Site icon Vistara News

T20 World Cup 2024: ಟಿ20 ವಿಶ್ವಕಪ್​ ತಂಡ ಪ್ರಕಟಕ್ಕೆ ಗಡುವು ನೀಡಿದ ಐಸಿಸಿ

T20 World Cup 2024

ದುಬೈ: ಅಮೆರಿಕಾ ಮತ್ತು ವೆಸ್ಟ್​ ಇಂಡೀಸ್​ ಜಂಟಿ ಆತಿಥ್ಯದಲ್ಲಿ ನಡೆಯುವ ಟಿ20 ವಿಶ್ವಕಪ್​ ವೇಳಾಪಟ್ಟಿಯನ್ನು ಐಸಿಸಿ ಕಳೆದ ವಾರ ಪ್ರಕಟಿಸಿತ್ತು. ಪಂದ್ಯಾವಳಿ ಜೂನ್ 1 ರಿಂದ ಆರಂಭಗೊಂಡು ಜೂನ್​ 29ರ ತನಕ ನಡೆಯಲಿದೆ. ಒಟ್ಟು 55 ಪಂದ್ಯಗಳು ಇರಲಿದೆ. ಇದೀಗ ತಂಡಗಳ ಅಂತಿಮ ಪಟ್ಟಿ ಸಲ್ಲಿಸಲು ಐಸಿಸಿ ಮೇ ಒಂದರ ಗಡುವು ವಿಧಿಸಿದೆ.

ಟೂರ್ನಿಯಲ್ಲಿ ಪಾಲ್ಗೊಳ್ಳುವ ಎಲ್ಲ 20 ತಂಡಗಳು ಕೂಡ ಮೇ 1ರ ಒಳಗಡೆ ಆಟಗಾರರ ಅಂತಿಮ ಪಟ್ಟಿ ರಚಿಸಿ ಐಸಿಸಿಗೆ ನೀಡಬೇಕಿದೆ. ಆದರೆ, ಮೇ 25 ರ ತನಕ ಐಸಿಸಿ ಅನುಮತಿ ಇಲ್ಲದೆ ತಂಡದಲ್ಲಿ ಬದಲಾವಣೆ ಮಾಡಿಕೊಳ್ಳಬಹುದು. ಆ ಬಳಿಕದ ಯಾವುದೇ ಬದಲಾವಣೆ ಮಾಡಬೇಕಿದ್ದರೆ ಐಸಿಸಿ ತಾಂತ್ರಿಕ ಸಮಿತಿಯ ಅನುಮತಿ ಅತ್ಯಗತ್ಯ. ಇದು ಕೂಡ ಆಟಗಾರರು ಗಾಯಗೊಂಡರೆ ಮಾತ್ರ ಬದಲಿ ಆಟಗಾರನ ಆಯ್ಕೆಯನ್ನು ಐಸಿಸಿ ಮಾನ್ಯ ಮಾಡುತ್ತದೆ.

ಸಾಂಪ್ರದಾಯಿಕ ಬದ್ಧ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ನಡುವಣ ಪಂದ್ಯ ಜೂನ್ 9 ರಂದು ನ್ಯೂಯಾರ್ಕ್‌ನಲ್ಲಿ ನಡೆಯಲ್ಲಿದೆ. ಭಾರತ ತನ್ನ ಮೊದಲ ಪಂದ್ಯವನ್ನು ಜೂನ್‌ 5 ರಂದು ಐರ್ಲೆಂಡ್​ ವಿರುದ್ಧ ಆಡಲಿದೆ.
ಭಾರತವು ತನ್ನ ಗುಂಪು ಹಂತದ ಎಲ್ಲಾ ಪಂದ್ಯಗಳನ್ನು ಅಮೆರಿಕದಲ್ಲೇ ಆಡಲಿದೆ. ಲೀಗ್​ ಮುಕ್ತಾಯದ ಬಳಿಕ ಮುಂದಿನ ಹಂತಕ್ಕೆ ಅರ್ಹತೆ ಪಡೆದರೆ, ಸೂಪರ್ 8 ಪಂದ್ಯಗಳನ್ನು ಸಹ ಇಲ್ಲೇ ಆಡಲಿದೆ. ಟೂರ್ನಿಯಲ್ಲಿ ಒಟ್ಟು 55 ಪಂದ್ಯಗಳು ನಡೆಯಲಿವೆ. ಜೂನ್ 1ರಿಂದ 18ರವರೆಗೆ ಗುಂಪು ಹಂತದಲ್ಲಿ 40 ಪಂದ್ಯಗಳು ನಡೆಯಲಿವೆ. ಜೂನ್ 19 ರಿಂದ 24 ರವರೆಗೆ ಸೂಪರ್ 8 ಪಂದ್ಯಗಳು ನಡೆಯಲಿವೆ.

