ಕ್ರಿಕೆಟ್
IPL 2023 : ಮೋದಿ ಸ್ಟೇಡಿಯಂ ಬಳಿ ಐಪಿಎಲ್ ಟಿಕೆಟ್ಗೆ ನೂಕುನುಗ್ಗಲು, ಕಾಲ್ತುಳಿತ; ಪೊಲೀಸರಿಂದ ಲಾಠಿ ಚಾರ್ಜ್
ಬಿಸಿಸಿಐನ ನಿರ್ವಹಣಾ ವೈಫಲ್ಯದ ಕಾರಣಕ್ಕೆ ಕ್ರಿಕೆಟ್ ಅಭಿಮಾನಿಗಳಿಗೆ IPL 2023 ಟಿಕೆಟ್ ಪಡೆಯಲು ಅಭಿಮಾನಿಗಳಿಗೆ ತೊಂದರೆ ಆಗುತ್ತಿದೆ ಎಂದು ದೂರಲಾಗಿದೆ.
ಅಹಮದಾಬಾದ್ : ಇಂಡಿಯನ್ ಪ್ರೀಮಿಯರ್ ಲೀಗ್ (IPL 2023 ) 2023ರ ಫೈನಲ್ ಪಂದ್ಯದ ಟಿಕೆಟ್ ವಿತರಣೆ ವೇಳೆ ನೂಕು ನುಗ್ಗಲು ಉಂಟಾಗಿ ಕಾಲ್ತುಳಿತ ಸಂಭವಿಸಿದೆ. ಮಹಿಳಾ ಅಭಿಮಾನಿಗಳು ಪುರುಷರ ನಡುವೆ ಸಿಲುಕಿ ತೊಂದರೆ ಎದುರಿಸಿದ ಪ್ರಸಂಗವೂ ಎದುರಾಗಿದೆ. ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂ ಬಳಿ ಟಿಕೆಟ್ಗಳ ಹಂಚಿಕೆ ನಡೆಯುತ್ತಿದ್ದ ವೇಳೆ ಘಟನೆ ಸಂಭವಿಸಿದೆ. ಕ್ರಿಕೆಟ್ ಅಭಿಮಾನಿಗಳು ಘಟನೆಯ ದೃಶ್ಯಗಳನ್ನು ಸೆರೆ ಹಿಡಿದು ಸಾಮಾಜಿಕ ಜಾಲತಾಣಗಳ ಮೂಲಕ ಶೇರ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Very poor management by PAYTM on ipl final tickets in Ahmedabad. I booked tickets online and had to come to the stadium and take tickets like offline. @Paytmcare @Paytm @paytminsider @IPL #TATAIPL #IPL2023 #Ahmedabad #paytm #iplfinal pic.twitter.com/ao8FmjrqYj
— Utsav Patel (@patelutsav1098) May 25, 2023
ಬಿಸಿಸಿ ಟಿಕೆಟ್ ವಿತರಣೆ ಪ್ರಕ್ರಿಯಲ್ಲಿ ವೈಫಲ್ಯ ಕಂಡಿದೆ ಎಂಬುದಾಗಿ ಅಭಿಮಾನಿಗಳು ಆರೋಪಸಿದ್ದಾರೆ. ಮೂಲಗಳ ಪ್ರಕಾರ, ಫೈನಲ್ ಪಂದ್ಯದ ಟಿಕೆಟ್ಗಳನ್ನು ಸ್ಟೇಡಿಯಮ್ ಬಳಿಕ ಕೌಂಟರ್ನಲ್ಲಿ ವಿತರಿಸುವ ಬಗ್ಗೆ ಯಾವುದೇ ಮಾಹಿತಿ ಇರಲಿಲ್ಲ. ಆದರೆ, ಆನ್ಲೈನ್ ಟಿಕೆಟ್ ಪಡೆದವರು ಬಾಕ್ಸ್ಆಫೀಸ್ ಬಳಿಗೆ ಹೋಗಿ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ಹಾರ್ಡ್ ಕಾಪಿ ಪಡೆದುಕೊಳ್ಳಬೇಕಾಗಿತ್ತು. ಈ ಪ್ರಕ್ರಿಯೆಗೆ ಸೂಕ್ತ ವ್ಯವಸ್ಥೆ ಮಾಡಿರಲಿಲ್ಲ. ಅಭಿಮಾನಿಗಳು ಏಕಾಏಕಿ ನುಗ್ಗಿದ ಬಳಿಕ ತಳ್ಳಾಟ ಆರಂಭವಾಗಿದೆ.
The Paytm people were not aware about anything.They were giving excuse that the teams are not yet decided for finals so come on 27th.will they be able to give 1 lac tickets in 1 day and what about people coming from outside Ahmedabad #paytm #paytminsider #bcci #IPL2023 #IPLfinal pic.twitter.com/nrzbvaNuxU
— Kapadia Abhishek (@Abhishek2771997) May 24, 2023
ಟಿಕೆಟ್ ಸಂಗ್ರಹಕ್ಕಾಗಿ ಬಾಕ್ಸ್ ಆಫೀಸ್ ಮೇ 25 ಗುರುವಾರ ಬೆಳಗ್ಗೆ 11ರಿಂದ ಸಂಜೆ 6 ರವರೆಗೆ ತೆರೆದಿಡಲಾಗಿತ್ತು, ಇದು ಸ್ಥಳದಲ್ಲಿ ಅವ್ಯವಸ್ಥೆಗೆ ಕಾರಣವಾಯಿತು. ಟಿಕೆಟ್ ಪಡೆಯಲು ನೂರಾರು ಜನರು ಸ್ಥಳದ ಹೊರಗೆ ಜಮಾಯಿಸಿದರು. ಜನಸಂದಣಿಯನ್ನು ನಿರ್ವಹಿಸಲು ಸ್ಥಳೀಯ ಪೊಲೀಸರು ವಿಫಲರಾದರು. ಅಭಿಮಾನಿಗಳು ಭಾರಿ ಸಂಖ್ಯೆಯಲ್ಲಿ ಕ್ರೀಡಾಂಗಣಕ್ಕೆ ಧಾವಿಸಿದ ಕಾರಣ ಪರಿಸ್ಥಿತಿ ಹದಗೆಟ್ಟಿತು. ಬಳಿಕ ಪೊಲೀಸರು ಲಾಠಿ ಚಾರ್ಜ್ ಮಾಡಿದರು.
