Site icon Vistara News

T20 World Cup 2024: ಟಿ20 ವಿಶ್ವಕಪ್​ಗೆ ಪಾಕಿಸ್ತಾನ ತಂಡ ಪ್ರಕಟಿಸಲು ಹೆದರುತ್ತಿರುವುದಕ್ಕೆ ಇದುವೇ ಅಸಲಿ ಕಾರಣ

T20 World Cup 2024

ಕರಾಚಿ: ಮುಂಬರುವ ಟಿ20 ವಿಶ್ವಕಪ್​ಗೆ(T20 World Cup 2024) ಈಗಾಗಲೇ ಭಾರತ, ಆಸ್ಟ್ರೇಲಿಯಾ, ಇಂಗ್ಲೆಂಡ್​, ನ್ಯೂಜಿಲ್ಯಾಂಡ್​ ಸೇರಿ ಹಲವು ದೇಶಗಳು ತಮ್ಮ ತಂಡವನ್ನು ಪ್ರಕಟಿಸಿದೆ. ತಂಡ ಪ್ರಕಟಿಸಲು ಮೇ 1 ಅಂತಿಮ ದಿನವಾಗಿದ್ದರೂ ಕೂಡ ಪಾಕ್​ ಇದುವರೆಗೆ ತಂಡವನ್ನು ಪ್ರಕಟಿಸಿಲ್ಲ. ಇದಕ್ಕೆ ಕಾರಣ ಏನೆಂಬುದು ತಿಳಿದು ಬಂದಿದೆ. ಹೌದು, ಕೆಲವು ಪ್ರಮುಖ ಆಟಗಾರರು ಫಿಟ್‌ನೆಸ್‌ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎನ್ನಲಾಗಿದೆ. ಹೀಗಾಗಿ ಮೇ 23 ಅಥವಾ 24ರ ವೇಳೆ ತಂಡವನ್ನು ಪ್ರಕಟಿಸುವುದು ಪಿಸಿಬಿ ಯೋಜನೆಯಾಗಿದೆ.

ಪ್ರಮುಖ ಟಿ20 ಆಟಗಾರರಾದ ಮೊಹಮ್ಮದ್‌ ರಿಜ್ವಾನ್‌, ಆಜಂ ಖಾನ್‌, ಇರ್ಫಾನ್‌ ಖಾನ್‌ ನಿಯಾಜಿ ಮತ್ತು ಹ್ಯಾರಿಸ್‌ ರೌಫ್ ಅವರು ಫಿಟ್‌ನೆಸ್‌ ಹೊಂದಿಲ್ಲ. ಹೀಗಾಗಿ ಇವರನ್ನು ಮುಂಬರುವ ಐರ್ಲೆಂಡ್‌, ಇಂಗ್ಲೆಂಡ್‌ ಸರಣಿಗಳಲ್ಲಿ ಆಡಿಸಿ ನೋಡುವುದು ಪಾಕ್​ನ ಉದ್ದೇಶವಾಗಿದೆ. ಮೇ 24 ತಂಡದಲ್ಲಿ ಬದಲಾವಣೆ ಮಾಡಿಕೊಳ್ಳಲು ಅಂತಿಮ ದಿನವಾಗಿದೆ. ಹೀಗಾಗಿ ಪಾಕ್​ ಇದೇ ದಿನ ತನ್ನ ತಂಡವನ್ನು ಪ್ರಕಟಿಸಲು ಯೋಜನೆಯೊಂದನ್ನು ಹಾಕಿಕೊಂಡಂತಿದೆ. ಆದರೆ ಮೇ 1 ತಂಡದ ಆಯ್ಕೆಗೆ ಅಂತಿಮ ದಿನವಾದ ಕಾರಣ ಐಸಿಸಿ ಇದಕ್ಕೆ ಅನುಮತಿ ನೀಡಲಿದೆಯೇ ಎಂದು ಕಾದು ನೋಡಬೇಕಿದೆ.

