Site icon Vistara News

ಇಂಡೋ-ಪಾಕ್ ಪಂದ್ಯ ಎಂದರೆ ವಿಶೇಷ ರೋಮಾಂಚನ; ಟಿ20 ವಿಶ್ವಕಪ್​ನಲ್ಲಿ ಹೇಗಿದೆ ಇತ್ತಂಡಗಳ ದಾಖಲೆ?

india vs pakistan

ಬೆಂಗಳೂರು: ಎರಡೂ ದೇಶಗಳ ನಡುವಿನ ಹದಗೆಟ್ಟ ಸಂಬಂಧ ಹಾಗೂ ತ್ವೇಷಮಯ ವಾತಾವರಣದ ನಡುವೆ ಬದ್ಧ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ(IND vs PAK) ತಂಡಗಳ ವಿಶ್ವಕಪ್‌(india vs pak t20 world cup) ಆಗಿರಲಿ ಇತರ ಯಾವುದೇ ಟೂರ್ನಿಯ ಪಂದ್ಯವಾಗಿರಲಿ ಇದನ್ನು ನೋಡುವುದೇ ಒಂದು ರೋಮಾಂಚನ. ಇತ್ತಂಡಗಳ ಪಂದ್ಯ ಇದೆ ಎಂದರೆ ಸಾಕು ತಿಂಗಳ ಮುಂದೆಯೇ ಅಭಿಮಾನಿಗಳಲ್ಲಿ ಕಾತರ,ಕುತೂಹಲ ಎಲ್ಲವು ಮನೆ ಮಾಡಿರುತ್ತದೆ. ಇದೀಗ ಟಿ20 ವಿಶ್ವಕಪ್​ ಟೂರ್ನಿಯ(T20 World Cup 2024) ವೇಳಾಪಟ್ಟಿ(t20 world cup 2024 schedule) ಪ್ರಕಟಗೊಂಡಿದ್ದು ಬದ್ಧ ಎದುರಾಳಿಗಳು ಜೂನ್​ 9 ರಂದು ಮುಖಾಮುಖಿಯಾಗಲಿದ್ದಾರೆ.

ಭಾರತ ಮತ್ತು ಪಾಕ್​ ಪಂದ್ಯಗಳಲ್ಲಿ ಗೆಲುವಿನ ರೂವಾರಿಗಳು ಕ್ರಿಕೆಟಿನ ದೊಡ್ಡ ಹೀರೋಗಳಾಗಿ ಮೆರೆಯುತ್ತಾರೆ. ಹಾಗೆಯೇ ಕೆಲವು ವಿಲನ್‌ಗಳೂ ಹುಟ್ಟಿ ಕೊಳ್ಳುತ್ತಾರೆ. ಪಾಕಿಸ್ತಾನ ಸೋತರೆ ಅಲ್ಲಿ ಇವರ ಪ್ರತಿಕೃತಿ ದಹನವಾಗಲಿದೆ; ಮನೆಗೆ ಕಲ್ಲು ಬೀಳಲಿದೆ. ಇದರಿಂದ ಬಚಾವಾಗುವುದು ಪಾಕ್‌ ಕ್ರಿಕೆಟಿಗರ ಪಾಲಿಗೆ ಇನ್ನೂ ದೊಡ್ಡ ಸವಾಲು. ಒಟ್ಟಾರೆ ಇತ್ತಂಡಗಳ ಮತ್ತೊಂದು ಕ್ರಿಕೆಟ್ ಯುದಕ್ಕೆ ಜೂನ್​ ತನಕ ಕಾಯಬೇಕು.

ಟಿ20 ಮುಖಾಮುಖಿ

ಉಭಯ ತಂಡಗಳು ಇದುವರೆಗೆ ಟಿ20 ಮಾದರಿಯಲ್ಲಿ 12 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಇದರಲ್ಲಿ ಭಾರತ ಗರಿಷ್ಠ 9 ಪಂದ್ಯಗಳಲ್ಲಿ ಗೆದ್ದು ಬೀಗಿದೆ. ಪಾಕಿಸ್ತಾನ ಮೂರು ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಭಾರತಕ್ಕೆ ಇದರಲ್ಲೊಂದು ಸೋಲು 2021ರಲ್ಲಿ ನಡೆದಿದ್ದ ವಿಶ್ವಕಪ್​ನಲ್ಲಿ ಎದುರಾಗಿತ್ತು. ಅದು ಕೂಡ 10 ವಿಕೆಟ್​ ಅಂತರದ ಹೀನಾಯ ಸೋಲಾಗಿತ್ತು.

ನ್ಯೂಯಾರ್ಕ್‌ನಲ್ಲಿ ಪಂದ್ಯ ನಡೆಸಲು ಕಾರಣವೇನು?

