ಮೆಲ್ಬೋರ್ನ್: ಜಿಂಬಾಬ್ವೆ ವಿರುದ್ಧದ ಟಿ20 ವಿಶ್ವ ಕಪ್ ಪಂದ್ಯದಲ್ಲಿ ಸ್ಫೋಟಕ ಬ್ಯಾಟಿಂಗ್ ನಡೆಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ ಸೂರ್ಯಕುಮಾರ್ ಯಾದವ್(Suryakumar Yadav) ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ವಿಶೇಷ ಸಾಧನೆಯೊಂದನ್ನು ಮಾಡಿದ್ದಾರೆ. ಕ್ಯಾಲೆಂಡರ್ ವರ್ಷದಲ್ಲಿ ಸಾವಿರ ರನ್ ಪೂರೈಸಿದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸ ನಿರ್ಮಿಸಿದ್ದಾರೆ.
ಜಿಂಬಾಬ್ವೆ ವಿರುದ್ಧದ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ಕೇವಲ 25 ಎಸೆತಗಳಲ್ಲಿ 61 ರನ್ ಬಾರಿಸಿದ ಪರಿಣಾಮ ಟೀಮ್ ಇಂಡಿಯಾ 71 ರನ್ಗಳ ಗೆಲುವು ದಾಖಲಿಸಲು ನೆರವಾಯಿತು. ಈ ಅಬ್ಬರದ ಆಟದ ವೇಳೆ ನೂತನ ಸಾಧನೆಯೊಂದನ್ನು ಸೂರ್ಯಕುಮಾರ್ ತಮ್ಮ ಹೆಸರಿಗೆ ಬರೆದರು. ಕ್ಯಾಲೆಂಡರ್ ವರ್ಷದಲ್ಲಿ ಅತ್ಯಧಿಕ ರನ್ ಗಳಿಸಿದ ಆಟಗಾರನಾಗಿ ಮೂಡಿ ಬಂದರು. ಒಟ್ಟಾರೆಯಾಗಿ ಈ ಸಾಧನೆ ಮಾಡಿದ ಕೇವಲ ವಿಶ್ವದ ಎರಡನೇ ಆಟಗಾರ ಎನಿಸಿಕೊಂಡಿದ್ದಾರೆ ಸೂರ್ಯಕುಮಾರ್ ಯಾದವ್. ಇದಕ್ಕೂ ಮುನ್ನ 2021ರಲ್ಲಿ ಪಾಕಿಸ್ತಾನದ ಆರಂಭಿಕ ಆಟಗಾರ ಮೊಹಮ್ಮದ್ ರಿಜ್ವಾನ್ ಈ ಸಾಧನೆ ಮಾಡಿದ್ದರು.
ಇದನ್ನೂ ಓದಿ |IND VS ZIM | ಜಿಂಬಾಬ್ವೆ ವಿರುದ್ಧ 71 ರನ್ ಭರ್ಜರಿ ಗೆಲುವು ದಾಖಲಿಸಿದ ಟೀಮ್ ಇಂಡಿಯಾ