ಮೆಲ್ಬೋರ್ನ್: ಆಸ್ಟ್ರೇಲಿಯಾ ಆತಿಥ್ಯದಲ್ಲಿ ನಡೆದ ಐಸಿಸಿ ಟಿ20 ವಿಶ್ವ ಕಪ್(T20 World Cup) ಕೂಟ ಭಾನುವಾರ ಮೆಲ್ಬೋರ್ನ್ನಲ್ಲಿ ಅದ್ಧೂರಿಯಾಗಿ ಅಂತ್ಯಕಂಡಿದೆ. ಪಾಕಿಸ್ಥಾನ ವಿರುದ್ಧ ನಡೆದ ಫೈನಲ್ ಪಂದ್ಯದಲ್ಲಿ ಗೆದ್ದ ಇಂಗ್ಲೆಂಡ್ ತಂಡವು ಎರಡನೇ ಬಾರಿಗೆ ಟಿ20 ಚಾಂಪಿಯನ್ ಆಗಿ ಹೊರಹೊಮ್ಮಿದೆ. ಇದೇ ಪಂದ್ಯದಲ್ಲಿ ಪಂದ್ಯಶ್ರೇಷ್ಠ ಮತ್ತು ಸರಣಿ ಶ್ರೇಷ್ಠ ಪಡೆದ ಸ್ಯಾಮ್ ಕರನ್ ಕಳೆದ ಟಿ20 ವಿಶ್ವ ಕಪ್ನಲ್ಲಿ ವೀಕ್ಷಕ ವಿವರಣೆಗಾರನಾಗಿ ಕರ್ತವ್ಯ ನಿರ್ವಹಿಸಿದ್ದು ಈಗ ಇತಿಹಾಸ.
ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ನಡೆದ ಸಣ್ಣ ಮೊತ್ತದ ಫೈನಲ್ ಮೇಲಾಟದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ 8 ವಿಕೆಟ್ ನಷ್ಟಕ್ಕೆ 137 ರನ್ ಗಳಿಸಿತು. ಗುರಿ ಬೆನ್ನಟ್ಟಿದ ಜಾಸ್ ಬಟ್ಲರ್ ಪಡೆ ಐದು ವಿಕೆಟ್ಗೆ 138 ರನ್ ಬಾರಿಸಿ ಜಯ ಸಾಧಿಸಿತು.
ಕಳೆದ 2021ರ ಭಾರತ ಆತಿಥ್ಯದಲ್ಲಿ ದುಬೈನಲ್ಲಿ ನಡೆದ ಟಿ20 ವಿಶ್ವ ಕಪ್ನಲ್ಲಿ ಇಂಗ್ಲೆಂಡ್ ತಂಡದಲ್ಲಿ ಸ್ಥಾನ ಪಡೆಯದ ಕರನ್ ವೀಕ್ಷಕ ವಿವರಣೆಗಾರರಾಗಿ ಕೆಲಸ ಮಾಡಿದ್ದರು. ಆದರೆ ಈ ಬಾರಿಯ ವಿಶ್ವ ಕಪ್ನಲ್ಲಿ ಶ್ರೇಷ್ಠ ಪ್ರದರ್ಶನದೊಂದಿಗೆ ಸಿಕ್ಕ ಅವಕಾಶವನ್ನು ಸಮರ್ಥವಾಗಿ ಬಳಸಿಕೊಂಡು ಟೂರ್ನಿಯುದ್ದಕ್ಕೂ ಶ್ರೇಷ್ಠ ಪ್ರದರ್ಶನ ತೋರಿದ್ದಾರೆ. ಜತೆಗೆ ಫೈನಲ್ ಪಂದ್ಯದಲ್ಲಿ ಮಿಂಚಿದ ಸ್ಯಾಮ್ ಕರನ್ ನಾಲ್ಕು ಓವರ್ನಲ್ಲಿ ಕೇವಲ 12 ರನ್ ಬಿಟ್ಟುಕೊಟ್ಟು ಮೂರು ವಿಕೆಟ್ ಕಬಳಿಸಿ ಪಂದ್ಯಶ್ರೇಷ್ಠ ಪ್ರಶಸ್ತಿ ಜತೆಗೆ ಸರಣಿ ಶ್ರೇಷ್ಠ ಪುರಸ್ಕಾರಕ್ಕೂ ಭಾಜನರಾದರು.
ಇದನ್ನೂ ಓದಿ | T20 World Cup | ಟಿ20 ವಿಶ್ವ ಕಪ್ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಟಾಪ್ 5 ಬೌಲರ್ಗಳು ಯಾರು?