T20 World Cup | ಜಿಂಬಾಬ್ವೆ ವಿರುದ್ಧದ ಸೋಲಿಗೆ ಕಣ್ಣೀರು ಸುರಿಸಿದ ಪಾಕಿಸ್ತಾನ ಕ್ರಿಕೆಟಿಗ - Vistara News

T20 ವಿಶ್ವಕಪ್

T20 World Cup | ಜಿಂಬಾಬ್ವೆ ವಿರುದ್ಧದ ಸೋಲಿಗೆ ಕಣ್ಣೀರು ಸುರಿಸಿದ ಪಾಕಿಸ್ತಾನ ಕ್ರಿಕೆಟಿಗ

ಟಿ20 ವಿಶ್ವ ಕಪ್(T20 World Cup) ​ನಲ್ಲಿ ಜಿಂಬಾಬ್ವೆ ವಿರುದ್ಧ ಒಂದು ರನ್​ ಅಂತರದಲ್ಲಿ ಸೋಲು ಕಂಡ ಆಘಾತದಲ್ಲಿ ಪಾಕಿಸ್ತಾನ ಕ್ರಿಕೆಟಿಗ ಶಾದಾಬ್ ಖಾನ್ ಕಣ್ಣೀರು ಸುರಿಸಿದ್ದಾರೆ.

VISTARANEWS.COM


on

t20
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಪರ್ತ್​: ಟಿ20 ವಿಶ್ವ ಕಪ್(T20 World Cup)​ನ ಗುರುವಾರದ ಸೂಪರ್​-12 ಪಂದ್ಯದಲ್ಲಿ ಬಲಿಷ್ಠ ಪಾಕಿಸ್ತಾನ ತಂಡ ಜಿಂಬಾಬ್ವೆ ವಿರುದ್ಧ ಒಂದು ರನ್​ ಅಂತರದಲ್ಲಿ ಸೋಲು ಕಂಡಿತ್ತು. ಈ ಸೋಲನ್ನು ಅರಗಿಸಿಕೊಳ್ಳಲಾಗದೆ ಪಾಕ್​ ತಂಡದ ಉಪನಾಯಕ ಶಾದಾಬ್ ಖಾನ್ ನೆಲದ ಮೇಲೆ ಮಂಡಿಯೂರಿ ಕಣ್ಣೀರಿಟ್ಟಿದ್ದಾರೆ. ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಪರ್ತ್‌ನಲ್ಲಿ ಗುರುವಾರ ನಡೆದ ದಿನದ 3ನೇ ಹಾಗೂ ಅಂತಿಮ ಪಂದ್ಯ ಸಣ್ಣ ಮೊತ್ತದ ಮೇಲಾಟವಾಗಿತ್ತು. ಜಿಂಬಾಬ್ವೆಯನ್ನು 130ಕ್ಕೆ ನಿಯಂತ್ರಿಸಿದ ಪಾಕಿಸ್ತಾನಕ್ಕೆ ಈ ಸಾಮಾನ್ಯ ಮೊತ್ತವನ್ನೂ ಮೀರಿ ನಿಲ್ಲಲು ಸಾಧ್ಯವಾಗಲಿಲ್ಲ. 8 ವಿಕೆಟ್​ ನಷ್ಟಕ್ಕೆ 129 ರನ್‌ ಮಾಡಿ ಮತ್ತೊಮ್ಮೆ ಕೊನೆಯ ಎಸೆತದಲ್ಲಿ ಮುಗ್ಗರಿಸಿತು.

