ಮೆಲ್ಬೋರ್ನ್: ಐಸಿಸಿ ಟಿ20 ವಿಶ್ವ ಕಪ್(T20 World Cup) ಫೈನಲ್ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಮೂರು ವಿಕೆಟ್ ಕಿತ್ತು ಪಂದ್ಯಶ್ರೇಷ್ಠ ಮತ್ತು ಟೂರ್ನಿಯ ಶ್ರೇಷ್ಠ ಪ್ರಶಸ್ತಿ ಪಡೆದ ಇಂಗ್ಲೆಂಡ್ ತಂಡದ ಸ್ಯಾಮ್ ಕರನ್ ತನ್ನ ಈ ಸಾಧನೆಗೆ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಕಾರಣ ಎಂದು ಹೇಳಿದ್ದಾರೆ. ಪಂದ್ಯದ ಬಳಿಕ ಮಾತನಾಡಿದ ಸ್ಯಾಮ್ ಕರನ್ ಐಪಿಎಲ್ ಟೂರ್ನಿ ಇರದೇ ಇರುತ್ತಿದ್ದರೆ ನಾನು ಇಂದು ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಮಿಂಚಲು ಸಾಧ್ಯವಾಗುತ್ತಿರಲಿಲ್ಲ. ಐಪಿಎಲ್ನಲ್ಲಿ ಸಿಕ್ಕ ಅನುಭವ ವಿಶ್ವ ಕಪ್ನಲ್ಲಿ ಶ್ರೇಷ್ಠ ಪ್ರದರ್ಶನ ತೋರಲು ನೆರವಾಯಿತು ಎಂದರು.
“ಐಪಿಎಲ್ನಲ್ಲಿ ಪಂಜಾಬ್ ಕಿಂಗ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಪ್ರತಿನಿಧಿಸಿರುವ ನಾನು ಈ ತಂಡಗಳ ಆಟಗಾರರಿಂದ ಸಾಕಷ್ಟು ಕಲಿತಿದ್ದೇನೆ. ಇದುವೇ ನನ್ನ ಈ ಸಾಧನೆಗೆ ಕಾರಣ. ಕಲಿಯುವುದು ಸಾಕಷ್ಟಿದೆ. ಇದೇ ಹುರುಪಿನಲ್ಲಿ ಮತ್ತೆ ಭಾರತದ ಐಪಿಎಲ್ ಟೂರ್ನಿಗೆ ಹಿಂದಿರುಗುವೆ” ಎಂದು ಸ್ಯಾಮ್ ಕರನ್ ತಿಳಿಸಿದರು.
ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಸ್ಯಾಮ್ ಕರನ್ 4 ಓವರ್ಗೆ ಕೇವಲ 12 ರನ್ ಬಿಟ್ಟುಕೊಟ್ಟು ಪ್ರಮುಖ ಮೂರು ವಿಕೆಟ್ ಕಿತ್ತು ಮಿಂಚಿದರು. ಇನ್ನು ಈ ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡ 5 ವಿಕೆಟ್ ಗೆಲುವು ಸಾಧಿಸಿ 2ನೇ ಬಾರಿ ಟಿ20 ಚಾಂಪಿಯನ್ ಆಗಿ ಹೊರಹೊಮ್ಮಿದೆ.
ಇದನ್ನೂ ಓದಿ | T20 World Cup | ಟಿ20 ವಿಶ್ವ ಕಪ್ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಟಾಪ್ 5 ಬೌಲರ್ಗಳು ಯಾರು?