ಇದನ್ನೂ ಓದಿ : IPL Betting: ಐಪಿಎಲ್ ಬೆಟ್ಟಿಂಗ್ ದಂಧೆಗೆ ಯುವಕ ಬಲಿ, ಹಣ ಕೇಳಲು ಹೋದಾಗ ಕೊಲೆ
ಮೇ 26ರಂದು ಗುಜರಾತ್ ಟೈಟನ್ಸ್ ಮತ್ತು ಮುಂಬೈ ಇಂಡಿಯನ್ಸ್ ನಡುವೆ ಐಪಿಎಲ್ ಕ್ವಾಲಿಫೈಯರ್ 2 ಇದೇ ಸ್ಟೇಡಿಯಮ್ನಲ್ಲಿ ನಡೆಯಲಿದೆ. ಈ ದಿನ ಟಿಕೆಟ್ ವಿತರಣೆ ಹಾಗೂ ಭೌತಿಕವಾಗಿ ಟಿಕೆಟ್ ಪಡೆಯುವ ಪ್ರಕ್ರಿಯೆ ಇರಲಿಲ್ಲ. 25 ಮತ್ತು 27ರಂದು ಅವಕಾಶ ನೀಡಲಾಗಿದೆ. 25ರಂದು ಸ್ಥಳದಲ್ಲಿ ಗೊಂದಲ ಸೃಷ್ಟಿಯಾಗಿ ಸಮಸ್ಯೆ ಆಗಿತ್ತು. ಸ್ಟೇಡಿಯಮ್ನಲ್ಲಿ ಒಂದು ಲಕ್ಷಕ್ಕೂ ಅಧಿಕ ಮಂದಿಗೆ ವೀಕ್ಷಣೆ ಮಾಡಲು ಸಾಧ್ಯವಿರುವ ಕಾರಣ ಶನಿವಾರ ಮತ್ತೆ ಸಮಸ್ಯೆ ಉಂಟಾಬಹುದು ಎಂದು ಅಭಿಮಾನಿಗಳು ಅಂದಾಜಿಸಿದ್ದಾರೆ.
ಕ್ರಿಕೆಟ್
WTC Final 2023 : ಶಮಿ ಎಸೆತಕ್ಕೆ ಮರ್ನಸ್ ಲಾಬುಶೇನ್ ಬೌಲ್ಡ್ ಆದ ರೀತಿ ಹೀಗಿದೆ
ಶಮಿಯ ಎಸೆತವನ್ನು ಗುರುತಿಸಲು ಸಾಧ್ಯವಾಗದೇ ಮರ್ನಸ್ ಲಾಬುಶೇನ್ ಕ್ಲೀನ್ ಬೌಲ್ಡ್ ಆದರು.
ಲಂಡನ್: ವಿಶ್ವ ಟೆಸ್ಟ್ ಚಾಂಪಿಯನ್ಷಿಪ್ನ ಫೈನಲ್ ಪಂದ್ಯದಲ್ಲಿ (WTC Final 2023) ಆಸ್ಟ್ರೇಲಿಯಾ ತಂಡದ ಪಾರಮ್ಯ ಮುಂದುವರಿದಿದೆ. ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಆಸೀಸ್ ಬಳಗ ಟಿ ವಿರಾಮದ ವೇಳೆಗೆ ಮೂರು ವಿಕೆಟ್ ಕಳೆದುಕೊಂಡು 171 ರನ್ ಬಾರಿಸಿದೆ. ಭಾರತ ತಂಡ ಆರಂಭದಲ್ಲಿ ಮೂರು ವಿಕೆಟ್ಗಳನ್ನು ಕಬಳಿಸಿದರೂ ಬಳಿಕ ಜತೆಯಾದ ಟ್ರಾವಿಸ್ ಹೆಡ್ ಹಾಗೂ ಸ್ಟೀವ್ ಸ್ಮಿತ್ ಸ್ಥಿರ ಪ್ರದರ್ಶನ ನೀಡಿದರು. ಆದರೆ, ಭಾರತ ತಂಡಕ್ಕೆ ಮೂರನೇ ವಿಕೆಟ್ ರೂಪದಲ್ಲಿ ದೊರಕಿದ ಮರ್ನಸ್ ಲಾಬುಶೇನ್ ವಿಕೆಟ್ ಹೆಚ್ಚು ಆಕರ್ಷಕವಾಗಿತ್ತು. ಶಮಿ ಎಸೆತಕ್ಕೆ ಅವರು ಬೌಲ್ಡ್ ಆದ ರೀತಿಯೂ ಕ್ರಿಕೆಟ್ ಪ್ರೇಮಿಗಳ ಗಮನ ಸೆಳೆಯಿತು.
ಡಬ್ಲ್ಯುಟಿಸಿ ಫೈನಲ್ ಪಂದ್ಯದ ಮೊದಲ ಸೆಷನ್ನಲ್ಲಿ ಶಮಿ ತುಂಬಾ ಕಡಿಮೆ ಬೌಲಿಂಗ್ ಮಾಡಿದ್ದಕ್ಕಾಗಿ ಕ್ರಿಕೆಟ್ ಅಭಿಮಾನಿಗಳಿಂದ ಹಾಗೂ ವೀಕ್ಷಕ ವಿವರಣೆಗಾರರಿಂದ ಟೀಕೆಗೆ ಒಳಗಾದರು. ಆದಾಗ್ಯೂ, ಭೋಜನ ವಿರಾಮದಿಂದ ಹಿಂದಿರುಗಿದ ಕೂಡಲೇ ಶಮಿ ಎಲ್ಲರಿಗೂ ಉತ್ತರ ಕೊಟ್ಟರು. ತಾವು ಭಾರತದ ಮೊದಲ ಆಯ್ಕೆಯ ವೇಗಿ ಎಂಬುದನ್ನು ಸಾಬೀತುಪಡಿಸಿದರು.