ಕೊನೆಯ 2 ಓವರ್‌ಗಳಲ್ಲಿ 22 ರನ್‌, ಅಂತಿಮ ಓವರ್‌ನಲ್ಲಿ 11 ರನ್‌ ಗಳಿಸಬೇಕಾದ ಸವಾಲು ಪಾಕಿಸ್ತಾನಕ್ಕೆ ಎದುರಾಯಿತು. ಮೊಹಮ್ಮದ್‌ ನವಾಜ್‌, ಮೊಹಮ್ಮದ್‌ ವಾಸಿಮ್‌ ಕ್ರೀಸ್‌ನಲ್ಲಿದ್ದರು. ಎನ್‌ಗರವ ಎಸೆದ 19ನೇ ಓವರ್‌ನಲ್ಲಿ 11 ರನ್‌ ಬಂತು. ಅಂತಿಮ ಓವರ್‌ ಎಸೆಯಲು ಬಂದ ಬ್ರಾಡ್‌ ಇವಾನ್ಸ್‌ ಮೊದಲ 3 ಎಸೆತಗಳಲ್ಲಿ 8 ರನ್‌ ನೀಡಿದರು. ಇಲ್ಲಿಗೆ ಪಾಕ್​ ಗೆಲುವಿನ ಲೆಕ್ಕಾಚಾರ ಸರಳಗೊಂಡಿತು. 3 ಎಸೆತ, 3 ರನ್‌. ಆದರೆ ಕೊನೆಯ 3 ಎಸೆತಗಳಲ್ಲಿ ಪಂದ್ಯದ ಚಿತ್ರಣವೇ ಬದಲಾಯಿತು. 4ನೇ ಎಸೆತ ಡಾಟ್‌ ಬಾಲ್‌. 5ನೇ ಎಸೆತಕ್ಕೆ ನವಾಜ್‌ ಔಟ್‌. ಅಂತಿಮ ಎಸೆತ ಎದುರಿಸಿದ ಅಫ್ರಿದಿ 2ನೇ ರನ್‌ ಗಳಿಸುವ ವೇಳೆ ರನೌಟಾಗಿ ಪಾಕ್​ ಪಲ್ಟಿಯಾಯಿತು.

ಈ ಆಘಾತಕಾರಿ ಸೋಲಿನ ಬಳಿಕ ಕಣ್ಣೀರಿಡುತ್ತಿದ್ದ ಶಾದಾಬ್ ಖಾನ್ ಅವರನ್ನು ತಂಡದ ಸಹಾಯಕ ಸಿಬ್ಬಂದಿಯೊಬ್ಬರು ಸಮಾಧಾನ ಪಡಿಸಲು ಮುಂದಾಗಿದ್ದಾರೆ. ಶಾದಾಬ್ ಅವರು ಕಣ್ಣೀರಿಟ್ಟಿರುವ ಈ ವಿಡಿಯೊ ಹಲವು ಪಾಕಿಸ್ತಾನಿ ಅಭಿಮಾನಿಗಳನ್ನು ಭಾವುಕರನ್ನಾಗಿಸಿದೆ. ಆದ್ಯಾಗೂ ಹಲವರು ಕಣ್ಣೀರು ಹಾಕುವ ಬದಲು ಉತ್ತಮ ಪ್ರದರ್ಶನ ತೋರಿದ್ದರೆ ಈ ಸ್ಥಿತಿ ಬರುತ್ತಿರಲಿಲ್ಲ ಎಂದು ಸಲಹೆಯನ್ನೂ ನೀಡಿದ್ದಾರೆ.

ಇದನ್ನೂ ಓದಿ | T20 World Cup | ಪಾಕ್​ಗೆ​ ಎದುರಾದ ಸ್ಥಿತಿ ಭಾರತ ತಂಡಕ್ಕೂ ಎದುರಾಗಲಿದೆ ಅಖ್ತರ್​ ಹೀಗೆ ಹೇಳಿದ್ದು ಯಾಕೆ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

T20 World Cup 2024: ಅಭ್ಯಾಸ ಪಂದ್ಯಗಳ ವೇಳಾಪಟ್ಟಿ ಪ್ರಕಟ; ಭಾರತದ ಎದುರಾಳಿ ಯಾರು?

T20 World Cup 2024: ಅಭ್ಯಾಸ ಪಂದ್ಯಗಳು ಮೇ 27ರಿಂದ ಜೂನ್ 1ರವರೆಗೆ ನಡೆಯಲಿದೆ. ಭಾರತ ಮಾತ್ರ ಏಕೈಕ ಪಂದ್ಯ ಆಡಲಿದ್ದು, ಉಳಿದ ತಂಡಗಳು ತಲಾ 2 ಅಭ್ಯಾಸ ಪಂದ್ಯಗಳನ್ನು ಆಡಲಿದೆ. ಭಾರತ ಜೂನ್​ 1 ರಂದು ಬಾಂಗ್ಲಾದೇಶ ವಿರುದ್ಧ ತನ್ನ ಅಭ್ಯಾಸ ಪಂದ್ಯವನ್ನು ಆಡಲಿದೆ.

