Site icon Vistara News

T20 World Cup 2024: ಪಾಕ್​ ಉಗ್ರರ ಭೀತಿ; ಬಿಗಿ ಭದ್ರತೆ ಕೈಗೊಂಡ ವಿಂಡೀಸ್​ ಕ್ರಿಕೆಟ್​ ಮಂಡಳಿ

T20 World Cup 2024

Barbados

ಬಾರ್ಬಡಾಸ್​: ಇದೇ ಜೂನ್​ 1ರಿಂದ ಅಮೆರಿಕ ಮತ್ತು ವೆಸ್ಟ್​ ಇಂಡೀಸ್​ ಜಂಟಿ ಆತಿಥ್ಯದಲ್ಲಿ ನಡೆಯಲಿರುವ ಐಸಿಸಿ ಪುರುಷರ ಟಿ20 ವಿಶ್ವಕಪ್​ ಪಂದ್ಯಾವಳಿಗೆ(T20 World Cup 2024) ಕೆಲವು ದಿನಗಳ ಹಿಂದೆ ಪಾಕಿಸ್ತಾನದ ಉಗ್ರರಿಂದ ದಾಳಿಯ ಬೆದರಿಕೆಯೊಂದು(Terror Threat to T20 World Cup) ಬಂದಿತ್ತು. ಇದೀಗ ವೆಸ್ಟ್​ ಇಂಡೀಸ್​ ಕ್ರಿಕೆಟ್​ ಮಂಡಳಿ ಕಟ್ಟುನಿಟ್ಟಾದ ಭದ್ರತಾ ಕ್ರಮಗಳನ್ನು ತೆಗೆದುಕೊಂಡಿದೆ. ಭದ್ರತಾ ಸಿಬ್ಬಂದಿಗಳು ಕೆನ್ಸಿಂಗ್ಟನ್ ಓವಲ್(Kensington Oval Cricket Ground) ಕ್ರಿಕೆಟ್ ಮೈದಾನ, ಬಾರ್ಬಡೋಸ್​ನಲ್ಲಿ(Barbados) ಅಣುಕು ಪ್ರದರ್ಶನ ಮಾಡುತ್ತಿರುವ ಫೋಟೊ ವೈರಲ್​ ಆಗಿದೆ.

ಪ್ರೊ-ಇಸ್ಲಾಮಿಕ್ ಸ್ಟೇಟ್ (ಐಎಸ್)ನಿಂದ ಭದ್ರತಾ ಬೆದರಿಕೆ ಬಂದಿತ್ತು. ಇದೇ ವಿಚಾರವಾಗಿ ಅಂದು ಮಾತನಾಡಿದ್ದ ಕ್ರಿಕೆಟ್ ವೆಸ್ಟ್ ಇಂಡೀಸ್‌ನ ಸಿಇಒ ಜಾನಿ ಗ್ರೇವ್ಸ್, ಐಸಿಸಿ ಪುರುಷರ ಟಿ20 ವಿಶ್ವಕಪ್‌ನಲ್ಲಿ ಪ್ರತಿಯೊಬ್ಬರ ಸುರಕ್ಷತೆ ನಮ್ಮ ಮೊದಲ ಆದ್ಯತೆಯಾಗಿದೆ ಮತ್ತು ನಾವು ಸಮಗ್ರ ಮತ್ತು ದೃಢವಾದ ಭದ್ರತಾ ಯೋಜನೆಯನ್ನು ಹೊಂದಿದ್ದೇವೆ ಎಂದು ನಾವು ಎಲ್ಲ ಪಾಲುದಾರರಿಗೆ ಭರವಸೆ ನೀಡಲು ಬಯಸುತ್ತೇವೆ ಎಂದು ಹೇಳಿದ್ದರು. ಈ ಮಾತಿಗೆ ತಕ್ಕಂತೆ ಇದೀಗ ವಿಶ್ವಕಪ್​ ಪಂದ್ಯಾವಳಿಗಳು ನಡೆಯುವ ಸ್ಟೇಡಿಯಂಗಳಲ್ಲಿ ಭಾರೀ ಭದ್ರತೆ ಮಾಡಲಾಗಿದೆ.

