Site icon Vistara News

ಬೆಂಗಳೂರು ಬುಲ್ಸ್​ಗೆ ಫುಲ್ ಚಾರ್ಜ್​ ಮಾಡಲು ಬರಲಿದ್ದಾರೆ ಕಿಚ್ಚ ಸುದೀಪ್

bengaluru bulls kiccha sudeep

ಬೆಂಗಳೂರು: ಪ್ರಸಕ್ತ ಸಾಗುತ್ತಿರುವ ಪ್ರೊ ಕಬಡ್ಡಿ ಲೀಗ್‌(pro kabaddi) 10ನೇ ಆವೃತ್ತಿಯ ಬೆಂಗಳೂರು ಚರಣದ ಪಂದ್ಯಗಳು ನಾಳೆಯಿಂದ(ಡಿ.8) ಆರಂಭಗೊಳ್ಳಲಿದೆ. ಆತಿಥೇಯ ಬೆಂಗಳೂರು ಬುಲ್ಸ್(bengaluru bulls)​ ತಂಡ ನಾಳೆ ನಡೆಯುವ ಪಂದ್ಯದಲ್ಲಿ ದಬಾಂಗ್​ ಡೆಲ್ಲಿ ವಿರುದ್ಧ ಸೆಣಸಾಟ ನಡೆಸಲಿದೆ. ಕನ್ನಡಿಗರ ನೆಚ್ಚಿನ ತಂಡಕ್ಕೆ ಬೆಂಬಲ ಸೂಚಿಸಲು ಚಿತ್ರನಟ ಕಿಚ್ಚ ಸುದೀಪ್(kiccha sudeep) ಹಾಜರ್​ ಆಗಲಿದ್ದಾರೆ.

ಕಿಚ್ಚ ಸುದೀಪ್​ ಅವರು ಬುಲ್ಸ್​ ಪಂದ್ಯ ವೀಕ್ಷಣೆಗೆ ಬರುತ್ತಿರುವ ವಿಚಾರವನ್ನು ಸ್ಟಾರ್​ಸ್ಪೋರ್ಟ್ಸ್​ ಕನ್ನಡ ತನ್ನ ಅಧಿಕೃತ ಸಾಮಾಜಿಕ ಜಾಲತಾಣಗಳ ಖಾತೆಯಲ್ಲಿ ಖಚಿತಪಡಿಸಿದೆ. ಟಿಟ್ವರ್​ ಎಕ್ಸ್​ ಖಾತೆಯಲ್ಲಿ ಬುಲ್ಸ್​ ತಂಡದ ಜೆರ್ಸಿಯಲ್ಲಿರು ಸುದೀಪ್​ ಅವರ ಫೋಟೊ ಹಂಚಿಕೊಂಡು ‘ಅಖಾಡಕ್ಕೆ ಕಿಚ್ಚೇರಿಸಲು ಖುದ್ದು ಕಿಚ್ಚನೇ ಬರಲಿದ್ದಾರೆ.’ ಎಂದು ಬರೆದುಕೊಂಡಿದೆ. ಹಿಂದಿನ ಕಲವು ಆವೃತ್ತಿಯಲ್ಲೂ ಸುದೀಪ್​ ಅವರು ಬುಲ್ಸ್​ ಪಂದ್ಯಕ್ಕೆ ಆಗಮಿಸಿ ಬೆಂಬಲ ಸೂಚಿಸಿದ್ದರು.

ಗೆಲುವಿನ ಖಾತೆ ತೆರೆಯದ ಬುಲ್ಸ್​

10ನೇ ಆವೃತ್ತಿಯಲ್ಲಿ ಬೆಂಗಳೂರು ಬುಲ್ಸ್​ ತಂಡ ಈವರೆಗೆ 2 ಪಂದ್ಯಗಳನ್ನು ಆಡಿದ್ದು. ಆಡಿದ 2ರಲ್ಲೂ ಸೋಲು ಕಂಡಿದೆ. ಇದೀಗ ತವರಿನಲ್ಲಿ ತಮ್ಮ ಮೂರನೇ ಪಂದ್ಯದಲ್ಲಿ ಗೆಲುವಿನ ಖಾತೆ ತೆರೆಯಲಿದೆಯಾ ಎಂದು ಕಾದು ನೋಡಬೇಕಿದೆ. ಸುದೀಪ್​ ಕೂಡ ಆಟಗಾರರಿಗೆ ಆತ್ಮವಿಶ್ವಾಸ ತುಂಬಲಿದ್ದಾರೆ. ಒಟ್ಟಾರೆ ತವರಿನಲ್ಲಿ ಗೂಳಿಗಳು ಘರ್ಜನೆ ನಡೆಸಲು ಎಲ್ಲ ಸಿದ್ಧತೆ ನಡಸಿದ್ದಾರೆ.