ಭೋಜನ ವಿರಾಮದ ನಂತರದ ಎರಡನೇ ಓವರ್ನಲ್ಲಿ ಮತ್ತು ತಮ್ಮ ಎರಡನೇ ಸ್ಪೆಲ್ನ ಮೊದಲ ಎಸೆತದಲ್ಲಿ ಮೊಹಮ್ಮದ್ ಶಮಿ ವಿಶ್ವದ ಅತ್ಯುತ್ತಮ ಟೆಸ್ಟ್ ಬ್ಯಾಟ್ಸ್ಮನ್ ಲಾಬುಶೇನ್ ಅವರನ್ನು ಬೌಲ್ಡ್ ಮಾಡಿ ಪೆವಿಲಿಯನ್ಗೆ ಕಳುಹಿಸಿದರು.
ಅದಕ್ಕಿಂತ ಮೊದಲು ದಿನದಾಟದ ಮೊದಲ ಅವಧಿಯ ಯಶಸ್ಸನ್ನು ಎರಡೂ ತಂಡಗಳು ಹಂಚಿಕೊಂಡವು, ಭಾರತವು ಆಸೀಸ್ ಆರಂಭಿಕರನ್ನು ಪೆವಿಲಿಯನ್ಗೆ ಕಳುಹಿಸಿದರೆ ಆಸ್ಟ್ರೇಲಿಯಾ 73 ರನ್ ಗಳಿಸುವ ಮೂಲಕ ಪ್ರತ್ಯುತ್ತರ ನೀಡಿತು. ಡೇವಿಡ್ ವಾರ್ನರ್ ಅದ್ಭುತ ಪ್ರದರ್ಶನ ನೀಡಿ ಎಂಟು ಬೌಂಡರಿಗಳನ್ನು ಗಳಿಸಿದರು. ಆದರೆ 7 ರನ್ಗಳಿಂದ ಅರ್ಧ ಶತಕ ವಂಚಿತರಾದರು.
ವಾರ್ನರ್ ವಿಕೆಟ್ ಪಡೆಯುವ ಹಿಂದಿನ ದೊಡ್ಡ ಕಾರಣ ಕೆ.ಎಸ್.ಭರತ್ ಅವರ ಉತ್ತಮ ಕೀಪಿಂಗ್. ಇಶಾನ್ ಕಿಶನ್ ಅವರನ್ನು ಹಿಂದಿಕ್ಕಿ ತಂಡಕ್ಕೆ ಆಯ್ಕೆಯಾಗಿದ್ದ ಅವರು ಈ ಕ್ಯಾಚ್ ಮೂಲಕ ಆಯ್ಕೆಯನ್ನು ಸಮರ್ಧಿಸಿಕೊಂಡರು. ಭರತ್ ಇದಕ್ಕಿಂತ ಹಿಂದೆ ಎರಡು ಬಾರಿ ಇಂಗ್ಲೆಂಡ್ ಪಿಚ್‌ನಲ್ಲಿ ಆಡಿದ್ದಾರೆ. ಒಂದು ಅಭ್ಯಾಸ ಪಂದ್ಯ, ಮತ್ತೊಂದು ವೆಸ್ಟ್ ಇಂಡೀಸ್ ವಿರುದ್ಧದ ಭಾರತ ಎ ಪಂದ್ಯ.
ಕ್ರಿಕೆಟ್
WTC Final 2023 : ವಿಕೆಟ್ ಕೀಪರ್ ಕೆಎಸ್ ಭರತ್ ಹಿಡಿದ ರೋಮಾಂಚಕಾರಿ ಕ್ಯಾಚ್ ಹೀಗಿತ್ತು
ಇಶಾನ್ ಕಿಶನ್ ಅವರನ್ನು ಕೈಬಿಟ್ಟು ಫೈನಲ್ ಪಂದ್ಯದಲ್ಲಿ ವಿಕೆಟ್ಕೀಪಿಂಗ್ ಜವಾಬ್ದಾರಿಯನ್ನು ಕೆ. ಎಸ್ ಭರತ್ಗೆ ನೀಡಿದ್ದಾರೆ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ
ಲಂಡನ್: ಲಂಡನ್ನ ಕೆನ್ನಿಂಗ್ಟನ್ ಓವಲ್ನಲ್ಲಿ ನಡೆಯುತ್ತಿರುವ ವಿಶ್ವ ಟೆಸ್ಟ್ ಚಾಂಪಿಯನ್ಷಿಪ್ ಫೈನಲ್ ಮುಖಾಮುಖಿಯಲ್ಲಿ ಟೀಮ್ ಇಂಡಿಯಾ ಆಸ್ಟ್ರೇಲಿಯಾವನ್ನು ಎದುರಿಸುತ್ತಿದೆ. ಟಾಸ್ ಗೆದ್ದ ಭಾರತ ತಂಡ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದು, ಮೊದಲ ದಿನದ ಟಿ ವಿರಾಮದ ವೇಳೆಗೆ ಆಸ್ಟ್ರೇಲಿಯಾ 3 ವಿಕೆಟ್ ಕಳೆದುಕೊಂಡು 171 ರನ್ ಬಾರಿಸಿದೆ. ಈ ಮೂಲಕ ಆಸ್ಟ್ರೇಲಿಯಾ ತಂಡ ನಿಧಾನವಾಗಿ ಮೇಲುಗೈ ಸಾಧಿಸಿದೆ.
Shardul Thakur gets the breakthrough!
— BCCI (@BCCI) June 7, 2023
A sharp catch by KS Bharat as David Warner departs for 43 runs.