ವೆಸ್ಟ್ ಇಂಡೀಸ್‌ನಲ್ಲಿ ಆಂಟಿಗುವಾ ಬಾರ್ಬುಡಾ, ಬಾರ್ಬಡೋಸ್, ಗಯಾನಾ, ಸೇಂಟ್ ಲೂಸಿಯಾ, ಸೇಂಟ್ ವಿನ್ಸೆಂಟ್ ಮತ್ತು ಗ್ರೆನಡೈನ್ಸ್, ಟ್ರಿನಿಡಾಡ್ ಮತ್ತು ಟೊಬಾಗೊ ಸೇರಿದಂತೆ ಆರು ಸ್ಥಳಗಳಲ್ಲಿ ಟಿ20 ವಿಶ್ವಕಪ್ ಪಂದ್ಯಗಳು ಆಯೋಜನೆಗೊಂಡಿದೆ. ಟೂರ್ನಿಯಲ್ಲಿ ಒಟ್ಟು 55 ಪಂದ್ಯಗಳು ನಡೆಯಲಿವೆ. ಜೂನ್ 1ರಿಂದ 18ರವರೆಗೆ ಗುಂಪು ಹಂತದಲ್ಲಿ 40 ಪಂದ್ಯಗಳು ನಡೆಯಲಿವೆ. ಜೂನ್ 19 ರಿಂದ 24 ರವರೆಗೆ ಸೂಪರ್ 8 ಪಂದ್ಯಗಳು ನಡೆಯಲಿವೆ.

ಸಾಂಪ್ರದಾಯಿಕ ಬದ್ಧ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ನಡುವಣ ಪಂದ್ಯ ಜೂನ್ 9 ರಂದು ನ್ಯೂಯಾರ್ಕ್‌ನಲ್ಲಿ ನಡೆಯಲ್ಲಿದೆ. ಭಾರತ ತನ್ನ ಮೊದಲ ಪಂದ್ಯವನ್ನು ಜೂನ್‌ 5 ರಂದು ಐರ್ಲೆಂಡ್​ ವಿರುದ್ಧ ಆಡಲಿದೆ. ಟಿ20 ವಿಶ್ವಕಪ್​ಗಾಗಿ(T20 World Cup 2024) ಟೀಮ್​ ಇಂಡಿಯಾದ(team india) ಮೊದಲ ಬ್ಯಾಚ್​ ಮೇ 25ರಂದು ನ್ಯೂಯಾರ್ಕ್(New York)​ಗೆ ಪ್ರಯಾಣಿಸಲಿದೆ. ಈ ಬ್ಯಾಚ್​ನಲ್ಲಿ ನಾಯಕ ರೋಹಿತ್​ ಶರ್ಮ(Rohit Sharma), ಉಪನಾಯಕ ಹಾರ್ದಿಕ್​ ಪಾಂಡ್ಯ, ರಿಷಭ್​ ಪಂತ್​, ಜಸ್​ಪ್ರೀತ್​ ಬುಮ್ರಾ, ಸೂರ್ಯಕುಮಾರ್​ ಯಾದವ್​ ಸೇರಿ ಐಪಿಎಲ್​ ಪ್ಲೇ ಆಫ್​ನಿಂದ ಹೊರಬಿದ್ದ ತಂಡದ ಆಟಗಾರರು ಪ್ರಯಾಣಿಸಲಿದ್ದಾರೆ. ಉಳಿದ ಆಟಗಾರರು ಮೇ 26 ಐಪಿಎಲ್​ ಫೈನಲ್​ ಬಳಿಕ ವಿಮಾನ ಏರಲಿದ್ದಾರೆ. ಒಟ್ಟು 2 ಬ್ಯಾಚ್​ಗಳಾಗಿ ಭಾರತೀಯ ಆಟಗಾರರು ಪ್ರಯಾಣಿಸಲಿದ್ದಾರೆ.

Exit mobile version