Site icon Vistara News

T20 World Cup 2024: ನ್ಯೂಯಾರ್ಕ್​ಗೆ ಪ್ರಯಾಣಿಸಿದ ಮೊದಲ ಬ್ಯಾಚ್​; ವಿರಾಟ್​ ಕೊಹ್ಲಿ ಗೈರು, ಅಭ್ಯಾಸ ಪಂದ್ಯಕ್ಕೂ ಅನುಮಾನ

T20 World Cup 2024

T20 World Cup 2024: Virat Kohli likely to miss India's only warm-up match against Bangladesh

ಮುಂಬಯಿ: ಜೂನ್​ 1ರಿಂದ ಆರಂಭಗೊಳ್ಳಲಿರುವ ಟಿ20 ವಿಶ್ವಕಪ್​ ಟೂರ್ನಿಗೆ(T20 World Cup 2024) ಭಾರತ ತಂಡದ(Team India) ಮೊದಲ ಬ್ಯಾಚ್ ನ್ಯೂಯಾರ್ಕ್​ಗೆ ಪ್ರಯಾಣಿಸಿದೆ. ಶನಿವಾರ ರಾತ್ರಿ ಮುಂಬೈ ವಿಮಾನ ನಿಲ್ದಾಣದಿಂದ ತಂಡದ ನಾಯಕ ರೋಹಿತ್​, ಶರ್ಮ, ಕೋಚ್ ರಾಹುಲ್​ ದ್ರಾವಿಡ್​, ರವೀಂದ್ರ ಜಡೇಜಾ, ಕುಲ್​ದೀಪ್​ ಯಾದವ್​, ಮೊಹಮ್ಮದ್ ಸಿರಾಜ್​ ಸೇರಿ ಹಲವು ಆಟಗಾರರು ಮತ್ತು ಕೋಚಿಂಗ್​ ಸಿಬ್ಬಂದಿಗಳು ಪ್ರಯಾಣಿಸಿದರು. ಆದರೆ ವಿರಾಟ್​ ಕೊಹ್ಲಿ ಮಾತ್ರ ಪ್ರಯಾಣಿಸಿಲ್ಲ.

ವಿರಾಟ್​ ಕೊಹ್ಲಿ ಅವರು ಮೇ 30ಕ್ಕೆ ಏಕಾಂಗಿಯಾಗಿ ನ್ಯೂಯಾರ್ಕ್​ಗೆ ಪ್ರಯಾಣಿಸಲಿದ್ದಾರೆ ಎಂದು ವರದಿಯಾಗಿದೆ, ಜತೆಗೆ ಜೂನ್​ 1ರಂದು ನಡೆಯುವ ಬಾಂಗ್ಲಾದೇಶ ವಿರುದ್ಧದ ಅಭ್ಯಾಸ ಪಂದ್ಯಕ್ಕೂ ಕೊಹ್ಲಿ ಅಲಭ್ಯರಾಗಲಿದ್ದಾರೆ ಎನ್ನಲಾಗಿದೆ. “ಕೊಹ್ಲಿ ಅವರು ತಡವಾಗಿ ತಂಡವನ್ನು ಸೇರಿಕೊಳ್ಳುತ್ತಾರೆ ಎಂದು ನಮಗೆ ಮೊದಲೇ ತಿಳಿಸಿದ್ದರು. ಇದೇ ಕಾರಣಕ್ಕೆ ಬಿಸಿಸಿಐ ಅವರ ವೀಸಾವನ್ನು ಕಾಯ್ದಿರಿಸಿದೆ. ಅವರು ಮೇ 30 ರ ಮುಂಜಾನೆ ನ್ಯೂಯಾರ್ಕ್‌ಗೆ ಪ್ರಯಾಣಿಸುವ ನಿರೀಕ್ಷೆಯಿದೆ. ಅವರ ಮನವಿಗೆ ಬಿಸಿಸಿಐ ಒಪ್ಪಿಗೆ ನೀಡಿದೆ” ಎಂದು ಬಿಸಿಸಿಐ ಅಧಿಕಾರಿಯೊಬ್ಬರು ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

ಕೊಹ್ಲಿ ಅಲ್ಲದೆ, ವಿಕೆಟ್ ಕೀಪರ್-ಬ್ಯಾಟರ್ ಸಂಜು ಸ್ಯಾಮ್ಸನ್ ಮತ್ತು ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಕೂಡ ತಡವಾಗಿ ತಂಡವನ್ನು ಸೇರಿಕೊಳ್ಳಲಿದ್ದಾರೆ. ದುಬೈನಲ್ಲಿ ವೈಯಕ್ತಿಕ ಕೆಲಸದ ನಿಮಿತ್ತ ತಂಡ ಸೇರಲು ತಡವಾಗಲಿದೆ ಎಂದು ಸಂಜು ಈಗಾಗಲೇ ಬಿಸಿಸಿಐಗೆ ತಿಳಿಸಿರುವ ಕಾರಣ ಬಿಸಿಸಿಐ ಸ್ಯಾಮ್ಸನ್​ಗೆ ತಡವಾಗಿ ತಂಡ ಸೇರಲು ಅವಕಾಶ ನೀಡಿದೆ. ಭಾರತೀಯ ಆಟಗಾರರ ದ್ವಿತೀಯ ಬ್ಯಾಚ್ ಸೋಮವಾರ ಹೊರಡಲಿದೆ.

ಭಾರತ ತನ್ನ ಮೊದಲ ಲೀಗ್​ ಪಂದ್ಯವನ್ನು ಜೂನ್‌ 5 ರಂದು ಐರ್ಲೆಂಡ್​ ವಿರುದ್ಧ ಆಡಲಿದೆ. ಭಾರತವು ತನ್ನ ಗುಂಪು ಹಂತದ ಎಲ್ಲಾ ಪಂದ್ಯಗಳನ್ನು ಅಮೆರಿಕದಲ್ಲೇ ಆಡಲಿದೆ. ಲೀಗ್​ ಮುಕ್ತಾಯದ ಬಳಿಕ ಮುಂದಿನ ಹಂತಕ್ಕೆ ಅರ್ಹತೆ ಪಡೆದರೆ, ಸೂಪರ್ 8 ಪಂದ್ಯಗಳನ್ನು ಸಹ ಇಲ್ಲೇ ಆಡಲಿದೆ.

ಇದ್ನನೂ ಓದಿ T20 World Cup 2024: ಕೊನೆಗೂ ಟಿ20 ವಿಶ್ವಕಪ್​ಗೆ ತಂಡ ಪ್ರಕಟಿಸಿದ ಭಾರತದ ಬದ್ಧ ಎದುರಾಳಿ ಪಾಕಿಸ್ತಾನ

ಟೂರ್ನಿಯಲ್ಲಿ ಒಟ್ಟು 55 ಪಂದ್ಯಗಳು ನಡೆಯಲಿವೆ. ಜೂನ್ 1ರಿಂದ 18ರವರೆಗೆ ಗುಂಪು ಹಂತದಲ್ಲಿ 40 ಪಂದ್ಯಗಳು ನಡೆಯಲಿವೆ. ಜೂನ್ 19 ರಿಂದ 24 ರವರೆಗೆ ಸೂಪರ್ 8 ಪಂದ್ಯಗಳು ನಡೆಯಲಿವೆ. ಸಾಂಪ್ರದಾಯಿಕ ಬದ್ಧ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ನಡುವಣ ಪಂದ್ಯ ಜೂನ್ 9 ರಂದು ನ್ಯೂಯಾರ್ಕ್‌ನಲ್ಲಿ ನಡೆಯಲಿದೆ.

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್​ ಕೀಪರ್​), ಸಂಜು ಸ್ಯಾಮ್ಸನ್ (ವಿಕೆಟ್​ ಕೀಪರ್​), ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಯುಜ್ವೇಂದ್ರ ಚಾಹಲ್, ಅರ್ಶದೀಪ್​ ಸಿಂಗ್​, ಜಸ್​ಪ್ರೀತ್​ ಬುಮ್ರಾ, ಮೊಹಮ್ಮದ್​ ಸಿರಾಜ್. ಮೀಸಲು ಆಟಗಾರರು ಶುಭಮನ್ ಗಿಲ್, ರಿಂಕು ಸಿಂಗ್, ಖಲೀಲ್ ಅಹ್ಮದ್ ಮತ್ತು ಅವೇಶ್ ಖಾನ್.

Exit mobile version