Site icon Vistara News

T20 World Cup 2024: ಟಿ20 ವಿಶ್ವಕಪ್​ಗೂ ರಾಹುಲ್​ ದ್ರಾವಿಡ್ ಕೋಚ್​; ಜಯ್​ ಶಾ

Rahul Dravid

ರಾಜ್​ಕೋಟ್​​: ಇದೇ ವರ್ಷ ನಡೆಯಲಿರುವ ಟಿ20 ವಿಶ್ವಕಪ್​ ಟೂರ್ನಿಯಲ್ಲಿ(T20 World Cup 2024) ಭಾರತ ತಂಡದ ಕೋಚ್​ ಆಗಿ ರಾಹುಲ್​ ದ್ರಾವಿಡ್(Rahul Dravid)​ ಕಾರ್ಯನಿರ್ವಹಿಸಲಿದ್ದಾರೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್​ ಶಾ(Jay Shah) ಖಚಿತಪಡಿಸಿದ್ದಾರೆ. ರೋಹಿತ್​ ಶರ್ಮ(Rohit Sharma) ನಾಯಕನಾಗಿ ತಂಡವನ್ನು ಮುನ್ನಡೆಸಲಿದ್ದಾರೆ.

ಅಮೆರಿಕ ಮತ್ತು ವೆಸ್ಟ್ ಇಂಡೀಸ್‌ನಲ್ಲಿ ನಡೆಯಲಿರುವ ಟಿ-20 ವಿಶ್ವಕಪ್‌ವರೆಗೆ ಕೋಚ್ ಆಗಿ ಮುಂದುವರಿಸುವ ಬಗ್ಗೆ ರಾಹುಲ್ ದ್ರಾವಿಡ್ ಜತೆ ಪ್ರಾಥಮಿಕ ಮಾತುಕತೆ ನಡೆಸಿದ್ದೇವೆ ಎಂದು ಜಯ್ ಶಾ ಹೇಳಿದ್ದಾರೆ. ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ ಅವರ ಒಪ್ಪಂದವು ಕಳೆದ ವರ್ಷದ ಏಕದಿನ ಕ್ರಿಕೆಟ್ ವಿಶ್ವಕಪ್‌ಗೆ ಅಂತ್ಯಗೊಂಡಿತ್ತು. ಆ ಬಳಿಕ, ದ್ರಾವಿಡ್​ಗೆ ಕೋಚ್​ ಹುದ್ದೆಯಲ್ಲಿ ಮುಂದುವರಿಯಲು ಆಸಕ್ತಿ ಕೂಡ ಇರಲಿಲ್ಲ. ಆದರೂ ಕೂಡ ದ್ರಾವಿಡ್​ ಮತ್ತು ಇತರ ತರಬೇತಿ ಸಿಬ್ಬಂದಿಯನ್ನು ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಗೆ ಒತ್ತಾಯ ಪೂರ್ವಕವಾಗಿ ಕಾರ್ಯನಿರ್ವಹಿಸುವಂತೆ ನೇಮಕ ಮಾಡಲಾಗಿತ್ತು. ಜತೆಗೆ ಇಂಗ್ಲೆಂಡ್​ ವಿರುದ್ಧದ ಟೆಸ್ಟ್​ ಸರಣಿಗೂ ಆಯ್ಕೆ ಮಾಡಲಾಗಿತ್ತು. ಆಗ ಅವರಿಗೆ ತಮ್ಮ ಅವಧಿಯ ಬಗ್ಗೆ ತಿಳಿಸಿರಲಿಲ್ಲ. ಇದೀಗ ದ್ರಾವಿಡ್​ ಮಾರ್ಗದರ್ಶನದಲ್ಲೇ ಭಾರತ ಟಿ20 ವಿಶ್ವಕಪ್​ ಆಡಲಿದೆ ಎಂದು ಜಯ್ ಶಾ ಹೇಳಿದ್ದಾರೆ.

