Suryakumar Yadav: ದಿಲ್ಲಿಯಲ್ಲಿ ತಮಟೆ ಸದ್ದಿಗೆ ಹೆಜ್ಜೆ ಹಾಕಿದ ಸೂರ್ಯಕುಮಾರ್​ ಯಾದವ್​; ವಿಡಿಯೊ ವೈರಲ್​ - Vistara News

ಕ್ರೀಡೆ

Suryakumar Yadav: ದಿಲ್ಲಿಯಲ್ಲಿ ತಮಟೆ ಸದ್ದಿಗೆ ಹೆಜ್ಜೆ ಹಾಕಿದ ಸೂರ್ಯಕುಮಾರ್​ ಯಾದವ್​; ವಿಡಿಯೊ ವೈರಲ್​

Suryakumar Yadav: ಭಾರತ ತಂಡದ ಆಟಗಾರರು 11 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಅವರ ಜತೆ ಬೆಳಗ್ಗಿನ ತಿಂಡಿ ಸವಿಯಲಿದ್ದಾರೆ. ನರೇಂದ್ರ ಮೋದಿ ಅವರು ತಮ್ಮ ನಿವಾಸದಲ್ಲಿಯೇ ಭಾರತ ಕ್ರಿಕೆಟ್‌ ತಂಡದ ಆಟಗಾರರನ್ನು ಭೇಟಿಯಾಗಿ, ಅವರ ಜತೆ ತಿಂಡಿ ತಿನ್ನಲಿದ್ದಾರೆ. ಇದೇ ವೇಳೆ ಆಟಗಾರರಿಗೆ ಮೋದಿ ಅವರು ಅಭಿನಂದನೆ ಸಲ್ಲಿಸಲಿದ್ದಾರೆ.

VISTARANEWS.COM


on

Suryakumar Yadav
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಅಮೆರಿಕ ಮತ್ತು ವೆಸ್ಟ್​ ಇಂಡೀಸ್​ ಜಂಟಿ ಆತೀಥ್ಯದಲ್ಲಿ ನಡೆದ ಟಿ-20 ವಿಶ್ವಕಪ್‌(T20 World Cup 2024) ಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ರೋಚಕ ಜಯಗಳಿಸಿ 17 ವರ್ಷಗಳ ಬಳಿಕ ಟಿ20 ವಿಶ್ವಕಪ್​ ಗೆದ್ದು ಚುಟುಕು ಕ್ರಿಕೆಟ್‌ನಲ್ಲಿ 2ನೇ ಬಾರಿ ಚಾಂಪಿಯನ್‌ ಆಗಿ ಹೊರಹೊಮ್ಮಿರುವ ಭಾರತ ಕ್ರಿಕೆಟ್‌ ತಂಡ ಇಂದು (ಗುರುವಾರ) ಬೆಳಗ್ಗೆ ತವರಿಗೆ ಮರಳಲಿದೆ. ತಾಯ್ನಾಡಿಗೆ ಕಾಲಿಡುತ್ತಿದ್ದಂತೆ ಸೂರ್ಯಕುಮಾರ್​(Suryakumar Yadav) ಅವರು ತಮಟೆ ಸದ್ದಿಗೆ ಮಸ್ತ್​ ಹೆಜ್ಜೆ ಹಾಕಿದ್ದಾರೆ. ಈ ವಿಡಿಯೊ ವೈರಲ್​ ಆಗಿದೆ.

ಸುಮಾರು 18 ಗಂಟೆಗಳ ಸುದೀರ್ಘ ಪ್ರಯಾಣದ ನಂತರ, ತಂಡವು ಅಂತಿಮವಾಗಿ ಭಾರತಕ್ಕೆ ಬಂದಿಳಿದೆ. ಈ ವೇಳೆ ವಿಮಾನ ನಿಲ್ದಾಣದ ಬಳಿ ನೆರೆದಿದ್ದ ಜನಸ್ತೋಮ ರೋಹಿತ್​ ಪಡೆಗೆ ಜೈಕಾರಗಳ ಮೂಲಕ ಅದ್ಧೂರಿ ಸ್ವಾಗತ ಕೋರಿದರು. ತಾಯ್ನಾಡಿಗೆ ಕಾಲಿಡುತ್ತಿದ್ದಂತೆ ರೋಹಿತ್​ ಶರ್ಮ ವಿಶ್ವಕಪ್​ ಮೇಲೆತ್ತಿ ಪ್ರದರ್ಶಿಸಿದರು. ತಮಟೆ ಬಡಿಯುತ್ತಾ ಸ್ವಾಗತ ಕೋರುತ್ತಿದ್ದವ ಜತೆ ಸೂರ್ಯಕುಮಾರ್​ ಮಸ್ತ್​ ಆಗಿ ಒಂದೆಡರು ಸ್ಟೆಪ್ಸ್​ ಹಾಕಿ ಸಂಭ್ರಮಿಸಿದ್ದಾರೆ. ತಮಡೆ ಬಡಿಯುತ್ತಿರುವವರು ಕೂಡ ಸೂರ್ಯಕುಮಾರ್​ ಜತೆ ಕುಣಿದಿದ್ದಾರೆ.

ಭಾರತ ತಂಡದ ಆಟಗಾರರು 11 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಅವರ ಜತೆ ಬೆಳಗ್ಗಿನ ತಿಂಡಿ ಸವಿಯಲಿದ್ದಾರೆ. ನರೇಂದ್ರ ಮೋದಿ ಅವರು ತಮ್ಮ ನಿವಾಸದಲ್ಲಿಯೇ ಭಾರತ ಕ್ರಿಕೆಟ್‌ ತಂಡದ ಆಟಗಾರರನ್ನು ಭೇಟಿಯಾಗಿ, ಅವರ ಜತೆ ತಿಂಡಿ ತಿನ್ನಲಿದ್ದಾರೆ. ಇದೇ ವೇಳೆ ಆಟಗಾರರಿಗೆ ಮೋದಿ ಅವರು ಅಭಿನಂದನೆ ಸಲ್ಲಿಸಲಿದ್ದಾರೆ.

ಮೋದಿ ಭೇಟಿಯ ಬಳಿಕ ನವದೆಹಲಿಯಿಂದ ವಿಶೇಷ ವಿಮಾನ ಮೂಲಕ ಆಟಗಾರರು ಮುಂಬೈಗೆ ಆಗಮಿಸಿ ವಾಂಖೇಡೆ ಕ್ರೀಡಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ನಾಯಕ ರೋಹಿತ್‌ ಶರ್ಮಾ ಗೆದ್ದಿರುವ ವಿಶ್ವಕಪ್‌ ಟ್ರೋಫಿಯನ್ನು ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾಗೆ ಹಸ್ತಾಂತರಿಸಲಿದ್ದಾರೆ. ಬಳಿಕ ತೆರೆದ ವಾಹನದಲ್ಲಿ ರೋಡ್‌ ಶೋ ನಡೆಯಲಿದೆ.