VISTARANEWS.COM


on

T20 World Cup 2024
Koo

ದುಬೈ: ಬಹುನಿರೀಕ್ಷಿತ ಐಸಿಸಿ ಪುರುಷರ ಟಿ20 ವಿಶ್ವಕಪ್​ ಟೂರ್ನಿ(T20 World Cup 2024) ಆರಂಭಕ್ಕೆ ದಿನಗಣನೆ ಆರಂಭವಾಗಿದೆ. ಈ ಬಾರಿ ಅಮೆರಿಕ ಮತ್ತು ವೆಸ್ಟ್​ ಇಂಡೀಸ್​ ಜಂಟಿ ಆತಿಥ್ಯದಲ್ಲಿ ಪಂದ್ಯಾವಳಿಗಳು ನಡೆಯಲಿವೆ. ಜೂನ್​ 1ರಿಂದ ಆರಂಭಗೊಂಡು ಜೂನ್​ 29ರ ತನಕ ಸಾಗಲಿದೆ. ಇದೀಗ ಅಭ್ಯಾಸ ಪಂದ್ಯಗಳ(warm up matches schedule) ವೇಳಾಪಟ್ಟಿ ಐಸಿಸಿ ಪ್ರಕಟಿಸಿದ್ದು, ಭಾರತ ಕೇವಲ ಒಂದು ಪಂದ್ಯ ಮಾತ್ರ ಆಡಲಿದೆ.

ಕೆಲವು ದಿನಗಳ ಹಿಂದೆಯೇ ಭಾರತ ತಂಡ ಕೇವಲ ಒಂದು ಅಭ್ಯಾಸ ಪಂದ್ಯ ಮಾತ್ರ ಆಡಲಿದೆ ಎಂದು ಕ್ರಿಕ್​ಬಜ್​ ವರದಿ ಮಾಡಿತ್ತು. ಐಪಿಎಲ್​ ಟೂರ್ನಿ ಮೇ 26ಕ್ಕೆ ಮುಕ್ತಾಯ ಕಾಣಲಿದೆ. ಹೀಗಾಗಿ ಆಟಗಾರರಿಗೆ ಮುಂಚಿತವಾಗಿ ಪ್ರಯಾಣಿಸಲು ಸಾಧ್ಯವಾಗುತ್ತಿಲ್ಲ. ಜತೆಗೆ ಭಾರತೀಯ ಆಟಗಾರರು ವ್ಯಾಪಕ ಪ್ರಯಾಣ ಮತ್ತು ಐಪಿಎಲ್​ನಿಂದ ದಣಿದಿರುವ ಕಾರಣ ಕೇವಲ ಒಂದು ಅಭ್ಯಾಸ ಪಂದ್ಯಕ್ಕೆ ಮೊರೆ ಹೋಗಿದ್ದಾರೆ ಎಂದು ಕ್ರಿಕ್​ಬಜ್ ತಿಳಿಸಿತ್ತು. ಇದೀಗ ಈ ವರದಿ ನಿಜವಾಗಿದೆ. ಭಾರತ ಕೇವಲ ಒಂದು ಪಂದ್ಯ ಮಾತ್ರ ಆಡಲಿದೆ.

ಅಭ್ಯಾಸ ಪಂದ್ಯಗಳು ಮೇ 27ರಿಂದ ಜೂನ್ 1ರವರೆಗೆ ನಡೆಯಲಿದೆ. ಭಾರತ ಮಾತ್ರ ಏಕೈಕ ಪಂದ್ಯ ಆಡಲಿದ್ದು, ಉಳಿದ ತಂಡಗಳು ತಲಾ 2 ಅಭ್ಯಾಸ ಪಂದ್ಯಗಳನ್ನು ಆಡಲಿದೆ. ಭಾರತ ಜೂನ್​ 1 ರಂದು ಬಾಂಗ್ಲಾದೇಶ ವಿರುದ್ಧ ತನ್ನ ಅಭ್ಯಾಸ ಪಂದ್ಯವನ್ನು ಆಡಲಿದೆ. ಆದರೆ ಪಂದ್ಯದ ತಾಣ ಎಲ್ಲಿ ಎನ್ನುವುದು ಇನ್ನಷ್ಟೇ ಖಚಿತವಾಗಬೇಕಿದೆ. ಮೂಲಗಲ ಪ್ರಕಾರ ನ್ಯೂಯಾರ್ಕ್‌ನಲ್ಲಿ ನಡೆಯಲಿದೆ ಎನ್ನಲಾಗಿದೆ.


