ಮುಂಬಯಿ: ಬಹುನಿರೀಕ್ಷಿತ ಐಸಿಸಿ ಪುರುಷರ ಟಿ20 ವಿಶ್ವಕಪ್(T20 World Cup 2024) ಟೂರ್ನಿ ಜೂನ್ 1 ರಿಂದ 29 ರ ವರೆಗೆ ಅಮೆರಿಕ ಮತ್ತು ವೆಸ್ಟ್ ಇಂಡೀಸ್ ಜಂಟಿ ಆತಿಥ್ಯದಲ್ಲಿ ನಡೆಯಲಿದೆ. ಟೂರ್ನಿಯ ಪಂದ್ಯಾವಳಿಗಾಗಿ ಟೀಮ್ ಇಂಡಿಯಾದ 15 ಸದಸ್ಯರ ತಂಡ ಏಪ್ರಿಲ್ ಕೊನೆಯ ವಾರದಲ್ಲಿ ಪ್ರಕಟಗೊಳ್ಳುವ ಸಾಧ್ಯತೆ ಇದೆ ಎಂಬುದಾಗಿ ಬಿಸಿಸಿಐ ಮೂಲವೊಂದು ತಿಳಿಸಿದೆ.
ಈಗಾಗಲೇ ಟೂರ್ನಿಯ ವೇಳಾಪಟ್ಟಿ ಪ್ರಕಟಗೊಂಡಿದೆ. ಭಾರತ ತನ್ನ ಮೊದಲ ಪಂದ್ಯವನ್ನು ಜೂನ್ 5 ರಂದು ಐರ್ಲೆಂಡ್ ವಿರುದ್ಧ ಆಡಲಿದೆ. ದ್ವಿತೀಯ ಪಂದ್ಯ ಜೂನ್ 9 ರಂದು ಪಾಕ್ ವಿರುದ್ಧ ಆಡಲಿದ. ಭಾರತ ತನ್ನ ಎಲ್ಲ ಲೀಗ್ ಪಂದ್ಯಗಳನ್ನು ಅಮೆರಿಕದಲ್ಲೇ ಆಡದೆ. ಇದರಲ್ಲಿ ಮೂರು ಪಂದ್ಯಗಳು ನ್ಯೂಯಾರ್ಕ್ ಮತ್ತು ಒಂದು ಪಂದ್ಯ ಫ್ಲೋರಿಡಾದಲ್ಲಿ ನಡೆಯಲಿದೆ.
🚨 UPDATE 🚨
— ꪖꪀડꪖ𝕣 ꪖꪶⅈ 𝕜ꫝꪖꪀ (@AnsarAlikhan_18) March 30, 2024
India's 15-member squad for the upcoming T20 World Cup is likely to be named in last week of April as the ICC's cut-off date for submission of teams is May 1. pic.twitter.com/vTv6t7GXSX
ಟೂರ್ನಿಯಲ್ಲಿ ಪಾಲ್ಗೊಳ್ಳುವ ಎಲ್ಲ 20 ತಂಡಗಳು ಕೂಡ ಮೇ 1ರ ಒಳಗಡೆ ಆಟಗಾರರ ಅಂತಿಮ ಪಟ್ಟಿ ರಚಿಸಿ ಐಸಿಸಿಗೆ ನೀಡಬೇಕಿದೆ. ಇದೇ ಕಾರಣದಿಂದ ಆಯ್ಕೆ ಸಮಿತಿಯು ಭಾರತದ ಮೊದಲ ಸಂಭಾವ್ಯ ತಂಡವನ್ನು ಎಪ್ರಿಲ್ ಕೊನೆಯ ವಾರದಲ್ಲಿ ಪ್ರಕಟಿಸಲಿದೆ ಎನ್ನಲಾಗಿದೆ. ಮೇ 25 ರ ತನಕ ಐಸಿಸಿ ಅನುಮತಿ ಇಲ್ಲದೆ ತಂಡದಲ್ಲಿ ಬದಲಾವಣೆ ಮಾಡಿಕೊಳ್ಳಬಹುದು. ಆ ಬಳಿಕದ ಯಾವುದೇ ಬದಲಾವಣೆ ಮಾಡಬೇಕಿದ್ದರೆ ಐಸಿಸಿ ತಾಂತ್ರಿಕ ಸಮಿತಿಯ ಅನುಮತಿ ಅತ್ಯಗತ್ಯ. ಇದು ಕೂಡ ಆಟಗಾರರು ಗಾಯಗೊಂಡರೆ ಮಾತ್ರ ಬದಲಿ ಆಟಗಾರನ ಆಯ್ಕೆಯನ್ನು ಐಸಿಸಿ ಮಾನ್ಯ ಮಾಡುತ್ತದೆ.
ಇದನ್ನೂ ಓದಿ T20 World Cup 2024: ಟಿ20 ವಿಶ್ವಕಪ್ ಟೂರ್ನಿಯಲ್ಲಿ ನಂದಿನಿ ಪ್ರಾಯೋಜಕತ್ವ?