ಇದನ್ನೂ ಓದಿ Team India: ಭಾರತಕ್ಕೆ ಬಂದಿಳಿದ ಟೀಮ್‌ ಇಂಡಿಯಾ; ವಿಶ್ವಕಪ್‌ ಹೀರೋಗಳಿಗೆ ದಿಲ್ಲಿಯಲ್ಲಿ ಭರ್ಜರಿ ಸ್ವಾಗತ

ಸಹಾಯಕ ಸಿಬ್ಬಂದಿ, ಆಟಗಾರರ ಕುಟುಂಬ ಸದಸ್ಯರು, ಕ್ರಿಕೆಟ್‌ ಮಂಡಳಿಯ ಅಧಿಕಾರಿಗಳು ಮತ್ತು ಪತ್ರಕರ್ತರೊಂದಿಗೆ ಭಾರತೀಯ ತಂಡದ ಆಟಗಾರರು ಗ್ರಾಂಟ್ಲಿ ಆಡಮ್ಸ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬುಧವಾರ ವಿಶೇಷ ಚಾರ್ಟರ್ ವಿಮಾನ ಏರಿದ್ದರು. ಏರ್ ಇಂಡಿಯಾ ಚಾಂಪಿಯನ್ಸ್ 24 ವರ್ಲ್ಡ್‌ ಕಪ್‌ (Air India Champions 24 World Cup) ಎನ್ನುವ ಹೆಸರಿನ ವಿಮಾನವು ಬೆಳಿಗ್ಗೆ 6:20ರ ಸುಮಾರಿಗೆ ದೆಹಲಿಯ ಇಂದಿರಾ ಗಾಂಧಿ ಇಂಟರ್​ನ್ಯಾಷನ್ ವಿಮಾನ ನಿಲ್ದಾಣಕ್ಕೆ ಬಂದಿಳಿಯಿತು. ಬೆರಿಲ್ ಚಂಡಮಾರುತದಿಂದ ಉಂಟಾದ ವಿಳಂಬದಿಂದಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ವಿಶೇಷ ಚಾರ್ಟರ್ ವಿಮಾನದ ವ್ಯವಸ್ಥೆ ಮಾಡಿತ್ತು.

ಜೂನ್‌ 29ರಂದು ಬಾರ್ಬಡೋಸ್​ನ ಕೆನ್ಸಿಂಗ್ಟನ್ ಓವಲ್​ನಲ್ಲಿ ನಡೆದಿದ್ದ ಟಿ20 ವಿಶ್ವಕಪ್​ 2024ರ ಫೈನಲ್​ನಲ್ಲಿ ಟೀಮ್ ಇಂಡಿಯಾ ದಕ್ಷಿಣ ಆಫ್ರಿಕಾವನ್ನು 7 ರನ್​ಗಳ ಅಂತರದಿಂದ ಸೋಲಿಸುವ ಮೂಲಕ ಚಾಂಪಿಯನ್ ಆಗಿ ಹೊರ ಹೊಮ್ಮಿತ್ತು. ಆ ಮೂಲಕ ಸುಮಾರು 17 ವರ್ಷಗಳ ಬಳಿಕ ಟಿ-20 ವಿಶ್ವಕಪ್‌ ಮುಡಿಗೇರಿಸಿಕೊಂಡಿತ್ತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Asia Cup 2024 : ಮಹಿಳಾ ಏಷ್ಯಾಕಪ್ ಟೂರ್ನಿಗೆ ಭಾರತ ತಂಡ ಪ್ರಕಟ

Asia Cup 2024: ಆತಿಥೇಯ ಶ್ರೀಲಂಕಾ, ಬಾಂಗ್ಲಾದೇಶ, ಪಾಕಿಸ್ತಾನ, ಮಲೇಷ್ಯಾ, ಥೈಲ್ಯಾಂಡ್, ನೇಪಾಳ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ ತಂಡಗಳು ಟೂರ್ನಿಯಲ್ಲಿ ಭಾಗವಹಿಸಲಿವೆ. ಹರ್ಮನ್ ಪ್ರೀತ್ ಕೌರ್ ನೇತೃತ್ವದ ಭಾರತ ತಂಡ ‘ಎ’ ಗುಂಪಿನಲ್ಲಿ ಪಾಕಿಸ್ತಾನ, ನೇಪಾಳ ಮತ್ತು ಯುಎಇ ತಂಡಗಳೊಂದಿಗೆ ಸ್ಥಾನ ಪಡೆದಿದೆ.

VISTARANEWS.COM


on

Asia Cup 2024
Koo

ನವದೆಹಲಿ: 2024ರ ಆವೃತ್ತಿಯ ಮಹಿಳೆಯರ ಏಷ್ಯಾ ಕಪ್ ಟಿ20 ಕ್ರಿಕೆಟ್​ ಟೂರ್ನಿಗೆ (Asia Cup 2024) ಭಾರತ ತಂಡವನ್ನು ಶನಿವಾರ (ಜುಲೈ 6) ಪ್ರಕಟಿಸಿದೆ. ಪಂದ್ಯಾವಳಿ ಜುಲೈ 19 ರಿಂದ 28 ರವರೆಗೆ ಶ್ರೀಲಂಕಾದಲ್ಲಿ ನಡೆಯಲಿದೆ. ಮಹಿಳಾ ಏಷ್ಯಾಕಪ್​​ನ ಒಂಬತ್ತನೇ ಆವೃತ್ತಿಯಲ್ಲಿ ಒಟ್ಟು 8 ತಂಡಗಳು ಭಾಗವಹಿಸಲಿವೆ. ಭಾರತ ಹಾಲಿ ಚಾಂಪಿಯನ್ ಆಗಿದ್ದು ಪ್ರಶಸ್ತಿಯನ್ನು ಉಳಿಸಿಕೊಳ್ಳಲು ಎದುರು ನೋಡುತ್ತಿದೆ. ಕಳೆದ ಆವೃತ್ತಿಯ ಫೈನಲ್​​ನಲ್ಲಿ ಭಾರತ ಬಾಂಗ್ಲಾದೇಶವನ್ನು 8 ವಿಕೆಟ್​ಗಳಿಂದ ಸೋಲಿಸಿ ಪ್ರಶಸ್ತಿ ಗೆದ್ದಿತ್ತು. ಭಾರತ ತಂಡ ಮುಂಬರುವ ಆವೃತ್ತಿಯಲ್ಲೂ ಗೆಲುವಿನ ನೆಚ್ಚಿನ ತಂಡವಾಗಿದೆ.

ಆತಿಥೇಯ ಶ್ರೀಲಂಕಾ, ಬಾಂಗ್ಲಾದೇಶ, ಪಾಕಿಸ್ತಾನ, ಮಲೇಷ್ಯಾ, ಥೈಲ್ಯಾಂಡ್, ನೇಪಾಳ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ ತಂಡಗಳು ಟೂರ್ನಿಯಲ್ಲಿ ಭಾಗವಹಿಸಲಿವೆ. ಹರ್ಮನ್ ಪ್ರೀತ್ ಕೌರ್ ನೇತೃತ್ವದ ಭಾರತ ತಂಡ ‘ಎ’ ಗುಂಪಿನಲ್ಲಿ ಪಾಕಿಸ್ತಾನ, ನೇಪಾಳ ಮತ್ತು ಯುಎಇ ತಂಡಗಳೊಂದಿಗೆ ಸ್ಥಾನ ಪಡೆದಿದೆ.

