ಹೈದರಾಬಾದ್: ಐಪಿಎಲ್ 16ನೇ ಆವೃತ್ತಿಯ 47ನೇ ಪಂದ್ಯದಲ್ಲಿ ಟಾಸ್ ಗೆದ್ದಿರುವ ಕೋಲ್ಕೊತಾ ನೈಟ್ ರೈಡರ್ಸ್ ತಂಡ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ ಇದರೊಂದಿಗೆ ಆತಿಥೇಯ ಸನ್ ರೈಸರ್ಸ್ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಳ್ಳಬೇಕಾಗಿದೆ. ಇಲ್ಲಿನ ರಾಜೀವ್ ಗಾಂಧಿ ಇಂಟರ್ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಮ್ನನಲ್ಲಿ ಈ ಪಂದ್ಯ ಆಯೋಜನೆಗೊಂಡಿದೆ.
ಹಾಳಿ ಆವೃವೃತ್ತಿಯ ಐಪಿಎಲ್ನ ಅಂಕಪಟ್ಟಿಯಲ್ಲಿ ಕೋಲ್ಕೊತಾ ನೈಟ್ ರೈಡರ್ಸ್ ತಂಡ 9 ಪಂದ್ಯಗಳಲ್ಲಿ ಆಡಿದ್ದು, ಕೇವಲ ಮೂರು ಗೆಲುವು ಹಾಗೂ ಆರು ಸೋಲಿನೊಂದಿಗೆ ಒಟ್ಟು ಆರು ಅಂಕಗಳನ್ನು ಪಡೆದುಕೊಂಡಿದೆ. ಹೀಗಾಗಿ ಎಂಟನೇ ಸ್ಥಾನದಲ್ಲಿ ಉಳಿದಿದೆ. ಅತ್ತ ಎಸ್ಆರ್ಎಚ್ ಬಳಗವೂ ಎಂಟು ಪಂದ್ಯಗಳಲ್ಲಿ 3ರಲ್ಲಿ ಮಾತ್ರ ಗೆದ್ದು ಐದರಲ್ಲಿ ಸೋತಿದೆ. ಹೀಗಾಗಿ ಆರು ಅಂಕ ಪಡೆದುಕೊಂಡು 9ನೇ ಸ್ಥಾನದಲ್ಲಿದೆ. ಹೀಗಾಗಿ ಮುನ್ನಡೆಯ ಹಾದಿಗಾಗಿ ಇತ್ತಂಡಗಳು ಹೋರಾಟ ನಡೆಸುವ ಸಾಧ್ಯತೆಗಳಿವೆ.
ಟಾಸ್ ಗೆದ್ದ ಬಳಿಕ ಮಾತನಾಡಿದ ಕೆಕೆಆರ್ ತಂಡದ ನಾಯಕ ನಿತೀಶ್ ರಾಣಾ, ಪಿಚ್ ಬ್ಯಾಟಿಂಗ್ಗೆ ಪೂರಕವಾಗಿರುವಂತೆ ಕಾಣುತ್ತಿದೆ. ಹೀಗಾಗಿ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದೇನೆ. ದೊಡ್ಡ ಮೊತ್ತವನ್ನು ಪೇರಿಸಿ ಎದುರಾಳಿಯನ್ನು ಕಟ್ಟಿ ಹಾಕಿ ಗೆಲ್ಲುವ ಯೋಜನೆಯಿದೆ. ನಮ್ಮ ತಂಡ ಉತ್ತಮ ಪ್ರದರ್ಶನ ತೋರಿಲ್ಲ ಎಂಬುದೇ ನಮ್ಮ ಅಭಿಪ್ರಾಯ. ನಮ್ಮ ತಂಡದಲ್ಲಿ ಗಾಯದ ಸಮಸ್ಯೆಯೂ ಹೆಚ್ಚಾಗಿದೆ. ನಮ್ಮ ತಂಡದಲ್ಲಿ ಎರಡು ಬದಲಾವಣೆಗಳನ್ನು ಮಾಡಲಾಗಿದೆ. ಡೇವಿಡ್ ವೈಸ್ ಬದಲಿಗೆ ಜೇಸನ್ ರಾಯ್ ಪ್ರವೇಶ ಪಡೆದುಕೊಂಡಿದ್ದಾರೆ. ವೈಭವ್ ಅರೋರಾ ಬದಲಿಗೆ ಜಗದೀಶನ್ ಅವಕಾಶ ಪಡೆದುಕೊಂಡಿದ್ದಾರೆ ಎಂದು ಹೇಳಿದರು.