Live – https://t.co/0nYl21oYkY… #WTC23 pic.twitter.com/jIJDwxM6Zh
ಲಂಚ್ ಬ್ರೇಕ್ಗಿಂತ ಮೊದಲು ಆಸ್ಟ್ರೇಲಿಯಾ 73 ರನ್ ಗಳಿಸಿತ್ತು. ಈ ವೇಳೆ ಇಬ್ಬರೂ ಆರಂಭಿಕರನ್ನು ಆಸ್ಟ್ರೇಲಿಯಾ ತಂಡ ಕಳೆದುಕೊಂಡಿತು. ವಾರ್ನರ್ 8 ಬೌಂಡರಿಗಳನ್ನು ಬಾರಿಸುವ ಮೂಲಕ ಉತ್ತಮವಾಗಿ ಆಡಿದರು ಆದರೆ ಭೋಜನ ವಿರಾಮಕ್ಕೆ ಕೆಲವೇ ನಿಮಿಷಗಳ ಮೊದಲು ಶಾರ್ದೂಲ್ ಠಾಕೂರ್ಗೆ ವಿಕೆಟ್ ಒಪ್ಪಿಸಿ 7 ರನ್ಗಳಿಂದ ಅರ್ಧ ಶತಕವನ್ನು ಕಳೆದುಕೊಂಡರು. ಈ ವಿಕೆಟ್ ಕಬಳಿಸಲು ವಿಕೆಟ್ಕೀಪರ್ ಕೆ. ಎಸ್ ಭರತ್ ನೆರವಾದರು. ಅವರು ಅದ್ಭುತವಾಗಿ ಕ್ಯಾಚ್ ಹಿಡಿಯುವ ಮೂಲಕ ವಾರ್ನರ್ ವಿಕೆಟ್ ಉರುಳಿಸಿದರು.
ಇದನ್ನೂ ಓದಿ : WTC Final 2023: ಭಾರತ, ಆಸ್ಟ್ರೇಲಿಯಾ ಆಟಗಾರರು ಕಪ್ಪು ಪಟ್ಟಿ ಧರಿಸಿ ಆಡಿದ್ದರ ಹಿಂದಿದೆ ಭಾವುಕ ಕಾರಣ
ಪಂದ್ಯಕ್ಕೆ ಪೂರ್ವದಲ್ಲಿ ಕೀಪಿಂಗ್ ಜವಾಬ್ದಾರಿ ಯಾರಿಗೆ ನೀಡಬೇಕು ಎಂಬ ಗೊಂದಲ ಸೃಷ್ಟಿಯಾಗಿತ್ತು. ಆದರೆ, ಇಶಾನ್ ಕಿಶನ್ ಅವರನ್ನು ಹಿಂದಿಕ್ಕಿದ ಭರತ್ ಅವಕಾಶ ಗಿಟ್ಟಿಸಿದರು. ಟೆಸ್ಟ್ ಕ್ರಿಕೆಟ್‌ನಲ್ಲಿ ಭರತ್ 5 ಪಂದ್ಯಗಳನ್ನು ಆಡಿದ್ದಾರೆ. ಅವರು ಖಾತೆಯಲ್ಲಿ 100ಕ್ಕೂ ಹೆಚ್ಚು ರನ್ಗಳಿವೆ. ಇದೀಗ ಟೆಸ್ಟ್ ಚಾಂಪಿಯನ್ಷಿಪ್ ಫೈನಲ್ನಲ್ಲೂ ಛಾಪು ಮೂಡಿಸಲಿದ್ದಾರೆ.
ಶಮಿಗೆ ಸಿಗದ ಅವಕಾಶ, ನೆಟ್ಟಿಗರ ಆಕ್ರೊಶ
ಆಸ್ಟ್ರೇಲಿಯಾ ವಿರುದ್ಧ ಆರಂಭಗೊಂಡ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯದಲ್ಲಿ ಆರ್. ಅಶ್ವಿನ್ಗೆ ಆಡುವ ಬಳಗದಲ್ಲಿ ಅವಕಾಶ ಸಿಗಲಿಲ್ಲ. ಇದೇ ವಿಚಾರವಾಗಿ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದು, ಭಾರತ ತಂಡ ಮಾಡಿದ ದೊಡ್ಡ ತಪ್ಪು ಇದಾಗಿದೆ ಎಂದು ಹೇಳಿದ್ದಾರೆ. ಆದರೆ ತಂಡದ ನಾಯಕ ರೋಹಿತ್ ಶರ್ಮ ಅವರು ಅಶ್ವಿನ್ ಅವರನ್ನು ಕೈಬಿಟ್ಟ ಕುರಿತು ಸ್ಪಷ್ಟ ಮಾಹಿತಿ ನೀಡಿದ್ದಾರೆ.
ಲಂಡನ್ನ ಓವಲ್ ಮೈದಾನದಲ್ಲಿ ಬುಧವಾರ ಆರಂಭಗೊಂಡ ಈ ಪಂದ್ಯದಲ್ಲಿ ಟಾಸ್ ವೇಳೆ ಪ್ರಕಟಗೊಂಡ ಭಾರತ ತಂಡದಲ್ಲಿ ಟೆಸ್ಟ್ ಕ್ರಿಕೆಟ್‌ನಲ್ಲಿ ವಿಶ್ವದ ನಂ.1 ಬೌಲರ್ ಆಗಿರುವ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರನ್ನು ಆಡುವ 11ರ ಬಳಗದಿಂದ ಕೈಬಿಟ್ಟು ಅಚ್ಚರಿ ಮೂಡಿಸಿತು. ಇದೇ ವೇಳೆ ನೆಟ್ಟಿಗರು ಟೀಮ್ ಮ್ಯಾನೆಜ್ಮೆಂಟ್ ವಿರುದ್ಧ ಟ್ವಿಟರ್ನಲ್ಲಿ ಆಕ್ರೋಶವ್ಯಕ್ತಪಡಿಸಿದ್ದಾರೆ.