2024ರ ಮಹಿಳಾ ಏಷ್ಯಾಕಪ್ ಟಿ20 ಟೂರ್ನಿಯಲ್ಲಿ ಭಾರತ ತಂಡವನ್ನು ಹರ್ಮನ್​ಪ್ರೀತ್​ ಕೌರ್ ಮುನ್ನಡೆಸಲಿದ್ದಾರೆ. ಈ ವಾರದ ಆರಂಭದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟಿ 20 ಪಂದ್ಯದ ಸಮಯದಲ್ಲಿ ಗಾಯಗೊಂಡ ರಿಚಾ ಘೋಷ್ ಕೂಡ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಪ್ರಸ್ತುತ ದಕ್ಷಿಣ ಆಫ್ರಿಕಾ ವಿರುದ್ಧ ಮೂರು ಪಂದ್ಯಗಳ ಸರಣಿಯನ್ನು ಆಡುತ್ತಿರುವ ತಂಡದಿಂದ ಇಬ್ಬರು ಆಟಗಾರ್ತಿಯರನ್ನು ಕೈಬಿಡಲಾಗಿದೆ. ಅಮನ್ಜೋತ್ ಕೌರ್ ಮತ್ತು ಶಬ್ನಮ್​ ಮೊಹಮ್ಮದ್ ಶಕೀಲ್ ಅವಕಾಶ ಪಡೆದಿದ್ದಾರೆ. ಹರ್ಮನ್ ಪ್ರೀತ್ ಸಿಂಗ್ ತಂಡವನ್ನು ಮುನ್ನಡೆಸಲಿದ್ದು, ಆರಂಭಿಕ ಬ್ಯಾಟರ್​ ಸ್ಮೃತಿ ಮಂದಾನ ಉಪನಾಯಕಿಯಾಗಿದ್ದಾರೆ.

ಇದನ್ನೂ ಓದಿ: ZIM vs IND : ಜಿಂಬಾಬ್ವೆ ವಿರುದ್ಧ 13 ರನ್​ಗಳಿಂದ ಸೋತ ವಿಶ್ವ ವಿಜೇತ ಭಾರತ ತಂಡ

ಶ್ವೇತಾ ಸೆಹ್ರಾವತ್, ಸೈಕಾ ಇಶಾಕ್, ತನುಜಾ ಕನ್ವರ್ ಮತ್ತು ಮೇಘನಾ ಸಿಂಗ್ ಎಂಬ ನಾಲ್ವರು ಮೀಸಲು ಆಟಗಾರರನ್ನು ಆಯ್ಕೆದಾರರು ಹೆಸರಿಸಿದ್ದಾರೆ. ಭಾರತ ತಂಡ ಜುಲೈ 19ರಂದು ಪಾಕಿಸ್ತಾನ ವಿರುದ್ಧ ತನ್ನ ಅಭಿಯಾನ ಆರಂಭಿಸಲಿದ್ದು, ಜುಲೈ 21 ಮತ್ತು 23ರಂದು ಕ್ರಮವಾಗಿ ಯುಎಇ ಮತ್ತು ನೇಪಾಳ ವಿರುದ್ಧ ಸೆಣಸಲಿದೆ.

ಭಾರತ ತಂಡ:

ಹರ್ಮನ್​​ಪ್ರೀತ್​ ಕೌರ್ (ನಾಯಕಿ), ಸ್ಮೃತಿ ಮಂದಾನ (ಉಪನಾಯಕಿ), ಶಫಾಲಿ ವರ್ಮಾ, ದೀಪ್ತಿ ಶರ್ಮಾ, ಜೆಮಿಮಾ ರೋಡ್ರಿಗಸ್, ರಿಚಾ ಘೋಷ್ (ವಿಕೆಟ್ ಕೀಪರ್), ಉಮಾ ಚೆಟ್ರಿ (ವಿಕೆಟ್ ಕೀಪರ್), ಪೂಜಾ ವಸ್ತ್ರಾಕರ್, ಅರುಂಧತಿ ರೆಡ್ಡಿ, ರೇಣುಕಾ ಸಿಂಗ್ ಠಾಕೂರ್, ದಯಾಳನ್ ಹೇಮಲತಾ, ಆಶಾ ಶೋಭನಾ, ರಾಧಾ ಯಾದವ್, ಶ್ರೇಯಂಕಾ ಪಾಟೀಲ್, ಸಜನಾ ಸಜೀವನ್.

ಮೀಸಲು ಆಟಗಾರರು: ಶ್ವೇತಾ ಸೆಹ್ರಾವತ್, ಸೈಕಾ ಇಶಾಕ್, ತನುಜಾ ಕನ್ವರ್, ಮೇಘನಾ ಸಿಂಗ್

ಮಹಿಳಾ ಏಷ್ಯಾಕಪ್ ಟಿ20 ವಿಶ್ವಕಪ್ 2024ರ ವೇಳಾಪಟ್ಟಿ

ಜುಲೈ19ರಂದು , ಭಾರತ-ಪಾಕಿಸ್ತಾನ, ರಣಗಿರಿ ಡಂಬುಲ್ಲಾ ಅಂತಾರಾಷ್ಟ್ರೀಯ ಕ್ರೀಡಾಂಗಣ, ಡಂಬುಲ್ಲಾ
ಜುಲೈ 21ರಂದು, ಭಾರತ-ಯುಎಇ, ರಣಗಿರಿ ಡಂಬುಲ್ಲಾ ಅಂತಾರಾಷ್ಟ್ರೀಯ ಕ್ರೀಡಾಂಗಣ, ಡಂಬುಲ್ಲಾ
ಜುಲೈ 23 ರಂದು , ಭಾರತ-ನೇಪಾಳ, ರಣಗಿರಿ ಡಂಬುಲ್ಲಾ ಅಂತಾರಾಷ್ಟ್ರೀಯ ಕ್ರೀಡಾಂಗಣ, ಡಂಬುಲ್ಲಾ

Continue Reading

ಪ್ರಮುಖ ಸುದ್ದಿ

ZIM vs IND : ಜಿಂಬಾಬ್ವೆ ವಿರುದ್ಧ 13 ರನ್​ಗಳಿಂದ ಸೋತ ವಿಶ್ವ ವಿಜೇತ ಭಾರತ ತಂಡ

ZIM vs IND :. ಮೊದಲು ಬ್ಯಾಟ್ ಮಾಡಿದ ಆತಿಥೇಯ ಜಿಂಬಾಬ್ವೆ ಬಳಗ 20 ಓವರ್​ಗಳು ಮುಕ್ತಾಯಗೊಳ್ಳುವಾಗ 9 ವಿಕೆಟ್ ನಷ್ಟಕ್ಕೆ 115 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್​ ಮಾಡಿದ ಭಾರತ ತಂಡ 19.5 ಓವರ್​ಗಳಲ್ಲಿ 102 ರನ್​ಗಳಿಗೆ ಆಲ್​ಔಟ್ ಆಯಿತು.

