ಕೊಲಂಬೊ: ಐಪಿಎಲ್ನಲ್ಲಿ(IPL) ರಾಯಲ್ ಚಾಲೆಂಜರ್ಸ್ ಬೆಂಗಳೂರು(RCB) ತಂಡದ ಪರ ಆಡುವ ಶ್ರೀಲಂಕಾದ ಸ್ಪಿನ್ ಬೌಲರ್(Sri Lanka bowling all-rounder) ವನಿಂದು ಹಸರಂಗ(Wanindu Hasaranga) ಟೆಸ್ಟ್ ಕ್ರಿಕೆಟ್ಗೆ ದಿಢೀರ್ ನಿವೃತ್ತಿ ಘೋಷಿಸಿದ್ದಾರೆ.(Wanindu Hasaranga Retirement From Test Cricket) ಸೀಮಿತ ಓವರ್ಗಳ ಕ್ರಿಕೆಟ್ಗೆ ಹೆಚ್ಚಿನ ಮಹತ್ವ ನೀಡುವ ಸಲುವಾಗಿ ಈ ನಿರ್ಧಾರ ಕೈಗೊಂಡಿರುವುದಾಗಿ ಹಸರಂಗ ತಿಳಿಸಿದ್ದಾರೆ.
“ನಾವು ಹಸರಂಗ ನಿರ್ಧಾರವನ್ನು ಒಪ್ಪಿಕೊಳ್ಳುತ್ತೇವೆ. ವೈಟ್ ಬಾಲ್ ಕ್ರಿಕೆಟಟ್ನಲ್ಲಿ ಹಸರಂಗ ಇನ್ನು ಕೆಲಸದ ಒತ್ತಡವಿಲ್ಲದೆ ಆಡುವುದರಿಂದ ತಂಡಕ್ಕೆ ಹೆಚ್ಚಿನ ಲಾಭ ಸಿಗಲಿದೆ ಎಂಬ ವಿಶ್ವಾಸವಿದೆ” ಎಂದು ಶ್ರೀಲಂಕಾ ಕ್ರಿಕೆಟ್‌ನ ಸಿಇಒ ಆಶ್ಲೇ ಡಿ ಸಿಲ್ವಾ ಹೇಳಿದ್ದಾರೆ.
ದಕ್ಷಿಣ ಆಫ್ರಿಕಾ ವಿರುದ್ಧ ಪದಾರ್ಪಣೆ
ಆಲ್ರೌಂಡರ್ ಆಗಿರುವ ಹಸರಂಗ 2020ರಲ್ಲಿ ಸೆಂಚುರಿಯನ್‌ನಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಆಡುವ ಮೂಲಕ ಟೆಸ್ಟ್ ಕ್ರಿಕೆಟ್ಗೆ ಪಾದಾರ್ಪಣೆ ಮಾಡಿದರು. ಒಟ್ಟಾರೆಯಾಗಿ 4 ಟೆಸ್ಟ್ ಪಂದ್ಯಗಳನ್ನು ಆಡಿರುವ ಅವರು ಹೇಳಿಕೊಳ್ಳವಂತ ಸಾಧನೆಯನ್ನು ಮಾಡಿಲ್ಲ. ಕೇವಲ 4 ವಿಕೆಟ್ ಮಾತ್ರ ಕಬಳಿಸಿದ್ದಾರೆ. ಬ್ಯಾಟಿಂಗ್ನಲ್ಲಿ 196 ರನ್ ಕಲೆಹಾಕಿದ್ದಾರೆ. 2021ರಲ್ಲಿ ಬಾಂಗ್ಲಾ ವಿರುದ್ಧ ತವರಿನಲ್ಲಿ ಕೊನೆಯ ಟೆಸ್ಟ್ ಪಂದ್ಯ ಆಡಿದ್ದರು. ಇದಾದ ಬಳಿಕ ತಂಡದಲ್ಲಿ ಸ್ಥಾನ ಪಡೆಯಲು ವಿಫಲರಾಗಿದ್ದರು. 48 ಏಕದಿನ ಪಂದ್ಯಗಳು ಮತ್ತು 58 T20 ಪಂದ್ಯಗಳಲ್ಲಿ ಆಡಿರುವ ಅವರು ಒಟ್ಟು 158 ವಿಕೆಟ್ಗನ್ನು ಪಡೆದಿದ್ದಾರೆ. ಜತೆಗೆ 1,365 ರನ್ ಗಳಿಸಿದ್ದಾರೆ.
