Site icon Vistara News

T20 World Cup 2024: ಇಂಡೋ-ಪಾಕ್​ ಮಿನಿ ವಿಶ್ವಕಪ್​ ಸಮರ ನಡೆಯುವ ಸ್ಟೇಡಿಯಂನ ವಿಡಿಯೊ ವೈರಲ್​

T20 World Cup 2024

T20 World Cup 2024: India to play Pakistan next month in New York

ನ್ಯೂಯಾರ್ಕ್​: ಬಹುನಿರೀಕ್ಷಿತ ಐಸಿಸಿ ಟಿ20 ವಿಶ್ವಕಪ್​(T20 World Cup 2024) ಟೂರ್ನಿ ಆರಂಭಕ್ಕೆ ಇನ್ನು ಕೇವಲ 12 ದಿನಗಳು ಮಾತ್ರ ಬಾಕಿ ಉಳಿದಿವೆ. ಜೂನ್​ 1ರಿಂದ ಆರಂಭವಾಗಿ ಜೂನ್​ 29ರ ತನಕ ಈ ಟೂರ್ನಿ ನಡೆಯಲಿದೆ. ಮೊದಲ ಬಾರಿಗೆ ಅಮೆರಿಕ ವಿಂಡೀಸ್​ ಜತೆ ಸೇರಿ ಟೂರ್ನಿಯ ಆತಿಥ್ಯವಹಿಸಿಕೊಂಡಿದೆ. ವಿಶ್ವಕಪ್​ ಸಲುವಾಗಿಯೇ ನ್ಯೂಯಾರ್ಕ್​ನಲ್ಲಿ ನಿಮಾರ್ಣ ಮಾಡಲಾಗಿರುವ ನಸ್ಸೌ ಕೌಂಟಿ ಇಂಟರ್‌ನ್ಯಾಶನಲ್ ಕ್ರಿಕೆಟ್ ಸ್ಟೇಡಿಯಂ(Nassau County International Cricket Stadium)ಯಂನ ವಿಡಿಯೊವೊಂದು ವೈರಲ್​ ಆಗಿದೆ.

34 ಸಾವಿರ ಪ್ರೇಕ್ಷಕರು ಕೂರುವಷ್ಟು ಸಾಮರ್ಥ್ಯದ ಸ್ಟೇಡಿಯಂ ಅನ್ನು ಕೇವಲ 5 ತಿಂಗಳಲ್ಲಿ ನಿರ್ಮಿಸಲಾಯಿತು. ಈ ವೇಳೆ ಹಲವು ಅಡಚಣೆಗಳು ಕೂಡ ಎದುರಾಗಿತ್ತು. ಸ್ಟೇಡಿಯಂ ನಿರ್ಮಾಣದ ವೇಳೆ ವಿಪರೀತ ಮಂಚು ಬಿದ್ದು ನಿರ್ಮಾಣ ಕಾರ್ಯ ಹಲವು ಬಾರಿ ಸ್ಥಗಿತಗೊಂಡಿತ್ತು. ಆದರೂ ಹಠ ಬಿಡದ ಸಂಘಟಕರು ಅಂತಿಮವಾಗಿ ಈ ಸ್ಟೇಡಿಯಂ ನಿರ್ಮಾಣ ಮಾಡಿಯೇ ಬಿಟ್ಟಿದ್ದಾರೆ. ಪ್ರತಿ ತಿಂಗಳು ಕೂಡ ಈ ಮೈದಾನದ ಕಾಮಗಾರಿಯ ವಿಡಿಯೊವನ್ನು ಐಸಿಸಿ ಕೂಡ ತನ್ನ ಅಧಿಕೃತ ಟ್ವಿಟರ್​ ಎಕ್ಸ್​ನಲ್ಲಿ ಹಂಚಿಕೊಳ್ಳುತ್ತಿತ್ತು.

ಈ ಸ್ಟೇಡಿಯಂ ಭಾರತ-ಪಾಕ್​ ಪಂದ್ಯಕ್ಕಾಗಿಯೇ ತಾತ್ಕಾಲಿಕವಾಗಿ ನಿರ್ಮಿಸಲಾಗಿದೆ ಎನ್ನಲಾಗಿದೆ. ಪಂದ್ಯದ ನಂತರ ಇದನ್ನು ಕೆಡವಲಾಗುತ್ತದೆ ಎಂದು ತಿಳಿಸಲಾಗಿದೆ. ವಿಶ್ವಕಪ್ ಟೂರ್ನಿಗೆ ಅಮೆರಿಕದ ಮೂರು ಸ್ಟೇಡಿಯಂಗಳು ಆತಿಥ್ಯ ವಹಿಸಿವೆ. ಇಲ್ಲಿ 16 ಪಂದ್ಯಗಳು ನಡೆಯಲಿದೆ. ಭಾರತ ಮತ್ತು ಪಾಕಿಸ್ತಾನ ಜೂನ್​ 9ರಂದು ಪಂದ್ಯವನ್ನಾಡಲಿದೆ.

