Site icon Vistara News

Abhishek Sharma: ಮಾಡೆಲ್ ಆತ್ಮಹತ್ಯೆ; ಐಪಿಎಲ್​ ಸ್ಟಾರ್​ ಅಭಿಷೇಕ್‍ಗೆ ಸಮನ್ಸ್

Model Tania Singh

ಸೂರತ್​: ಸನ್‌ರೈಸರ್ಸ್ ಹೈದರಾಬಾದ್ (SRH) ತಂಡದ ಆಲ್‌ರೌಂಡರ್ ಅಭಿಷೇಕ್ ಶರ್ಮಾ(Abhishek Sharma) ಅವರು ವಿವಾದವೊಂದರಲ್ಲಿ ಸಿಲುಕಿದ್ದಾರೆ. ಸೂರತ್ ಮೂಲದ ಜನಪ್ರಿಯ ಮಾಡೆಲ್ ತಾನಿಯಾ ಸಿಂಗ್(Model Tania Singh) ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ಪೊಲೀಸರು ಅವರಿಗೆ ಸಮನ್ಸ್ ನೀಡಿದ್ದಾರೆ.

ರೂಪದರ್ಶಿ ತನಿಯಾ ಸಿಂಗ್ (28) ಅವರು ಇತ್ತೀಚೆಗೆ ಸೂರತ್‍ನ ತಮ್ಮ ಅಪಾರ್ಟ್‍ಮೆಂಟ್‍ನಲ್ಲಿ ನಿಗೂಢವಾಗಿ ಆತ್ಮಹತ್ಯೆಗೆ ಶರಣಾಗಿದ್ದರು. ಅವರ ಆತ್ಮಹತ್ಯೆಯ ಕೇಸ್‌ನಲ್ಲಿ ಸ್ಥಳೀಯ ಪೊಲೀಸರು ವಿಚಾರಣೆಗೆ ಬರುವಂತೆ ಅಭಿಷೇಕ್​ಗೆ ಸಮನ್ಸ್‌ ಜಾರಿ ಮಾಡಿದ್ದಾರೆ. ಮಾಡೆಲ್‌ ತಾನಿಯಾ ಸಿಂಗ್‌ ತನ್ನ ಕೊನೆಯ ಫೋನ್​ ಕರೆಯನ್ನು ಅಭಿಷೇಕ್‌ ಶರ್ಮಗೆ ಮಾಡಿದ್ದರು ಎನ್ನುವುದು ತನಿಖೆಯಿಂದ ತಿಳಿದುಬಂದಿದೆ. ಈ ನಿಟ್ಟಿನಲ್ಲಿ ಪೊಲೀಸರು ಅವರಿಗೆ ಸಮನ್ಸ್ ನೀಡಿ ತನಿಖೆ ನಡೆಸಲಿದ್ದಾರೆ. ಕಳೆದ ಎರಡೂವರೆ ವರ್ಷಗಳಿಂದ ತಾನಿಯಾ ಫ್ಯಾಷನ್ ಡಿಸೈನಿಂಗ್ ಮತ್ತು ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಗಳಿಸಿದ್ದರು.

ಆತ್ಮಹತ್ಯೆ ಪ್ರಕರಣದಲ್ಲಿ ಯುವ ಆಟಗಾರ ಅಭಿಷೇಕ್​ಗೆ ಏನಾದರೂ ಸಂಬಂಧವಿದೆಯೇ ಎಂಬುದನ್ನು ಅರಿಯುವ ಸಲುವಾಗಿ ಅವರಿಗೆ ಸಮನ್ಸ್ ನೀಡಿ ವಿಚಾರಣೆಗೆ ಹಾಜರಾಗುವಂತೆ ತಿಳಿಸಿದ್ದೇವೆ ಎಂದು ಸೂರತ್‍ನ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಫೆ. 20 ರಂದು ಮನೆಗೆ ತಡವಾಗಿ ಆಗಮಿಸಿದ್ದ ತಾನಿಯಾ ಶರ್ಮ ತಮ್ಮ ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದರು. ತಾನಿಯಾ ಕಾಲ್ ಡಿಟೇಲ್ಸ್​ನಲ್ಲಿ ಹಲವು ರಹಸ್ಯಗಳು ಅಡಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ IPL 2024: ಹಾಲಿ ಚಾಂಪಿಯನ್​ ಚೆನ್ನೈ ತಂಡಕ್ಕೆ ಆತಂಕ; ಗಾಯಗೊಂಡ ಸ್ಟಾರ್​ ಆಟಗಾರ ಐಪಿಎಲ್​ಗೆ ಅನುಮಾನ

