ದುಬೈ: ಅಮೆರಿಕಾ ಮತ್ತು ವೆಸ್ಟ್ ಇಂಡೀಸ್ ಜಂಟಿ ಆತಿಥ್ಯದಲ್ಲಿ ನಡೆಯುವ ಟಿ20 ವಿಶ್ವಕಪ್(T20 World Cup 2024) ವೇಳಾಪಟ್ಟಿಯನ್ನು ಐಸಿಸಿ ಈಗಾಗಲೇ ಪ್ರಕಟಿಸಿದೆ. ಅಲ್ಲದೆ ಟೂರ್ನಿಯ ಪ್ರೋಮೊ ಕೂಡ ಹರಿಬಿಟ್ಟಿದೆ. ಪಂದ್ಯಾವಳಿ ಜೂನ್ 2 ರಿಂದ ಆರಂಭಗೊಂಡು ಜೂನ್ 29ರ ತನಕ ನಡೆಯಲಿದೆ. ಒಟ್ಟು 55 ಪಂದ್ಯಗಳು ಇರಲಿದೆ. ಇದೀಗ ತಂಡಗಳ ಅಂತಿಮ ಪಟ್ಟಿ ಸಲ್ಲಿಸಲು ಐಸಿಸಿ(ICC) ಮೇ ಒಂದರ ಗಡುವು ವಿಧಿಸಿದೆ.
ಟೂರ್ನಿಯಲ್ಲಿ ಪಾಲ್ಗೊಳ್ಳುವ ಎಲ್ಲ 20 ತಂಡಗಳು ಕೂಡ ಮೇ 1ರ ಒಳಗಡೆ ಆಟಗಾರರ ಅಂತಿಮ ಪಟ್ಟಿ ರಚಿಸಿ ಐಸಿಸಿಗೆ ನೀಡಬೇಕಿದೆ. ಆದರೆ, ಮೇ 25 ರ ತನಕ ಐಸಿಸಿ ಅನುಮತಿ ಇಲ್ಲದೆ ತಂಡದಲ್ಲಿ ಬದಲಾವಣೆ ಮಾಡಿಕೊಳ್ಳಬಹುದು. ಆ ಬಳಿಕದ ಯಾವುದೇ ಬದಲಾವಣೆ ಮಾಡಬೇಕಿದ್ದರೆ ಐಸಿಸಿ ತಾಂತ್ರಿಕ ಸಮಿತಿಯ ಅನುಮತಿ ಅತ್ಯಗತ್ಯ. ಇದು ಕೂಡ ಆಟಗಾರರು ಗಾಯಗೊಂಡರೆ ಮಾತ್ರ ಬದಲಿ ಆಟಗಾರನ ಆಯ್ಕೆಯನ್ನು ಐಸಿಸಿ ಮಾನ್ಯ ಮಾಡುತ್ತದೆ.
ವರದಿಯೊಂದರ ಪ್ರಕಾರ ಬಿಸಿಸಿಐ ಈಗಾಗಲೇ ಭಾರತ ಸಂಭಾವ್ಯ ತಂಡವನ್ನು ಆಯ್ಕೆ ಮಾಡಿದ್ದು, ಶುಭಮನ್ ಗಿಲ್, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್ ಮತ್ತು ಕನ್ನಡಿಗ ಕೆ.ಎಲ್ ರಾಹುಲ್ ಅವರಿಗೆ ಈ ಟೂರ್ನಿಯಲ್ಲಿ ಅವಕಾಶ ಸಿಗುವುದು ಅನುಮಾನ ಎಂಬ ಮಾತುಗಳು ಕೇಳಿಬಂದಿದೆ. ಆದರೆ ಯಾವುದೇ ಅಧಿಕೃತ ಮಾಹಿತಿ ಇದುವರೆಗೆ ಲಭ್ಯವಾಗಿಲ್ಲ. ಐಪಿಎಲ್ನಲ್ಲಿ ತೋರುವ ಪ್ರದರ್ಶನದ ಆಧಾರದಲ್ಲಿ ತಂಡ ಪ್ರಕಟಗೊಳ್ಳಲಿದೆ.
ಇದನ್ನೂ ಓದಿ T20 World Cup : ಟಿ20 ವಿಶ್ವ ಕಪ್ನಲ್ಲಿ ಭಾರತಕ್ಕೆ ಎಷ್ಟು ಪಂದ್ಯಗಳಿವೆ?
