ಬಾರ್ಬಡೋಸ್: ದಕ್ಷಿಣ ಆಫ್ರಿಕಾ ತಂಡ ತನ್ನ ಚೋಕರ್ಸ್ ಹಣೆಪಟ್ಟಿಯನ್ನು ಕಳಚಿಕೊಳ್ಳಲು ಇನ್ನೊಂದೆ ಹೆಜ್ಜೆ ಮಾತ್ರ ಬಾಕಿ ಉಳಿದಿದೆ. ನಾಳೆ ನಡೆಯುವ ಟಿ20 ವಿಶ್ವಕಪ್ ಟೂರ್ನಿಯ ಫೈನಲ್(T20 World Cup Final) ಪಂದ್ಯದಲ್ಲಿ ಭಾರತದ(South Africa vs India Final) ಸವಾಲು ಎದುರಿಸಲಿದೆ. 32 ವರ್ಷಗಳ ಬಳಿಕ ಐಸಿಸಿ ಟೂರ್ನಿಯಲ್ಲಿ ಮೊದಲ ಬಾರಿಗೆ ಅಜೇಯವಾಗಿ ಫೈನಲ್ ಪ್ರವೇಶಿಸಿರುವವ ಹರಿಣ ಪಡೆಗೆ ಈ ಬಾರಿಯಾದರೂ ಕಪ್ ಗೆಲ್ಲುವ ಭಾಗ್ಯ ಇದೆಯಾ ಎಂದು ಕಾದು ನೋಡಬೇಕಿದೆ. ಈ ಹಿಂದೆ ಆಡಿದ ಎಲ್ಲ 7(ಏಕದಿನ, ಟಿ20) ಸೆಮಿಫೈನಲ್ ಪಂದ್ಯದಲ್ಲಿಯೂ ಸೋಲು ಕಂಡಿತ್ತು.
ದಕ್ಷಿಣ ಆಫ್ರಿಕಾ ತಂಡ(South Africa) 1992ರಲ್ಲಿ ಸಿಡ್ನಿಯಲ್ಲಿ ನಡೆದ ಏಕದಿನ ವಿಶ್ವಕಪ್ನಲ್ಲಿ ಮೊದಲ ಬಾರಿಗೆ ಸೆಮಿಫೈನಲ್ ಪ್ರವೇಶಿಸಿತ್ತು. ಇನ್ನೇನು ಪಂದ್ಯ ಗೆಲ್ಲುತ್ತದೆ ಎನ್ನುವಷ್ಟರಲ್ಲಿ ಮಳೆ ಸುರಿದು ಪಂದ್ಯ ಸ್ಥಗಿತಗೊಂಡಿತು. 13 ಎಸೆತಗಳಲ್ಲಿ ಗೆಲುವಿಗೆ 22 ರನ್ ಬೇಕಿತ್ತು. ಮತ್ತೆ ಆಟ ಮುಂದುವರಿದಾಗ ಮೊಟ್ಟ ಮೊದಲ ಬಾರಿಗೆ ಪರಿಚವಾಗಿದ್ದ ಡಕ್ವರ್ತ್ ಲೂಯಿಸ್ ನಿಯದ ಪ್ರಕಾರ ಹರಿಣ ಪಡೆಗೆ 1 ಎಸೆತದಲ್ಲಿ 22 ರನ್ ಗಳಿಸುವ ಗುರಿ ನೀಡಲಾಯಿತು. ಈ ಪಂದ್ಯ ಸೋತ ಬಳಿಕ 1999ರಲ್ಲಿ ಬರ್ಮಿಂಗ್ಹ್ಯಾಮ್ನಲ್ಲಿ ಆಸ್ಟ್ರೇಲಿಯ ವಿರುದ್ದದ ಪಂದ್ಯ ಟೈ ಆಗಿತ್ತು. ಆ ಪಂದ್ಯದಲ್ಲಿ ಆಸ್ಟ್ರೇಲಿಯ ಲೆಕ್ಕಾಚಾರದ ಮೂಲಕ ಫೈನಲ್ ಪ್ರವೇಶಿಸಿ ಕಪ್ ಗೆದ್ದಿತ್ತು. 2007 ರಲ್ಲಿ ಆಸ್ಟ್ರೇಲಿಯ ವಿರುದ್ಧ ಗ್ರಾಸ್ ಐಲೆಟ್ ನಲ್ಲಿ 7 ವಿಕೆಟ್ ಸೋಲು ಅನುಭವಿಸಿ ಆಘಾತಕ್ಕೆ ಗುರಿಯಾಗಿತ್ತು. 2015 ರಲ್ಲಿ ನ್ಯೂಜಿಲ್ಯಾಂಡ್ ವಿರುದ್ಧ ಆಕ್ಲೆಂಡ್ ನಲ್ಲಿ 4 ವಿಕೆಟ್ ಸೋಲು ಅನುಭವಿಸಿ ಚೋಕರ್ಸ್ ಎಂದು ಮತ್ತೆ ಕರೆಸಿಕೊಳ್ಳುವ ಸ್ಥಿತಿ ಹರಿಣಗಳ ಪಾಲಿಗೆ ಬಂದೊದಗಿತ್ತು.