ಪ್ರಸಕ್ತ ಸಾಗುತ್ತಿರುವ ಐಪಿಎಲ್ ಟೂರ್ನಿಯ ಮೇಲೆ ಕೋಚ್ ರಾಹುಲ್ ದ್ರಾವಿಡ್ ಮತ್ತು ಆಯ್ಕೆ ಸಮಿತಿಯ ಅಧ್ಯಕ್ಷ ಅಜಿತ್ ಅಗರ್ಕರ್ ಕಣ್ಣಿಟ್ಟಿದ್ದು ಎಲ್ಲ ಆಟಗಾರರ ಪ್ರದರ್ಶನವನ್ನು ಸೂಕ್ಷವಾಗಿ ಗಮನಿಸುತ್ತಿದ್ದಾರೆ. ಉತ್ತಮವಾಗಿ ಆಡಿದರೆ ವಿಶ್ವಕಪ್ನಲ್ಲಿಯೂ ಸ್ಥಾನ ಪಡೆಯಬಹುದಾಗಿದೆ. 2 ತಿಂಗಳ ಹಿಂದೆಯೇ ಕೋಚ್ ದ್ರಾವಿಡ್ ಅವರು ಐಪಿಎಲ್ ಪ್ರದರ್ಶನದ ಆಧಾರದಲ್ಲಿ ಟಿ20 ತಂಡವನ್ನು ಪ್ರಕಟಿಸಲಾಗುವುದು ಎಂದು ಹೇಳಿದ್ದರು. ಹೀಗಾಗಿ ವಿಶ್ವಕಪ್ ಆಡುವ ಕನಸು ಕಾಣುತ್ತಿರುವ ಆಟಗಾರರು ತಮ್ಮ ಕನಸು ನನಸಾಗಬೇಕಿದ್ದರೆ ಐಪಿಎಲ್ನಲ್ಲಿ ಶ್ರೇಷ್ಠ ಪ್ರದರ್ಶನ ತೀರುವ ಮೂಲಕ ಆಯ್ಕೆ ಸಮಿತಿಯ ಗಮನ ಸೆಳೆಯಬೇಕು. ರೋಹಿತ್ ಶರ್ಮಾ ಅವರ ನಾಯಕತ್ವದಲ್ಲಿ ಭಾರತವು 2024ರ ಟಿ 20 ವಿಶ್ವಕಪ್ ಆಡಲಿದೆ.
ಟೂರ್ನಿಯಲ್ಲಿ ಭಾರತವು ತನ್ನ ಗುಂಪು ಹಂತದ ಎಲ್ಲಾ ಪಂದ್ಯಗಳನ್ನು ಅಮೆರಿಕದಲ್ಲೇ ಆಡಲಿದೆ. ಲೀಗ್ ಮುಕ್ತಾಯದ ಬಳಿಕ ಮುಂದಿನ ಹಂತಕ್ಕೆ ಅರ್ಹತೆ ಪಡೆದರೆ, ಸೂಪರ್ 8 ಪಂದ್ಯಗಳನ್ನು ಸಹ ಇಲ್ಲೇ ಆಡಲಿದೆ. ಟೂರ್ನಿಯಲ್ಲಿ ಒಟ್ಟು 55 ಪಂದ್ಯಗಳು ನಡೆಯಲಿವೆ. ಜೂನ್ 1ರಿಂದ 18ರವರೆಗೆ ಗುಂಪು ಹಂತದಲ್ಲಿ 40 ಪಂದ್ಯಗಳು ನಡೆಯಲಿವೆ. ಜೂನ್ 19 ರಿಂದ 24 ರವರೆಗೆ ಸೂಪರ್ 8 ಪಂದ್ಯಗಳು ನಡೆಯಲಿವೆ.
ಕೊಹ್ಲಿಗೆ ಸ್ಥಾನ ಅನುಮಾನ?
ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿಗೆ(Virat Kohli) ಅವಕಾಶ ಸಿಗುವುದು ಬಹುತೇಖ ಅನುಮಾನ ಎನ್ನುವ ಮಾತುಗಳು ಕೇಳಿಬಂದಿವೆ. ಇದೇ ವರ್ಷದ ಆರಂಭದಲ್ಲಿ ನಡೆದ ಅಫಘಾನಿಸ್ತಾನ ವಿರುದ್ಧದ ಸರಣಿಯಲ್ಲಿ ಕೊಹ್ಲಿ ಕೇವಲ 29 ರನ್ ಗಳಿಸಿದ್ದರು. ಕೊಹ್ಲಿ ಕೂಡ ಮೊದಲಿನಂತೆ ಟಿ20ಯಲ್ಲಿ ಅಬ್ಬರ ಬ್ಯಾಟಿಂಗ್ ನಡೆಸುತ್ತಿಲ್ಲ. ಟಿ20 ವಿಶ್ವಕಪ್ ನಡೆಯುವ ಅಮೆರಿಕ ಮತ್ತು ವಿಂಡೀಸ್ ಪಿಚ್ಗಳು ನಿಧಾನಗತಿಯದ್ದಾಗಿದ್ದು, ಕೊಹ್ಲಿಗೆ ಇದು ಸೂಕ್ತವಾಗಿಲ್ಲ ಎನ್ನುವ ಕಾರಣಕ್ಕೆ ಆಯ್ಕೆ ಸಮಿಯಿ ಅವರನ್ನು ಹೊರಗಿಡುವ ಚಿಂತನೆ ನಡೆಸಿದೆ ಎಂದು ವರದಿಯೊಂದು ತಿಳಿಸಿತ್ತು.
ಭಾರತದ ಪಂದ್ಯಗಳು
ದಿನಾಂಕ | ಎದುರಾಳಿ | ಸ್ಥಳ |
ಜೂನ್ 5 | ಐರ್ಲೆಂಡ್ | ನ್ಯೂಯಾರ್ಕ್ |
ಜೂನ್ 9 | ಪಾಕಿಸ್ತಾನ | ನ್ಯೂಯಾರ್ಕ್ |
ಜೂನ್ 12 | ಅಮೆರಿಕ | ನ್ಯೂಯಾರ್ಕ್ |
ಜೂನ್ 15 | ಕೆನಡಾ | ಫ್ಲೋರಿಡಾ |