ಭಾರತ ತನ್ನ ಮೊದಲ ಲೀಗ್​ ಪಂದ್ಯವನ್ನು ಜೂನ್‌ 5 ರಂದು ಐರ್ಲೆಂಡ್​ ವಿರುದ್ಧ ಆಡಲಿದೆ. ಭಾರತವು ತನ್ನ ಗುಂಪು ಹಂತದ ಎಲ್ಲಾ ಪಂದ್ಯಗಳನ್ನು ಅಮೆರಿಕದಲ್ಲೇ ಆಡಲಿದೆ. ಲೀಗ್​ ಮುಕ್ತಾಯದ ಬಳಿಕ ಮುಂದಿನ ಹಂತಕ್ಕೆ ಅರ್ಹತೆ ಪಡೆದರೆ, ಸೂಪರ್ 8 ಪಂದ್ಯಗಳನ್ನು ಸಹ ಇಲ್ಲೇ ಆಡಲಿದೆ. ಟೂರ್ನಿಯಲ್ಲಿ ಒಟ್ಟು 55 ಪಂದ್ಯಗಳು ನಡೆಯಲಿವೆ. ಜೂನ್ 1ರಿಂದ 18ರವರೆಗೆ ಗುಂಪು ಹಂತದಲ್ಲಿ 40 ಪಂದ್ಯಗಳು ನಡೆಯಲಿವೆ. ಜೂನ್ 19 ರಿಂದ 24 ರವರೆಗೆ ಸೂಪರ್ 8 ಪಂದ್ಯಗಳು ನಡೆಯಲಿವೆ. ಸಾಂಪ್ರದಾಯಿಕ ಬದ್ಧ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ನಡುವಣ ಪಂದ್ಯ ಜೂನ್ 9 ರಂದು ನ್ಯೂಯಾರ್ಕ್‌ನಲ್ಲಿ ನಡೆಯಲ್ಲಿದೆ.

ಇದನ್ನೂ ಓದಿ T20 World Cup 2024: ಟಿ20 ವಿಶ್ವಕಪ್​ನಲ್ಲಿ ‘ನಂದಿನಿ’ ಲಾಂಛನ; ಹರ್ಷ ವ್ಯಕ್ತಪಡಿಸಿದ ಸಿದ್ದರಾಮಯ್ಯ

ಉಚಿತ ಪ್ರಸಾರ


ಟಿ20 ವಿಶ್ವಕಪ್​ ಟೂರ್ನಿ ಆರಂಭಕ್ಕೂ ಮುನ್ನವೇ ​ಡಿಸ್ನಿ + ಹಾಟ್‌ಸ್ಟಾರ್(Disney+ Hotstar) ಕ್ರಿಕೆಟ್​ ಅಭಿಮಾನಿಗಳಿಗೆ ಸಿಹಿ ಸುದ್ದಿಯೊಂದನ್ನು ನೀಡಿದೆ. ಭಾರತದಲ್ಲಿನ ಸ್ಮಾರ್ಟ್‌ಫೋನ್ ಬಳಕೆದಾರರು ಈ ವರ್ಷದ ಐಸಿಸಿ ಪುರುಷರ ಟಿ20 ಕ್ರಿಕೆಟ್ ವಿಶ್ವಕಪ್ ಅನ್ನು OTT ಪ್ಲಾಟ್‌ಫಾರ್ಮ್‌ನಲ್ಲಿ ಉಚಿತವಾಗಿ ವೀಕ್ಷಿಸಲು ಸಾಧ್ಯವಾಗುತ್ತದೆ ಎಂದು ಡಿಸ್ನಿ + ಹಾಟ್‌ಸ್ಟಾರ್ ಈಗಾಗಲೇ ಘೋಷಿಸಿದೆ. ಕಳೆದ ವರ್ಷ ಏಕದಿನ ವಿಶ್ವಕಪ್ ಮತ್ತು ಏಷ್ಯಾ ಕಪ್‌ ಟೂರ್ನಿಯನ್ನು ಕೂಡ ಡಿಸ್ನಿ + ಹಾಟ್‌ಸ್ಟಾರ್, ಮೊಬೈಲ್​ ಬಳಕೆ ದಾರರಿಗೆ ಉಚಿತ ವೀಕ್ಷಣೆಯನ್ನು ನೀಡಿತ್ತು. ಇದೀಗ ಟಿ20 ವಿಶ್ವಕಪ್​ ಟೂರ್ನಿಯಲ್ಲಿಯೂ ಇದೇ ನಿಲುವನ್ನು ಮುಂದುವರಿಸಿದೆ.