ಭಾರತ ಮತ್ತು ಪಾಕಿಸ್ತಾನ ತಂಡಗಳು ಜೂನ್​ 9ರಂದು ನಡೆಯುವ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ. ಈ ಪಂದ್ಯಕ್ಕಾಗಿ ಉಭಯ ದೇಶಗಳ ಅಭಿಮಾನಿಗಳು ಚಾತಕ ಪಕ್ಷಿಯಂತೆ ಕಾದು ಕುಳಿತಿದ್ದಾರೆ. ನ್ಯೂಯಾರ್ಕ್​ನಲ್ಲಿ ತಾತ್ಕಾಲಿಕವಾಗಿ ತಲೆ ಎತ್ತಿದ ನಸ್ಸೌ ಕೌಂಟಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ(Nassau County International Cricket Stadium)ನಲ್ಲಿ ಇತ್ತಂಡಗಳ ನಡುವಣ ಪಂದ್ಯ ನಡೆಯಲಿದೆ.

34 ಸಾವಿರ ಪ್ರೇಕ್ಷಕರು ಕೂರುವಷ್ಟು ಸಾಮರ್ಥ್ಯದ ಸ್ಟೇಡಿಯಂ ಇದಾಗಿದ್ದು. ಭಾರತ-ಪಾಕ್​ ಪಂದ್ಯಕ್ಕಾಗಿಯೇ ಇದನ್ನು ತಾತ್ಕಾಲಿಕವಾಗಿ ನಿರ್ಮಿಸಲಾಗಿದೆ. ಪಂದ್ಯದ ನಂತರ ಇದನ್ನು ಕೆಡವಲಾಗುತ್ತದೆ. ಎಂದು ತಿಳಿಸಲಾಗಿದೆ. ಭಾರತ ಮತ್ತು ಪಾಕ್​ ನಡುವಣ ಪಂದ್ಯ ನ್ಯೂಯಾರ್ಕ್‌ನಲ್ಲಿಯೇ ನಡೆಸಲು ಕಾರಣವೂ ಕೂಡ ಇದೆ. ಏಕೆಂದರೆ ಈ ಪ್ರದೇಶದಲ್ಲಿ 7,11,000 ಭಾರತೀಯ ಮತ್ತು ಸುಮಾರು 1,00,000 ಪಾಕಿಸ್ತಾನ ಮೂಲದ ಜನರು ವಾಸಿಸುತ್ತಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ T20 World Cup 2024: ಡ್ರಾಪ್ -ಇನ್ ಪಿಚ್ ಅಳವಡಿಕೆ ಕಾರ್ಯ ಆರಂಭಿಸಿದ ಐಸಿಸಿ

ನ್ಯೂಯಾರ್ಕ್ ಮತ್ತು ನವದೆಹಲಿ ನಡುವೆ 10.5 ಗಂಟೆಗಳ ಸಮಯದ ವ್ಯತ್ಯಾಸವಿರುವುದರಿಂದ, ಸಂಘಟಕರು ಕೆಲವು ಪಂದ್ಯಗಳನ್ನು, ವಿಶೇಷವಾಗಿ ಭಾರತವನ್ನು ಒಳಗೊಂಡ ಪಂದ್ಯಗಳನ್ನು ಬೆಳಗ್ಗೆ ಪ್ರಾರಂಭಿಸಲು ಒಪ್ಪಿಕೊಂಡಿದ್ದಾರೆ. ಇದು ಭಾರತೀಯ ದೂರದರ್ಶನ ಪ್ರೇಕ್ಷಕರಿಗೆ ತಮ್ಮ ಅನುಕೂಲದ ಸಮಯದಲ್ಲಿ ಪಂದ್ಯವನ್ನು ನೋಡಲು ಸಹಾಯ ಮಾಡಲಿದೆ. ಜೂನ್​ 9 ಕೂಡ ಭಾನುವಾರವಾಗಿದೆ. ಅಮೆರಿಕದಲ್ಲಿ ರಾತ್ರಿ ಪಂದ್ಯ ಆಯೋಜಿಸಿದರೆ, ಭಾರತದಲ್ಲಿ ಸೋಮವಾರ ಮುಂಜಾನೆ ಪಂದ್ಯ ಪ್ರಸಾರವಾಗುತ್ತದೆ. ಹೀಗಾಗಿ ಅಮೆರಿಕದಲ್ಲಿ ರಾತ್ರಿ ಪಂದ್ಯ ನಡೆಸುವುದಾದರೆ ಜೂನ್​ 8ರಂದೇ ನಡೆಯಲಿದೆ. ಆಗ ಭಾರತದಲ್ಲಿ ಭಾನುವಾರ ಬೆಳಗ್ಗೆ ಪಂದ್ಯ ಪ್ರಸಾರವಾಗಲಿದೆ.

Exit mobile version