ಅಶ್ವಿನ್ ಬದಲು ಮಧ್ಯಮ ವೇಗಿ ಹಾಗೂ ಆಲ್ರೌಂಡರ್ ಆಗಿರುವ ಶಾರ್ದೂಲ್ ಠಾಕೂರ್ ಅವರನ್ನು ಟೀಮ್ ಇಂಡಿಯಾ ಹೆಚ್ಚುವರಿ ವೇಗಿಯನ್ನಾಗಿ ಆಯ್ಕೆ ಮಾಡಿಕೊಂಡಿತು. ಇದೇ ವಿಚಾರವಾಗಿ ಮಾತನಾಡಿದ ರೋಹಿತ್ ಅವರು “ಇಲ್ಲಿನ ಪರಿಸ್ಥಿತಿಗಳು ಬೌಲಿಂಗ್‌ಗೆ ಉತ್ತಮವಾಗಿದೆ. ಹೀಗಾಗಿ ನಾವು ಮೊದಲು ಬೌಲಿಂಗ್ ಮಾಡಲಿದ್ದೇವೆ. ಮೋಡ ಕವಿದ ವಾತಾವರಣವೂ ಇದೆ. ಈ ಪಿಚ್‌ನಲ್ಲಿ ಸ್ಪಿನ್ ಹೆಚ್ಚು ಪರಿಣಾಮಕಾರಿಯಾಗುವ ಸಾಧ್ಯತೆ ಕಡಿಮೆ. ಹೀಗಾಗಿ ನಾವು 4 ವೇಗಿಗಳು ಮತ್ತು ಒಬ್ಬ ಸ್ಪಿನ್ನರ್‌ನ ಆಯ್ಕೆ ಮಾಡಿಕೊಂಡಿದ್ದೇವೆ. ಜಡೇಜಾ ಅವರನ್ನು ಏಕೈಕ ಸ್ಪಿನ್ನರ್ ಆಗಿ ಆಯ್ಕೆ ಮಾಡಿಕೊಂಡಿದ್ದೇವೆ. ಅಶ್ವಿನ್ ಅವರನ್ನು ಹೊರಗಿಡುವುದು ಕಠಿಣ ನಿರ್ಧಾರವಾಗಿದೆ. ಆದರೂ ತಂಡದ ಹಿತದೃಷ್ಟಿಯಿಂದ ಅವರನ್ನು ಅನಿವಾರ್ಯವಾಗಿ ಕೈಬಿಡಬೇಕಾಯಿತು” ಎಂದರು.
ಕ್ರಿಕೆಟ್
WTC Final 2023: ಆಡುವ ಬಳಗದಿಂದ ಅಶ್ವಿನ್ ಕೈ ಬಿಡಲು ಕಾರಣ ಇದಂತೆ
ಅಶ್ವಿನ್ ಬದಲು ಮಧ್ಯಮ ವೇಗಿ ಹಾಗೂ ಆಲ್ರೌಂಡರ್ ಆಗಿರುವ ಶಾರ್ದೂಲ್ ಠಾಕೂರ್ಗೆ ಆಡುವ ಬಳಗದಲ್ಲಿ ಅವಕಾಶ ನೀಡಿದ್ದಕ್ಕೆ ನೆಟ್ಟಿಗರು ಗರಂ ಆಗಿದ್ದಾರೆ.
ಲಂಡನ್: ಆಸ್ಟ್ರೇಲಿಯಾ ವಿರುದ್ಧ ಆರಂಭಗೊಂಡ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯದಲ್ಲಿ ಆರ್. ಅಶ್ವಿನ್ಗೆ ಆಡುವ ಬಳಗದಲ್ಲಿ ಅವಕಾಶ ಸಿಗಲಿಲ್ಲ. ಇದೇ ವಿಚಾರವಾಗಿ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದು, ಭಾರತ ತಂಡ ಮಾಡಿದ ದೊಡ್ಡ ತಪ್ಪು ಇದಾಗಿದೆ ಎಂದು ಹೇಳಿದ್ದಾರೆ. ಆದರೆ ತಂಡದ ನಾಯಕ ರೋಹಿತ್ ಶರ್ಮ ಅವರು ಅಶ್ವಿನ್ ಅವರನ್ನು ಕೈಬಿಟ್ಟ ಕುರಿತು ಸ್ಪಷ್ಟ ಮಾಹಿತಿ ನೀಡಿದ್ದಾರೆ.
ಲಂಡನ್ನ ಓವಲ್ ಮೈದಾನದಲ್ಲಿ ಬುಧವಾರ ಆರಂಭಗೊಂಡ ಈ ಪಂದ್ಯದಲ್ಲಿ ಟಾಸ್ ವೇಳೆ ಪ್ರಕಟಗೊಂಡ ಭಾರತ ತಂಡದಲ್ಲಿ ಟೆಸ್ಟ್ ಕ್ರಿಕೆಟ್‌ನಲ್ಲಿ ವಿಶ್ವದ ನಂ.1 ಬೌಲರ್ ಆಗಿರುವ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರನ್ನು ಆಡುವ 11ರ ಬಳಗದಿಂದ ಕೈಬಿಟ್ಟು ಅಚ್ಚರಿ ಮೂಡಿಸಿತು. ಇದೇ ವೇಳೆ ನೆಟ್ಟಿಗರು ಟೀಮ್ ಮ್ಯಾನೆಜ್ಮೆಂಟ್ ವಿರುದ್ಧ ಟ್ವಿಟರ್ನಲ್ಲಿ ಆಕ್ರೋಶವ್ಯಕ್ತಪಡಿಸಿದ್ದಾರೆ.
