Site icon Vistara News

T20 World Cup: ಟಿ20 ವಿಶ್ವಕಪ್​ನಲ್ಲಿ ಸ್ಥಾನ ಪಡೆದ ಚಹಲ್​ಗೆ ಪತ್ನಿಯಿಂದ ವಿಶೇಷ ಹಾರೈಕೆ

T20 World Cup

ಮುಂಬಯಿ: ಅಮೆರಿಕ ಮತ್ತು ವೆಸ್ಟ್​ ಇಂಡೀಸ್​ ಜಂಟಿ ಆತಿಥ್ಯದಲ್ಲಿ ಜೂನ್​ 1ರಿಂದ 29ರ ತನಕ ನಡೆಯುವ ಐಸಿಸಿ ಪುರುಷರ ಟಿ20 ವಿಶ್ವಕಪ್​ಗೆ(T20 World Cup) ಬಿಸಿಸಿಐ ಮಂಗಳವಾರ ಭಾರತ ತಂಡವನ್ನು ಪ್ರಕಟಿಸಿತ್ತು. ಈ ತಂಡದಲ್ಲಿ ಸ್ಪಿನ್ನರ್​ ಯಜುವೇಂದ್ರ ಚಹಲ್(Yuzvendra Chahal)​ ಕೂಡ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಇದೇ ಖುಷಿಯಲ್ಲಿ ಚಹಲ್​ ಪತ್ನಿ ಧನಶ್ರೀ ವರ್ಮಾ(Dhanashree Verma) ಇನ್​ಸ್ಟಾಗ್ರಾಮ್​ನಲ್ಲಿ ಪೋಸ್ಟ್​ ಮಾಡುವ ಮೂಲಕ ಪತಿಯ ಮೇಲಿನ ಪ್ರೀತಿಯನ್ನು ವ್ಯಕ್ತಪಡಿಸಿದ್ದಾರೆ. ‘ಕಮ್​ ಆನ್ ಯುಜಿ​… ಹಿ ಈಸ್ ಬ್ಯಾಕ್ ಎಂದು ಬರೆದುಕೊಂಡಿದ್ದಾರೆ.

ಯಜುವೇಂದ್ರ ಚಹಲ್​ ಮತ್ತು ಧನಶ್ರೀ ವರ್ಮಾ ಮಧ್ಯೆ ಎಲ್ಲವೂ ಸರಿಯಿಲ್ಲ. ಶೀಘ್ರದಲ್ಲೇ ಈ ಜೋಡಿ ದೂರವಾಗಲಿದ್ದಾರೆ ಎಂದು ಹಲವು ಬಾರಿ ಸಾಮಾಜಿಕ ಜಾಲತಾಣದಲ್ಲಿ ಭಾರಿ ಸುದ್ದಿಯಾಗಿತ್ತು. ಆದರೆ ಈ ಜೋಡಿ ಮಾತ್ರ ಈ ಮಾತಿಗೆ ಕ್ಯಾರೆ ಎನ್ನದೆ ನಮ್ಮ ಸಂಸಾರದ ಮಧ್ಯೆ ಯಾವುದೇ ಬಿರುಕು ಮೂಡಿಲ್ಲ ಎಂದು ಹಲವು ಬಾರಿ ತೋರಿಸಿಕೊಟ್ಟಿದ್ದಾರೆ. ಇಬ್ಬರೂ ಕೂಡ ಹಲವು ಬಾರಿ ವಿದೇಶ ಪ್ರವಾಸದಲ್ಲಿ ಜಾಲಿ ಮೂಡ್​ನಲ್ಲಿರುವ ಫೋಟೊಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.


ಇತ್ತೀಚೆಗೆ 150ನೇ ಐಪಿಎಲ್​ ಪಂದ್ಯವನ್ನಾಡಿದ ಚಹಲ್​ಗೆ ಪತ್ನಿ ಭಾವುಕ ವಿಡಿಯೊ ಸಂದೇಶದ ಮೂಲಕ ಹಾರೈಸಿದ್ದರು. “ಹೇ ಯುಜಿ, ನಿಮ್ಮ 150ನೇ ಐಪಿಎಲ್ ಪಂದ್ಯಕ್ಕೆ ಅಭಿನಂದನೆಗಳು. ನಿವು ಈ ಹಿಂದೆ ಆಡಿದ ತಂಡಕ್ಕೆ ಮತ್ತು ಈಗ ಆಡುತ್ತಿರುವ ರಾಜಸ್ಥಾನ್ ರಾಯಲ್ಸ್‌ಗೆ ನೀವು ಅಪಾರ ಕೊಡುಗೆ ನೀಡಿದ್ದೀರಿ. ನಿಮ್ಮ ಬಗ್ಗೆ ನನಗೆ ಯಾವತ್ತೂ ಹೆಮ್ಮೆ ಇದೆ. ನೀವು ನಿಮ್ಮ ಆಟವನ್ನು ಹೇಗೆ ಆಡುತ್ತೀರಿ ಮತ್ತು ಪ್ರತಿ ಬಾರಿ ನೀವು ಕಮ್​ಬ್ಯಾಕ್​ ಮಾಡುವ ರೀತಿ ನಿಜಕ್ಕೂ ಮೆಚ್ಚಲೇ ಬೇಕು. ಯಾವುದೇ ಪಂದ್ಯ ಒತ್ತಡದಲ್ಲಿದ್ದಾಗಲೆಲ್ಲಾ ವಿಕೆಟ್​ ತೆಗೆಯಬಲ್ಲ ಬೌಲರ್​ ನೀವಾಗಿದ್ದೀರಿ. ನಾನು ನಿಮ್ಮ ದೊಡ್ಡ ಚೀರ್‌ಲೀಡರ್ ಮತ್ತು ನಾನು ಯಾವಾಗಲೂ 100 ಪ್ರತಿಶತದಷ್ಟು ನಿಮ್ಮನ್ನು ಬೆಂಬಲಿಸುತ್ತೇನೆ. ನಿಮ್ಮ 150 ನೇ ಐಪಿಎಲ್ ಪಂದ್ಯವನ್ನು ಆನಂದಿಸಿ” ಎಂದು ಶುಭ ಹಾರೈಸಿದ್ದರು. ವಿಡಿಯೊವನ್ನು ರಾಜಸ್ಥಾನ್​ ರಾಯಲ್ಸ್(Rajasthan Royals)​ ತನ್ನ ಅಧಿಕೃತ ಟ್ವಿಟರ್​ ಎಕ್ಸ್​ನಲ್ಲಿ ಪೋಸ್ಟ್​ ಮಾಡಿತ್ತು.

ಇದನ್ನೂ ಓದಿ T20 World Cup 2024: ಟಿ20 ವಿಶ್ವಕಪ್​ಗೆ ತಂಡ ಪ್ರಕಟಿಸಿದ ಆಸ್ಟ್ರೇಲಿಯಾ; ಅನುಭವಿ ಸ್ಮಿತ್​ಗೆ ಅವಕಾಶವಿಲ್ಲ

ಏಷ್ಯಾ ಕಪ್​ ಮತ್ತು ಏಕದಿನ ವಿಶ್ವಕಪ್​ನಲ್ಲಿ ಅವಕಾಶ ಸಿಗದ ಸ್ಪಿನ್ನರ್ ಯಜುವೇಂದ್ರ ಚಾಹಲ್ ಅವರಿಗೆ ಐಪಿಎಲ್​ ಪ್ರದರ್ಶನ ನೋಡಿ ಟಿ20ಯಲ್ಲಿ ಅವಕಾಶ ನೀಡಲಾಗಿದೆ. ಚಹಲ್​ ಇದುವರೆಗೆ ಭಾರತ ಪರ 72 ಏಕದಿನ ಪಂದ್ಯಗಳಿಂದ 121 ವಿಕೆಟ್​, 80 ಟಿ20 ಆಡಿ 96 ವಿಕೆಟ್​ ಕಡೆವಿದ್ದಾರೆ. ಇದುವರೆಗೂ ಟೆಸ್ಟ್​ ಕ್ರಿಕೆಟ್​ ಆಡಿಲ್ಲ.

ಟಿ20 ವಿಶ್ವಕಪ್​ನಲ್ಲಿ ಭಾರತ ತನ್ನ ಮೊದಲ ಪಂದ್ಯವನ್ನು ಜೂನ್‌ 5 ರಂದು ಐರ್ಲೆಂಡ್​ ವಿರುದ್ಧ ಆಡಲಿದೆ. ದ್ವಿತೀಯ ಪಂದ್ಯ ಜೂನ್‌ 9 ರಂದು ಪಾಕ್​ ವಿರುದ್ಧ ಆಡಲಿದ. ಭಾರತ ತನ್ನ ಎಲ್ಲ ಲೀಗ್‌ ಪಂದ್ಯಗಳನ್ನು ಅಮೆರಿಕದಲ್ಲೇ ಆಡದೆ. ಇದರಲ್ಲಿ ಮೂರು ಪಂದ್ಯಗಳು ನ್ಯೂಯಾರ್ಕ್‌ ಮತ್ತು ಒಂದು ಪಂದ್ಯ ಫ್ಲೋರಿಡಾದಲ್ಲಿ ನಡೆಯಲಿದೆ.

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್​ ಕೀಪರ್​), ಸಂಜು ಸ್ಯಾಮ್ಸನ್ (ವಿಕೆಟ್​ ಕೀಪರ್​), ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಯುಜ್ವೇಂದ್ರ ಚಾಹಲ್, ಅರ್ಶದೀಪ್​ ಸಿಂಗ್​, ಜಸ್​ಪ್ರೀತ್​ ಬುಮ್ರಾ, ಮೊಹಮ್ಮದ್​ ಸಿರಾಜ್. ಮೀಸಲು ಆಟಗಾರರು ಶುಭಮನ್ ಗಿಲ್, ರಿಂಕು ಸಿಂಗ್, ಖಲೀಲ್ ಅಹ್ಮದ್ ಮತ್ತು ಅವೇಶ್ ಖಾನ್.

Exit mobile version