ಆದರೆ, ಈ ಬಾರಿಯ ವಿಶ್ವಕಪ್ ಟೂರ್ನಿಯಲ್ಲಿ ದಕ್ಷಿಣ ಆಫ್ರಿಕಾದ ಪ್ರದರ್ಶನ ಮತ್ತು ಅದೃಷ್ಟ ನೋಡುವಾಗ ಪ್ರಶಸ್ತಿ ಗೆದ್ದು ಚೋಕರ್ಸ್ ಹಣೆಪಟ್ಟಿಯನ್ನು ಕಳಚುವ ಸಾಧ್ಯತೆಯೊಂದು ಕಂಡುಬಂದಿದೆ. ಏಕೆಂದರೆ ಪ್ರತಿ ಬಾರಿ ಮಳೆಯಿಂದ ಹಿನ್ನಡೆ ಅನುಭವಿಸುವ ದಕ್ಷಿಣ ಆಫ್ರಿಕಾ ಈ ಬಾರಿ ವರದಾನವಾಗಿಯೇ ಪರಿಣಮಿಸಿದೆ. ಜತೆಗೆ ಸೋಲುವ ಪಂದ್ಯವನ್ನು ಕೂಡ ಅಚ್ಚರಿ ಎಂಬಂತೆ 1 ರನ್ನಿಂದ ಗೆದ್ದ ನಿದರ್ಶನ ಕೂಡ ಇದೆ. ಇದನೆಲ್ಲ ನೋಡುವಾಗ ಐಡೆನ್ ಮಾರ್ಕ್ರಮ್ ಐತಿಹಾಸಿಕ ಕಪ್ ಎತ್ತಿ ಹಿಡಿಯುವ ಸಾಧ್ಯತೆಯೊಂದು ಕಂಡುಬಂದಿದೆ.
ಇದನ್ನೂ ಓದಿ IND Vs SA T20 WC Final: ಫೈನಲ್ ಪಂದ್ಯಕ್ಕೂ ಮಳೆ ಭೀತಿ; ಪಂದ್ಯ ರದ್ದಾದರೆ ವಿಜೇತರ ನಿರ್ಧಾರ ಹೇಗೆ?
ಡಿ ಕಾಕ್ ಹೊರತುಪಡಿಸಿ ಉಳಿದ ಯಾವುದೇ ಬ್ಯಾಟರ್ಗಳು ಇದುವರೆಗೂ ನಿರೀಕ್ಷತ ಬ್ಯಾಟಿಂಗ್ ಪ್ರದರ್ಶನ ತೋರದಿದ್ದರು. ಕೂಡ ಬೌಲಿಂಗ್ ಮತ್ತು ಫೀಲ್ಡಿಂಗ್ನಲ್ಲಿ ಉತ್ಕೃಷ್ಟ ಮಟ್ಟದ ಪ್ರದರ್ಶನ ತೋರುವ ಮೂಲಕ ಪಂದ್ಯವನ್ನು ಗೆದ್ದಿದ್ದಾರೆ. ಆದರೆ ಫೈನಲ್ ಪಂದ್ಯದಲ್ಲಿ ಎಲ್ಲರು ಬ್ಯಾಟಿಂಗ್ ನಡೆಸುವ ಅಗತ್ಯವಿದೆ. ಏಕೆಂದರೆ ಇಲ್ಲಿ ಸೋತರೆ ಮತ್ತೊಂದು ಪಂದ್ಯವಿಲ್ಲ.