ಎಸ್ಆರ್ಎಚ್ ತಂಡದ ನಾಯಕ ಏಡೆನ್ ಮಾರ್ಕ್ರಮ್ ಮಾತನಾಡಿ, ನಾವು ಕೂಡ ಮೊದಲು ಬ್ಯಾಟ್ ಮಾಡುವ ಯೋಜನೆ ರೂಪಿಸಿಕೊಂಡಿದ್ದೇವು. ಅದೇ ರೀತಿ ಉತ್ತಮ ಅವಕಾಶಗಳನ್ನು ಬಳಸಿಕೊಳ್ಳುವು ಉದ್ದೇಶದಿಂದ ಸಕಾರಾತ್ಮಕವಾಗಿ ಆಡಲಿದ್ದೇವೆ. ನಮ್ಮ ಬ್ಯಾಟಿಂಗ್ ವಿಭಾಗದಲ್ಲಿ ಸುಧಾರಣೆ ಕಾಣಬೇಕಾಗಿದೆ ಹಾಗೂ ಬೌಲಿಂಗ್ ಕೂಡ ಉತ್ತಮವಾಗಬೇಕಾಗಿದೆ. ನಮ್ಮ ತಂಡದಲ್ಲಿ ಕೆಲವೊಂದು ಬದಲಾವಣೆಗಳನ್ನು ಮಾಡಲಾಗಿದೆ. ಕಾರ್ತಿಕ್ ತ್ಯಾಗಿ ತಂಡಕ್ಕೆ ಮರು ಪ್ರವೇಶ ಪಡೆದುಕೊಂಡಿದ್ದಾರೆ ಎಂದು ಅವರು ಹೇಳಿದರು.
ತಂಡಗಳು
ಸನ್ರೈಸರ್ಸ್ ಹೈದರಾಬಾದ್: ಮಯಾಂಕ್ ಅಗರ್ವಾಲ್, ಅಭಿಷೇಕ್ ಶರ್ಮಾ, ಏಡೆನ್ ಮಾರ್ಕ್ರಮ್ (ನಾಯಕ), ಹೆನ್ರಿಚ್ ಕ್ಲಾಸೆನ್, ಹ್ಯಾರಿ ಬ್ರೂಕ್, ಅಬ್ದುಲ್ ಸಮದ್, ಮಾರ್ಕೊ ಜಾನ್ಸೆನ್, ಮಯಾಂಕ್ ಮಾರ್ಕಂಡೆ, ಭುವನೇಶ್ವರ್ ಕುಮಾರ್, ಕಾರ್ತಿಕ್ ತ್ಯಾಗಿ, ಟಿ ನಟರಾಜನ್.
ಕೋಲ್ಕತಾ ನೈಟ್ ರೈಡರ್ಸ್: ಜೇಸನ್ ರಾಯ್, ರಹ್ಮಾನುಲ್ಲಾ ಗುರ್ಬಾಜ್ (ವಿಕೆಟ್ ಕೀಪರ್), ವೆಂಕಟೇಶ್ ಅಯ್ಯರ್, ನಿತೀಶ್ ರಾಣಾ (ನಾಯಕ), ಆಂಡ್ರೆ ರಸೆಲ್, ರಿಂಕು ಸಿಂಗ್, ಸುನಿಲ್ ನರೈನ್, ಶಾರ್ದೂಲ್ ಠಾಕೂರ್, ವೈಭವ್ ಅರೋರಾ, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ.