Site icon Vistara News

T20 World Cup 2024: ಟಿ20 ವಿಶ್ವಕಪ್ ವೇಳಾಪಟ್ಟಿ ಪ್ರಕಟ; ಬದ್ಧ ಎದುರಾಳಿ ಭಾರತ-ಪಾಕ್​ ಪಂದ್ಯ ಯಾವಾಗ?

T20 World Cup 2024 Schedule

ದುಬೈ: ವೆಸ್ಟ್​ ಇಂಡೀಸ್​ ಮತ್ತು ಅಮೆರಿಕ ಆತಿಥ್ಯದಲ್ಲಿ ಜೂನ್ 1 ರಿಂದ ಆರಂಭವಾಗಲಿರುವ ಪುರುಷರ ಟಿ20 ವಿಶ್ವಕಪ್​ ಟೂರ್ನಿಯ(T20 World Cup 2024) ವೇಳಾಪಟ್ಟಿಯನ್ನು ಐಸಿಸಿ ಇಂದು(ಶುಕ್ರವಾರ) ಪ್ರಕಟಿಸಿದೆ. ಪಂದ್ಯಾವಳಿ ಜೂನ್ 1 ರಿಂದ ಆರಂಭಗೊಂಡು ಜೂನ್​ 29ರ ತನಕ ನಡೆಯಲಿದೆ. ಒಟ್ಟು 55 ಪಂದ್ಯಗಳು ಇರಲಿದೆ. ಸಾಂಪ್ರದಾಯಿಕ ಬದ್ಧ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ನಡುವಣ ಪಂದ್ಯ ಜೂನ್ 9 ರಂದು ನ್ಯೂಯಾರ್ಕ್‌ನಲ್ಲಿ ನಡೆಯಲ್ಲಿದೆ.

ಭಾರತ ತನ್ನ ಮೊದಲ ಪಂದ್ಯವನ್ನು ಜೂನ್‌ 5 ರಂದು ಐರ್ಲೆಂಡ್​ ವಿರುದ್ಧ ಆಡಲಿದೆ. ದ್ವಿತೀಯ ಪಂದ್ಯ ಜೂನ್‌ 9 ರಂದು ಪಾಕ್​ ವಿರುದ್ಧ ಆಡಲಿದ. ಭಾರತ ತನ್ನ ಎಲ್ಲ ಲೀಗ್‌ ಪಂದ್ಯಗಳನ್ನು ಅಮೆರಿಕದಲ್ಲೇ ಆಡದೆ. ಇದರಲ್ಲಿ ಮೂರು ಪಂದ್ಯಗಳು ನ್ಯೂಯಾರ್ಕ್‌ ಮತ್ತು ಒಂದು ಪಂದ್ಯ ಫ್ಲೋರಿಡಾದಲ್ಲಿ ನಡೆಯಲಿದೆ.

ಒಂದೇ ಗುಂಪಿನಲ್ಲಿ ಭಾರತ-ಪಾಕ್​


ಭಾರತ ತಂಡ ‘ಎ’ ಗುಂಪಿನಲ್ಲಿ ಸ್ಥಾನ ಪಡೆದಿದೆ. ಈ ಗುಂಪಿನಲ್ಲಿ ಭಾರತದ ಬದ್ಧ ಎದುರಾಳಿ ಪಾಕಿಸ್ತಾನ, ಐರ್ಲೆಂಡ್, ಕೆನಡಾ ಮತ್ತು ಆತಿಥೇಯ ಯುಎಸ್​ಎ ತಂಡಗಳು ಕಾಣಿಸಿಕೊಂಡಿದೆ. ಒಟ್ಟು 5 ತಂಡಗಳ ನಾಲ್ಕು ಗುಂಪುಗಳನ್ನು ಮಾಡಲಾಗಿದೆ. ಟಿ20 ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ 20 ತಂಡಗಳು ಪ್ರಶಸ್ತಿಗಾಗಿ ಕಾದಾಟ ನಡೆಸಲಿದೆ.


ಟೀಮ್​ ಇಂಡಿಯಾದ ವೇಳಾಪಟ್ಟಿ (ಗುಂಪು ಹಂತ)

ಜೂನ್ 5 – ಭಾರತ vs ಐರ್ಲೆಂಡ್, ನ್ಯೂಯಾರ್ಕ್

ಜೂನ್ 9- ಭಾರತ vs ಪಾಕಿಸ್ತಾನ, ನ್ಯೂಯಾರ್ಕ್

ಜೂನ್ 12- ಭಾರತ vs ಯುಎಸ್​ಎ, ನ್ಯೂಯಾರ್ಕ್

ಜೂನ್ 15- ಭಾರತ vs ಕೆನಡಾ, ಫ್ಲೋರಿಡಾ

4 ಗುಂಪುಗಳ ತಂಡಗಳ ಪಟ್ಟಿ

ಗುಂಪು ಎ- ಭಾರತ, ಪಾಕಿಸ್ತಾನ, ಐರ್ಲೆಂಡ್, ಕೆನಡಾ, ಯುಎಸ್​ಎ.