ಇದನ್ನೂ ಓದಿ ICC T20 World Cup : ವಿಶ್ವ ಕಪ್​ಗೆ ಭಾರತ ತಂಡ ಘೋಷಿಸಲು ಇನ್ನೂ ಇದೆ ಮೂರು ತಿಂಗಳ ಅವಧಿ

ಮೀಸಲು ದಿನ


ಟೂರ್ನಿಯ ಲೀಗ್​ ಮತ್ತು ಸೂಪರ್​ 8 ಪಂದ್ಯಗಳಿಗೆ ಯಾವುದೇ ಮೀಸಲು ದಿನ ಇಲ್ಲ. ಈ ಪಂದ್ಯಗಳಿಗೆ ಮಳೆ ಬಂದು ಪಂದ್ಯ ರದ್ದಾದರೆ ಸಮಾನ ಅಂಕ ನೀಡಲಾಗುತ್ತದೆ. ಆದರೆ, ಸೆಮಿಫೈನಲ್​ ಮತ್ತು ಫೈನಲ್​ ಪಂದ್ಯಗಳಿಗೆ ಮೀಸಲು ದಿನ ಇರಲಿದೆ. ಒಂದೊಮ್ಮೆ ಸೆಮಿ ಮತ್ತು ಫೈನಲ್​ ಫೈನಲ್​ ಪಂದ್ಯಗಳು ಕೂಡ ಮೀಸಲು ದಿನವೂ ನಡೆಯದಿದ್ದರೆ ಆಗ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಪಡೆದ ತಂಡಕ್ಕೆ ಲಾಭ ಸಿಗಲಿದೆ.

ಭಾರತದ ಪಂದ್ಯಗಳು

ದಿನಾಂಕಎದುರಾಳಿಸ್ಥಳ
ಜೂನ್​ 5ಐರ್ಲೆಂಡ್​ನ್ಯೂಯಾರ್ಕ್​
ಜೂನ್​ 9ಪಾಕಿಸ್ತಾನನ್ಯೂಯಾರ್ಕ್​
ಜೂನ್​ 12ಅಮೆರಿಕನ್ಯೂಯಾರ್ಕ್
ಜೂನ್​ 15ಕೆನಡಾಫ್ಲೋರಿಡಾ

ಮೊದಲ ಸುತ್ತಿನ ಇತರ ಪಂದ್ಯಗಳು

ದಿನಾಂಕಪಂದ್ಯಸ್ಥಳ
ಜೂನ್ 3ಶ್ರೀಲಂಕಾ-ದಕ್ಷಿಣ ಆಫ್ರಿಕಾನ್ಯೂಯಾರ್ಕ್
ಜೂನ್​ 7ನ್ಯೂಜಿಲ್ಯಾಂಡ್​-ಅಫಘಾನಿಸ್ತಾನಗಯಾನ
ಜೂನ್​ 7 ಶ್ರೀಲಂಕಾ-ಬಾಂಗ್ಲಾದೇಶಡಲ್ಲಾಸ್
ಜೂನ್​ 8ಆಸ್ಟ್ರೇಲಿಯಾ-ಇಂಗ್ಲೆಂಡ್ಬಾರ್ಬಡೋಸ್​
ಜೂನ್​ 10ದಕ್ಷಿಣ ಆಫ್ರಿಕಾ-ಬಾಂಗ್ಲಾದೇಶನ್ಯೂಯಾರ್ಕ್
ಜೂನ್​ 12ವೆಸ್ಟ್​ ಇಂಡೀಸ್​-ನ್ಯೂಜಿಲ್ಯಾಂಡ್ನ್ಯೂಯಾರ್ಕ್
ಜೂನ್​ 15ಆಸ್ಟ್ರೇಲಿಯಾ-ಸ್ಕಾಟ್ಲೆಂಡ್ಸೇಂಟ್​ ಲೂಸಿಯಾ
ಜೂನ್​ 17ವೆಸ್ಟ್​ ಇಂಡೀಸ್​-ಅಫಘಾನಿಸ್ತಾನಸೇಂಟ್​ ಲೂಸಿಯಾ

ನಾಕೌಟ್​ ಪಂದ್ಯಗಳ ವೇಳಾಪಟ್ಟಿ

ದಿನಾಂಕಪಂದ್ಯಸ್ಥಳ
ಜೂನ್​ 26 ಮೊದಲ ಸೆಮಿಫೈನಲ್ಗಯಾನ
ಜೂನ್​ 27ದ್ವಿತೀಯ ಸೆಮಿಫೈನಲ್ಟ್ರಿನಿಡಾಡ್
ಜೂನ್​ 29ಫೈನಲ್ಬಾರ್ಬಡೋಸ್


Exit mobile version