Site icon Vistara News

T20 World Cup 2024: ಟಿ20 ವಿಶ್ವಕಪ್​ ಟೂರ್ನಿಯಲ್ಲಿ ನಂದಿನಿ ಪ್ರಾಯೋಜಕತ್ವ?

Nandini takes battle with Amul to cricket field, pitches for T20 WC team sponsorship

ಬೆಂಗಳೂರು: ವೆಸ್ಟ್​ ಇಂಡೀಸ್​ ಮತ್ತು ಅಮೆರಿಕ ಆತಿಥ್ಯದಲ್ಲಿ ಜೂನ್ 1 ರಿಂದ ಆರಂಭವಾಗಲಿರುವ ಪುರುಷರ ಟಿ20 ವಿಶ್ವಕಪ್​ ಟೂರ್ನಿಯಲ್ಲಿ(T20 World Cup 2024) ಕರ್ನಾಟಕ ಹಾಲು ಮಹಾ ಮಂಡಳಿ(KMF) ಕೆಲವು ತಂಡದ ಪ್ರಾಯೋಜಕತ್ವ ಪಡೆಯುವ ಗುರಿ ಇಟ್ಟುಕೊಂಡಿದೆ. ಈ ಮೂಲಕ ಅಮೂಲ್‌ಗೆ ತೀವ್ರ ಪೈಪೋಟಿ ನೀಡಲು ರೆಡಿಯಾಗಿದೆ. ಅಮೂಲ್‌(Amul) ಸಂಸ್ಥೆಯು 2011ರಿಂದಲೂ ಅಫಫ್ಘಾನಿಸ್ತಾನ, ನ್ಯೂಜಿಲ್ಯಾಂಡ್​, ದಕ್ಷಿಣ ಆಫ್ರಿಕಾ, ಶ್ರೀಲಂಕಾ ಸೇರಿದಂತೆ ಕೆಲ ತಂಡಗಳ ಪ್ರಾಯೋಜತ್ವಗಳನ್ನು ಪಡೆದಿದೆ. ಇದೀಗ ಕೆಎಂಎಫ್‌ ಕೂಡಾ ಕ್ರಿಕೆಟ್‌ ಲೋಕಕ್ಕೆ ಕಾಲಿಟ್ಟು ನಂದಿನಿ(nandini milk) ಲೋಗೋವನ್ನು ಜಾಗತಿಕ ಮಟ್ಟದಲ್ಲಿ ಪ್ರಚಾರ ಮಾಡಲು ಮುಂದಾಗಿದೆ.

ಕೆಎಂಎಫ್‌ ಈಗಾಗಲೇ ಟೆಂಡರ್‌ ಪ್ರಕಟಿಸಿದ್ದು, ಶೀಘ್ರದಲ್ಲೇ ಟಿ20 ವಿಶ್ವಕಪ್‌ನ ಒಂದು ಅಥವಾ ಒಂದಕ್ಕಿಂತ ಹೆಚ್ಚು ತಂಡಗಳ ಪ್ರಾಯೋಜಕತ್ವ ಪಡೆಯುವ ನಿರೀಕ್ಷೆಯಲ್ಲಿದೆ. ಎಡಗೈ ಬ್ಯಾಟ್ಸ್‌ಮನ್‌ಗಳಿಗೆ ಬಲಗೈ ಮತ್ತು ಬಲಗೈ ಬ್ಯಾಟ್ಸ್‌ಮನ್‌ಗಳ ಎಡಗೈ ಮೇಲೆ ನಂದಿನಿ ಲೋಗೋ ಹಾಕಲು ಕೆಎಂಎಫ್(Karnataka Milk Federation) ಮುಂದಾಗಿದೆ. ಏಪ್ರಿಲ್‌ನಲ್ಲಿ ಟೆಂಡರ್‌ ಪೂರ್ಣಗೊಳ್ಳುವ ನಿರೀಕ್ಷೆಯಿದೆ. ವಿಶ್ವಕಪ್​ ಟೂರ್ನಿಯ(T20 World Cup 2024) ವೇಳಾಪಟ್ಟಿಯನ್ನು ಐಸಿಸಿ ಈಗಾಗಲೇ ಪ್ರಕಟಿಸಿದೆ. ಜತೆಗೆ ತಂಡಗಳ ಪಟ್ಟಿಯನ್ನು ಅಂತಿಮಗೊಳಿಸಲು ಗಡುವು ಕೂಡ ನೀಡಿದೆ.