‘ಏಕದಿನ ವಿಶ್ವಕಪ್ ಬಳಿಕ ದ್ರಾವಿಡ್ ಅವರು ಕೂಡಲೇ ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ತೆರಳಬೇಕಿತ್ತು. ಹೀಗಾಗಿ ಅವರ ಜತೆ ಮಾತನಾಡಲು ಸಮಯ ಸಿಕ್ಕಿಲಿಲ್ಲ. ಸಮಯ ಸಿಕ್ಕಾಗ ಅವರೊಂದಿಗೆ ನಾನು ಮಾತುಕತೆ ನಡೆಸುತ್ತೇನೆ. ದ್ರಾವಿಡ್​ ಮಾರ್ಗದರ್ಶನದಲ್ಲಿ ಭಾರತ ತಂಡ ವಿಶ್ವಕಪ್​ನಲ್ಲಿ ಉತ್ತಮ ಪ್ರದರ್ಶನ ತೋರುವ ವಿಶ್ವಾಸ ನಮಗಿದೆ” ಎಂದು ಜಯ್​ ಶಾ ತಿಳಿಸಿದ್ದಾರೆ.

ಇದನ್ನೂ ಓದಿ T20 World Cup 2024: ಟಿ20 ವಿಶ್ವಕಪ್​ಗೂ ರೋಹಿತ್​ ಶರ್ಮಾ ನಾಯಕ; ಖಚಿತಪಡಿಸಿದ ಜಯ್​ ಶಾ

ಇದೇ ವೇಳೆ ಐಪಿಎಲ್ ಫ್ರಾಂಚೈಸಿಗಳು ಬಿಸಿಸಿಐ ನಿಗದಿಪಡಿಸಿರುವ ವರ್ಕ್‌ಲೋಡ್ ನಿರ್ವಹಣಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದಿದ್ದಾರೆ. ಇದರರ್ಥ ಟಿ20 ವಿಶ್ವಕಪ್​ ಆಡುವ ಆಟಗಾರರು ಸಂಪೂರ್ಣವಾಗಿ ಐಪಿಎಲ್​ ಆಡಬಾರದು ಎನ್ನುವ ಎಚ್ಚರಿಕೆಯಾಗಿದೆ. ಏಕೆಂದರೆ ಐಪಿಎಲ್​ ಮುಕ್ತಾಯಗೊಂಡ ಒಂದೇ ವಾರದಲ್ಲಿ ಟಿ20 ವಿಶ್ವಕಪ್​ ಆರಂಭಗೊಳ್ಳಲಿದೆ. ಟೂರ್ನಿ ಜೂನ್​ 2ರಿಂದ 29ರ ತನಕ ನಡೆಯಲಿದೆ.

ಭಾರತ ತನ್ನ ಮೊದಲ ಪಂದ್ಯವನ್ನು ಜೂನ್‌ 5 ರಂದು ಐರ್ಲೆಂಡ್​ ವಿರುದ್ಧ ಆಡಲಿದೆ. ದ್ವಿತೀಯ ಪಂದ್ಯ ಜೂನ್‌ 9 ರಂದು ಪಾಕ್​ ವಿರುದ್ಧ ಆಡಲಿದ. ಭಾರತ ತನ್ನ ಎಲ್ಲ ಲೀಗ್‌ ಪಂದ್ಯಗಳನ್ನು ಅಮೆರಿಕದಲ್ಲೇ ಆಡದೆ. ಇದರಲ್ಲಿ ಮೂರು ಪಂದ್ಯಗಳು ನ್ಯೂಯಾರ್ಕ್‌ ಮತ್ತು ಒಂದು ಪಂದ್ಯ ಫ್ಲೋರಿಡಾದಲ್ಲಿ ನಡೆಯಲಿದೆ. ಸಾಂಪ್ರದಾಯಿಕ ಬದ್ಧ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ನಡುವಣ ಪಂದ್ಯ ಜೂನ್​ 9ರಂದು ನಡೆಯಲಿದೆ. ಪಂದ್ಯವಾಳಿಯ ಟಿಕೆಟ್​ಗಳ ಮಾರಾಟವನ್ನು ಐಸಿಸಿ ಈಗಾಗಲೇ ಆರಂಭಿಸಿದೆ.

Exit mobile version