Site icon Vistara News

Spiritual Hardik Pandya: ಗಂಟೆ ಬಾರಿಸಿ ದೇವರಿಗೆ ಆರತಿ ಬೆಳಗಿದ ಹಾರ್ದಿಕ್​ ಪಾಂಡ್ಯ

Spiritual Hardik Pandya

ಮುಂಬಯಿ: ಭಾರತ ಕ್ರಿಕೆಟ್​ ತಂಡದ ಅನುಭವಿ ಆಲ್​ರೌಂಡರ್​ ಹಾರ್ದಿಕ್​ ಪಾಂಡ್ಯ(Hardik Pandya) ಅವರು ಕಳೆದ ವರ್ಷ ವಿಶ್ವಕಪ್​ ವೇಳೆ ಗಾಯಗೊಂಡು ಐಪಿಎಲ್​ ಮೂಲಕ ಮತ್ತೆ ತಂಡ ಸೇರುವ ನಿರೀಕ್ಷೆಯಲ್ಲಿದ್ದಾರೆ. ಅಭ್ಯಾಸವನ್ನು ಕೂಡ ಆರಂಭಿಸಿದ್ದಾರೆ. ಇದೀಗ ಪಾಂಡ್ಯ(Spiritual Hardik Pandya) ಅವರು ತಮ್ಮ ಮನೆಯಲ್ಲಿ ದೇವರಿಗೆ ಪೂಜೆ ಮಾಡಿದ ವಿಡಿಯೊ ವೈರಲ್​ ಆಗಿದೆ.

ಹಾರ್ದಿಕ್​ ಪಾಂಡ್ಯ ಅವರು ತಮ್ಮ ನಿವಾಸದಲ್ಲಿ ದೇವರಿಗೆ ಆರತಿ ಬೆಳಗಿ ಪ್ರಾರ್ಥಿಸಿ ತಮ್ಮ ಇಷ್ಟಾರ್ಥಗಳನ್ನು ಕೇಳಿಕೊಂಡಿದ್ದಾರೆ. ಮಗನಿಗೂ ದೇವರಿಗೆ ಕೈ ಮುಗಿದು ಆಶೀರ್ವಾದ ಪಡೆಯುವುವಂತೆ ತಿಳಿಸಿದ್ದಾರೆ. ದೇವರ ಪೂಜೆ ಬಳಿಕ ಪಾಂಡ್ಯ ಯೋಗ ಮಾಡಿದ್ದಾರೆ. ಈ ವಿಡಿಯೊವನ್ನು ಪಾಂಡ್ಯ ತಮ್ಮ ಅಧಿಕೃತ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಹಂಚಿಕೊಂಡು ‘ಆಚರಣೆಗಳು’ ಎಂದು ಬರೆದುಕೊಂಡಿದ್ದಾರೆ. ಈ ವಿಡಿಯೊ ಕಂಡ ನೆಟ್ಟಿಗರು ಭವಿಷ್ಯದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಲು ದೇವರು ನಿಮಗೆ ಹೆಚ್ಚಿನ ಶಕ್ತಿಯನ್ನು ನೀಡಲಿ ಎಂದು ಪಾಂಡ್ಯಗೆ ಹಾರೈಸಿದ್ದಾರೆ.


ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ಬಾಂಗ್ಲಾದೇಶ ವಿರುದ್ಧದ ಲೀಗ್​ ಪಂದ್ಯ ಆಡುವಾಗ ಚೆಂಡನ್ನು ತಡೆಯುವ ಯತ್ನದಲ್ಲಿ ಅವರ ಹಿಮ್ಮಡಿಗೆ ಗಾಯವಾಗಿತ್ತು. ಬಳಿಕ ಅವರು ವಿಶ್ವಕಪ್​ ಟೂರ್ನಿಯಿಂದಲೇ ಹೊರಬಿದ್ದಿದ್ದರು. ಸದ್ಯ ಸಂಪೂರ್ಣ ಚೇತರಿಕೆ ಕಂಡಿರುವ ಪಾಂಡ್ಯ ಕಠಿಣ ಕ್ರಿಕೆಟ್​ ಅಭ್ಯಾಸ ಆರಂಭಿಸಿದ್ದಾರೆ. ಅಭ್ಯಾಸ ಆರಂಭಿಸುವ ಮುನ್ನ ಮಾತನಾಡಿದ ಪಾಂಡ್ಯ, 17 ವರ್ಷದ ಹಿಂದೆ ನನ್ನ ಕ್ರಿಕೆಟ್ ಪಯಣ ಆರಂಭವಾಗಿದ್ದ ಇದೇ ಕ್ರೀಡಾಂಗಣದಲ್ಲಿ ಮತ್ತೆ ಕ್ರಿಕೆಟ್​ ಕಮ್​ಬ್ಯಾಕ್​ಗೆ ಅಭ್ಯಾಸ ನಡೆಸುತ್ತಿರುವುದು ಸಂತಸ ತಂದಿದೆ. ಈ ಮೈದಾನದಲ್ಲಿ ಮರೆಯಲಾಗದ ಸ್ಮರಣೀಯ ನೆನಪುಗಳು ಇವೆ” ಎಂದು ಹೇಳಿದ್ದರು.