ಐಪಿಎಲ್ನಲ್ಲಿ ವಿಫಲ
ಆರ್‌ಸಿಬಿ ಪರ ಆಡುವ ಹಸರಂಗ ಎರಡೂ ಆವೃತ್ತಿಗಳಲ್ಲಿಯೂ ನಿರೀಕ್ಷಿತ ಪ್ರದರ್ಶನ ತೋರುವಲ್ಲಿ ವಿಫಲರಾಗಿದ್ದರು. ಜತೆಗೆ ಲಂಕಾ ತಂಡದಲ್ಲಿಯೂ ಹೇಳಿಕೊಳ್ಳವಂತಹ ಬೌಲಿಂಗ್ ಪ್ರದರ್ಶನ ತೋರಿಲ್ಲ. ಕೇವಲ ಬೆರಳೆಣಿಕೆಯ ಪಂದ್ಯಗಳಲ್ಲಷ್ಟೇ ಉತ್ತಮ ಪ್ರದರ್ಶನ ತೋರಿದ್ದಾರೆ. ಆಲ್ರೌಂಡರ್ ಆಗಿದ್ದರೂ ಬ್ಯಾಟಿಂಗ್ ಕೂಡ ಅಷ್ಟಕಷ್ಟೆ. ಅಪಾರ ನಿರೀಕ್ಷೆಯೊಂದಿಗೆ ದೊಡ್ಡ ಮೊತ್ತ ನೀಡಿ ಖರೀದಿಸಿದ ಆರ್ಸಿಬಿಗೆ ಅವರ ಕಳಪೆ ಪ್ರದರ್ಶನ ಹಿನ್ನಡೆತಯಾಹಿ ಪರಿಣಮಿಸಿತ್ತು. ಮುಂದಿನ ಬಾರಿ ಅವರನ್ನು ತಂಡದಲ್ಲಿ ಉಳಿಸಿಕೊಳ್ಳವುದು ಅನುಮಾನ ಎನ್ನಲಾಗಿದೆ.
ಇದನ್ನೂ ಓದಿ IPL 2022: ಕೆಕೆಆರ್ ವಿರುದ್ಧ ಅಬ್ಬರಿಸಿ ಬೊಬ್ಬಿರಿದ ಹಸರಂಗ: ಆರ್‌ಸಿಬಿ ಗೆಲುವು
ವಿಶ್ವಕಪ್ ಅರ್ಹತಾ ಪಂದ್ಯದಲ್ಲಿ ಶ್ರೇಷ್ಠ ಸಾಧನೆ
ಭಾರತದಲ್ಲಿ ಇದೇ ಅಕ್ಟೋಬರ್ 5ರಿಂದ ಆರಂಭಗೊಳ್ಳಲಿರುವ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಗೆ ಶ್ರೀಲಂಕಾ ತಂಡ ಅರ್ಹತೆ ಪಡೆಯುವಲ್ಲಿ ಹಸರಂಗ ಪ್ರಮುಖ ಪಾತ್ರವಹಿಸಿದ್ದರು. ಜಿಂಬಾಬ್ವೆಯಲ್ಲಿ ನಡೆದ ಕ್ವಾಲಿಫೈಯರ್ ಟೂರ್ನಿಯಲ್ಲಿ ಹಸರಂಗ ಒಟ್ಟು 22 ವಿಕೆಟ್ ಉರುಳಿಸಿ ಪಂದ್ಯಾವಳಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಸಾಧನೆ ಮಾಡಿದ್ದರು.