VISTARANEWS.COM


on

ZIM vs IND
Koo

ಹರಾರೆ: ಭಾರತ ತಂಡ ಟಿ20 ವಿಶ್ವ ಕಪ್​ ಗೆದ್ದಿರುವ ಸಂಭ್ರಮದಲ್ಲಿರುವ ನಡುವೆಯೇ ಕ್ರಿಕೆಟ್​ ಅಭಿಮಾನಿಗಳಿಗೆ ಆಘಾತ (ZIM vs IND) ಎದುರಾಗಿದೆ. ಶುಭ್​ಮನ್​ ಗಿಲ್​ ನಾಯಕತ್ವದಲ್ಲಿ ಜಿಂಬಾಬ್ವೆಗೆ ಟಿ20 ಸರಣಿ ಆಡಲು ತೆರಳಿದ್ದ ಟೀಮ್ ಇಂಡಿಯಾ ಮೊದಲ ಪಂದ್ಯದಲ್ಲಿ 13 ರನ್​ಗಳ ಹೀನಾಯ ಸೋಲಿಗೆ ಒಳಗಾಗಿದೆ. ಈ ಮೂಲಕ ಬೇಸರಕ್ಕೆ ಒಳಗಾಗಿದೆ. ಬ್ಯಾಟಿಂಗ್​ ವೈಫಲ್ಯವೇ ಭಾರತ ತಂಡದ ಸೋಲಿಗೆ ಕಾರಣವಾದರೆ, ಶುಭ್​ಮನ್​ ಗಿಲ್​ ತಮ್ಮ ಮೊದಲ ನಾಯಕತ್ವದಲ್ಲಿಯೇ ಕಳಪೆ ದಾಖಲೆ ಮಾಡಿದರು. ಟಿ20 ವಿಶ್ವ ಕಪ್​ಗೆ ಅರ್ಹತೆ ಪಡೆಯಲು ವಿಫಲಗೊಂಡಿರುವ ತಂಡದ ವಿರುದ್ಧವೇ ಸೋಲುವ ಮೂಲಕ ನಿರಾಸೆಗೆ ಒಳಗಾಗಿದ್ದಾರೆ.

ಇಲ್ಲಿನ ಹರಾರೆ ಸ್ಪೋರ್ಟ್ಸ್​ ಕ್ಲಬ್​ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟ್ ಮಾಡಿದ ಆತಿಥೇಯ ಜಿಂಬಾಬ್ವೆ ಬಳಗ 20 ಓವರ್​ಗಳು ಮುಕ್ತಾಯಗೊಳ್ಳುವಾಗ 9 ವಿಕೆಟ್ ನಷ್ಟಕ್ಕೆ 115 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್​ ಮಾಡಿದ ಭಾರತ ತಂಡ 19.5 ಓವರ್​ಗಳಲ್ಲಿ 102 ರನ್​ಗಳಿಗೆ ಆಲ್​ಔಟ್ ಆಯಿತು.

ಸಣ್ಣ ಗುರಿಯನ್ನು ಬೆನ್ನಟ್ಟಿದ ಭಾರತ ತಂಡ ಅತ್ಯಂತ ಕಳಪೆ ಬ್ಯಾಟಿಂಗ್ ಪ್ರದರ್ಶನ ನೀಡಿತು. ಅಂತಾರಾಷ್ಟ್ರೀಯ ಅನುಭವದ ಕೊರತೆ ಹೊಂದಿರುವ ಭಾರತದ ಬ್ಯಾಟ್​ಗಳು ಸತತವಾಗಿ ವಿಕೆಟ್ ಒಪ್ಪಿಸಿದರು. ಪದಾರ್ಪಣೆ ಅವಕಾಶ ಪಡೆದ ಆರಂಭಿಕ ಬ್ಯಾಟರ್​ ಅಭಿಷೇಕ್​ ಶರ್ಮಾ ಶೂನ್ಯಕ್ಕೆ ಔಟಾದರೆ ರುತುರಾಜ್ ಗಾಯಕ್ವಾಡ್​ 7 ರನ್​ಗೆ ಸೀಮಿತಗೊಂಡರು. ಮತ್ತೊಬ್ಬ ಪದಾರ್ಪಣೆ ಆಟಗಾರ ರಿಯಾನ್ ಪರಾಗ್​ 2 ರನ್​ಗೆ ವಿಕೆಟ್​ ಒಪ್ಪಿಸಿದರು. ರಿಂಕು ಸಿಂಗ್​ ಶೂನ್ಯಕ್ಕೆ ಪೆವಿಲಿಯನ್​ಗೆ ಮರಳುವ ಮೂಲಕ ಭಾರತದ ಬ್ಯಾಟಿಂಗ್ ಬಲಕ್ಕೆ ಪೆಟ್ಟು ಬಿತ್ತು. 47 ರನ್​ಗಳಿಗೆ 7 ವಿಕೆಟ್ ಕಳೆದುಕೊಂಡು ಸ್ಕೂಲ್​ ಮಕ್ಕಳ ತಂಡದಂತೆ ಆಡಿತು.

ಇದನ್ನೂ ಓದಿ: Anant Ambani-Radhika Merchant wedding : ಅನಂತ್- ರಾಧಿಕಾ ಸಂಗೀತ್ ಕಾರ್ಯಕ್ರಮದಲ್ಲಿ ವಿಶ್ವಕಪ್ ವಿಜೇತ ತಂಡದ ಸದಸ್ಯರು ಭಾಗಿ

ನಾಯಕ ಗಿಲ್​ 31 ರನ್​ ಬಾರಿಸಿದರೆ ಕೆಳ ಕ್ರಮಾಂಕದಲ್ಲಿ ವಾಷಿಂಗ್ಟನ್ ಸುಂದರ್​ 27 ಹಾಗೂ ಆವೇಶ್​ ಖಾನ್​ 17 ರನ್ ಬಾರಿಸಿದರು. ಅದಕ್ಕಿಂತ ಮೊದಲು ಪದಾರ್ಪಣೆ ಮಾಡಿದ್ದ ಮತ್ತೊಬ್ಬ ಆಟಗಾರ ಧ್ರುವ್​ ಜುರೆಲ್​​ 6 ರನ್​ಗೆ ಔಟಾದರು. ಕೊನೆಯಲ್ಲಿ ರವಿ ಬಿಷ್ಣೋಯ್​ 9 ರನ್ ಬಾರಿಸಿದ್ದು ಬಿಟ್ಟರೆ ಭಾರತದ ಆಟಗಾರರು ಎಲ್ಲಿಯೂ ಪ್ರತಿರೋಧ ತೋರಲಿಲ್ಲ. ಜಿಂಬಾಬ್ವೆ ಪರ ಸಿಕಂದರ್​ ರಾಜಾ ಹಾಗೂ ತೆಂಡೈ ಚಟಾರ ತಲಾ 3 ವಿಕೆಟ್​ ಉರುಳಿಸಿ ಮಿಂಚಿದರು.

ಭಾರತದ ಉತ್ತಮ ಬೌಲಿಂಗ್​

ಮೊದಲು ಬ್ಯಾಟ್​ ಮಾಡಿದ ಜಿಂಬಾಬ್ವೆ ತಂಡಕ್ಕೆ ಭಾರತದ ಬೌಲರ್​ಗಳು ಕಾಡಿದರು. ರವಿ ಬಿಷ್ಣೋಯ್​ 13 ರನ್ ವೆಚ್ಚದಲ್ಲಿ 4 ವಿಕೆಟ್​ ಈ ಮಾದರಿಯಲ್ಲಿ ಜೀವನ ಶ್ರೇಷ್ಠ ಪ್ರದರ್ಶನ ನೀಡಿದರು. ವಾಷಿಂಗ್ಟನ್ ಸುಂದರ್​ 2 ವಿಕೆಟ್​ ಬುಟ್ಟಿಗೆ ಹಾಕಿಕೊಂಡರು. ವೆಸ್ಲಿ ಮಧ್ವೆರೆ 21, ಬ್ರಿಯಾನ್​ ಬೆನೆಟ್​ 21, ಸಿಕಂದರ್ ರಾಜಾ 17, ಡಿಯೋನ್​ ಮೈರ್ಸ್​ 23, ಕ್ಲಿವ್ ಮಂಡಂಡೆ 29 ರನ್​ ಬಾರಿಸಿದರು.

