ದುಬೈ: ಖ್ಯಾತ ಸ್ಟ್ರಿಂಟರ್, 8 ಒಲಿಂಪಿಕ್ ಚಿನ್ನದ ಪದಕ ವಿಜೇತ, ಜಮೈಕಾದ ಉಸೇನ್ ಬೋಲ್ಟ್(Usain Bolt) ಅವರನ್ನು ಐಸಿಸಿ ಪುರುಷರ ಟಿ20 ವಿಶ್ವಕಪ್ ಟೂರ್ನಿಯ(T20 World Cup 2024) ಬ್ರ್ಯಾಂಡ್ ಅಂಬಾಸಿಡರ್ ಆಗಿ ನೇಮಕಮಾಡಲಾಗಿದೆ. ವಿಶ್ವಕಪ್ ಟೂರ್ನಿ ಜೂನ್ 1ರಿಂದ 29ರ ತನಕ ಅಮೆರಿಕ ಮತ್ತು ವೆಸ್ಟ್ ಇಂಡೀಸ್ ಜಂಟಿ ಆತಿಥ್ಯದಲ್ಲಿ ನಡೆಯಲಿದೆ. ಒಟ್ಟು 55 ಪಂದ್ಯಗಳು ಇರಲಿದೆ.
‘ಕ್ರಿಕೆಟ್ ಜೀವನದ ಭಾಗವಾಗಿರುವ ಕೆರಿಬಿಯನ್‌ನಿಂದ ಬಂದಿರುವ ಈ ಕ್ರೀಡೆಯು ನನ್ನ ಹೃದಯದಲ್ಲಿ ಯಾವಾಗಲೂ ವಿಶೇಷ ಸ್ಥಾನವನ್ನು ಪಡೆದಿದೆ ಮತ್ತು ಅಂತಹ ಪ್ರತಿಷ್ಠಿತ ಪಂದ್ಯಾವಳಿಯ ಭಾಗವಾಗಿರಲು ನನಗೆ ಗೌರವವಿದೆ’ ಎಂದು ಬೋಲ್ಟ್ ಐಸಿಸಿ ಹೇಳಿಕೆಯಲ್ಲಿ ತಿಳಿಸಿದ್ದಾರೆ. “ವಿಶ್ವಕಪ್‌ಗೆ ನನ್ನ ಶಕ್ತಿ ಮತ್ತು ಉತ್ಸಾಹವನ್ನು ತರಲು ಮತ್ತು ಜಾಗತಿಕವಾಗಿ ಕ್ರಿಕೆಟ್ ಬೆಳವಣಿಗೆಗೆ ಕೊಡುಗೆ ನೀಡಲು ನಾನು ಎದುರು ನೋಡುತ್ತಿದ್ದೇನೆ” ಎಂದಿ ಬೋಲ್ಟ್ ಹೇಳಿದರು.
Gear up for some speed, thrill and excitement on and off the pitch ⚡
— ICC (@ICC) April 24, 2024
Usain Bolt joins as an ambassador for the ICC Men's #T20WorldCup 2024 🤩https://t.co/MOlH8H8kkX
ವಿಶ್ವಕಪ್‌ಗೆ ಮುನ್ನ ಎಲ್ಲ 20 ತಂಡಗಳು ತಮ್ಮ ಆಗಮನಕ್ಕೆ ತಕ್ಕಂತೆ ತಲಾ 2 ಅಭ್ಯಾಸ ಪಂದ್ಯಗಳನ್ನು ಆಡಲಿವೆ ಎಂದು ಐಸಿಸಿ ತಿಳಿಸಿದೆ. ಟೂರ್ನಿಯ ಲೀಗ್ ಮತ್ತು ಸೂಪರ್ 8 ಪಂದ್ಯಗಳಿಗೆ ಯಾವುದೇ ಮೀಸಲು ದಿನ ಇಲ್ಲ. ಈ ಪಂದ್ಯಗಳಿಗೆ ಮಳೆ ಬಂದು ಪಂದ್ಯ ರದ್ದಾದರೆ ಸಮಾನ ಅಂಕ ನೀಡಲಾಗುತ್ತದೆ. ಆದರೆ, ಸೆಮಿಫೈನಲ್ ಮತ್ತು ಫೈನಲ್ ಪಂದ್ಯಗಳಿಗೆ ಮೀಸಲು ದಿನ ಇರಲಿದೆ. ಒಂದೊಮ್ಮೆ ಸೆಮಿ ಮತ್ತು ಫೈನಲ್ ಫೈನಲ್ ಪಂದ್ಯಗಳು ಕೂಡ ಮೀಸಲು ದಿನವೂ ನಡೆಯದಿದ್ದರೆ ಆಗ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಪಡೆದ ತಂಡಕ್ಕೆ ಲಾಭ ಸಿಗಲಿದೆ.
ಸಾಂಪ್ರದಾಯಿಕ ಬದ್ಧ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ನಡುವಣ ಪಂದ್ಯ ಜೂನ್ 9 ರಂದು ನ್ಯೂಯಾರ್ಕ್‌ನಲ್ಲಿ ನಡೆಯಲ್ಲಿದೆ. ಭಾರತ ತನ್ನ ಮೊದಲ ಪಂದ್ಯವನ್ನು ಜೂನ್ 5 ರಂದು ಐರ್ಲೆಂಡ್ ವಿರುದ್ಧ ಆಡಲಿದೆ.
ಭಾರತವು ತನ್ನ ಗುಂಪು ಹಂತದ ಎಲ್ಲಾ ಪಂದ್ಯಗಳನ್ನು ಅಮೆರಿಕದಲ್ಲೇ ಆಡಲಿದೆ. ಲೀಗ್ ಮುಕ್ತಾಯದ ಬಳಿಕ ಮುಂದಿನ ಹಂತಕ್ಕೆ ಅರ್ಹತೆ ಪಡೆದರೆ, ಸೂಪರ್ 8 ಪಂದ್ಯಗಳನ್ನು ಸಹ ಇಲ್ಲೇ ಆಡಲಿದೆ. ಟೂರ್ನಿಯಲ್ಲಿ ಒಟ್ಟು 55 ಪಂದ್ಯಗಳು ನಡೆಯಲಿವೆ. ಜೂನ್ 1ರಿಂದ 18ರವರೆಗೆ ಗುಂಪು ಹಂತದಲ್ಲಿ 40 ಪಂದ್ಯಗಳು ನಡೆಯಲಿವೆ. ಜೂನ್ 19 ರಿಂದ 24 ರವರೆಗೆ ಸೂಪರ್ 8 ಪಂದ್ಯಗಳು ನಡೆಯಲಿವೆ.