Site icon Vistara News

T20 World Cup 2026: ಆತಿಥೇಯ ಭಾರತಕ್ಕೆ ಬೆದರಿಕೆಯೊಡ್ಡಿದ ಪಾಕಿಸ್ತಾನ ಕ್ರಿಕೆಟ್​ ಮಂಡಳಿ​

T20 World Cup 2026: Pakistan to boycott 2026 T20 World Cup in India

T20 World Cup 2026: Pakistan to boycott 2026 T20 World Cup in India

ನವದೆಹಲಿ: ಮುಂದಿನ ವರ್ಷ ಪಾಕಿಸ್ತಾನದಲ್ಲಿ ನಡೆಯುವ ಚಾಂಪಿಯನ್ಸ್​ ಟ್ರೋಫಿಯಲ್ಲಿ(Champions Trophy 2025) ಆಡಲು ಭಾರತ ತಂಡ ಪಾಕಿಸ್ತಾನಕ್ಕೆ ತೆರಳಲಿದೆಯಾ? ಅಥವಾ ಟೂರ್ನಿಯಿಂದ ಹಿಂದೆ ಸರಿಯಲಿದೆಯಾ? ಹೀಗೆ ಕಳೆದ ಹಲವು ದಿನಗಳಿಂದ ಚರ್ಚೆಗಳು ನಡೆಯುತ್ತಿವೆ. ಟೂರ್ನಿಯನ್ನು ಹೈಬ್ರೀಡ್​ ಮಾದರೊಯಲ್ಲಿ ನಡೆಸುವಂತೆ ಬಿಸಿಸಿಐ, ಐಸಿಸಿಗೆ ಒತ್ತಡ ಹಾಕುತ್ತಿದೆ ಎಂದು ಕೂಡ ವರದಿಯಾಗಿತ್ತು. ಇದೀಗ ಭಾರತ ಪಾಕ್​ಗೆ ತೆರಳದೇ ಇದ್ದರೆ, 2026ರಲ್ಲಿ(T20 World Cup 2026) ನಡೆಯುವ ಟಿ20 ವಿಶ್ವಕಪ್​ ಟೂರ್ನಿಯಿಂದ ಪಾಕ್​ ಹಿಂದೆ ಸರಿಯಲಿದೆ(Pakistan to boycott 2026 T20 World Cup) ಎಂದು ವರದಿಯಾಗಿದೆ.

2026ರ ಟಿ20 ವಿಶ್ವಕಪ್​ ಟೂರ್ನಿಗೆ ಭಾರತ ಮತ್ತು ಶ್ರೀಲಂಕಾ ಜಂಟಿ ಆತಿಥ್ಯ ವಹಿಸಿಕೊಂಡಿದೆ. ಭಾರತ ತಂಡ ಪಾಕ್​ ನೆಲದಲ್ಲಿ ಚಾಂಪಿಯನ್ಸ್​ ಟ್ರೋಫಿ ಆಡದೇ ಹೋದರೆ, ಭಾರತದಲ್ಲಿ ನಡೆಯುವ ಟಿ20 ವಿಶ್ವಕಪ್​ ಪಂದ್ಯವನ್ನು ಆಡಲು ಪಾಕ್ ತಂಡ ಸಿದ್ಧವಿಲ್ಲ ಎಂದು ಪಿಸಿಬಿ ಹೇಳಿರುವುದಾಗಿ ವರದಿಯಾಗಿದೆ.

ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ಅವರು ಭಾರತ ತಂಡ ಪಾಕ್​ಗೆ ಹೋಗುವುದಿಲ್ಲ ಎಂಬ ಸುದ್ದಿಯನ್ನು ತಳ್ಳಿಹಾಕಿದ್ದಾರೆ. ಈ ಬಗ್ಗೆ ಸ್ಪಷ್ಟನೆ ನೀಡಿರುವ ಅವರು ಬಿಸಿಸಿಐ ಅಥವಾ ಸರ್ಕಾರ ಈ ಬಗ್ಗೆ ಇನ್ನೂ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಹೇಳಿದ್ದಾರೆ.

‘ಮುಂದಿನ ವರ್ಷ ನಡೆಯುವ ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಭಾರತ ತಂಡ ಭಾಗವಹಿಸುವುದಿಲ್ಲ ಎಂದು ಕೆಲವು ವರದಿಗಳನ್ನು ನೋಡಿದ್ದೇನೆ. ಜತೆಗೆ ಭಾರತದ ಪಂದ್ಯಗಳನ್ನು ತಟಸ್ಥ ಸ್ಥಳಗಳಲ್ಲಿ ನಡೆಸುವಂತೆ ಬಿಸಿಸಿಐ, ಐಸಿಸಿ ಬಳಿ ಕೇಳಿಕೊಂಡಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಆದರೆ, ಬಿಸಿಸಿಐ ಇನ್ನೂ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ’ ಎಂದು ಹೇಳುವ ಮೂಲಕ ಶುಕ್ಲಾ ಈ ವಿಷಯಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ Champions Trophy 2025: ಚಾಂಪಿಯನ್ಸ್‌ ಟ್ರೋಫಿಯಿಂದ ಭಾರತ ಹಿಂದೆ ಸರಿದರೆ ಯಾವ ತಂಡಕ್ಕೆ ಸಿಗಲಿದೆ ಅವಕಾಶ?

ನವೆಂಬರ್ 2008ರ ಮುಂಬೈ ಭಯೋತ್ಪಾದಕ ದಾಳಿಯಲ್ಲಿ 150 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ ನಂತರ ಭಾರತವು ಪಾಕಿಸ್ತಾನದೊಂದಿಗೆ ದ್ವಿಪಕ್ಷೀಯ ಕ್ರಿಕೆಟ್ ಆಡಿಲ್ಲ. ಜೂನ್-ಜುಲೈ 2008 ರಲ್ಲಿ ಏಷ್ಯಾ ಕಪ್ ಸಮಯದಲ್ಲಿ ಭಾರತೀಯ ಕ್ರಿಕೆಟ್ ತಂಡವು ಕೊನೆಯ ಬಾರಿಗೆ ಪಾಕಿಸ್ತಾನಕ್ಕೆ ಪ್ರಯಾಣಿಸಿತ್ತು. ಭಾರತ ತಂಡವು ಪ್ರಯಾಣಿಸಲು ನಿರಾಕರಿಸಿದ ನಂತರ, ಕಳೆದ ವರ್ಷದ ಏಷ್ಯಾಕಪ್ ಅನ್ನು ಹೈಬ್ರಿಡ್ ಮಾದರಿಯಲ್ಲಿ ಆಯೋಜಿಸಲಾಯಿತ್ತು. ಕೇವಲ ನಾಲ್ಕು ಪಂದ್ಯಗಳನ್ನು ಪಾಕಿಸ್ತಾನದಲ್ಲಿ ನಡೆಸಿ ಉಳಿದ ಪಂದ್ಯಗಳು ಶ್ರೀಲಂಕಾದಲ್ಲಿ ನಡೆದಿದ್ದವು. ಭಾರತ ಎಲ್ಲ ಪಂದ್ಯಗಳನ್ನು ಲಂಕಾದಲ್ಲಿ ಆಡಿತ್ತು.

ಚಾಂಪಿಯನ್ಸ್​ ಟ್ರೋಫಿಯ ಯಶಸ್ಸಿಗೆ ಪಿಸಿಬಿ ಬದ್ಧವಾಗಿದ್ದರೂ, ಭದ್ರತಾ ಕಾರಣಗಳಿಂದಾಗಿ ಭಾರತವು ಭಾಗವಹಿಸದಿದ್ದರೆ, ಆಗ ಏಷ್ಯಾ ಕಪ್​ನಂತೆ​ ಹೈಬ್ರಿಡ್ ಮಾದರಿಯ ಮೊರೆ ಹೋಗಬೇಕಿದೆ. ಆದರೆ ಸ್ವತಂತ್ರ ಏಜೆನ್ಸಿಯೊಂದಿಗೆ ಸಮಾಲೋಚಿಸಿ ಸಮಗ್ರ ಭದ್ರತಾ ಮೌಲ್ಯಮಾಪನವನ್ನು ನಡೆಸಿ ಪಾಕಿಸ್ತಾನದಲ್ಲಿಯೇ ಟೂರ್ನಿ ನಡೆಸಿ ಎಂದು ಪಿಸಿಬಿ ಹೇಳುವ ಸಾಧ್ಯತೆಗಳಿವೆ. ಐಸಿಸಿ ಈ ವಿನಂತಿಯನ್ನು ಒಪ್ಪಿಕೊಂಡಿದೆ ಎಂದು ಇತ್ತೀಚಿನ ವರದಿಗಳು ಹೇಳಿವೆ. ಭಾರತ ಪಾಕ್​ನಲ್ಲಿ ಆಡಲಿದೆಯಾ ಅಥವಾ ಬಿಸಿಸಿಐ ಒತ್ತಾಯಕ್ಕೆ ಮಣಿದು ಟೂರ್ನಿ ಪಾಕ್​ ನಿಂದ ಶಿಫ್ಟ್​ ಆಗಲಿದೆಯಾ ಎನ್ನುವುದನ್ನು ಕಾದು ನೋಡಬೇಕಿದೆ.

Exit mobile version