Continue Reading

ಪ್ರಮುಖ ಸುದ್ದಿ

Anant Ambani-Radhika Merchant wedding : ಅನಂತ್- ರಾಧಿಕಾ ಸಂಗೀತ್ ಕಾರ್ಯಕ್ರಮದಲ್ಲಿ ವಿಶ್ವಕಪ್ ವಿಜೇತ ತಂಡದ ಸದಸ್ಯರು ಭಾಗಿ

Anant Ambani-Radhika Merchant wedding : ಸಂಗೀತ್ ಕಾರ್ಯಕ್ರಮದಲ್ಲಿ ಅಂಬಾನಿ- ಮರ್ಚೆಂಟ್ ಕುಟುಂಬದ ಸದಸ್ಯರು, ಸ್ನೇಹಿತರು ಹಾಗೂ ಅತಿಥಿಗಳು ಭಾರಿ ಸಂಖ್ಯೆಯಲ್ಲಿ ಭಾಗೀ ಆಗಿದ್ದರು. ಈ ಸಂದರ್ಭದಲ್ಲಿ ನೀತಾ ಅಂಬಾನಿ ಅವರು ಬಹಳ ಭಾವುಕರಾಗಿದ್ದರು. ವಿಶ್ವಕಪ್ ವಿಜೇತ ತಂಡದ ಸದಸ್ಯರನ್ನು ವೇದಿಕೆ ಮೇಲೆ ಬರಮಾಡಿಕೊಳ್ಳಲಾಯಿತು. ಈ ವೇಳೆ ಸಮಾರಂಭದಲ್ಲಿ ಭಾಗಿಯಾಗಿದ್ದವರು ಚಾಂಪಿಯನ್ನರಿಗೆ ಮೆಚ್ಚುಗೆ ವ್ಯಕ್ತಪಡಿಸಿದರು.

VISTARANEWS.COM


on

Anant Ambani-Radhika Merchant wedding
Koo

ಮುಂಬೈ : ಅನಂತ್ ಅಂಬಾನಿ- ರಾಧಿಕಾ ಮರ್ಚೆಂಟ್ (Anant Ambani-Radhika Merchant wedding) ವಿವಾಹ ಸಮಾರಂಭ ಜುಲೈ 12ರಂದು ನಡೆಯಲಿದೆ. ಇದಕ್ಕೆ ಮುಂಚಿತವಾಗಿ ಅಂಬಾನಿ ಕುಟುಂಬವು ಸಂಗೀತ್ ಕಾರ್ಯಕ್ರಮ ಆಯೋಜಿಸಿತ್ತು.. ಇದರಲ್ಲಿ ಟಿ-ಟ್ವೆಂಟಿ ವರ್ಲ್ಡ್ ಕಪ್ ಗೆದ್ದ ಭಾರತ ತಂಡದ ಸದಸ್ಯರು ಕೆಲವು ಭಾಗಿ ಆಗಿದ್ದರು. ತಂಡದ ನಾಯಕ ರೋಹಿತ್ ಶರ್ಮಾ, ಸೂರ್ಯ ಕುಮಾರ್ ಯಾದವ್ ಹಾಗೂ ಹಾರ್ದಿಕ್ ಪಾಂಡ್ಯ ಪಾಲ್ಗೊಂಡಿದ್ದರು. ಇವರು ಮುಕೇಶ್ ಅಂಬಾನಿ ಒಡೆತನದ ಮುಂಬೈ ಇಂಡಿಯನ್ಸ್ ಐಪಿಎಲ್ ತಂಡದ ಸದಸ್ಯರು ಕೂಡ ಹೌದು.

ಸಂಗೀತ್ ಕಾರ್ಯಕ್ರಮದಲ್ಲಿ ಅಂಬಾನಿ- ಮರ್ಚೆಂಟ್ ಕುಟುಂಬದ ಸದಸ್ಯರು, ಸ್ನೇಹಿತರು ಹಾಗೂ ಅತಿಥಿಗಳು ಭಾರಿ ಸಂಖ್ಯೆಯಲ್ಲಿ ಭಾಗೀ ಆಗಿದ್ದರು. ಈ ಸಂದರ್ಭದಲ್ಲಿ ನೀತಾ ಅಂಬಾನಿ ಅವರು ಬಹಳ ಭಾವುಕರಾಗಿದ್ದರು. ವಿಶ್ವಕಪ್ ವಿಜೇತ ತಂಡದ ಸದಸ್ಯರನ್ನು ವೇದಿಕೆ ಮೇಲೆ ಬರಮಾಡಿಕೊಳ್ಳಲಾಯಿತು. ಈ ವೇಳೆ ಸಮಾರಂಭದಲ್ಲಿ ಭಾಗಿಯಾಗಿದ್ದವರು ಚಾಂಪಿಯನ್ನರಿಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಚಪ್ಪಾಳೆ, ಶಿಳ್ಳೆ ಹೊಡೆದರು, ಉತ್ತೇಜನ ನೀಡುವಂಥ ಘೋಷವಾಕ್ಯಗಳನ್ನು ಹೇಳಿದರು. ಅಂದ ಹಾಗೆ ಇದೊಂದು ವಿಶೇಷ ಸಂದರ್ಭ. ಅದಕ್ಕೆ ಕಾರಣ ಕೂಡ ಆರಂಭದಲ್ಲಿಯೇ ಹೇಳಿದಂತೆ, ವಿಶ್ವ ಕಪ್ ಗೆದ್ದ ತಂಡದ ಸದಸ್ಯರಲ್ಲಿ ಮೂವರು ಮುಂಬೈ ಇಂಡಿಯನ್ ತಂಡದವರಾಗಿದ್ದು.

ದಕ್ಷಿಣ ಆಫ್ರಿಕಾದ ವಿರುದ್ಧ ರೋಚಕವಾದ ವಿಜಯ ಸಾಧಿಸಿದ ಭಾರತ ತಂಡದ ಪ್ರದರ್ಶನವನ್ನು ಕೊನೆ ಕ್ಷಣದ ತನಕ ಭಾರತೀಯರು ಉಸಿರು ಬಿಗಿ ಹಿಡಿದು ವೀಕ್ಷಿಸಿದರು. ಇನ್ನು ಗೆಲುವು ಅಸಾಧ್ಯ ಎಂದುಕೊಂಡ ಸಂದರ್ಭದಲ್ಲಿ ಗೆದ್ದು ಬೀಗಿತು. ಇದರೊಂದಿಗೆ ಹಲವು ವರ್ಷಗಳ ನಿರೀಕ್ಷೆಯು ನಿಜವಾಯಿತು ಎಂದು ನೀತಾ ಅಂಬಾನಿ ಅವರು ವೇದಿಕೆ ಮೇಲೆ ವಿವರಿಸಿ, ಸ್ವತಃ ಭಾವುಕರಾದರು.