ಅಭಿಷೇಕ್ ಶರ್ಮಾ ಐಪಿಎಲ್‌ನಲ್ಲಿ ಸನ್‌ರೈಸರ್ಸ್ ಹೈದರಾಬಾದ್‌ ತಂಡದ ಆಟಗಾರನಾಗಿದ್ದಾರೆ. 2022ರ ಐಪಿಎಲ್ ಹರಾಜಿನಲ್ಲಿ 6.5 ಕೋಟಿ ರೂ.ಗೆ ಖರೀದಿಸಿತ್ತು. ಇದುವೆಗೆ 47 ಪಂದ್ಯಗಳಳನ್ನಾಡಿರುವ ಅವರು 137.38 ಸ್ಟ್ರೈಕ್ ರೇಟ್‌ನಲ್ಲಿ 893 ರನ್ ಗಳಿಸಿದ್ದಾರೆ. 75 ರನ್ ಗರಿಷ್ಠ ಸ್ಕೋರ್. 4 ಅರ್ಧ ಶತಕ ಹಾಗೂ 9 ವಿಕೆಟ್‌ಗಳನ್ನು ಪಡೆದಿದ್ದಾರೆ.

ಮಾರ್ಚ್ 22ರಿಂದ 17ನೇ ಆವೃತ್ತಿಯ ಐಪಿಎಲ್


ಬಹುನಿರೀಕ್ಷಿತ 17ನೇ ಆವೃತ್ತಿಯ ಐಪಿಎಲ್(IPL 2024)​ ಟೂರ್ನಿ ಮಾರ್ಚ್​ 22ರಿಂದ ಆರಂಭಗೊಳ್ಳಲಿದೆ ಎಂದು ಮಂಗಳವಾರ ಲೀಗ್ ಅಧ್ಯಕ್ಷ ಅರುಣ್ ಧುಮಾಲ್(Arun Dhumal)ಪಿಟಿಐಗೆ ತಿಳಿಸಿದ್ದರು. ಲೋಕಸಭಾ ಚುನಾವಣೆ ಇದ್ದರೂ ಕೂಡ ಟೂರ್ನಿ ಸಂಪೂರ್ಣವಾಗಿ ಭಾರತದಲ್ಲೇ ನಡೆಯಲಿದೆ ಎಂದು ಖಚಿತಪಡಿಸಿದ್ದರು. ಮೊದಲ 15 ದಿನಗಳ ವೇಳಾಪಟ್ಟಿಯನ್ನು ಮಾತ್ರ ಆರಂಭದಲ್ಲಿ ಪ್ರಕಟಿಸಲಾಗುವುದು ಉಳಿದ ಪಂದ್ಯಗಳ ವೇಳಾಪಟ್ಟಿಯನ್ನು ಚುನಾವಣೆ ದಿನಾಂಕ ಪ್ರಕಟದ ಬಳಿಕ ನಿರ್ಧರಿಸಲಾಗುವುದು ಎಂದು ಹೇಳಿದ್ದರು.

“ನಾವು ಮಾರ್ಚ್ 22 ರಂದು ಪಂದ್ಯಾವಳಿಯನ್ನು ಪ್ರಾರಂಭಿಸಲು ನೋಡುತ್ತಿದ್ದೇವೆ. ನಾವು ಸರ್ಕಾರಿ ಏಜೆನ್ಸಿಗಳೊಂದಿಗೆ ನಿಕಟವಾಗಿ ಕೆಲಸ ಮಾಡುತ್ತಿದ್ದೇವೆ ಮತ್ತು ನಾವು ಮೊದಲು ಆರಂಭಿಕ ವೇಳಾಪಟ್ಟಿಯನ್ನು ಬಿಡುಗಡೆ ಮಾಡುತ್ತೇವೆ. ಸಂಪೂರ್ಣ ಪಂದ್ಯಾವಳಿಯು ಭಾರತದಲ್ಲಿ ನಡೆಯಲಿದೆ” ಎಂದು ಧುಮಾಲ್ ಹೇಳಿದ್ದರು.

Exit mobile version