್​ ಮೇಲ್ಮೈ ಬ್ಯಾಟರ್‌ಗಳಿಗೆ ಸಹಾಯ ಮಾಡುತ್ತದೆ ಎಂದು ನಿರೀಕ್ಷಿಸಲಾಗಿದೆ. ಆದಾಗ್ಯೂ, ಆಟ ಸಾಗುತ್ತಲೇ ಹೋದಾಗ ಸ್ಪಿನ್ನರ್‌ಗಳು ಸ್ವಲ್ಪ ಸಹಾಯವನ್ನು ಪಡೆಯಬಹುದು. ಇಲ್ಲಿ ಮೊದಲು ಬ್ಯಾಟಿಂಗ್​ ನಡೆಸಿದ ತಂಡಗಳೇ ಹೆಚ್ಚಾಗಿ ಗೆದ್ದಿದೆ. ಪಿಚ್​ ತಿರುವು ಪಡೆಯುವ ಕಾರಣ ದ್ವಿತೀಯ ಇನಿಂಗ್ಸ್​ನಲ್ಲಿ ಬ್ಯಾಟಿಂಗ್​ ನಡೆಸುವುದು ಕಷ್ಟಕರ.

ಆಡುವ ಬಳಗ

ಭಾರತ: ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್(ನಾಯಕ), ರಿಂಕು ಸಿಂಗ್, ಜಿತೇಶ್ ಶರ್ಮಾ(ವಿಕೆಟ್​ ಕೀಪರ್​), ರವೀಂದ್ರ ಜಡೇಜಾ, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಅರ್ಶದೀಪ್​ ಸಿಂಗ್, ಮುಖೇಶ್ ಕುಮಾರ್

ದಕ್ಷಿಣ ಆಫ್ರಿಕಾ: ಮ್ಯಾಥ್ಯೂ ಬ್ರೀಟ್ಜ್ಕೆ, ರೀಜಾ ಹೆಂಡ್ರಿಕ್ಸ್, ಐಡೆನ್ ಮಾರ್ಕ್ರಾಮ್ (ನಾಯಕ), ಹೆನ್ರಿಚ್ ಕ್ಲಾಸೆನ್ (ವಿಕೆಟ್​ ಕೀಪರ್​), ಡೇವಿಡ್ ಮಿಲ್ಲರ್, ಟ್ರಿಸ್ಟಾನ್ ಸ್ಟಬ್ಸ್, ಮಾರ್ಕೊ ಜಾನ್ಸೆನ್, ಆಂಡಿಲ್ ಫೆಹ್ಲುಕ್ವಾಯೊ, ಜೆರಾಲ್ಡ್ ಕೊಯೆಟ್ಜಿ, ಲಿಜಾಡ್ ವಿಲಿಯಮ್ಸ್, ತಬ್ರೈಜ್ ಶಮ್ಸಿ.

Exit mobile version