ಇದನ್ನೂ ಓದಿ: Team India : ಎರಡನೇ ಟಿ20 ವಿಶ್ವ ಕಪ್​ ಗೆದ್ದ ಬಳಿಕವೂ ಭಾರತ ತಂಡದ ಜೆರ್ಸಿಯಲ್ಲಿ ಒಂದೇ ಸ್ಟಾರ್​ ಯಾಕೆ? ಇಲ್ಲಿದೆ ವಿವರಣೆ

ಹಾರ್ದಿಕ್ ಪಾಂಡ್ಯ ಪ್ರದರ್ಶನದ ಬಗ್ಗೆ ಜನರ ಅಭಿಪ್ರಾಯಗಳನ್ನು ಹೇಳಿದ ನೀತಾ ಅಂಬಾನಿ, ಕಷ್ಟದ ಕಾಲ ಕೊನೆ ಆಗುವುದಿಲ್ಲ, ಆದರೆ ಗಟ್ಟಿಯಾಗಿರುವ ಜನರು ಸಾಧಿಸುತ್ತಾರೆ ಎಂದು ತಿಳಿಸಿದರು. ಇನ್ನು ಮುಕೇಶ್ ಅಂಬಾನಿ ಅವರು ತಮ್ಮ ಭಾವನೆಗಳನ್ನು ವ್ಯಕ್ತಪಡಿಸಿ, ಭಾರತ ಹೆಮ್ಮೆ ಪಡುವುದಕ್ಕೆ ಕಾರಣರಾದ ಆಟಗಾರರಿಗೆ ಅಭಿನಂದಿಸಿದರು. ಈ ಸಂದರ್ಭವು ಹೇಗೆ 2011ರ ಏಕದಿನ ವಿಶ್ವಕಪ್ ಪಂದ್ಯಾವಳಿ ಗೆಲುವನ್ನು ನೆನಪಿಸಿತು ಎಂಬುದನ್ನು ಹೇಳಿದರು.

ಸಂಗೀತ್ ಕಾರ್ಯಕ್ರಮದಲ್ಲಿ ಮುಂಬೈ ಇಂಡಿಯನ್ಸ್ ತಂಡದ ಹಲವು ಆಟಗಾರರು ಭಾಯಾಗಿದ್ದರು. ಇಶಾನ್ ಕಿಶನ್, ಶ್ರೇಯಸ್ ಅಯ್ಯರ್, ಕೃನಾಲ್ ಪಾಂಡ್ಯ, ಕೆ.ಎಲ್. ರಾಹುಲ್, ಮಹೇಂದ್ರ ಸಿಂಗ್ ಧೋನಿ ಇದ್ದರು. ಜಸ್ಪ್ರೀತ್ ಬೂಮ್ರಾ ಪ್ರವಾಸದಲ್ಲಿ ಇರುವುದರಿಂದ ಕಾರ್ಯಕ್ರಮದಲ್ಲಿ ಭಾಗೀ ಆಗಿರಲಿಲ್ಲ.

Continue Reading

ಪ್ರಮುಖ ಸುದ್ದಿ

Team India : ಎರಡನೇ ಟಿ20 ವಿಶ್ವ ಕಪ್​ ಗೆದ್ದ ಬಳಿಕವೂ ಭಾರತ ತಂಡದ ಜೆರ್ಸಿಯಲ್ಲಿ ಒಂದೇ ಸ್ಟಾರ್​ ಯಾಕೆ? ಇಲ್ಲಿದೆ ವಿವರಣೆ

Team India :

VISTARANEWS.COM


on

Team India :
Koo

ಬೆಂಗಳೂರು:

ಬೆಂಗಳೂರು: ಜುಲೈ 6 ರಂದು ಆತಿಥೇಯ ಜಿಂಬಾಬ್ವೆ ವಿರುದ್ಧದ ಐದು ಪಂದ್ಯಗಳ ಟಿ20 ಐ ಸರಣಿ ಆರಂಭಗೊಂಡಿದೆ. ಮೊದಲ ಪಂದ್ಯದಲ್ಲಿ ಭಾರತದ ಎರಡನೇ ಸ್ಟ್ರಿಂಗ್ ತಂಡವು ಜಿಂಬಾಬ್ವೆಯನ್ನು ಎದುರಿಸುತ್ತಿದೆ. ಈ ತಂಡವು ಅಡಿಡಾಸ್ ಕಂಪನಿಯು ಇತ್ತೀಚೆಗೆ ವಿನ್ಯಾಸ ಮಾಡಿರುವ ಜೆರ್ಸಿಯನ್ನು ಧರಿಸುತ್ತಿದೆ. ಆದರೆ ಇಲ್ಲೊಂದು ತಪ್ಪು ನಡೆದಿದೆ. ಏನೆಂದರೆ ಭಾರತ ಎರಡು ಟಿ20 ವಿಶ್ವ ಕಪ್ ಗೆದ್ದ ಜೆರ್ಸಿಯ ಹೊರತಾಗಿಯೂ ಜೆರ್ಸಿಯಲ್ಲಿ ಕೇವಲ ಒಂದೇ ಒಂದು ಸ್ಟಾರ್ ಇದೆ. ಹೀಗಾಗಿ ಅಭಿಮಾನಿಗಳಿಗೆ ಕುತೂಹಲ ಹೆಚ್ಚಾಗಿದೆ.

ಸಾಂಪ್ರದಾಯಿಕವಾಗಿ, ಕ್ರಿಕೆಟ್ ತಂಡದ ಜೆರ್ಸಿಯಲ್ಲಿರುವ ಸ್ಟಾರ್​ಗಳು ಸ್ವರೂಪದಲ್ಲಿ ಗೆದ್ದ ವಿಶ್ವಕಪ್ ಪ್ರಶಸ್ತಿಗಳ ಸಂಖ್ಯೆಯನ್ನು ಪ್ರತಿನಿಧಿಸುತ್ತವೆ. 17 ವರ್ಷಗಳ ಬಳಿಕ ಭಾರತ 2ನೇ ಬಾರಿಗೆ ಟಿ20 ವಿಶ್ವಕಪ್ ಗೆದ್ದ ಸಾಧನೆ ಮಾಡಿದೆ. ಕುತೂಹಲಕಾರಿ ಸಂಗತಿಯೆಂದರೆ. ಮುಂಬಯಿಯಲ್ಲಿ ವಿಜಯದ ಮೆರವಣಿಗೆಯನ್ನು ನಡೆಸಿದ ಭಾರತೀಯ ತಂಡವು ತಮ್ಮ ಜೆರ್ಸಿಗಳಲ್ಲಿ ಎರಡು ಸ್ಟಾರ್​ಗಳಿದ್ದವು. ಆದರೆ ಶುಭ್ಮನ್ ಗಿಲ್ ನೇತೃತ್ವದ ಭಾರತೀಯ ತಂಡದ ಪಂದ್ಯದ ದಿನದ ಜೆರ್ಸಿಯಲ್ಲಿ ಅದು ಕಾಣೆಯಾಗಿದೆ. ಇದು ಕುತೂಹಲಕ್ಕೆ ಕಾರಣವಾಗಿದೆ.

ಭಾರತದ ಜರ್ಸಿಯಲ್ಲಿರುವ ಏಕೈಕ ಸ್ಟಾರ್ ಇರುವುದಕ್ಕೆ ಕಾರಣ ಮೊದಲೇ ಜೆರ್ಸಿ ತಯಾರಾಗಿರುವುದು. ಬಾರ್ಬಡೋಸ್​​ನಲ್ಲಿ ಜೂನ್ 29 ರಂದು ಮುಕ್ತಾಯಗೊಂಡ ಟಿ 20 ವಿಶ್ವಕಪ್ 2024 ರ ಫೈನಲ್ ಫೈನಲ್​ನಲ್ಲಿ ಭಾರತ ಗೆಲ್ಲುವ ಮೊದಲು ಎರಡನೇ ಶ್ರೇಣಿಯ ಭಾರತೀಯ ತಂಡವು ಜಿಂಬಾಬ್ವೆಗೆ ಹಾರಿತ್ತು. ಅದಕ್ಕಿಂತ ಮುಂಚಿತವಾಗಿ ಜೆರ್ಸಿಗಳನ್ನು ತಯಾರು ಮಾಡಲಾಗಿತ್ತು. ಹೀಗಾಗಿ ಅವರಿಗೆ ಹೊಸ ಜೆರ್ಸಿ ಇನ್ನೂ ಸಿಕ್ಕಿಲ್ಲ. ಇದರಿಂದ ಅವರೆಲ್ಲರೂ ಹಳೆಯ ಜೆರ್ಸಿಯನ್ನು ಹಾಕುವಂತಾಗಿದೆ.