ಇತ್ತಂಡಗಳ ನಡುವಣ ಹೈವೋಲ್ಟೇಜ್ ಕದನಕ್ಕೆ ನ್ಯೂಯಾರ್ಕ್(NEW YORK) ಅಣಿಯಾಗಲಿದೆ. ಈ ಪಂದ್ಯಕ್ಕಾಗಿ 34,000 ಆಸನ ಸಾಮರ್ಥ್ಯವುಳ್ಳ ತಾತ್ಕಾಲಿಕ ಕ್ರೀಡಾಂಗಣವನ್ನು ನಿರ್ಮಿಸಲಾಗಿದೆ. ಈ ಪಂದ್ಯವನ್ನು ನ್ಯೂಯಾರ್ಕ್‌ನಲ್ಲಿಯೇ ನಡೆಸಲು ಕಾರಣವೂ ಕೂಡ ಇದೆ. ಏಕೆಂದರೆ ಈ ಪ್ರದೇಶದಲ್ಲಿ 7,11,000 ಭಾರತೀಯ ಮತ್ತು ಸುಮಾರು 1,00,000 ಪಾಕಿಸ್ತಾನ ಮೂಲದ ಜನರು ವಾಸಿಸುತ್ತಿದ್ದಾರೆ ಎನ್ನಲಾಗಿದೆ. ಹೀಗಾಗಿ ಈ ಪಂದ್ಯ ಇಲ್ಲಿ ನಡೆಸಲಾಗುತ್ತಿದೆ. ಅಲ್ಲದೆ ಭಾರತದ ಬಹುತೇಕ ಲೀಗ್​ ಪಂದ್ಯ ಕೂಡ ಇದೇ ಮೈದಾನದಲ್ಲಿ ನಡೆಯಲಿದೆ.

ಇದನ್ನೂ ಓದಿ T20 World Cup 2024: ಟಿ20 ವಿಶ್ವಕಪ್ ವೇಳಾಪಟ್ಟಿ ಪ್ರಕಟ; ಬದ್ಧ ಎದುರಾಳಿ ಭಾರತ-ಪಾಕ್​ ಪಂದ್ಯ ಯಾವಾಗ?

ಭಾರತ ತನ್ನ ಮೊದಲ ಪಂದ್ಯವನ್ನು ಜೂನ್‌ 5 ರಂದು ಐರ್ಲೆಂಡ್​ ವಿರುದ್ಧ ಆಡಲಿದೆ. ದ್ವಿತೀಯ ಪಂದ್ಯ ಜೂನ್‌ 9 ರಂದು ಪಾಕ್​ ವಿರುದ್ಧ ಆಡಲಿದ. ಭಾರತ ತನ್ನ ಎಲ್ಲ ಲೀಗ್‌ ಪಂದ್ಯಗಳನ್ನು ಅಮೆರಿಕದಲ್ಲೇ ಆಡದೆ. ಇದರಲ್ಲಿ ಮೂರು ಪಂದ್ಯಗಳು ನ್ಯೂಯಾರ್ಕ್‌ ಮತ್ತು ಒಂದು ಪಂದ್ಯ ಫ್ಲೋರಿಡಾದಲ್ಲಿ ನಡೆಯಲಿದೆ.


ಟೀಮ್​ ಇಂಡಿಯಾದ ವೇಳಾಪಟ್ಟಿ (ಗುಂಪು ಹಂತ)


ಜೂನ್ 5 – ಭಾರತ vs ಐರ್ಲೆಂಡ್, ನ್ಯೂಯಾರ್ಕ್

ಜೂನ್ 9- ಭಾರತ vs ಪಾಕಿಸ್ತಾನ, ನ್ಯೂಯಾರ್ಕ್

ಜೂನ್ 12- ಭಾರತ vs ಯುಎಸ್​ಎ, ನ್ಯೂಯಾರ್ಕ್

ಜೂನ್ 15- ಭಾರತ vs ಕೆನಡಾ, ಫ್ಲೋರಿಡಾ

ಸ್ವರೂಪ ಬದಲು

ಹಿಂದಿನ ಆವೃತ್ತಿಗಳಿಗಿಂತ 2024ರಲ್ಲಿ ನಡೆಯುವ ಟಿ20 ವಿಶ್ವಕಪ್​ ಟೂರ್ನಿ ವಿಭಿನ್ನ ಸ್ವರೂಪವನ್ನು ಹೊಂದಿದೆ. ಸೂಪರ್ 12 ತಂಡಗಳು ಸೇರಿ 20 ತಂಡಗಳನ್ನು ತಲಾ 5 ಗುಂಪುಗಳಾಗಿ ವಿಂಗಡಿಸಲಾಗಿದೆ. ಪ್ರತಿ ಗುಂಪಿನಿಂದ ಅಗ್ರ 2 ತಂಡಗಳು ಸೂಪರ್ 8ಗೆ ಅರ್ಹತೆ ಪಡೆಯುತ್ತವೆ. ಸೂಪರ್ 8 ತಂಡಗಳನ್ನು ತಲಾ ನಾಲ್ಕರ ಎರಡು ಗುಂಪುಗಳಾಗಿ ವಿಭಜಿಸಲಾಗುತ್ತದೆ. ಪ್ರತಿ ಗುಂಪಿನ ಅಗ್ರ ಎರಡು ತಂಡಗಳು ಸೆಮಿಫೈನಲ್​ಗೆ ಅರ್ಹತೆ ಪಡೆಯಲಿವೆ. ಬಳಿಕ ಫೈನಲ್ ನಡೆಯಲಿದೆ. 2022ರ ಆವೃತ್ತಿಯಲ್ಲಿ 12 ತಂಡಗಳು ಭಾಗಿಯಾಗಿದ್ದವು.

Exit mobile version