ಮುಂಬಯಿ: ಟಿ20 ವಿಶ್ವಕಪ್‌ಗೆ(T20 World Cup 2024) ಮಂಗಳವಾರ ಭಾರತೀಯ ತಂಡ(Team India) ಪ್ರಕಟಗೊಳ್ಳುವ ಸಾಧ್ಯತೆಯಿದೆ. ಈಗಾಗಲೇ ನ್ಯೂಜಿಲ್ಯಾಂಡ್ ತಂಡ ಪ್ರಟಕಗೊಂಡಿದೆ. ಟಿ20 ವಿಶ್ವಕಪ್‌ಗಾಗಿ ತಂಡ ಪ್ರಕಟಿಸಲು ಮೇ 1 (ಬುಧವಾರ) ಕೊನೆಯ ದಿನವಾಗಿರುವುದರಿಂದ ಭಾರತ ಸೇರಿ ಇನ್ನುಳಿದ ದೇಶಗಳು ಕೂಡ ಇಂದೇ ತಮ್ಮ ತಂಡವನ್ನು ಪ್ರಕಟಿಸುವ ಸಾಧ್ಯತೆ ಇದೆ.
ಟೀಮ್ ಇಂಡಿಯಾದ ನಾಯಕ ರೋಹಿತ್ ಶರ್ಮ(Rohit Sharma) ಮತ್ತು ಆಯ್ಕೆ ಸಮಿತಿ ಅಧ್ಯಕ್ಷ ಅಜಿತ್ ಅಗರ್ಕರ್(Ajit Agarkar) ಕಳೆದ 2 ದಿನಗಳ ಹಿಂದೆಯೇ ದೆಹಲಿಯಲ್ಲಿ ಸಭೆ ನಡೆಸಿ ತಂಡವನ್ನು ಅಂತಿಮಗೊಳಿಸಿದ್ದಾರೆ ಎನ್ನಲಾಗಿದೆ. ಹೀಗಾಗಿ ತಂಡ ಪ್ರಕಟಿಸುವ ಸುದ್ದಿಗೋಷ್ಠಿಯಲ್ಲಿ ಅಜಿತ್ ಅಗರ್ಕರ್ ಮತ್ತು ಕೋಚ್ ರಾಹುಲ್ ದ್ರಾವಿಡ್(Rahul Dravid) ಭಾಗವಹಿಸಲಿದ್ದಾರೆ ಎನ್ನಲಾಗಿದೆ. ರೋಹಿತ್ ಅವರು ಇಂದು ಲಕ್ನೋ ವಿರುದ್ಧ ಪಂದ್ಯವನ್ನಾಡುವ ಹಿನ್ನಡೆಯಲ್ಲಿ ಈ ಸುದ್ದಿಗೋಷ್ಠಿಯಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ತಿಳಿದುಬಂದಿದೆ.
Team India's squad for the T20 World Cup 2024 will be picked today. (TOI). pic.twitter.com/KtMTv79DuL
— Tanuj Singh (@ImTanujSingh) April 30, 2024
ತಂಡ ಪ್ರಕಟಗೊಳ್ಳುವ ಮುನ್ನವೇ ಕ್ರಿಕ್ಬಜ್ ಸೇರಿ ಕೆಲ ಆಂಗ್ಲ ಮಾಧ್ಯಗಳು ಕೆಲ ಆಟಗಾರರಿಗೆ ಅವಕಾಶ ಸಿಗುವುದು ಅನುಮಾನ ಎನ್ನುವ ಸುದ್ದಿಯನ್ನು ಪ್ರಕಟಿಸಿದೆ. ಕೆಲ ವರದಿಗಳ ಪ್ರಕಾರ ಹಾರ್ದಿಕ್ ಪಾಂಡ್ಯ ಬದಲು ರಿಷಭ್ ಪಂತ್ ಅವರನ್ನು ತಂಡದ ಉಪನಾಯಕನನ್ನಾಗಿ ಮಾಡಲಿದ್ದಾರೆ ಎನ್ನಲಾಗಿದೆ. ಇನ್ನೊಂದು ಮೂಲಗಳ ಪ್ರಕಾರ ಪಂತ್ ಮೊದಲ ಆಯ್ಕೆಯ ಕೀಪರ್ ಅಲ್ಲ ಸಂಜು ಸ್ಯಾಮ್ಸನ್ ಮೊದಲ ಆಯ್ಕೆಯ ಕೀಪರ್ ಎನ್ನಲಾಗಿದೆ.