ಇದನ್ನೂ ಓದಿ: Nafees Iqbal : ಬಾಂಗ್ಲಾದೇಶದ ಮಾಜಿ ಕ್ರಿಕೆಟಿಗನಿಗೆ ಮೆದುಳಿನ ರಕ್ತಸ್ರಾವ; ಪರಿಸ್ಥಿತಿ ಗಂಭೀರ

ಈ ಪರಿಸ್ಥಿತಿಯು ತಂಡದ ಕಿಟ್​​ಗಳನ್ನು ನವೀಕರಿಸುವಲ್ಲಿ ಕ್ರಿಕೆಟ್ ಮಂಡಳಿಗಳು ಎದುರಿಸುತ್ತಿರುವ ವ್ಯವಸ್ಥಾಪನಾ ಸವಾಲುಗಳನ್ನು ಎತ್ತಿ ತೋರಿಸುತ್ತದೆ. ವಿಶೇಷವಾಗಿ ಅನೇಕ ತಂಡಗಳು ಏಕಕಾಲದಲ್ಲಿ ಅಥವಾ ತ್ವರಿತವಾಗಿ ಕಾರ್ಯನಿರ್ವಹಿಸುತ್ತಿರುವಾಗ. ವಿಶ್ವಕಪ್ ಫೈನಲ್ ಮತ್ತು ಜಿಂಬಾಬ್ವೆ ಸರಣಿಯ ನಡುವಿನ ಸಮಯದ ಕೊರತೆ ಜೆರ್ಸಿಗಳನ್ನು ಉತ್ಪಾದಿಸಲು ಮತ್ತು ಸಮಯಕ್ಕೆ ಸರಿಯಾಗಿ ತಂಡಕ್ಕೆ ರವಾನಿಸಲು ಸಾಧ್ಯವಾಗಲಿಲ್ಲ.

ಹರಾರೆ ಸ್ಪೋರ್ಟ್ಸ್ ಕ್ಲಬ್ ನಲ್ಲಿ ನಡೆದ ಸರಣಿಯ ಮೊದಲ ಟಿ 20 ಪಂದ್ಯದಲ್ಲಿ ಆತಿಥೇಯ ಜಿಂಬಾಬ್ವೆ ಭಾರತವನ್ನು ಎದುರಿಸಿತು. ಟಾಸ್ ಗೆದ್ದ ಪ್ರವಾಸಿ ತಂಡ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡರೆ, ಭಾರತ ಈ ಪಂದ್ಯಕ್ಕೆ ಮೂವರು ಚೊಚ್ಚಲ ಆಟಗಾರರನ್ನು ಕಣಕ್ಕೆ ಇಳಿಸಿತು. ಧ್ರುವ್ ಜುರೆಲ್ ಟಿ 20 ಐಗೆ ಪಾದಾರ್ಪಣೆ ಮಾಡಿದರೆ, ಅಭಿಷೇಕ್ ಶರ್ಮಾ ಮತ್ತು ರಿಯಾನ್ ಪರಾಗ್ ಕ್ರಮವಾಗಿ ಅಂತರರಾಷ್ಟ್ರೀಯ ಕ್ರಿಕೆಟ್​ಗೆ ಎಂಟ್ರಿ ಗಿಟ್ಟಿಸಿದರು.

ಆರಂಭಿಕ ಎರಡು ಟಿ 20 ಪಂದ್ಯಗಳಿಗೆ ತಂಡವು ಮೂಲತಃ ಘೋಷಿಸಿದ ತಂಡಕ್ಕಿಂತ ಭಿನ್ನವಾಗಿದೆ. ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್ ಮತ್ತು ಶಿವಂ ದುಬೆ ಪ್ರಸ್ತುತ ಟಿ 20 ವಿಶ್ವಕಪ್ ಆಚರಣೆಯಲ್ಲಿ ಭಾಗವಹಿಸಲು ಭಾರತದಲ್ಲಿದ್ದಾರೆ. ಎರಡನೇ ಟಿ 20 ಐ ಪಂದ್ಯದ ನಂತರ ಅವರು ತಂಡವನ್ನು ಸೇರುವ ನಿರೀಕ್ಷೆಯಿದೆ.

“ನಾವು ಮೊದಲು ಫೀಲ್ಡಿಂಗ್ ಮಾಡುತ್ತೇವೆ. ಇದು ಉತ್ತಮ ವಿಕೆಟ್ ರೀತಿ ಕಾಣುತ್ತದೆ ಎಂದು ನಾನು ಭಾವಿಸುತ್ತೇನೆ. ಬಳಿವೂ ಹೆಚ್ಚು ಬದಲಾಗುವುದಿಲ್ಲ. ನಾವು 11 ವರ್ಷಗಳ ನಂತರ ಐಸಿಸಿ ಪಂದ್ಯಾವಳಿಯನ್ನು ಗೆದ್ದಿದ್ದೇವೆ. ನೀವು ಯಾವಾಗಲೂ ನಿಮ್ಮಿಂದ ಕೆಲವು ನಿರೀಕ್ಷೆಗಳನ್ನು ಹೊಂದಿದ್ದೀರಿ. ನಮ್ಮಲ್ಲಿ ಮೂವರು ಚೊಚ್ಚಲ ಆಟಗಾರರಿದ್ದಾರೆ. ಶರ್ಮಾ, ಜುರೆಲ್ ಮತ್ತು ಪರಾಗ್ ಪಾದಾರ್ಪಣೆ ಮಾಡಿದ್ದಾರೆ,” ಎಂದು ಭಾರತ ತಂಡದ ನಾಯಕ ಗಿಲ್ ಹೇಳಿದ್ದಾರೆ.

ಭಾರತ: ಶುಭ್ಮನ್ ಗಿಲ್ (ನಾಯಕ), ಅಭಿಷೇಕ್ ಶರ್ಮಾ, ಋತುರಾಜ್ ಗಾಯಕ್ವಾಡ್, ರಿಯಾನ್ ಪರಾಗ್, ರಿಂಕು ಸಿಂಗ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಅವೇಶ್ ಖಾನ್, ಮುಖೇಶ್ ಕುಮಾರ್, ಖಲೀಲ್ ಅಹ್ಮದ್.

ಜಿಂಬಾಬ್ವೆ ತಂಡ: ವೆಸ್ಲಿ ಮ್ಯಾಡ್ವೆರೆ, ಇನ್ನೋಸೆಂಟ್ ಕೈಯಾ, ಬ್ರಿಯಾನ್ ಬೆನೆಟ್, ಸಿಕಂದರ್ ರಾಜಾ (ಸಿ), ಡಿಯೋನ್ ಮೈಯರ್ಸ್, ಜೋನಾಥನ್ ಕ್ಯಾಂಪ್ಬೆಲ್, ಕ್ಲೈವ್ ಮದಂಡೆ (ವಿಕೆ), ವೆಲ್ಲಿಂಗ್ಟನ್ ಮಸಕಡ್ಜಾ, ಲ್ಯೂಕ್ ಜೊಂಗ್ವೆ, ಬ್ಲೆಸ್ಸಿಂಗ್ ಮುಜರಬಾನಿ, ತೆಂಡೈ ಚಟಾರಾ.

