ನವದೆಹಲಿ: ರಾಷ್ಟ್ರೀಯ ಜೂನಿಯರ್ ಕುಸ್ತಿ ಚಾಂಪಿಯನ್ ಸಾಗರ್ ಧನಕರ್ ಹತ್ಯೆ ಪ್ರಕರಣದಲ್ಲಿ ಬಂಧನದಲ್ಲಿರುವ ಒಲಿಂಪಿಯನ್ ಕುಸ್ತಿಪಟು ಸುಶೀಲ್ ಕುಮಾರ್(Sushil Kumar) ಅವರಿಗೆ ಇಲ್ಲಿಯ ನ್ಯಾಯಾಲಯ ನಾಲ್ಕು ದಿನಗಳ ಮಧ್ಯಂತರ ಜಾಮೀನು ನೀಡಿದೆ.
ಕೊಲೆ ಆರೋಪದ ಮೇಲೆ ತಿಹಾರ್ ಜೈಲು ಪಾಲಾಗಿರುವ ಸುಶೀಲ್ ಅವರ ತಂದೆ ಭಾನುವಾರ ನಿಧನರಾಗಿದ್ದು ಅಂತಿಮ ವಿಧಿವಿಧಾನಗಳಲ್ಲಿ ಭಾಗವಹಿಸಲು ಅವರಿಗೆ ಮಾನವೀಯತೆಯ ಮತ್ತು ಅನುಕಂಪದ ಆಧಾರದಲ್ಲಿ ಇಲ್ಲಿನ ಸ್ಥಳೀಯ ನ್ಯಾಯಾಲಯ ಮಾರ್ಚ್ 6ರಿಂದ 9ರವರೆಗೆ ಜಾಮೀನು ನೀಡಿದೆ.
ಇದನ್ನೂ ಓದಿ Wrestling: ಪ್ರಮುಖ ಟೂರ್ನಿಯಿಂದ ಹಿಂದೆ ಸರಿಯುತ್ತಿರುವ ಕುಸ್ತಿ ಪಟುಗಳ ವರ್ತನೆಗೆ ಕ್ರೀಡಾ ಸಚಿವಾಲಯ ಬೇಸರ
ಸದ್ಯ ಮಧ್ಯಂತರ ಜಾಮೀನು ಸಿಕ್ಕಿರುವ ಸುಶೀಲ್ ಅವರಿಗೆ ಸುರಕ್ಷತೆ ಮತ್ತು ಭದ್ರತೆಯನ್ನು ಪರಿಗಣಿಸಿ, ಕನಿಷ್ಠ ಇಬ್ಬರು ಭದ್ರತಾ ಸಿಬ್ಬಂದಿ ಅವರೊಂದಿಗೆ ಇರಬೇಕು ಎಂದು ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶರು ಸೂಚಿಸಿದ್ದಾರೆ.