ಲಖನೌ: ಐಪಿಎಲ್ 16ನೇ ಆವೃತ್ತಿಯ ಟೂರ್ನಿಯ 10ನೇ ಪಂದ್ಯದಲ್ಲಿ ಲಕ್ನೊ ಸೂಪರ್ ಜಯಂಟ್ಸ್ ವಿರುದ್ಧ ಟಾಸ್ ಗೆದ್ದಿರುವ ಸನ್ ರೈಸರ್ಸ್ ಹೈದರಾಬಾದ್ ತಂಡ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ದಕ್ಷಿಣ ಆಫ್ರಿಕಾದ ಬ್ಯಾಟರ್ ಏಡೆನ್ ಮಾರ್ಕ್ರಮ್ ಅವರು ತಂಡ ನಾಯಕತ್ವ ವಹಿಸಿಕೊಂಡಿದ್ದು ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಇಲ್ಲಿನ ಭಾರತ ರತ್ನ ಅಟಲ್ಬಿಹಾರಿ ವಾಜಪೇಯಿ ಏಕನಾ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ಪಂದ್ಯ ನಡೆಯಲಿದೆ. ಲಖನೌ ತಂಡಕ್ಕೆ ಇದು ತವರು ಸ್ಟೇಡಿಯಮ್ ಅಗಿದ್ದು ಚೆನ್ನೈ ವಿರುದ್ಧದ ಸೋಲಿನ ಬಳಿಕ ಗೆಲುವಿನ ಹಳಿಗೆ ಮರಳಲು ಯೋಜನೆ ರೂಪಿಸಿಕೊಂಡಿರುತ್ತದೆ.
ಪಿಚ್ ತುಂಬಾ ಒಣಗಿದೆ. ಹೀಗಾಗಿ ಟಾಸ್ ಗೆದ್ದಿರುವ ನಾನು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡೆ. ನಮ್ಮ ತಂಡಕ್ಕೆ ಮೊದಲ ಗೆಲುವು ಕಲ್ಪಿಸುವ ಸಲುವಾಗಿ ಯೋಜನೆ ರೂಪಿಸಿಕೊಂಡಿದ್ದೇವೆ ಎಂದು ಸನ್ರೈಸರ್ಸ್ ಹೈದರಾಬಾದ್ ತಂಡದ ನಾಯಕ ಏಡೆನ್ ಮಾರ್ಕ್ರಮ್ ಹೇಳಿದ್ದಾರೆ.
ಲಕ್ನೊ ತಂಡದ ನಾಯಕ ಕೆ. ಎಲ್ ರಾಹುಲ್ ಮಾತನಾಡಿ, ಈಗಲೇ ಎಲ್ಲವನ್ನೂ ಹೇಳುವುದಕ್ಕೆ ಸಾಧ್ಯವಿಲ್ಲ. ಆದರೆ, ಹಿಂದಿನ ಪಂದ್ಯದಲ್ಲಿ ನಾವು ಉತ್ತಮವಾಗಿ ಬ್ಯಾಟಿಂಗ್ ಮಾಡಿದ್ದೆವು. ಇಂದು ಕೂಡ ಉತ್ತಮ ಪ್ರದರ್ಶನ ನೀಡುವ ನಿರಿಕ್ಷೆಯಲ್ಲಿದ್ದೇವೆ. ನಾವು ಉತ್ತಮ ಯೋಜನೆಯೊಂದಿಗೆ ಇಲ್ಲಿಗೆ ಬಂದಿದ್ದು ಅದಕ್ಕೆ ಪೂರಕವಾಗಿ ಆಡುತ್ತೇವೆ. ಮಾರ್ಕ್ವುಡ್ ವಿಶ್ರಾಂತಿ ತೆಗೆದುಕೊಳ್ಳುತ್ತಾರೆ ಹಾಗೂ ಆವೇಶ್ ಖಾನ್ ಗಾಯದಿಂದಾಗಿ ಆಡುತ್ತಿಲ್ಲ ಎಂದು ಅವರು ಹೇಳಿದ್ದಾರೆ.
ತಂಡಗಳು ಇಂತಿವೆ
ಲಕ್ನೊ ಸೂಪರ್ ಜಯಂಟ್ಸ್: ಕೆಎಲ್ ರಾಹುಲ್(ನಾಯಕ), ಕೈಲ್ ಮೇಯರ್ಸ್, ದೀಪಕ್ ಹೂಡಾ, ಮಾರ್ಕಸ್ ಸ್ಟೊಯಿನಿಸ್, ನಿಕೋಲಸ್ ಪೂರನ್, ರೊಮಾರಿಯೋ ಶೆಫರ್ಡ್, ಕೃನಾಲ್ ಪಾಂಡ್ಯ, ಅಮಿತ್ ಮಿಶ್ರಾ, ಯಶ್ ಠಾಕೂರ್, ಜಯದೇವ್ ಉನದ್ಕತ್, ರವಿ ಬಿಷ್ಣೋಯ್.
ಸನ್ ರೈಸರ್ಸ್ ಹೈದರಾಬಾದ್: ಮಯಾಂಕ್ ಅಗರ್ವಾಲ್, ಅನ್ಮೋಲ್ ಪ್ರೀತ್ ಸಿಂಗ್, ರಾಹುಲ್ ತ್ರಿಪಾಠಿ, ಏಡೆನ್ ಮಾರ್ಕ್ರಾಮ್(ನಾಯಕ), ಹ್ಯಾರಿ ಬ್ರೂಕ್, ವಾಷಿಂಗ್ಟನ್ ಸುಂದರ್, ಅಬ್ದುಲ್ ಸಮದ್, ಭುವನೇಶ್ವರ್ ಕುಮಾರ್, ಟಿ ನಟರಾಜನ್, ಉಮ್ರಾನ್ ಮಲಿಕ್, ಆದಿಲ್ ರಶೀದ್