ಇದನ್ನೂ ಓದಿ T20 World Cup 2024: ಪಾಕ್​ ಉಗ್ರರ ಭೀತಿ; ಬಿಗಿ ಭದ್ರತೆ ಕೈಗೊಂಡ ವಿಂಡೀಸ್​ ಕ್ರಿಕೆಟ್​ ಮಂಡಳಿ

ಅಮೆರಿಕದಲ್ಲಿ ಸುಸಜ್ಜಿತ ಕ್ರಿಕೆಟ್​ ಪಿಚ್ ಇಲ್ಲದ ಕಾರಣ ಆಸ್ಟ್ರೇಲಿಯಾದಿಂದ ಈ ಪಿಚ್​ಗಳನ್ನು ತರಿಸಲಾಗಿದೆ. ಡ್ರಾಪ್ ಇನ್ ಪಿಚ್‌ಗಳ(Drop-In Pitches) ಅಳವಡಿ ಕೂಡ ಸಂಪೂರ್ಣಗೊಂಡಿದೆ. ಪಿಚ್ ಸಂಪೂರ್ಣವಾಗಿ ಅಡಿಲೇಡ್‌ನಲ್ಲಿ ತಯಾರಿಸಲಾಗಿದ್ದು, ಅದನ್ನು ಹಡಗಿನಲ್ಲೇ 22,500 ಕಿಲೋಮೀಟರ್ ದೂರದ ಫ್ಲೋರಿಡಾ ಮೂಲಕ ನ್ಯೂಯಾರ್ಕ್‌ಗೆ ತರಲಾಗಿತ್ತು.

ಅಮೆರಿಕದ ಈ ಮೂರು ಕ್ರೀಡಾಂಗಣಗಳಲ್ಲಿ 16 ಪಂದ್ಯಗಳು ನಡೆಯಲಿದೆ. ಉಳಿದ 39 ಪಂದ್ಯಗಳಿಗೆ ವೆಸ್ಟ್ ಇಂಡೀಸ್ ಆತಿಥ್ಯ ವಹಿಸಿದೆ. ಟೂರ್ನಿಯಲ್ಲಿ ಒಟ್ಟು 55 ಪಂದ್ಯಗಳು ನಡೆಯಲಿವೆ. ಜೂನ್ 1ರಿಂದ 18ರವರೆಗೆ ಗುಂಪು ಹಂತದಲ್ಲಿ 40 ಪಂದ್ಯಗಳು ನಡೆಯಲಿವೆ. ಜೂನ್ 19 ರಿಂದ 24 ರವರೆಗೆ ಸೂಪರ್ 8 ಪಂದ್ಯಗಳು ನಡೆಯಲಿವೆ.

ನ್ಯೂಯಾರ್ಕ್ ಮತ್ತು ನವದೆಹಲಿ ನಡುವೆ 10.5 ಗಂಟೆಗಳ ಸಮಯದ ವ್ಯತ್ಯಾಸವಿರುವುದರಿಂದ, ಸಂಘಟಕರು ಕೆಲವು ಪಂದ್ಯಗಳನ್ನು, ವಿಶೇಷವಾಗಿ ಭಾರತವನ್ನು ಒಳಗೊಂಡ ಪಂದ್ಯಗಳನ್ನು ಬೆಳಗ್ಗೆ ಪ್ರಾರಂಭಿಸಲು ಚರ್ಚಿಸಿದ್ದಾರೆ ಎನ್ನಲಾಗಿದೆ. ಇದು ಭಾರತೀಯ ದೂರದರ್ಶನ ಪ್ರೇಕ್ಷಕರಿಗೆ ತಮ್ಮ ಅನುಕೂಲದ ಸಮಯದಲ್ಲಿ ಪಂದ್ಯವನ್ನು ನೋಡಲು ಸಹಾಯ ಮಾಡಲಿದೆ. ಜೂನ್​ 9 ಕೂಡ ಭಾನುವಾರವಾಗಿದೆ. ಅಮೆರಿಕದಲ್ಲಿ ರಾತ್ರಿ ಪಂದ್ಯ ಆಯೋಜಿಸಿದರೆ, ಭಾರತದಲ್ಲಿ ಸೋಮವಾರ ಮುಂಜಾನೆ ಪಂದ್ಯ ಪ್ರಸಾರವಾಗುತ್ತದೆ. ಹೀಗಾಗಿ ಅಮೆರಿಕದಲ್ಲಿ ರಾತ್ರಿ ಪಂದ್ಯ ನಡೆಸುವುದಾದರೆ ಜೂನ್​ 8ರಂದೇ ನಡೆಯಲಿದೆ. ಆಗ ಭಾರತದಲ್ಲಿ ಭಾನುವಾರ ಬೆಳಗ್ಗೆ ಪಂದ್ಯ ಪ್ರಸಾರವಾಗಲಿದೆ.

Exit mobile version