ತಂಡದ ಸ್ಟಾರ್ ಆಟಗಾರರಾದ ಭರತ್​ ಕುಮಾರ್​, ವಿಕಾಸ್​ ಕಂಡೋಲ, ಸುರ್ಜಿತ್​ ಸಿಂಗ್​, ಅಭಿಷೇಕ್​ ಸಿಂಗ್​ ಅವರು ಉತ್ಕೃಷ್ಟ ಮಟ್ಟದ ಆಟ ತೋರ್ಪಡಿಸುವಲ್ಲಿ ಯಶಸ್ವಿಯಾದರೆ ತಂಡಕ್ಕೆ ಗೆಲುವು ಕಟ್ಟಿಟ್ಟ ಬುತ್ತಿ ಎನ್ನಲಡ್ಡಿಯಿಲ್ಲ. ಡೆಲ್ಲಿ ಕೂಡ ಬಲಿಷ್ಠ ಪಡೆಯಾಗಿದೆ. ಎಕ್ಸ್​ಪ್ರೆಸ್​ ಖ್ಯಾತಿಯ ನವೀನ್​ ಕುಮಾರ್​, ವಿಶಾಲ್​ ಭಾರದ್ವಾಜ್​, ಅಶು ಮಲಿಕ್​ ಇವರನ್ನೆಲ್ಲ ಕಟ್ಟಿಹಾಕಬೇಕು.

ಇದನ್ನೂ ಓದಿ Pro Kabaddi: ಗೆಲುವಿನ ನಗೆ ಬೀರಿದ ಪಾಟ್ನಾ ಪೈರೇಟ್ಸ್‌, ಯುಪಿ ಯೋಧಾಸ್

‘ಭಾರತದ ಪ್ರತಿ ಉಸಿರಲ್ಲೂ ಕಬಡ್ಡಿ’ ಎನ್ನುವ ಕ್ಯಾಂಪೇನ್ ಸ್ಥಳೀಯ ಕಬಡ್ಡಿ ಅಭಿಮಾನಿಗಳಿಗಾಗಿಯೇ ರೂಪಿಸಿದ ಕಾರ್ಯಕ್ರಮವಾಗಿತ್ತು. ಈ ಕ್ಯಾಂಪೇನ್​ನ ಪೋಸ್ಟರ್​ನಲ್ಲಿ ಕಿಚ್ಚ ಸುದೀಪ್​ ಕೂಡ ಕಾಣಿಸಿಕೊಂಡಿದ್ದರು.

ಕನ್ನಡಿಗರ ಪ್ರತಿ ಉಸಿರಲ್ಲೂ ಕಬಡ್ಡಿ ಜೀವಂತ

“ಕಬಡ್ಡಿಯಲ್ಲಿನ ಶಕ್ತಿ, ಧೈರ್ಯ, ದೃಢತೆ ಮತ್ತು ಸಂಪೂರ್ಣ ಉತ್ಸಾಹದ ಸಂಯೋಜನೆಯು ನನ್ನೊಂದಿಗೆ ಆಳವಾಗಿ ಅನುರಣಿಸುತ್ತದೆ. ನಮ್ಮ ರಾಷ್ಟ್ರದ ಚೈತನ್ಯವನ್ನು ಪ್ರತಿಬಿಂಬಿಸುತ್ತದೆ. ಶಕ್ತಿ ಮತ್ತು ದೃಢತೆಗೆ ಸಮಾನಾರ್ಥಕವಾದ ಗೂಳಿಗಳ ಸದ್ಗುಣಗಳಿಂದ ಸ್ಫೂರ್ತಿಯನ್ನು ಪಡೆಯುತ್ತಿದ್ದೇನೆ, ನಾನು ‘ಕನ್ನಡಿಗರ ಪ್ರತಿ ಉಸಿರಲ್ಲೂ ಕಬಡ್ಡಿ’ಯನ್ನು ಜೀವಂತವಾಗಿಸುವಲ್ಲಿ ಉತ್ಸುಕನಾಗಿದ್ದೇನೆ. ಈ ಭಾವನೆಯು ಕರ್ನಾಟಕದ ಚೈತನ್ಯವನ್ನು ಪ್ರತಿಬಿಂಬಿಸುವುದಲ್ಲದೆ, ಕನ್ನಡಿಗರ ಸಮುದಾಯದ ಅಚಲ ಬೆಂಬಲ ಮತ್ತು ಅದಮ್ಯ ಚೇತನಕ್ಕೆ ಗೌರವ ಸಲ್ಲಿಸುತ್ತದೆ. ನಮ್ಮ ಗೂಳಿಗಳ ಬೆಂಬಲಕ್ಕೆ ಕನ್ನಡಿಗರು ಕೈಜೋಡಿಸಿ ಎಂದು ಟೂರ್ನಿ ಆರಂಭಕ್ಕೂ ಮುನ್ನ ಕಿಚ್ಚ ಹೇಳಿದ್ದರು.

Exit mobile version