Continue Reading
Advertisement
Mid Day Meal
ದೇಶ19 mins ago

Mid Day Meal: ಮಕ್ಕಳ ಬಿಸಿಯೂಟದಲ್ಲೂ ಕಳ್ಳಾಟ, ವಿದ್ಯಾರ್ಥಿಗಳಿಗೆ ಸಿಗೋದು ಬರೀ ಅನ್ನ-ಅರಿಶಿಣ; Video ಇದೆ

Dr HS Shetty: Rs 7 crore spent on charity; Businessman Dr. HS Shetty
ಪ್ರಮುಖ ಸುದ್ದಿ26 mins ago

Dr HS Shetty : ದಾನಗಳಿಗಾಗಿಯೇ ವರ್ಷದಲ್ಲಿ 7 ಕೋಟಿ ರೂ. ವಿನಿಯೋಗ

Vasishtha Simha starrer VIP Kannada movie
ಕರ್ನಾಟಕ37 mins ago

Kannada New Movie: ಖ್ಯಾತ ಗಾಯಕಿ ಕೆ.ಎಸ್.ಚಿತ್ರಾ ಕಂಠಸಿರಿಯಲ್ಲಿ ವಸಿಷ್ಠ ಸಿಂಹ ಅಭಿನಯದ ‘ವಿಐಪಿ’ ಚಿತ್ರದ ಹಾಡು

Asia Cup 2024
ಪ್ರಮುಖ ಸುದ್ದಿ60 mins ago

Asia Cup 2024 : ಮಹಿಳಾ ಏಷ್ಯಾಕಪ್ ಟೂರ್ನಿಗೆ ಭಾರತ ತಂಡ ಪ್ರಕಟ

Viral Video
Latest1 hour ago

Viral Video: ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ; ಪ್ರಾಂಶುಪಾಲರನ್ನು ಕುರ್ಚಿ ಸಹಿತ ಹೊರಗೆಳೆದ ಸಿಬ್ಬಂದಿ

Kashmir Encounter
ದೇಶ1 hour ago

Kashmir Encounter: ಕಾಶ್ಮೀರದಲ್ಲಿ ಸೇನೆ ಭರ್ಜರಿ ಬೇಟೆ; ನಾಲ್ವರು ಉಗ್ರರ ಹತ್ಯೆ, ಇಬ್ಬರು ಯೋಧರು ಹುತಾತ್ಮ

Viral Video
Latest1 hour ago

Viral Video : ಹೀಗೆಲ್ಲಾ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಾರಾ…? ವಿಡಿಯೊ ನೋಡಿ

Viral News
Latest2 hours ago

Viral News: ಆಸ್ಪತ್ರೆಯಲ್ಲಿ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ವೇಳೆ ಅಚಾತುರ್ಯ; ದೃಷ್ಟಿ ಕಳೆದುಕೊಂಡ 16 ರೋಗಿಗಳು

Dengue cases in Karnataka
ಪ್ರಮುಖ ಸುದ್ದಿ2 hours ago

Dengue cases in Karnataka: ರಾಜ್ಯದಲ್ಲಿಂದು 175 ಡೆಂಗ್ಯೂ ಕೇಸ್‌ಗಳು ಪತ್ತೆ; ಸಕ್ರಿಯ ಪ್ರಕರಣಗಳ ಸಂಖ್ಯೆ 352ಕ್ಕೆ ಏರಿಕೆ!

Farmers record crop details through mobile app
ತುಮಕೂರು2 hours ago

Tumkur News: ರೈತರು ಮೊಬೈಲ್ ಆ್ಯಪ್ ಮೂಲಕ ಬೆಳೆ ವಿವರ ದಾಖಲಿಸಬೇಕು

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ4 hours ago

Karnataka Weather : ಚಾರಣಪ್ರಿಯರಿಗೆ ಶಾಕ್‌; ಭಾರಿ ಮಳೆಯಿಂದಾಗಿ ಈ ಜಾಗಗಳಿಗೆ ಟ್ರೆಕ್ಕಿಂಗ್‌ ನಿಷೇಧ

Murder case
ಯಾದಗಿರಿ7 hours ago

Murder case : ಯಾದಗಿರಿಯಲ್ಲಿ ಹಸುಗೂಸನ್ನು ಬಾವಿಗೆ ಎಸೆದು ಕೊಂದರು ಹಂತಕರು

karnataka Rain
ಮಳೆ8 hours ago

Karnataka Rain : ಭಾರಿ ಗಾಳಿ- ಮಳೆಗೆ ಹಾರಿದ ಅಂಗಡಿಯ ತಗಡು; ಮಾಗುಂಡಿ-ಬಾಳೆಹೊನ್ನೂರು ಮಾರ್ಗ ಬಂದ್

Food Poisoning
ರಾಯಚೂರು10 hours ago

Food Poisoning : ಮೊರಾರ್ಜಿ ವಸತಿ ಶಾಲೆ ಅವ್ಯವಸ್ಥೆ; ಊಟ ಸೇವಿಸಿದ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

Wild Animal Attack Elephant attack
ರಾಮನಗರ12 hours ago

Wild Animal Attack : ತೋಟದಲ್ಲಿ ನೀರು ಹಾಯಿಸುತ್ತಿದ್ದವನ ತುಳಿದು ಸಾಯಿಸಿದ ಆನೆ

karnataka Weather Forecast
ಮಳೆ16 hours ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಇಂದು ನಾನ್‌ ಸ್ಟಾಪ್‌ ಮಳೆ; ಬೆಂಗಳೂರಲ್ಲಿ ಹೇಗೆ?

karnataka Weather Forecast
ಮಳೆ1 day ago

Karnataka Weather: ಧಾರಾಕಾರ ಮಳೆಗೆ ಜನರ ಒದ್ದಾಟ- ಸೇತುವೆಗಳು ಮುಳುಗಿ ಪರದಾಟ; ಶಾಲಾ-ಕಾಲೇಜುಗಳಿಗೆ ರಜೆ

Lovers Fighting
ಚಿಕ್ಕಬಳ್ಳಾಪುರ1 day ago

Lovers Fighting: ಪ್ರೀತಿಸಿ ಕೈಕೊಟ್ಟವನಿಗೆ ನಡುರಸ್ತೆಯಲ್ಲೇ ಚಳಿ ಬಿಡಿಸಿದ ಗರ್ಭಿಣಿ

Medical negligence
ದಾವಣಗೆರೆ1 day ago

Medical negligence: ಸಿಸೇರಿಯನ್ ಮಾಡುವಾಗ ಶಿಶುವಿನ ಮರ್ಮಾಂಗವನ್ನೇ ಕತ್ತರಿಸಿ ಸಾಯಿಸಿದ ವೈದ್ಯ!

karnataka rain
ಮಳೆ1 day ago

Karnataka Rain: ಮಳೆಗೆ ಮನೆಗಳಿಗೆ ನುಗ್ಗುತ್ತಿವೆ ಹಾವುಗಳು! ಕುಸಿದು ಬಿತ್ತು ಮನೆಗಳು

ಟ್ರೆಂಡಿಂಗ್‌