ಅಶ್ವಿನ್ ಬದಲು ಮಧ್ಯಮ ವೇಗಿ ಹಾಗೂ ಆಲ್ರೌಂಡರ್ ಆಗಿರುವ ಶಾರ್ದೂಲ್ ಠಾಕೂರ್ ಅವರನ್ನು ಟೀಮ್ ಇಂಡಿಯಾ ಹೆಚ್ಚುವರಿ ವೇಗಿಯನ್ನಾಗಿ ಆಯ್ಕೆ ಮಾಡಿಕೊಂಡಿತು. ಇದೇ ವಿಚಾರವಾಗಿ ಮಾತನಾಡಿದ ರೋಹಿತ್ ಅವರು “ಇಲ್ಲಿನ ಪರಿಸ್ಥಿತಿಗಳು ಬೌಲಿಂಗ್‌ಗೆ ಉತ್ತಮವಾಗಿದೆ. ಹೀಗಾಗಿ ನಾವು ಮೊದಲು ಬೌಲಿಂಗ್ ಮಾಡಲಿದ್ದೇವೆ. ಮೋಡ ಕವಿದ ವಾತಾವರಣವೂ ಇದೆ. ಈ ಪಿಚ್‌ನಲ್ಲಿ ಸ್ಪಿನ್ ಹೆಚ್ಚು ಪರಿಣಾಮಕಾರಿಯಾಗುವ ಸಾಧ್ಯತೆ ಕಡಿಮೆ. ಹೀಗಾಗಿ ನಾವು 4 ವೇಗಿಗಳು ಮತ್ತು ಒಬ್ಬ ಸ್ಪಿನ್ನರ್‌ನ ಆಯ್ಕೆ ಮಾಡಿಕೊಂಡಿದ್ದೇವೆ. ಜಡೇಜಾ ಅವರನ್ನು ಏಕೈಕ ಸ್ಪಿನ್ನರ್ ಆಗಿ ಆಯ್ಕೆ ಮಾಡಿಕೊಂಡಿದ್ದೇವೆ. ಅಶ್ವಿನ್ ಅವರನ್ನು ಹೊರಗಿಡುವುದು ಕಠಿಣ ನಿರ್ಧಾರವಾಗಿದೆ. ಆದರೂ ತಂಡದ ಹಿತದೃಷ್ಟಿಯಿಂದ ಅವರನ್ನು ಅನಿವಾರ್ಯವಾಗಿ ಕೈಬಿಡಬೇಕಾಯಿತು” ಎಂದರು.
ಇದನ್ನೂ ಓದಿ WTC Final 2023: ಭಾರತ, ಆಸ್ಟ್ರೇಲಿಯಾ ಆಟಗಾರರು ಕಪ್ಪು ಪಟ್ಟಿ ಧರಿಸಿ ಆಡಿದ್ದರ ಹಿಂದಿದೆ ಭಾವುಕ ಕಾರಣ
If India loses, Rohit Sharma will be Blamed for not picking Ashwin.
— Xavier Uncle (@xavierunclelite) June 7, 2023
If India wins, Kohli will be Blamed for picking Ashwin in WTC Final 2021 & not winning any ICC Trophies.
ಸದ್ಯ ಬ್ಯಾಟಿಂಗ್ ನಡೆಸುತ್ತಿರುವ ಆಸ್ಟ್ರೇಲಿಯಾ ತಂಡ ಮೂರು ವಿಕೆಟ್ ಕಳೆದುಕೊಂಡು 85 ರನ್ ಗಳಿಸಿದೆ. ಉತ್ತಮ ರನ್ ಕಲೆ ಹಾಕುತ್ತಿದ್ದ ಡೇವಿಡ್ ವಾರ್ನರ್ ಅವರನ್ನು ಔಟ್ ಮಾಡುವ ಮೂಲಕ ಶಾರ್ದೂಲ್ ಅವರು ತಮ್ಮ ಆಯ್ಕೆಯನ್ನು ಸಮರ್ಥಿಸಿಕೊಂಡರು.
ಕ್ರಿಕೆಟ್
Honda Motors : ಎಸ್ಯುವಿ ಸೆಗ್ಮೆಂಟ್ಗೂ ಹೋಂಡಾ ಎಂಟ್ರಿ, ಸ್ಟೈಲಿಸ್ಟ್ ಕಾರು ಅನಾವರಣ
ಜುಲೈನಲ್ಲಿ ಹೋಂಡಾ ಎಲಿವೇಟ್ ಕಾರಿನ (Honda Elevate) ಬುಕಿಂಗ್ ಆರಂಭಗೊಳ್ಳಲಿದ್ದು ಹಬ್ಬದ ಋತುವಿನಲ್ಲಿ ವಿತರಣೆ ಆರಂಭಗೊಳ್ಳಲಿವೆ.
ನವ ದೆಹಲಿ: ಹೋಂಡಾ (Honda Motors) ತನ್ನ ಭಾರತ ಕೇಂದ್ರಿತ ಎಲಿವೇಟ್ ಎಸ್ಯುವಿ (Honda Elevate) ಕಾರನ್ನು ಜೂನ್ 6ರಂದು ಅನಾವರಣ ಮಾಡಿದೆ. ಇದೇ ವೇಳೆ 2030ರ ಒಳಗೆ ಭಾರತದಲ್ಲಿ ಐದು ಎಸ್ಯುವಿಗಳನ್ನು ಬಿಡುಗಡೆ ಮಾಡುವುದಾಗಿ ಘೋಷಿಸಿದೆ. ಈ ಯೋಜನೆಯ ಮೊದಲ ಕಾರು ಎಲಿವೇಟ್. ಇದರ ಬುಕಿಂಗ್ ಜುಲೈನಲ್ಲಿ ಪ್ರಾರಂಭವಾಗಲಿದ್ದು, ಹಬ್ಬದ ಋತುವಿಗೆ ಮುಂಚಿತವಾಗಿ ಬಿಡುಗಡೆಗೊಳ್ಳಲಿದೆ.