Continue Reading

ಕ್ರೀಡೆ

T20 World Cup 2024: ಟಿ20 ವಿಶ್ವಕಪ್​ನಲ್ಲಿ ‘ನಂದಿನಿ’ ಲಾಂಛನ; ಹರ್ಷ ವ್ಯಕ್ತಪಡಿಸಿದ ಸಿದ್ದರಾಮಯ್ಯ

T20 World Cup 2024: ಸಿಎಂ ಸಿದ್ದರಾಮಯ್ಯ(Siddaramaiah) ಅವರು ಗುರುವಾರ ತಮ್ಮ ಅಧಿಕೃತ ಟ್ವಿಟರ್​ ಎಕ್ಸ್‌ ತಾಣದಲ್ಲಿ ಪೋಸ್ಟ್‌ ಮಾಡಿ ಹರ್ಷ ವ್ಯಕ್ತಪಡಿಸಿ, ‘ನಂದಿನಿ’ ಲಾಂಛನ ಜಾಗತಿಕ ಬ್ರ್ಯಾಂಡ್‌ ಆಗಿ ರೂಪಿಸುವಲ್ಲಿ ಇದು ಮಹತ್ವದ ಹೆಜ್ಜೆ ಎಂದು ಹೇಳಿದ್ದಾರೆ.

VISTARANEWS.COM


on

T20 World Cup 2024
Koo

ಬೆಂಗಳೂರು: ಇನ್ನೇನು ಕೆಲವೇ ದಿನಗಳಲ್ಲಿ ಅಮೆರಿಕ ಮತ್ತು ವೆಸ್ಟ್​ ಇಂಡೀಸ್​ ಜಂಟಿ ಆತಿಥ್ಯದಲ್ಲಿ ನಡೆಯಲಿರುವ ಐಸಿಸಿ ಪುರುಷರ ಟಿ–20 ಕ್ರಿಕೆಟ್‌ ವಿಶ್ವಕಪ್‌(T20 World Cup 2024) ಟೂರ್ನಿಯಲ್ಲಿ ಕರ್ನಾಟಕ ಹಾಲು ಮಹಾ ಮಂಡಳಿ(KMF) ಸ್ಕಾಟ್ಲೆಂಡ್(Scotland) ಮತ್ತು ಐರ್ಲೆಂಡ್(Ireland) ತಂಡಗಳ ಪ್ರಾಯೋಜಕತ್ವ ಪಡೆದಿದೆ. ‘ನಂದಿನಿ’ ಲಾಂಛನ(nandini milk logo) ಇರುವ ನೂತನ ಜೆರ್ಸಿಯನ್ನು ಸ್ಕಾಟ್ಲೆಂಡ್ ತಂಡ ಬುಧವಾರ ಬಿಡುಗಡೆ ಮಾಡಿತ್ತು. ಕೆಎಂಎಫ್‌ ಕೇಂದ್ರ ಕಚೇರಿಯಲ್ಲಿ ನಡೆದ ವರ್ಚುವಲ್‌ ಮಾದರಿಯ ಸಭೆಯಲ್ಲಿ ಈ ಜೆರ್ಸಿಯನ್ನು ಬಿಡುಗಡೆಗೊಳಿಸಲಾಗಿತ್ತು. ಈ ವಿಚಾರವಾಗಿ ಸಿಎಂ ಸಿದ್ದರಾಮಯ್ಯ(Siddaramaiah) ಅವರು ಗುರುವಾರ ತಮ್ಮ ಅಧಿಕೃತ ಟ್ವಿಟರ್​ ಎಕ್ಸ್‌ ತಾಣದಲ್ಲಿ ಪೋಸ್ಟ್‌ ಮಾಡಿ ಹರ್ಷ ವ್ಯಕ್ತಪಡಿಸಿ, ‘ನಂದಿನಿ’ ಲಾಂಛನ ಜಾಗತಿಕ ಬ್ರ್ಯಾಂಡ್‌ ಆಗಿ ರೂಪಿಸುವಲ್ಲಿ ಇದು ಮಹತ್ವದ ಹೆಜ್ಜೆ ಎಂದು ಹೇಳಿದ್ದಾರೆ.

