ಪರ್ತ್: ಭಾನುವಾರ ಪರ್ತ್ನಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ವಿಶ್ವ ಕಪ್(T20 World Cup) ಟೂರ್ನಿಯ ಸೂಪರ್-12 ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಸೂರ್ಯಕುಮಾರ್ ಯಾದವ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಇದೇ ವೇಳೆ ಸೂರ್ಯಕುಮಾರ್ ವಿಶೇಷ ದಾಖಲೆಯನ್ನು ನಿರ್ಮಿಸಿದ್ದಾರೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ನಡೆಸಿದ ಭಾರತ ತಂಡ ಆರಂಭಿಕ ಆಘಾತ ಎದುರಿಸಿತು. ಈ ವೇಳೆ ದಕ್ಷಿಣ ಆಫ್ರಿಕಾ ವೇಗಿಗಳನ್ನು ಆತ್ಮ ವಿಶ್ವಾಸದಿಂದಲೇ ಎದುರಿಸಿದ ಸೂರ್ಯಕುಮಾರ್ 3 ಭರ್ಜರಿ ಸಿಕ್ಸ್ ಹಾಗೂ 6 ಆಕರ್ಷಕ ಬೌಂಡರಿ ಬಾರಿಸಿದರು. 40 ಎಸೆತ ಎದುರಿಸಿದ ಅವರು 68 ರನ್ ಸಿಡಿಸಿ ಟೀಮ್ ಇಂಡಿಯಾ ಮೊತ್ತವನ್ನು 100ರ ಗಡಿದಾಟಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು.
ಸೂರ್ಯಕುಮಾರ್ ಈ ಅತ್ಯಾಕರ್ಷಕ ಅರ್ಧಶತಕದೊಂದಿಗೆ ಟೀಮ್ ಇಂಡಿಯಾ ಪರ ಟಿ20 ಕ್ರಿಕೆಟ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಕ್ಯಾಲೆಂಡರ್ ವರ್ಷದಲ್ಲಿ ಅತ್ಯಧಿಕ ರನ್ ಕಲೆಹಾಕಿದ ವಿಶೇಷ ದಾಖಲೆ ಬರೆದರು. ಈ ವರ್ಷ 26 ಇನಿಂಗ್ಸ್ ಆಡಿರುವ ಸೂರ್ಯಕುಮಾರ್ ಒಂದು ಶತಕ ಹಾಗೂ 8 ಅರ್ಧಶತಕದೊಂದಿಗೆ ಒಟ್ಟು 933 ರನ್ ಕಲೆಹಾಕಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ ಪರ ಟಿ20 ಕ್ರಿಕೆಟ್ನಲ್ಲಿ ಒಂದು ವರ್ಷದೊಳಗೆ 900+ ರನ್ ಬಾರಿಸಿದ ಮೊದಲ ಬ್ಯಾಟ್ಸ್ಮನ್ ಎನಿಸಿಕೊಂಡಿದ್ದಾರೆ.
ಇದನ್ನೂ ಓದಿ | IND vs SA | ಕಳಪೆ ಫೀಲ್ಡಿಂಗ್‌ನಲ್ಲೂ ನಾವಿಬ್ಬರೂ ಸಮಾನರು ಎಂಬುದನ್ನು ಸಾಬೀತುಪಡಿಸಿದ ರೋಹಿತ್, ವಿರಾಟ್!