ಲಖನೌ : ಭಾರತ ತಂಡದ ಸ್ಟಾರ್ ಬ್ಯಾಟರ್ ಸೂರ್ಯಕುಮಾರ್ ಯಾದವ್ ಅವರು ಸೋಮವಾರ (ಜನವರಿ 30) ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಭಾನುವಾರ ಸಂಜೆ ನಡೆದ ನ್ಯೂಜಿಲ್ಯಾಂಡ್ ವಿರುದ್ಧದ ಟಿ20 ಸರಣಿಯ ಎರಡನೇ ಪಂದ್ಯದಲ್ಲಿ ಭಾರತ ತಂಡ ಆರು ವಿಕೆಟ್ಗಳ ವಿಜಯ ಸಾಧಿಸಿದೆ. ಹೀಗಾಗಿ ಭಾರತ ತಂಡದ ಆಟಗಾರರು ಸೋಮವಾರ ಲಖನೌನಲ್ಲೇ ಉಳಿದುಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಯೋಗಿ ಆದಿತ್ಯನಾಥ್ ಅವರ ಗೃಹ ಕಚೇರಿಗೆ ಭೇಟಿ ನೀಡಿದ ಸೂರ್ಯಕುಮಾರ್ ಮಾತುಕತೆ ನಡೆಸಿದರು.
ಸೂರ್ಯಕುಮಾರ್ ಅವರು ತಮ್ಮನ್ನು ಭೇಟಿ ಮಾಡಿರುವ ಬಗ್ಗೆ ಟ್ವೀಟ್ ಮಾಡಿದ್ದಾರೆ. ಯುವ ಹಾಗೂ ಸ್ಫೂರ್ತಿಯುತ ಆಟಗಾರ ಸ್ಕೈ,(SKY) ನಮ್ಮ ಅಧಿಕೃತ ನಿವಾಸಕ್ಕೆ ಬಂದಿದ್ದಾರೆ ಎಂದು ಟ್ವೀಟ್ ಮಾಡಲಾಗಿದೆ. ಅವರಿಬ್ಬರು ಯಾವ ವಿಚಾರದ ಬಗ್ಗೆ ಮಾತುಕತೆ ನಡೆಸಿದರು ಎಂಬ ಬಗ್ಗೆ ಮಾಹಿತಿ ಇಲ್ಲ. ಭಾನುವಾರ ಇಲ್ಲಿನ ಅಟಲ್ ಬಿಹಾರಿ ವಾಜಪೇಯಿ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ಪಂದ್ಯ ನಡೆದಾಗಲೂ ಯೋಗಿ ಆದಿತ್ಯ ನಾಥ್ ಅವರು ಅಲ್ಲಿಗೆ ಭೇಟಿ ನೀಡಿ ಪಂದ್ಯ ವೀಕ್ಷಿಸಿದ್ದರು. ಅಲ್ಲದೆ, ಭಾರತ ತಂಡದ ನಾಯಕ ಹಾರ್ದಿಕ್ ಪಾಂಡ್ಯಗೆ ಪುಷ್ಪಗುಚ್ಛ ನೀಡಿದ್ದರು.
ಇದನ್ನೂ ಓದಿ : INDvsNZ T20 : ಪಿಚ್ ತಯಾರಿಸಿದ ಕ್ಯುರೇಟರ್ಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ನಾಯಕ ಹಾರ್ದಿಕ್ ಪಾಂಡ್ಯ
ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲ್ಯಾಂಡ್ ಬಳಗವನ್ನು 6 ವಿಕೆಟ್ಗಳಿಂದ ಮಣಿಸಿತ್ತು. ಈ ಮೂಲಕ ಮೂರು ಪಂದ್ಯಗಳ ಸರಣಿ 1-1 ಅಂತರದಿಂದ ಸಮಬಲಗೊಂಡಿದೆ. ಮುಂದಿನ ಪಂದ್ಯ ಗುಜರಾತ್ನ ಅಹಮದಾಬಾದ್ನಲ್ಲಿ ಫೆಬ್ರವರಿ 1ರಂದು ನಡೆಯಲಿದೆ.