Site icon Vistara News

T20 World Cup: ಕೋಚ್ ದ್ರಾವಿಡ್, ರೋಹಿತ್​​ ಜತೆ ಸಭೆ ನಡೆಸಿದ ಆಯ್ಕೆ ಸಮಿತಿ; ಪಾಂಡ್ಯಗೆ ಹೆಚ್ಚಿದ ಚಿಂತೆ ​

T20 World Cup

ಮುಂಬೈ: ಏಪ್ರಿಲ್ ಕೊನೆಯ ವಾರದಲ್ಲಿ ಟಿ20 ವಿಶ್ವಕಪ್​ಗೆ(T20 World Cup) ಭಾರತ ತಂಡ ಪ್ರಕಟಗೊಳ್ಳಲಿದೆ ಎಂದು ಕೆಲ ದಿನಗಳ ಹಿಂದೆಯೇ ವರದಿಯಾಗಿತ್ತು. ಐಪಿಎಲ್​ನಲ್ಲಿ ಆಟಗಾರರು ತೋರುವ ಪ್ರದರ್ಶನದ ಆಧಾರದಲ್ಲಿ ತಂಡವನ್ನು ಆಯ್ಕೆ ಮಾಡಲಾಗುತ್ತದೆ ಎಂದು ಈಗಾಗಲೇ ಮುಖ್ಯ ಕೋಚ್​ ರಾಹುಲ್​ ದ್ರಾವಿಡ್(Rahul Dravid)​ ಮತ್ತು ಆಯ್ಕೆ ಸಮಿತಿಯ ಅಧ್ಯಕ್ಷ ಅಜಿತ್​ ಅಗರ್ಕರ್(Ajit Agarkar)​ ಹೇಳಿದ್ದರು. ಇದೀಗ ವಿಶ್ವಕಪ್​ಗೆ ಸಂಬಂಧಿಸಿದಂತೆ ಬಿಸಿಸಿಐ ಹಾರ್ದಿಕ್​ ಪಾಂಡ್ಯಗೆ(Hardik Pandya) ಷರತ್ತೊಂದನ್ನು ಹಾಕಿದ್ದು, ಅದರಲ್ಲಿ ಯಶಸ್ವಿಯಾದರೆ​​​ ಮಾತ್ರ ತಂಡದಲ್ಲಿ ಸ್ಥಾನ ನೀಡಲಾಗುವುದು ಎಂದು ಹೇಳಿರುವುದಾಗಿ ತಿಳಿದುಬಂದಿದೆ.

ಮೂಲಗಳ ಪ್ರಕಾರ ಟಿ-20 ವಿಶ್ವಕಪ್​ಗೆ ತಂಡ ಆಯ್ಕೆ ಮಾಡುವ ಸಂಬಂಧ ಕೋಚ್​ ರಾಹುಲ್​ ದ್ರಾವಿಡ್​, ನಾಯಕ ರೋಹಿತ್​ ಶರ್ಮಾ(Rohit Sharma), ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್​ ಅಗರ್ಕರ್​ ಇಂದು ರಹಸ್ಯ ಸಭೆ ಸೇರಿದ್ದಾರೆ ಎನ್ನಲಾಗಿದೆ. ಈ ಸಭೆಯಲ್ಲಿ ಹಾರ್ದಿಕ್​ ಪಾಂಡ್ಯ ಆಯ್ಕೆಯ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದು ವರದಿಯಾಗಿದೆ.

ಹಾಲಿ ಆವೃತ್ತಿಯ ಐಪಿಎಲ್​ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ತಂಡದ​ ನಾಯಕನಾಗಿರುವ ಹಾರ್ದಿಕ್​ ಪಾಂಡ್ಯ ಅವರು ಬ್ಯಾಟಿಂಗ್​ ಮತ್ತು ಬೌಲಿಂಗ್​ನಲ್ಲಿ ಗಮನಾರ್ಹ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದಾರೆ. ಆಡಿದ 6 ಪಂದ್ಯಗಳಲ್ಲಿ 26.20ರ ಸರಾಸರಿಯಲ್ಲಿ ಕೇವಲ 131 ರನ್ ಗಳಿಸಿದ್ದಾರೆ. ಬೌಲಿಂಗ್​ನಲ್ಲಿ ಅತ್ಯಂತ ಕಳಪೆ. ಓವರ್​ ಒಂದಕ್ಕೆ ಕನಿಷ್ಠ 20 ರನ್​ ಬಿಟ್ಟುಕೊಡುತ್ತಿದ್ದಾರೆ. ​ಪಾಂಡ್ಯ ಮುಂದಿನ ಐಪಿಎಲ್​ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಿದರೆ ಮಾತ್ರ ಅವರನ್ನು ಟಿ-20 ವಿಶ್ವಕಪ್​ಗೆ ಪರಿಗಣನೆಗೆ ತೆಗೆದುಕೊಳ್ಳಲಾಗುವುದು ಎಂದು ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ IPL 2024: ಕೆಕೆಆರ್ ನಾಯಕ ಶ್ರೇಯಸ್​ ಅಯ್ಯರ್​ಗೆ ಬಿತ್ತು 12 ಲಕ್ಷ ದಂಡದ ಬರೆ