ಇದನ್ನೂ ಓದಿ Hardik Pandya: ಫಿಟ್​ನೆಸ್​​​ ವಿಡಿಯೊ ಹಂಚಿಕೊಂಡು ಎಚ್ಚರಿಕೆ ನೀಡಿದ​ ಹಾರ್ದಿಕ್​ ಪಾಂಡ್ಯ

ಪಾಂಡ್ಯ ಅವರು ಇಂಡಿಯನ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಿಯಲ್ಲಿ ಆಡುವ ಮೂಲಕ ಕ್ರಿಕೆಟ್​ ಕಮ್​ಬ್ಯಾಕ್​ ಮಾಡುವ ನಿರೀಕ್ಷೆಯಲ್ಲಿದ್ದಾರೆ. ಗುಜರಾತ್​ ಟೈಟಾನ್ಸ್​ ತಂಡ ತೊರೆದಿರುವ ಪಾಂಡ್ಯ ಮುಂಬೈ ಇಂಡಿಯನ್ಸ್ ತಂಡದ ನಾಯಕರಾಗಿದ್ದಾರೆ.

2022-23 ರಿಂದ ಗುಜರಾತ್ ಟೈಟಾನ್ಸ್‌ ಪರ 31 ಪಂದ್ಯಗಳನ್ನು ಆಡಿರುವ ಪಾಂಡ್ಯ, 37.86 ರ ಸರಾಸರಿಯಲ್ಲಿ 133 ಸ್ಟ್ರೈಕ್ ರೇಟ್‌ನಲ್ಲಿ 833 ರನ್ ಗಳಿಸಿದ್ದರು. ಇದರಲ್ಲಿ ಆರು ಅರ್ಧ ಶತಕಗಳು ಬಾರಿಸಿದ್ದರು. ಅಜೇಯ 87 ರನ್​ ಗರಿಷ್ಠ ವೈಯಕ್ತಿಕ ಮೊತ್ತವಾಗಿದೆ. ಬೌಲಿಂಗ್​ನಲ್ಲಿಯೂ ಕಮಾಲ್ ಮಾಡಿ 11 ವಿಕೆಟ್‌ಗಳನ್ನು ಉರುಳಿಸಿದ್ದಾರೆ. 17 ರನ್​ಗೆ 3 ವಿಕೆಟ್​ ಅತ್ಯುತ್ತಮ ಬೌಲಿಂಗ್​ ಪ್ರದರ್ಶನವಾಗಿದೆ.

ಪಾಂಡ್ಯ ಅವರು 2015-2021ರಲ್ಲಿ ಮುಂಬೈ ಇಂಡಿಯನ್ಸ್​ ಪರ ಒಟ್ಟು 92 ಪಂದ್ಯಗಳನ್ನು ಆಡಿದ್ದರು. 153 ಕ್ಕಿಂತ ಹೆಚ್ಚಿನ ಸ್ಟ್ರೈಕ್ ರೇಟ್‌ನಲ್ಲಿ 27.33 ರ ಸರಾಸರಿಯಲ್ಲಿ 1,476 ರನ್ ಗಳಿಸಿದ್ದಾರೆ, ನಾಲ್ಕು ಅರ್ಧ ಶತಕಗಳು ಹಾಗೂ 42 ವಿಕೆಟ್‌ಗಳನ್ನು ಪಡೆದಿದ್ದಾರೆ.

Exit mobile version