ಗುಂಪು ಬಿ- ಇಂಗ್ಲೆಂಡ್, ಆಸ್ಟ್ರೇಲಿಯಾ, ನಮೀಬಿಯಾ, ಸ್ಕಾಟ್ಲೆಂಡ್, ಓಮನ್.

ಗುಂಪು ಸಿ- ನ್ಯೂಜಿಲ್ಯಾಂಡ್​, ಅಫಘಾನಿಸ್ತಾನ, ವೆಸ್ಟ್ ಇಂಡೀಸ್, ಉಗಾಂಡಾ, ಪಿಎನ್​ಜಿ.

ಗುಂಪು ಡಿ- ದಕ್ಷಿಣ ಆಫ್ರಿಕಾ, ಬಾಂಗ್ಲಾದೇಶ, ನೆದರ್ಲ್ಯಾಂಡ್ಸ್, ಶ್ರೀಲಂಕಾ, ನೇಪಾಳ.

ಸ್ವರೂಪ ಬದಲು

ಹಿಂದಿನ ಆವೃತ್ತಿಗಳಿಗಿಂತ ಈ ಬಾರಿ ಟೂರ್ನಿ ವಿಭಿನ್ನ ಸ್ವರೂಪವನ್ನು ಹೊಂದಿದೆ. ಸೂಪರ್ 12 ತಂಡಗಳು ಸೇರಿ 20 ತಂಡಗಳನ್ನು ತಲಾ 5 ಗುಂಪುಗಳಾಗಿ ವಿಂಗಡಿಸಲಾಗುತ್ತದೆ. ಪ್ರತಿ ಗುಂಪಿನಿಂದ ಅಗ್ರ 2 ತಂಡಗಳು ಸೂಪರ್ 8ಗೆ ಅರ್ಹತೆ ಪಡೆಯುತ್ತವೆ. ಸೂಪರ್ 8 ತಂಡಗನ್ನು ತಲಾ ನಾಲ್ಕರ ಎರಡು ಗುಂಪುಗಳಾಗಿ ವಿಭಜಿಸಲಾಗುತ್ತದೆ. ಪ್ರತಿ ಗುಂಪಿನ ಅಗ್ರ ಎರಡು ತಂಡಗಳು ಸೆಮಿಫೈನಲ್​ಗೆ ಅರ್ಹತೆ ಪಡೆಯಲಿವೆ. ಬಳಿಕ ಫೈನಲ್ ನಡೆಯಲಿದೆ.

20 ತಂಡಗಳು ಭಾಗಿ

2022ರ ಆವೃತ್ತಿಯಲ್ಲಿ 12 ತಂಡಗಳು ಭಾಗಿಯಾಗಿದ್ದವು. ಆದರೆ 2024ರ ಟೂರ್ನಿಯಲ್ಲಿ 20 ತಂಡಗಳು ಕಣಕ್ಕಿಳಿಯಲಿವೆ. ಹೀಗಾಗಿ ಅರ್ಹತಾ ಪಂದ್ಯಗಳನ್ನು ನಡೆಸಲಾಗುತ್ತದೆ. ಯುರೋಪ್​ ವಲಯದ ಅರ್ಹತಾ ಪಂದ್ಯಗಳಲ್ಲಿ ಐರ್ಲೆಂಡ್​ ಮತ್ತು ಸ್ಕಾಟ್ಲೆಂಡ್ ಈಗಾಗಲೇ ಅಗ್ರ 2 ತಂಡಗಳಾಗಿ ಅರ್ಹತೆ ಪಡೆದಿದ್ದರೆ, ಪಪುವಾ ನ್ಯೂಗಿನಿ ಕೂಡ ಪಟ್ಟಿಯಲ್ಲಿದೆ. ಈಗಾಗಲೇ ಅಗ್ರ 8 ತಂಡಗಳು ಸೇರಿದಂತೆ ಹನ್ನೆರಡು ದೇಶಗಳು ಸ್ಪರ್ಧೆಗೆ ಅರ್ಹತೆ ಪಡೆದಿವೆ. ಆಸ್ಟ್ರೇಲಿಯಾ, ಇಂಗ್ಲೆಂಡ್, ಭಾರತ, ನೆದರ್ಲ್ಯಾಂಡ್ಸ್, ನ್ಯೂಜಿಲ್ಯಾಂ​ಡ್, ಪಾಕಿಸ್ತಾನ, ದಕ್ಷಿಣ ಆಫ್ರಿಕಾ ಮತ್ತು ಶ್ರೀಲಂಕಾ. ಅಫಘಾನಿಸ್ತಾನ ಮತ್ತು ಬಾಂಗ್ಲಾದೇಶ, ವೆಸ್ಟ್ ಇಂಡೀಸ್ ಮತ್ತು ಅಮೆರಿಕದ ತಂಡಗಳು ಸ್ಥಾನ ಪಡೆದಿವೆ.

Exit mobile version