ಶಿವಂ ದುಬೆಗೆ ಅವಕಾಶ


ಹಾರ್ದಿಕ್​ ಪಾಂಡ್ಯ ಐಪಿಎಲ್​ನಲ್ಲಿ ವಿಫಲರಾಗಿ ಟಿ-20 ತಂಡದಲ್ಲಿ ಸ್ಥಾನ ಪಡೆಯದಿದ್ದರೆ, ಅವರ ಬದಲಿಗೆ ಆಲ್ರೌಂಡರ್​ ಶಿವಂ ದುಬೆ ಅವರನ್ನು ಆಯ್ಕೆ ಮಾಡಬಹುದು ಎಂದು ಹೇಳಲಾಗಿದೆ. ಚೆನ್ನೈ ಸೂಪರ್​ ಕಿಂಗ್ಸ್​ ಪರ ಉತ್ತಮ ಪ್ರದರ್ಶನ ನೀಡುತ್ತಿರುವ ದುಬೆ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ಆದರೆ, ಈ ಬಾರಿ ಬೌಲಿಂಗ್​ ನಡೆಸದೇ ಇರುವುದೊಂದೆ ಹಿನ್ನಡೆ. ಪಾಂಡ್ಯ ಅವರು ಕಳೆದ ವರ್ಷ ಏಕದಿನ ವಿಶ್ವಕಪ್​ ವೇಳೆ ಗಾಯಗೊಂಡು ಟೂರ್ನಿಯಿಂದ ಹೊರಬಿದ್ದಿದ್ದರು. ಇದಾಗಿ ಕನಿಷ್ಠ 4 ತಿಂಗಳು ಕ್ರಿಕೆಟ್​ನಿಂದ ವಿಶ್ರಾಂತಿ ಪಡೆದಿದ್ದರು. ಸಂಪೂರ್ಣವಾಗಿ ಗುಣಮುಖರಾಗದಿದ್ದರು ಕೂಡ ಪಾಂಡ್ಯ ಐಪಿಎಲ್​ ಆಡುತ್ತಿದ್ದಾರೆ ಎನ್ನುವ ಮಾತುಗಳು ಕೂಡ ಕೇಳಿ ಬಂದಿದೆ.

ಬಹುನಿರೀಕ್ಷಿತ ಐಸಿಸಿ ಪುರುಷರ ಟಿ20 ವಿಶ್ವಕಪ್​(T20 World Cup 2024) ಟೂರ್ನಿ ಜೂನ್ 1 ರಿಂದ 29 ರ ವರೆಗೆ ಅಮೆರಿಕ ಮತ್ತು ವೆಸ್ಟ್ ಇಂಡೀಸ್ ಜಂಟಿ ಆತಿಥ್ಯದಲ್ಲಿ ನಡೆಯಲಿದೆ. ಈಗಾಗಲೇ ಟೂರ್ನಿಯ ವೇಳಾಪಟ್ಟಿ ಪ್ರಕಟಗೊಂಡಿದೆ. ಭಾರತ ತನ್ನ ಮೊದಲ ಪಂದ್ಯವನ್ನು ಜೂನ್‌ 5 ರಂದು ಐರ್ಲೆಂಡ್​ ವಿರುದ್ಧ ಆಡಲಿದೆ. ದ್ವಿತೀಯ ಪಂದ್ಯ ಜೂನ್‌ 9 ರಂದು ಪಾಕ್​ ವಿರುದ್ಧ ಆಡಲಿದ. ಭಾರತ ತನ್ನ ಎಲ್ಲ ಲೀಗ್‌ ಪಂದ್ಯಗಳನ್ನು ಅಮೆರಿಕದಲ್ಲೇ ಆಡದೆ. ಇದರಲ್ಲಿ ಮೂರು ಪಂದ್ಯಗಳು ನ್ಯೂಯಾರ್ಕ್‌ ಮತ್ತು ಒಂದು ಪಂದ್ಯ ಫ್ಲೋರಿಡಾದಲ್ಲಿ ನಡೆಯಲಿದೆ.

Exit mobile version