ಇದನ್ನೂ ಓದಿ T20 World Cup 2024: ಆಸ್ಟ್ರೇಲಿಯಾದಿಂದ ಹಡಗಿನಲ್ಲೇ 3 ಕ್ರಿಕೆಟ್ ಪಿಚ್ ತಂದ ಅಮೆರಿಕ
ಭಾರತದ ಸಂಭಾವ್ಯರ ಪಟ್ಟಿ
ರೋಹಿತ್ ಶರ್ಮಾ(ನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಸಂಜು ಸ್ಯಾಮ್ಸನ್/ಕೆ.ಎಲ್ ರಾಹುಲ್, ರಿಷಭ್ ಪಂತ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಿವಂ ದುಬೆ, ರಿಂಕು ಸಿಂಗ್, ಕುಲ್ದೀಪ್ ಯಾದವ್, ಜಸ್‌ಪ್ರೀತ್ ಬುಮ್ರಾ, ಅರ್ಶ್‌ದೀಪ್ ಸಿಂಗ್, ಆವೇಶ್ ಖಾನ್/ಮೊಹಮದ್ ಸಿರಾಜ್.
ಟೂರ್ನಿಯಲ್ಲಿ ಪಾಲ್ಗೊಳ್ಳುವ ಎಲ್ಲ 20 ತಂಡಗಳು ಕೂಡ ಮೇ 1ರ ಒಳಗಡೆ ಆಟಗಾರರ ಅಂತಿಮ ಪಟ್ಟಿ ರಚಿಸಿ ಐಸಿಸಿಗೆ ನೀಡಬೇಕಿದೆ. ಆದರೆ, ಮೇ 25 ರ ತನಕ ಐಸಿಸಿ ಅನುಮತಿ ಇಲ್ಲದೆ ತಂಡದಲ್ಲಿ ಬದಲಾವಣೆ ಮಾಡಿಕೊಳ್ಳಬಹುದು. ಆ ಬಳಿಕದ ಯಾವುದೇ ಬದಲಾವಣೆ ಮಾಡಬೇಕಿದ್ದರೆ ಐಸಿಸಿ ತಾಂತ್ರಿಕ ಸಮಿತಿಯ ಅನುಮತಿ ಅತ್ಯಗತ್ಯ. ಇದು ಕೂಡ ಆಟಗಾರರು ಗಾಯಗೊಂಡರೆ ಮಾತ್ರ ಬದಲಿ ಆಟಗಾರನ ಆಯ್ಕೆಯನ್ನು ಐಸಿಸಿ ಮಾನ್ಯ ಮಾಡುತ್ತದೆ.
ಸಾಂಪ್ರದಾಯಿಕ ಬದ್ಧ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ನಡುವಣ ಪಂದ್ಯ ಜೂನ್ 9 ರಂದು ನ್ಯೂಯಾರ್ಕ್‌ನಲ್ಲಿ ನಡೆಯಲ್ಲಿದೆ. ಭಾರತ ತನ್ನ ಮೊದಲ ಪಂದ್ಯವನ್ನು ಜೂನ್ 5 ರಂದು ಐರ್ಲೆಂಡ್ ವಿರುದ್ಧ ಆಡಲಿದೆ.
ಭಾರತವು ತನ್ನ ಗುಂಪು ಹಂತದ ಎಲ್ಲಾ ಪಂದ್ಯಗಳನ್ನು ಅಮೆರಿಕದಲ್ಲೇ ಆಡಲಿದೆ. ಲೀಗ್ ಮುಕ್ತಾಯದ ಬಳಿಕ ಮುಂದಿನ ಹಂತಕ್ಕೆ ಅರ್ಹತೆ ಪಡೆದರೆ, ಸೂಪರ್ 8 ಪಂದ್ಯಗಳನ್ನು ಸಹ ಇಲ್ಲೇ ಆಡಲಿದೆ. ಟೂರ್ನಿಯಲ್ಲಿ ಒಟ್ಟು 55 ಪಂದ್ಯಗಳು ನಡೆಯಲಿವೆ. ಜೂನ್ 1ರಿಂದ 18ರವರೆಗೆ ಗುಂಪು ಹಂತದಲ್ಲಿ 40 ಪಂದ್ಯಗಳು ನಡೆಯಲಿವೆ. ಜೂನ್ 19 ರಿಂದ 24 ರವರೆಗೆ ಸೂಪರ್ 8 ಪಂದ್ಯಗಳು ನಡೆಯಲಿವೆ.