“ರಾಜ್ಯದ ಉತ್ಕೃಷ್ಟ ಗುಣಮಟ್ಟದ ಹಾಲಿನ ಉತ್ಪನ್ನಗಳು ಮತ್ತು ನಾಡಿನ ರೈತರ ಶ್ರಮವೆರಡನ್ನೂ ವಿಶ್ವಕ್ಕೆ ಪರಿಚಯಿಸುವ ಸಂಕಲ್ಪ ನಮ್ಮದು. ನಂದಿನಿಯನ್ನು ಜಾಗತಿಕ ಬ್ರಾಂಡ್ ಆಗಿ ರೂಪಿಸುವಲ್ಲಿ ಇದು ಮಹತ್ವದ ಹೆಜ್ಜೆಯಾಗಲಿದೆ. ಈ ಬಾರಿಯ ಟಿ20 ವಿಶ್ವಕಪ್‌ನಲ್ಲಿ ನಂದಿನಿಯ ಹೆಸರು ರಾರಾಜಿಸಲಿದೆ. ಕನ್ನಡದ ಕಂಪು ಕಂಗೊಳಿಸಲಿದೆ” ಎಂದು ಬಣ್ಣಿಸಿದ್ದಾರೆ.

ಈಗಾಗಲೇ ಮಲೇಷ್ಯಾ, ವಿಯೆಟ್ನಾಂ, ಸಿಂಗಾಪುರ, ಅಮೆರಿಕ, ದುಬೈ, ಯುಎಇ ಸೇರಿ ಮುಂತಾದ ರಾಷ್ಟ್ರಗಳಲ್ಲಿ ಹೆಸರುವಾಸಿಯಾಗಿರುವ ಕರ್ನಾಟಕದ ಹೆಮ್ಮೆಯ ನಂದಿನಿ ಸಂಸ್ಥೆ T20 ವಿಶ್ವಕಪ್ ಪಂದ್ಯಕೂಟದಲ್ಲಿ ಸ್ಕಾಟ್ಲೆಂಡ್ ಮತ್ತು ಐರ್ಲೆಂಡ್ ತಂಡಗಳ ಪ್ರಾಯೋಜಕತ್ವ ಪಡೆದಿರುವುದು ನಿಜಕ್ಕೂ ಹೆಮ್ಮೆಯ ಸಂಗತಿ ಎಂದರು.

ಕೆಎಂಎಫ್‌ ಕ್ರಿಕೆಟ್‌ ಲೋಕಕ್ಕೆ ಕಾಲಿಟ್ಟು ನಂದಿನಿ(nandini milk) ಲೋಗೋವನ್ನು ಜಾಗತಿಕ ಮಟ್ಟದಲ್ಲಿ ಪ್ರಚಾರ ಮಾಡಲು ಮುಂದಾಗಿದೆ. ಜತೆಗೆ ಅಮೂಲ್‌ಗೆ ತೀವ್ರ ಪೈಪೋಟಿ ನೀಡಲಿದೆ. ಕೆಎಂಎಫ್‌ ವ್ಯವಸ್ಥಾಪಕ ನಿರ್ದೇಶಕ ಎಂ.ಕೆ. ಜಗದೀಶ್ ನಮ್ಮ ಬ್ರಾಂಡ್​ ಟಿ20 ವಿಶ್ವಕಪ್​ನಲ್ಲಿ ಕಾಣಿಸಿಕೊಳ್ಳುವುದು ಕರ್ನಾಟಕದ ಪ್ರತಿಯೊಬ್ಬರಿಗೂ ಹೆಮ್ಮೆಯ ಕ್ಷಣವಾಗಿದೆ ಎಂದು ಹೇಳಿದರು.

