Site icon Vistara News

T20 World Cup 2024 Prize Money:ಚಾಂಪಿಯನ್​ ಭಾರತ ತಂಡಕ್ಕೆ ಸಿಕ್ಕ ಬಹುಮಾನ ಮೊತ್ತವೆಷ್ಟು?

T20 World Cup 2024 prize money

T20 World Cup 2024 prize money: How much will the winner get?

ಬಾರ್ಬಡೋಸ್​: 17 ವರ್ಷಗಳ ಬಳಿಕ ಟಿ20 ವಿಶ್ವಕಪ್ ಗೆದ್ದ ಚಾಂಪಿಯನ್​(T20 World Cup Final) ಭಾರತ ತಂಡಕ್ಕೆ ಭಾರಿ(t20 world cup winner) ಮೊತ್ತದ ಬಹುಮಾನ(T20 World Cup 2024 Prize Money) ಲಭಿಸಿದೆ. $ 2.45 ಮಿಲಿಯನ್ ಯುಎಸ್ ಡಿ (20,42,49,000 ರೂ) ಪಡೆದಿದೆ. ಇದು ಪಂದ್ಯಾವಳಿಯ ಇತಿಹಾಸದಲ್ಲಿ ಇದುವರೆಗೆ ನೀಡಲಾದ ಅತ್ಯಧಿಕ ಮೊತ್ತವಾಗಿದೆ. ರನ್ನರ್​ ಅಪ್​ ದಕ್ಷಿಣ ಆಫ್ರಿಕಾ ತಂಡಕ್ಕೆ 1,280,000 USD (10,68,06,400 ರೂ.) ಹಣ ದೊರೆಕಿದೆ. ಈ ಬಾರಿಯ ಟಿ20 ವಿಶ್ವಕಪ್ ಟೂರ್ನಿಯ ಒಟ್ಟು ಬಹುಮಾನ ಮೊತ್ತ 11.25 ಮಿಲಿಯನ್ ಯುಸ್ ಡಾಲರ್ ಆಗಿತ್ತು.

ಬ್ರಿಜ್‌ಟೌನ್‌ನ ಕೆನ್ಸಿಂಗ್ಟನ್‌ ಓವಲ್‌ ಕ್ರಿಕೆಟ್​ ಸ್ಟೇಡಿಯಂನಲ್ಲಿ ಶನಿವಾರ ರಾತ್ರಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಭಾರತ, ವಿರಾಟ್ ಕೊಹ್ಲಿ ಮತ್ತು ಅಕ್ಷರ್ ಪಟೇಲ್ ಅವರ ಜವಾಬ್ದಾರಿಯುತ ಆಟದ ನೆರವಿನಿಂದ 7 ವಿಕೆಟ್ ನಷ್ಟಕ್ಕೆ 176 ರನ್ ಗಳಿಸಿತು. ಈ ಮೊತ್ತವನ್ನು ಒಂದು ಹಂತದ ವರೆಗೆ ದಿಟ್ಟವಾಗಿ ಬೆನ್ನಟ್ಟಿಕೊಂಡು ಬಂದ ದಕ್ಷಿಣ ಆಫ್ರಿಕಾ 8 ವಿಕೆಟ್​ಗೆ 169 ರನ್​ ಗಳಿಸಲಷ್ಟೇ ಶಕ್ತವಾಯಿತು.