ಹೋಂಡಾ ಕಾರ್ಸ್ ಇಂಡಿಯಾದ ಅಧ್ಯಕ್ಷ ಮತ್ತು ಸಿಇಒ ತಕುಯಾ ಸುಮುರಾ ಎಲಿವೇಟ್ ಕಾರನ್ನು ಅನಾವರಣಗೊಳಿಸಿ ಮಾತನಾಡಿ ನಾವು ಭಾರತಕ್ಕಾಗಿ ಅತ್ಯಂತ ಬಲಿಷ್ಠ ಉತ್ಪನ್ನ ಕಾರ್ಯತಂತ್ರ ರೂಪಿಸಿದ್ದೇವೆ. 2030ರ ವೇಳೆಗೆ ಐದು ಎಸ್ ಯುವಿಗಳನ್ನು ಹೊಂದಲು ಯೋಜಿಸಿದ್ದೇವೆ. ಎಲಿವೇಟ್ಗೆ ಭಾರತವು ಪ್ರಮುಖ ಮಾರುಕಟ್ಟೆಯಾಗಿದ್ದರೂ, ಭವಿಷ್ಯದಲ್ಲಿ ಮಾದರಿಗೆ ಭಾರತ ಪ್ರಮುಖ ರಫ್ತು ಕೇಂದ್ರವಾಗಲಿದೆ. ಹೋಂಡಾ ಕಾರ್ಸ್ ಇಂಡಿಯಾ ಮುಂದಿನ ಮೂರು ವರ್ಷಗಳಲ್ಲಿ ಎಲಿವೇಟ್್ನ ಎಲೆಕ್ಟ್ರಿಕ್ ಆವೃತ್ತಿಯನ್ನೂಐ ಮಾರುಕಟ್ಟೆಗೆ ತರಲು ಯೋಜಿಸಿದೆ ಎಂದು ಹೇಳಿದ್ದಾರೆ.
2023ರ ವರ್ಷಾರಂಭದಲ್ಲಿ ಹೋಂಡಾ ಕಾರ್ಸ್ ಭಾರತದಲ್ಲಿ ಪ್ರತಿ ವರ್ಷ ಒಂದು ಹೊಸ ಮಾದರಿ ಪರಿಚಯಿಸುವ ಯೋಜನೆಯನ್ನು ಹಂಚಿಕೊಂಡಿತ್ತು ಇದರಲ್ಲಿ ಹೈಬ್ರಿಡ್ ಮತ್ತು ಎಲೆಕ್ಟ್ರಿಕ್ ವಾಹನಗಳೂ ಸೇರಿವೆ. ದೇಶದಲ್ಲಿ ಹೋಂಡಾ ಬ್ರ್ಯಾಂಡ್ ಅನ್ನು ಬಲಪಡಿಸಲು ಪ್ರೀಮಿಯಂ ಮಾದರಿಗಳನ್ನು ಭಾರತಕ್ಕೆ ತರುವ ಪ್ರಯತ್ವನ್ನು ಮಾಡಲಾಗಿದೆ.
ಹ್ಯುಂಡೈ ಕ್ರೆಟಾಗೆ ಪ್ರತಿಸ್ಪರ್ಧಿ
ಭಾರತದಲ್ಲಿ ಎಸ್ಯುವಿ ಸೆಗ್ಮೆಂಟ್ ಪ್ರಬಲವಾಗುತ್ತಿರವು ಸಮದಲ್ಲಿ ಮಿಡ್ಸೈಜ್ ಎಸ್ಯುವಿ ವಿಭಾಗಕ್ಕೆ ಹೋಂಡಾ ಪ್ರವೇಶ ಮಾಡಿದೆ. ಒಟ್ಟು ಕಾರು ಮಾರುಕಟ್ಟೆಯ ಶೇಕಾಡ 40ರಷ್ಟು ಎಸ್ಯುವಿಗಳ ಪಾಲಿದೆ. ಹೀಗಾಗಿ ಹೋಂಡಾ ಎಲಿವೇಟ್ ಅನ್ನು ಮಧ್ಯಮ ಗಾತ್ರದ ಎಸ್ಯುವಿ ಮಾರುಕಟ್ಟೆಯಲ್ಲಿ ಸ್ಥಾಪಿಸಲು ಹೋಂಡಾ ಮುಂದಾಗಿದೆ. ಈ ಕಾರು ಹ್ಯುಂಡೈ ಕ್ರೆಟಾ, ಕಿಯಾ ಸೆಲ್ಟೋಸ್ ಮತ್ತು ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ ಕಾರುಗಳಿಗೆ ಪೈಪೋಟಿ ನೀಡಲಿದೆ.
ಹೋಂಡಾ ಕಂಪನಿಯು ಭಾರತದ ಮಾರುಕಟ್ಟೆಯಲ್ಲಿ ಸಿಟಿ ಮತ್ತು ಅಮೇಜ್ ಮೂಲಕ ತನ್ನ ಇರುವಿಕೆಯನ್ನು ಗಟ್ಟಿ ಮಾಡಿಕೊಂಡಿದೆ. ಇದೀಗ ಆ ಪಟ್ಟೆಗೆ ಎಲಿವೇಟ್ ಸೇರ್ಪಡೆಗೊಂಡಿದೆ. ಇದು ಇದು ವೇಗವಾಗಿ ಬೆಳೆಯುತ್ತಿರುವ ಎಸ್ಯುವಿ ವಿಭಾಗದಲ್ಲಿ ತನ್ನ ಅಸ್ತಿತ್ವವನ್ನು ಸ್ಥಾಪಿಸುತ್ತದೆ ಎಂದು ಕಂಪನಿ ಹೇಳಿದೆ.
ಇದನ್ನೂ ಓದಿ : Maruti Suzuki : ಮಾರುತಿಯ 5 ಡೋರ್ ಜಿಮ್ನಿ ಬಿಡುಗಡೆ, ಮಹೀಂದ್ರಾ ಥಾರ್ಗೆ ಪೈಪೋಟಿ ಖಚಿತ
ಸವಾಲುಗಳ ಹೊರತಾಗಿಯೂ, ಭಾರತೀಯ ಕಾರು ಮಾರುಕಟ್ಟೆ ತನ್ನ ಶಕ್ತಿಯನ್ನು ಸಾಬೀತುಪಡಿಸಿದೆ. ವಿಶ್ವದ ವೇಗವಾಗಿ ಬೆಳೆಯುತ್ತಿರುವ ಮಾರುಕಟ್ಟೆಯಾಗಿ ಮುಂದುವರಿದೆ. ನಾವು ಸೆಡಾನ್ ವಿಭಾಗದಲ್ಲಿ ಜನಪ್ರಿಯತೆ ಹೊಂದಿದ್ದೇವೆ ಮತ್ತು ಅದನ್ನು ಎಸ್ಯುವಿ ವಿಭಾಗಕ್ಕೆ ಕೊಂಡೊಯ್ಯಲು ಆಶಿಸಿದ್ದೇವೆ . ಎಲಿವೇಟ್ ಪರಿಪೂರ್ಣ ನಗರ ಕೇಂದ್ರಿತ ಎಸ್ಯುವಿ ಎಂದು ತ್ಸುಮುರಾ ಹೇಳಿದರು.