ಸಾಂಪ್ರದಾಯಿಕ ಬದ್ಧ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ನಡುವಣ ಪಂದ್ಯ ಜೂನ್ 9 ರಂದು ನ್ಯೂಯಾರ್ಕ್‌ನಲ್ಲಿ ನಡೆಯಲ್ಲಿದೆ. ಭಾರತ ತನ್ನ ಮೊದಲ ಪಂದ್ಯವನ್ನು ಜೂನ್ 5 ರಂದು ಐರ್ಲೆಂಡ್ ವಿರುದ್ಧ ಆಡಲಿದೆ.
ಭಾರತವು ತನ್ನ ಗುಂಪು ಹಂತದ ಎಲ್ಲಾ ಪಂದ್ಯಗಳನ್ನು ಅಮೆರಿಕದಲ್ಲೇ ಆಡಲಿದೆ. ಲೀಗ್ ಮುಕ್ತಾಯದ ಬಳಿಕ ಮುಂದಿನ ಹಂತಕ್ಕೆ ಅರ್ಹತೆ ಪಡೆದರೆ, ಸೂಪರ್ 8 ಪಂದ್ಯಗಳನ್ನು ಸಹ ಇಲ್ಲೇ ಆಡಲಿದೆ. ಟೂರ್ನಿಯಲ್ಲಿ ಒಟ್ಟು 55 ಪಂದ್ಯಗಳು ನಡೆಯಲಿವೆ. ಜೂನ್ 1ರಿಂದ 18ರವರೆಗೆ ಗುಂಪು ಹಂತದಲ್ಲಿ 40 ಪಂದ್ಯಗಳು ನಡೆಯಲಿವೆ. ಜೂನ್ 19 ರಿಂದ 24 ರವರೆಗೆ ಸೂಪರ್ 8 ಪಂದ್ಯಗಳು ನಡೆಯಲಿವೆ.
ತಲಾ 2 ಅಭ್ಯಾಸ ಪಂದ್ಯ
ವಿಶ್ವಕಪ್ಗೆ ಮುನ್ನ ಎಲ್ಲ 20 ತಂಡಗಳು ತಮ್ಮ ಆಗಮನಕ್ಕೆ ತಕ್ಕಂತೆ ತಲಾ 2 ಅಭ್ಯಾಸ ಪಂದ್ಯಗಳನ್ನು ಆಡಲಿವೆ ಎಂದು ಐಸಿಸಿ ತಿಳಿಸಿದೆ. ಟೂರ್ನಿಯ ಲೀಗ್ ಮತ್ತು ಸೂಪರ್ 8 ಪಂದ್ಯಗಳಿಗೆ ಯಾವುದೇ ಮೀಸಲು ದಿನ ಇಲ್ಲ. ಈ ಪಂದ್ಯಗಳಿಗೆ ಮಳೆ ಬಂದು ಪಂದ್ಯ ರದ್ದಾದರೆ ಸಮಾನ ಅಂಕ ನೀಡಲಾಗುತ್ತದೆ. ಆದರೆ, ಸೆಮಿಫೈನಲ್ ಮತ್ತು ಫೈನಲ್ ಪಂದ್ಯಗಳಿಗೆ ಮೀಸಲು ದಿನ ಇರಲಿದೆ. ಒಂದೊಮ್ಮೆ ಸೆಮಿ ಮತ್ತು ಫೈನಲ್ ಫೈನಲ್ ಪಂದ್ಯಗಳು ಕೂಡ ಮೀಸಲು ದಿನವೂ ನಡೆಯದಿದ್ದರೆ ಆಗ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಪಡೆದ ತಂಡಕ್ಕೆ ಲಾಭ ಸಿಗಲಿದೆ.
ಭಾರತದ ಪಂದ್ಯಗಳು
ದಿನಾಂಕ | ಎದುರಾಳಿ | ಸ್ಥಳ |
ಜೂನ್ 5 | ಐರ್ಲೆಂಡ್ | ನ್ಯೂಯಾರ್ಕ್ |
ಜೂನ್ 9 | ಪಾಕಿಸ್ತಾನ | ನ್ಯೂಯಾರ್ಕ್ |
ಜೂನ್ 12 | ಅಮೆರಿಕ | ನ್ಯೂಯಾರ್ಕ್ |
ಜೂನ್ 15 | ಕೆನಡಾ | ಫ್ಲೋರಿಡಾ |