ಮುಂಬೈ: ಅಮೆರಿಕ ಮತ್ತು ವೆಸ್ಟ್ ಇಂಡಿಸ್ ಜಂಟಿ ಆತಿಥ್ಯದಲ್ಲಿ ನಡೆಯುವ ಟಿ20 ವಿಶ್ವಕಪ್ಗೆ(T20 World Cup) ಭಾರತ ತಂಡ (Team India) ಆಯ್ಕೆ ಮಾಡಿದ ಬೆನ್ನಲ್ಲೇ ಇಂದು(ಗುರುವಾರ) ಆಯ್ಕೆ ಸಮಿತಿಯ ಮುಖ್ಯಸ್ಥ ಅಜಿತ್ ಅಗರ್ಕರ್(Ajit Agarkar) ಮತ್ತು ತಂಡದ ನಾಯಕ ರೋಹಿತ್ ಶರ್ಮಾ(Rohit Sharma) ಮುಂಬೈಯ ಬಿಸಿಸಿಐ ಪ್ರಧಾನ ಕಚೇರಿಯಲ್ಲಿ ಮಹತ್ವದ ಸುದ್ದಿಗೋಷ್ಠಿ ನಡೆಸಲಿದ್ದಾರೆ.
ಮಂಗಳವಾರ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಮತ್ತು ಅಜಿತ್ ಅಗರ್ಕರ್ ಅಹಮದಾಬಾದ್ನಲ್ಲಿ ಔಪಚಾರಿಕ ಸಭೆ ನಡೆಸಿ ಟ್ವೀಟರ್ನಲ್ಲಿ ಪೋಸ್ಟ್ ಮಾಡುವ ಮೂಲಕ ತಂಡವನ್ನು ಪ್ರಟಿಸಿದ್ದರು. ಇದೀಗ ನಾಯಕ ರೋಹಿತ್ ಮತ್ತು ಅಗರ್ಕರ್ ಜಂಟಿಯಾಗಿ ಸುದ್ದಿಗೋಷ್ಠಿ ನಡೆಸಿ ಆಟಗಾರರ ಆಯ್ಕೆ ಬಗ್ಗೆ ಮಾಹಿತಿ ನೀಡಲಿದ್ದಾರೆ. ಕೆಲ ಆಟಗಾರರಿಗೆ ಅವಕಾಶ ನೀಡದ ಬಗ್ಗೆಯೂ ಈ ಸುದ್ದಿಗೋಷ್ಠಿಯಲ್ಲಿ ಉತ್ತರ ಸಿಗುವ ಸಾಧ್ಯತೆ ಇದೆ. ಅದರಲ್ಲಿಯೂ ಅನುಭವಿ ಆಟಗಾರ ಕೆಎಲ್ ರಾಹುಲ್ಗೆ ಮತ್ತು ರಿಂಕು ಸಿಂಗ್ಗೆ ಅವಕಾಶ ನೀಡದ್ದರ ಕುರಿತು ಹಲವು ಪ್ರಶ್ನೆಗಳು ಎದುರಾಗಬಹುದು.
ಇದನ್ನೂ ಓದಿ T20 World Cup: ಟಿ20 ವಿಶ್ವಕಪ್ ತಂಡ ಸೇರಲು ರಾಹುಲ್ಗೆ ಇನ್ನೂ ಇದೆ ಅವಕಾಶ
ಕಳಪೆ ಫಾರ್ಮ್ನಿಂದ ಬಳಲುತ್ತಿರುವ ಹಾರ್ದಿಕ್ ಪಾಂಡ್ಯಗೆ ಅವಕಾಶ ನೀಡಿದ್ದು ಮಾತ್ರವಲ್ಲದೆ ಉಪನಾಯಕನ ಸ್ಥಾನ ನೀಡಿದ್ದರ ಬಗ್ಗೆ ಈಗಾಗಲೇ ಅನೇಕ ಮಾಜಿ ಆಟಗಾರರಿಂದ ಟೀಕೆಗಳು ವ್ಯಕ್ತವಾಗಿದೆ. ಗುಜರಾತಿ ಲಾಬಿ ಎಂದು ಕೆಲವರು ಬಿಸಿಸಿಐ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಪಾಂಡ್ಯ ಆಯ್ಕೆಯ ಬಗ್ಗೆಯೂ ರೋಹಿತ್ಗೆ ಪ್ರಶ್ನೆಗಳ ಸುರಿಮಳೆ ಬರುವ ಸಾಧ್ಯತೆಯೂ ಕಂಡುಬಂದಿದೆ. ಇಂದು ಸಂಜೆ 4 ಗಂಟೆಗೆ ಸುದ್ದಿಗೋಷ್ಠಿ ನಡೆಯಲಿದೆ.
ಭಾರತ ತನ್ನ ಎಲ್ಲ ಲೀಗ್ ಪಂದ್ಯಗಳನ್ನು ಅಮೆರಿಕದಲ್ಲೇ ಆಡಲಿದೆ. ಇದರಲ್ಲಿ ಮೂರು ಪಂದ್ಯಗಳು ನ್ಯೂಯಾರ್ಕ್ ಮತ್ತು ಒಂದು ಪಂದ್ಯ ಫ್ಲೋರಿಡಾದಲ್ಲಿ ನಡೆಯಲಿದೆ. ಜೂನ್ 5 ರಂದು ಐರ್ಲೆಂಡ್ ವಿರುದ್ಧ ಆಡುವ ಮೂಲಕ ಭಾರತ ತನ್ನ ಅಭಿಯಾನ ಆರಂಭಿಸಲಿದೆ. ದ್ವಿತೀಯ ಪಂದ್ಯವನ್ನು ಜೂನ್ 9 ರಂದು ಸಾಂಪ್ರದಾಯಿಕ ಬದ್ಧ ಎದುರಾಳಿ ಪಾಕ್ ವಿರುದ್ಧ ಆಡಲಿದೆ. ಟೂರ್ನಿಯಲ್ಲಿ ಒಟ್ಟು 55 ಪಂದ್ಯಗಳು ನಡೆಯಲಿವೆ. ಜೂನ್ 1ರಿಂದ 18ರವರೆಗೆ ಗುಂಪು ಹಂತದಲ್ಲಿ 40 ಪಂದ್ಯಗಳು ನಡೆದರೆ, ಜೂನ್ 19 ರಿಂದ 24 ರವರೆಗೆ ಸೂಪರ್ 8 ಪಂದ್ಯಗಳು ನಡೆಯಲಿವೆ. ಜೂನ್ 29ಕ್ಕೆ ಫೈನಲ್ ಪಂದ್ಯ ಸಾಗಲಿದೆ.
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಯುಜ್ವೇಂದ್ರ ಚಾಹಲ್, ಅರ್ಶದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್. ಮೀಸಲು ಆಟಗಾರರು ಶುಭಮನ್ ಗಿಲ್, ರಿಂಕು ಸಿಂಗ್, ಖಲೀಲ್ ಅಹ್ಮದ್ ಮತ್ತು ಅವೇಶ್ ಖಾನ್