ಇದನ್ನೂ ಓದಿ T20 World Cup 2024: ಈ ಮೊಬೈಲ್‌ ಆ್ಯಪ್​ನಲ್ಲಿ ಉಚಿತವಾಗಿ ಪ್ರಸಾರಗೊಳ್ಳಲಿದೆ ಟಿ20 ವಿಶ್ವಕಪ್​

ಸಾಂಪ್ರದಾಯಿಕ ಬದ್ಧ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ನಡುವಣ ಪಂದ್ಯ ಜೂನ್ 9 ರಂದು ನ್ಯೂಯಾರ್ಕ್‌ನಲ್ಲಿ ನಡೆಯಲ್ಲಿದೆ. ಭಾರತ ತನ್ನ ಮೊದಲ ಪಂದ್ಯವನ್ನು ಜೂನ್‌ 5 ರಂದು ಐರ್ಲೆಂಡ್​ ವಿರುದ್ಧ ಆಡಲಿದೆ.
ಭಾರತವು ತನ್ನ ಗುಂಪು ಹಂತದ ಎಲ್ಲಾ ಪಂದ್ಯಗಳನ್ನು ಅಮೆರಿಕದಲ್ಲೇ ಆಡಲಿದೆ. ಲೀಗ್​ ಮುಕ್ತಾಯದ ಬಳಿಕ ಮುಂದಿನ ಹಂತಕ್ಕೆ ಅರ್ಹತೆ ಪಡೆದರೆ, ಸೂಪರ್ 8 ಪಂದ್ಯಗಳನ್ನು ಸಹ ಇಲ್ಲೇ ಆಡಲಿದೆ. ಟೂರ್ನಿಯಲ್ಲಿ ಒಟ್ಟು 55 ಪಂದ್ಯಗಳು ನಡೆಯಲಿವೆ. ಜೂನ್ 1ರಿಂದ 18ರವರೆಗೆ ಗುಂಪು ಹಂತದಲ್ಲಿ 40 ಪಂದ್ಯಗಳು ನಡೆಯಲಿವೆ. ಜೂನ್ 19 ರಿಂದ 24 ರವರೆಗೆ ಸೂಪರ್ 8 ಪಂದ್ಯಗಳು ನಡೆಯಲಿವೆ.

ತಲಾ 2 ಅಭ್ಯಾಸ ಪಂದ್ಯ


ವಿಶ್ವಕಪ್​ಗೆ ಮುನ್ನ ಎಲ್ಲ 20 ತಂಡಗಳು ತಮ್ಮ ಆಗಮನಕ್ಕೆ ತಕ್ಕಂತೆ ತಲಾ 2 ಅಭ್ಯಾಸ ಪಂದ್ಯಗಳನ್ನು ಆಡಲಿವೆ ಎಂದು ಐಸಿಸಿ ತಿಳಿಸಿದೆ. ಟೂರ್ನಿಯ ಲೀಗ್​ ಮತ್ತು ಸೂಪರ್​ 8 ಪಂದ್ಯಗಳಿಗೆ ಯಾವುದೇ ಮೀಸಲು ದಿನ ಇಲ್ಲ. ಈ ಪಂದ್ಯಗಳಿಗೆ ಮಳೆ ಬಂದು ಪಂದ್ಯ ರದ್ದಾದರೆ ಸಮಾನ ಅಂಕ ನೀಡಲಾಗುತ್ತದೆ. ಆದರೆ, ಸೆಮಿಫೈನಲ್​ ಮತ್ತು ಫೈನಲ್​ ಪಂದ್ಯಗಳಿಗೆ ಮೀಸಲು ದಿನ ಇರಲಿದೆ. ಒಂದೊಮ್ಮೆ ಸೆಮಿ ಮತ್ತು ಫೈನಲ್​ ಫೈನಲ್​ ಪಂದ್ಯಗಳು ಕೂಡ ಮೀಸಲು ದಿನವೂ ನಡೆಯದಿದ್ದರೆ ಆಗ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಪಡೆದ ತಂಡಕ್ಕೆ ಲಾಭ ಸಿಗಲಿದೆ.

ಭಾರತದ ಪಂದ್ಯಗಳು

ದಿನಾಂಕಎದುರಾಳಿಸ್ಥಳ
ಜೂನ್​ 5ಐರ್ಲೆಂಡ್​ನ್ಯೂಯಾರ್ಕ್​
ಜೂನ್​ 9ಪಾಕಿಸ್ತಾನನ್ಯೂಯಾರ್ಕ್​
ಜೂನ್​ 12ಅಮೆರಿಕನ್ಯೂಯಾರ್ಕ್
ಜೂನ್​ 15ಕೆನಡಾಫ್ಲೋರಿಡಾ

Exit mobile version