ತಪುಕಾರಾ ಘಟಕದಲ್ಲಿ ನಿರ್ಮಾಣ
ಎಲಿವೇಟ್ ಮತ್ತು ಭವಿಷ್ಯದ ಉತ್ಪನ್ನಗಳಿಗೆ ಪೂರಕವಾಗಿ ಹೋಂಡಾ ಕಂಪನಿಯು ರಾಜಸ್ಥಾನದ ತಪುಕಾರದಲ್ಲಿರುವ ತನ್ನ ಘಟಕದಲ್ಲಿನ ಉತ್ಪಾದನಾ ಸಾಮರ್ಥ್ಯ ಹೆಚ್ಚಿಸಿದೆ. ದೈನಂದಿನ ಉತ್ಪಾದನಾ ಸಾಮರ್ಥ್ಯವನ್ನು 2023ರ ಮೊದಲ ತ್ರೈಮಾಸಿಕದಲ್ಲಿ 540 ವಾಹನಗಳಿಂದ ದಿನಕ್ಕೆ 660 ವಾಹನಗಳಿಗೆ ವಿಸ್ತರಿಸಲಾಗಿದೆ.
ಎಲಿವೇಟ್ ಬಿಡುಗಡೆಗೆ ಮುಂಚಿತವಾಗಿ ಹೋಂಡಾ ಡೀಲರ್ಶಿಪ್ ನೆಟ್ವರ್ಕ್ ಕೂಡ ನವೀಕರಿಸಲಾಗಿದೆ.
ಬ್ರ್ಯಾಂಡಿಂಗ್ ಮತ್ತು ರಿಟೇಲ್ ದೃಷ್ಟಿಕೋನದಿಂದ ಹೋಂಡಾ ಕಾರ್ಸ್ ಇಂಡಿಯಾ ತನ್ನ ಶೋರೂಂಗಳ ಹೊಸ ಗ್ರಾಹಕ ಇಂಟರ್ಫೇಸ್ಗಾಗಿ (ಸಿಐ) 260 ಕೋಟಿ ರೂಪಾಯಿ ಹೂಡಿಕೆ ಮಾಡಿದೆ. ಹೋಂಡಾ 238 ನಗರಗಳಲ್ಲಿ ಸುಮಾರು 326 ಮಳಿಗೆಗಳನ್ನು ಹೊಂದಿದೆ. ತನ್ನ ಒಟ್ಟಾರೆ ಮಾರಾಟದಲ್ಲಿ 3ನೇ ಶ್ರೇಣಿಯ ನಗರಗಳು ಸುಮಾರು 30 ಪ್ರತಿಶತದಷ್ಟು ಪಾಲನ್ನು ಹೊಂದಿವೆ ಎಂದು ಕಂಪನಿ ಹೇಳಿಕೊಂಡಿದೆ. ಹೋಂಡಾ ಎಲಿವೇಟ್ ಅನ್ನು ಮೊದಲು ಭಾರತದಲ್ಲಿ ಬಿಡುಗಡೆ ಮಾಡಲಿದ್ದು, ನಂತರ ಇತರ ಜಾಗತಿಕ ಮಾರುಕಟ್ಟೆಗಳಲ್ಲಿ ಬಿಡುಗಡೆಯಾಗಲಿದೆ.
-
ಸುವಚನ16 hours ago
ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ
-
ಪ್ರಮುಖ ಸುದ್ದಿ11 hours ago
EPF e-passbook : UMANG ಆ್ಯಪ್ನಲ್ಲಿ ನಿಮ್ಮ ಪಿಎಫ್ ಪಾಸ್ಬುಕ್ ಸುಲಭವಾಗಿ ಪರಿಶೀಲಿಸಿ
-
ಪ್ರಮುಖ ಸುದ್ದಿ13 hours ago
Apply for ration card : ಹೊಸ ರೇಷನ್ ಕಾರ್ಡ್ಗೆ ಅರ್ಜಿ ಸಲ್ಲಿಸುವುದು ಹೇಗೆ?
-
ಅಂಕಣ24 hours ago
ವಿಧಾನಸೌಧ ರೌಂಡ್ಸ್: ರೌಂಡ್ ಟೇಬಲ್ ಸ್ನೇಹಿತರು ಮತ್ತು ವಿಧಾನಸೌಧದಲ್ಲಿ ಬದಲಾಗದ 40 % ಬ್ರಾಂಡ್!
-
ಉತ್ತರ ಕನ್ನಡ21 hours ago
Karwar News: ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ: ಇಬ್ಬರು ಅಧಿಕಾರಿಗಳಿಗೆ 2 ವರ್ಷ ಜೈಲು
-
ಪ್ರಮುಖ ಸುದ್ದಿ16 hours ago
Horoscope Today : ಈ ರಾಶಿಯವರಿಗೆ ಇಂದು ಪ್ರೀತಿ ಅಂಕುರವಾಗಲಿದೆಯಂತೆ!
-
ಉತ್ತರ ಕನ್ನಡ22 hours ago
Karwar Accident: ಬೈಕ್ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರು ಸವಾರರ ಸಾವು
-
ಪ್ರಮುಖ ಸುದ್ದಿ23 hours ago
ವಿಸ್ತಾರ ಸಂಪಾದಕೀಯ: ಶಾಲಾ ಬಾಲಕಿಯರಿಗೆ ವಿಷ: ಅಫಘಾನಿಸ್ತಾನದಲ್ಲಿ ಮನುಷ್ಯತ್ವ ಮರುಕಳಿಸುವುದು ಯಾವಾಗ?