Site icon Vistara News

SRH vs PBKS: ಆರ್​ಸಿಬಿಯ ಸಿಕ್ಸರ್​ ದಾಖಲೆ ಮುರಿದ ಹೈದರಾಬಾದ್​

SRH vs PBKS

It's been a good season for SRH, and their fans are acknowledging it

ಹೈದರಾಬಾದ್​: ಸನ್​ರೈಸರ್ಸ್​ ಹೈದರಾಬಾದ್(Sunrisers Hyderabad)​ ತಂಡ ಐಪಿಎಲ್​(IPL 2024) ಆವೃತ್ತಿಯಲ್ಲಿ ಮತ್ತು ಟಿ20 ಸರಣಿಯಲ್ಲಿ ಅತಿ ಹೆಚ್ಚು ಸಿಕ್ಸರ್​ ಬಾರಿಸಿದ ಮೊದಲ ತಂಡ ಎಂಬ ದಾಖಲೆ ಬರೆದಿದೆ. ಈ ಮೂಲಕ ಆರ್​ಸಿಬಿ ಹೆಸರಿನಲ್ಲಿದ್ದ ದಾಖಲೆಯನ್ನು ಮುರಿದೆ. ಆರ್​ಸಿಬಿ ಈ ಆವೃತ್ತಿಯಲ್ಲಿ ಒಟ್ಟು 157 ಸಿಕ್ಸರ್​ ಬಾರಿಸಿ ಅಗ್ರಸ್ಥಾನ ಪಡೆದಿತ್ತು. ಆದರೆ, ಇದೀಗ ಹೈದರಾಬಾದ್​ 160 ಸಿಕ್ಸರ್​ ಬಾರಿಸುವ ಮೂಲಕ ದಾಖಲೆಯನ್ನು ತನ್ನ ಹೆಸರಿಗೆ ಬರೆದಿದೆ.

ಅತಿ ಹೆಚ್ಚು ಸಿಕ್ಸರ್​ ಬಾರಿಸಿದ 5 ತಂಡಗಳು


ಸನ್​ರೈಸರ್ಸ್​ ಹೈದರಾಬಾದ್​-160
ಸಿಕ್ಸರ್​, 2024

ಆರ್​ಸಿಬಿ-157 ಸಿಕ್ಸರ್​, 2024

ಚೆನ್ನೈ ಸೂಪರ್​ ಕಿಂಗ್ಸ್​-145 ಸಿಕ್ಸರ್​, 2018

ಸರ್ರೆ-144 (ಟಿ20 ಬ್ಲಾಸ್ಟ್​ 2013)

ಕೆಕೆಆರ್​-143 ಸಿಕ್ಸರ್​, 2019

ಆರ್​ಸಿಬಿ ಮತ್ತು ಹೈದರಾಬಾದ್(SRH vs PBKS)​ ತಂಡಗಳು ಪ್ಲೇ ಆಫ್​ ಪ್ರವೇಶಿಸಿದ ಕಾರಣ ತಮ್ಮ ತಂಡಗಳ ಸಿಕ್ಸರ್​ಗಳ ಸಂಖ್ಯೆ ಇನ್ನೂ ಹೆಚ್ಚಿಸುವ ಅವಕಾಶವಿದೆ. ಅಂತಿಮವಾಗಿ ಯಾರು ಹೆಚ್ಚು ಸಿಕ್ಸರ್​ ಬಾರಿಸುತ್ತಾರೋ ಅವರಿಗೆ ಅಗ್ರಸ್ಥಾನ ಸಿಗಲಿದೆ. ಈ ತಂಡ ಯಾವುದು ಎಂಬುದು ಸದ್ಯದ ಕುತೂಹಲ.

ಕೊಹ್ಲಿಯ ಸಿಕ್ಸರ್​ ದಾಖಲೆ ಮುರಿದ ಅಭಿಷೇಕ್​


ಪಂಜಾಬ್​ ಕಿಂಗ್ಸ್​ ವಿರುದ್ಧ ಪ್ರಚಂಡ ಬ್ಯಾಟಿಂಗ್​ ಮೂಲಕ ಸಿಕ್ಸರ್​ಗಳ ಸುರಿಮಳೆಯನ್ನೇ ಸುರಿಸಿದ ಅಭಿಷೇಕ್​ ಬರೋಬ್ಬರಿ 6 ಸಿಕ್ಸರ್​ ಬಾರಿಸಿ ಮಿಂಚಿದರು. ಇದೇ ವೇಳೆ ಈ ಬಾರಿ ಅತ್ಯಧಿಕ ಸಿಕ್ಸರ್​ ಬಾರಿಸಿದ ವಿರಾಟ್​ ಕೊಹ್ಲಿ(37) ಅವರ ದಾಖಲೆಯನ್ನು ಹಿಂದಿಕ್ಕಿದರು. ಸದ್ಯ ಅಭಿಷೇಕ್​ 41* ಸಿಕ್ಸರ್​ ಬಾರಿಸಿದ ಸಾಧನೆ ಮಾಡಿದ್ದಾರೆ. ಆರ್​ಸಿಬಿ ಕೂಡ ಪ್ಲೇ ಆಫ್​ ಪ್ರವೇಶಿಸಿದ ಕಾರಣ ಕೊಹ್ಲಿಗೆ ಈ ದಾಖಲೆಯನ್ನು ಮುರಿಯುವ ಅವಕಾಶ ಇನ್ನೂ ಜೀವಂತವಿದೆ. ಒಟ್ಟಾರೆಯಾಗಿ ಉಭಯ ಆಟಗಾರರ ಮಧ್ಯೆ ಸಿಕ್ಸರ್​ ಪೈಪೋಟಿ ಏರ್ಪಟ್ಟಿದೆ.