ಕೊನೆಯ ಓವರ್​ನಲ್ಲಿ ದಕ್ಷಿಣ ಆಫ್ರಿಕಾ ಗೆಲುವಿಗೆ 16 ರನ್ ಅಗತ್ಯವಿತ್ತು. ಹಾರ್ದಿಕ್ ಪಾಂಡ್ಯ ಎಸೆದ ಮೊದಲ ಎಸೆತವನ್ನು ಡೇವಿಡ್ ಮಿಲ್ಲರ್ ಸಿಕ್ಸರ್ ನತ್ತ ಬಾರಿಸಿದ್ದರು. ಬೌಂಡರಿ ಲೈನ್ ನಲ್ಲಿದ್ದ ಸೂರ್ಯ ಕುಮಾರ್ ಯಾದವ್ ಯಾರೂ ಊಹಿಸದಂತೆ ಸಾಹಸಮಯ ಅಮೋಘ ಕ್ಯಾಚ್ ಪಡೆದರು. 21 ರನ್ ಗಳಿಸಿದ್ದ ಡೇವಿಡ್​ ಮಿಲ್ಲರ್ ವಿಕೆಟ್​ ಕೈಚೆಲ್ಲಿದರು. ಎರಡನೇ ಎಸೆತವನ್ನು ರಬಾಡಾ ಬೌಂಡರಿ ಬಾರಿಸಿದರು. ಮೂರನೇ ಎಸೆತದಲ್ಲಿ ಒಂದು ರನ್ ಬಂತು. ಕೊನೆಯ ಎರಡು ಎಸೆತಗಳಲ್ಲಿ 10 ರನ್ ಅಗತ್ಯವಿತ್ತು. ಹಾರ್ದಿಕ್ ಒಂದು ವೈಡ್ ಎಸೆದರು. ರಬಾಡಾ ಕ್ಯಾಚಿತ್ತು ನಿರ್ಗಮಿಸಿದರು. ಕೊನೆಯ ಎಸೆತದಲ್ಲಿ ಒಂದು ರನ್ ಮಾತ್ರ ಬಂತು. ಭಾರತ 7 ರನ್​ಗಳ ಗೆಲುವು ಸಾಧಿಸಿ 17 ವರ್ಷಗಳ ಬಳಿಕ ಟಿ20 ವಿಶ್ವಕಪ್​ ಗೆದ್ದು ಬೀಗಿತು.

ಇದನ್ನೂ ಓದಿ Rahul Dravid: ನಾಯಕನಾಗಿ ಸೋಲಿನ ಅವಮಾನ ಎದುರಿಸಿದ್ದ ಮೈದಾನದಲ್ಲೇ ಕೋಚ್​ ಆಗಿ ವಿಶ್ವಕಪ್​ ಎತ್ತಿ ಹಿಡಿದ ದ್ರಾವಿಡ್

ಜಮ್ಮು-ಕಾಶ್ಮೀರದಲ್ಲಿ ಮೊಳಗಿದ ವಿಜಯೋತ್ಸವ


17ನೇ ವರ್ಷಗಳ ಬಳಿಕ ಟಿ20 ವಿಶ್ವಕಪ್(T20 World Cup final)​ ಗೆದ್ದ ಭಾರತ ತಂಡದ ಈ ಅಭೂತಪೂರ್ವ ಗೆಲುವನ್ನು ಅಭಿಮಾನಿಗಳು ದೇಶಾದ್ಯಂತ ಸಂಭ್ರಮದಿಂದ ಆಚರಿಸಿದ್ದಾರೆ. ದೇಶದ ಮೂಲೆ ಮೂಲೆಯಲ್ಲೂ ತಡರಾತ್ರಿಯೇ ಪಟಾಕಿ ಸಿಡಿಸಿ, ಸಿಹಿ ಹಂಚುವ ಮೂಲಕ ಸಂಭ್ರಮಿಸಿದ್ದಾರೆ. ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲೂ ಅಭಿಮಾನಿಗಳು ತ್ರಿವರ್ಣ ಧ್ವಜಗಳನ್ನು ಹಿಡಿದು ಗೆಲುವನ್ನು ಸಂಭ್ರಮಿಸಿದ್ದಾರೆ. ಇದರ ಫೋಟೊ ಮತ್ತು ವೈರಲ್​ ಆಗಿದೆ.

ಜಮ್ಮು ಕಾಶ್ಮೀರದ ಕಚಿ ಚೌನಿ ಸೇರಿದಂತೆ ವಿವಿಧ ಭಾಗಗಳಲ್ಲಿ ಚಳಿಯನ್ನು ಕೂಡ ಲೆಕ್ಕಿಸದೆ ಮಧ್ಯರಾತ್ರಿಯೇ ಅಭಿಮಾನಿಗಳು ಮನೆಯಿಂದ ಹೊರ ಬಂದು ಭಾರತದ ಗೆಲುವನ್ನು ಸಂಭ್ರಮಿಸಿದ್ದಾರೆ. ಬೃಹತ್ ತ್ರಿವರ್ಣ ಧ್ವಜ ಹಿಡಿದು ಪಟಾಕಿ ಸಿಡಿಸಿ ಜಯಘೋಷ ಮೊಳಗಿಸಿದ್ದಾರೆ.

Exit mobile version