ಇದನ್ನೂ ಓದಿ SRH vs PBKS: ಒಂದು ದಿನ ಕಳೆಯುವ ಮುನ್ನವೇ ಕೊಹ್ಲಿಯ ಸಿಕ್ಸರ್​ ದಾಖಲೆ ಮುರಿದ ಅಭಿಷೇಕ್

ಈ ಬಾರಿ ಅತ್ಯಧಿಕ ಸಿಕ್ಸರ್​ ಬಾರಿಸಿದ ಟಾಪ್​ 5 ಆಟಗಾರರು


ಅಭಿಷೇಕ್ ಶರ್ಮ-41 ಸಿಕ್ಸರ್​​

ವಿರಾಟ್​ ಕೊಹ್ಲಿ-37 ಸಿಕ್ಸರ್​

ನಿಕೋಲಸ್​ ಪೂರನ್​-36 ಸಿಕ್ಸರ್​

ಹೆನ್ರಿಚ್​ ಕ್ಲಾಸೆನ್​-33 ಸಿಕ್ಸರ್​

ಸುನೀಲ್​ ನರೈನ್​-32 ಸಿಕ್ಸರ್

ಹೈದರಾಬಾದ್​ಗೆ 4 ವಿಕೆಟ್​ ಜಯ

ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್​ ಗೆದ್ದು ಬ್ಯಾಟಿಂಗ್​ ಆಯ್ದುಕೊಂಡ ಪಂಜಾಬ್​ ಕಿಂಗ್ಸ್​ 5 ವಿಕೆಟ್​ಗೆ 214 ರನ್​ ಬಾರಿಸಿ ತನ್ನ ಆಯ್ಕೆಯನ್ನು ಸಮರ್ಥಿಸಿಕೊಂಡಿತು. ಆದರೆ ಈ ಮೊತ್ತ ಹೈದರಾಬಾದ್​ ತಂಡವನ್ನು ಕಟ್ಟಿ ಹಾಕಲು ಸಾಕಾಗಲಿಲ್ಲ. ಗುರಿ ಬೆನ್ನಟ್ಟಿದ ಸನ್​ರೈಸರ್ಸ್​ ಹೈದರಾಬಾದ್ 19.1​ ಓವರ್​ಗಳಲ್ಲಿ 6 ವಿಕೆಟ್​ ನಷ್ಟಕ್ಕೆ 215 ಬಾರಿಸಿ ತವರಿನಲ್ಲಿ ವಿಜಯ ಪತಾಕೆ ಹಾರಿಸಿತು. ಉಭಯ ತಂಡಗಳ ಜಿದ್ದಾಜಿದ್ದಿನ ಬ್ಯಾಟಿಂಗ್​ ಪರಾಕ್ರಮದಿಂದಾಗಿ ಈ ಪಂದ್ಯದಲ್ಲಿ ಒಟ್ಟು 429 ರನ್​ ದಾಖಲಾಯಿತು.

ಈಗಾಗಲೇ ಪ್ಲೇ ಆಫ್​ ಪ್ರವೇಶಿಸಿರುವ ಹೈದರಾಬಾದ್​ ಈ ಗೆಲುವಿನೊಂದಿಗೆ 17 ಅಂಕ ಸಂಪಾದಿಸಿ ಅಂಕಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿದೆ. ರಾತ್ರಿ ನಡೆಯುವ ಪಂದ್ಯದಲ್ಲಿ ರಾಜಸ್ಥಾನ್​ ತಂಡ ಕೆಕೆಆರ್​ ವಿರುದ್ಧ ಗೆದ್ದರೆ ಹೈದರಾಬಾದ್​ ಮೂರನೇ ಸ್ಥಾನಕ್ಕೆ ಕುಸಿದು ಎಲಿಮಿನೇಟರ್​​ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ ಆಡಲಿದೆ. ​ಎಲಿಮಿನೇಟರ್ ಪಂದ್ಯ ಬುಧವಾರ ನರೇಂದ್ರ ಮೋದಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆಯಲಿದೆ.

Exit mobile version