ಇದನ್ನೂ ಓದಿ T20 World Cup 2024: ಭಾರತ ಕೇವಲ ಒಂದು ಅಭ್ಯಾಸ ಪಂದ್ಯ ಮಾತ್ರ ಆಡಲಿದೆ; ಕಾರಣ ಏನು?

ಸ್ಕಾಟ್ಲೆಂಡ್ ಮತ್ತು ಐರ್ಲೆಂಡ್ ತಂಡಗಳ ಎಡಗೈ ಬ್ಯಾಟ್ಸ್‌ಮನ್‌ಗಳಿಗೆ ಬಲಗೈ ಮತ್ತು ಬಲಗೈ ಬ್ಯಾಟ್ಸ್‌ಮನ್‌ಗಳ ಎಡಗೈ ಮೇಲೆ ನಂದಿನಿ ಲೋಗೋ ಕನ್ನಡ ಮತ್ತು ಇಂಗ್ಲೀಸ್​ನಲ್ಲಿ ಕಾಣಿಸಿಕೊಳ್ಳಲಿದೆ. ಐರ್ಲೆಂಡ್ ತಂಡ ಜೆರ್ಸಿ ಇನ್ನಷ್ಟೇ ಅನಾವರಣಗೊಳ್ಳಬೇಕಿದೆ. ಮಿನಿ ವಿಶ್ವಕಪ್​ ಟೂರ್ನಿಯಲ್ಲಿ ಒಟ್ಟು 55 ಪಂದ್ಯಗಳು ನಡೆಯಲಿವೆ. ಜೂನ್ 1ರಿಂದ 18ರವರೆಗೆ ಗುಂಪು ಹಂತದಲ್ಲಿ 40 ಪಂದ್ಯಗಳು ನಡೆಯಲಿವೆ. ಜೂನ್ 19 ರಿಂದ 24 ರವರೆಗೆ ಸೂಪರ್ 8 ಪಂದ್ಯಗಳು ನಡೆಯಲಿವೆ.

ಮೋಹನ್‌ದಾಸ್‌ ಪೈ ವಿರೋಧ


ಉದ್ಯಮಿ ಮೋಹನ್‌ದಾಸ್‌ ಪೈ (Mohandas Pai) ಅವರು ಸ್ಕಾಟ್ಲೆಂಡ್, ಐರ್ಲೆಂಡ್‌ ತಂಡಗಳಿಗೆ KMF ಪ್ರಾಯೋಜಕತ್ವ ಪಡೆದ ಕಾರಣ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದರು. ಕೆಎಂಎಫ್‌ಗೆ ಕರ್ನಾಟಕ ರಣಜಿ ತಂಡ, ರಾಜ್ಯದ ಕ್ರೀಡಾಪಟುಗಳು, ಕಲಾವಿದರು, ರೈತರ ಮಕ್ಕಳು ಕಾಣುವುದಿಲ್ಲವೇ? ಇವುಗಳಿಗೇಕೆ ಪ್ರಾಯೋಜಕತ್ವ ನೀಡಿಲ್ಲ ಎಂದು ಪ್ರಶ್ನೆ ಮಾಡಿದ್ದರು.

ಕೆಎಂಎಫ್‌ನಿಂದ ವಿದೇಶಿ ಕ್ರಿಕೆಟ್ ತಂಡಗಳಿಗೆ ಪ್ರಾಯೊಜಕತ್ವ ಪಡೆದ ವಿಚಾರದ ಬಗ್ಗೆ ಸೋಷಿಯಲ್‌ ಮೀಡಿಯಾ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಮೋಹನ್‌ ದಾಸ್‌ ಪೈ, ಕರ್ನಾಟಕದ ರಣಜಿ ತಂಡ, ರಾಜ್ಯದ ಕ್ರೀಡಾಪಟುಗಳು, ಕಲಾವಿದರು, ರೈತರ ಮಕ್ಕಳು, ಬಡವರಿಗೆ ವಿದ್ಯಾರ್ಥಿ ವೇತನಗಳಿಗೆ ಏಕೆ ಕೆಎಂಎಫ್‌ ಪ್ರಾಯೋಜಕತ್ವವನ್ನು ನೀಡಬಾರದು? ಕೆಎಂಎಫ್ ಕನ್ನಡಿಗ ತೆರಿಗೆದಾರರ ಹಣ, ಸಬ್ಸಿಡಿ ಮತ್ತು ಬಜೆಟ್‌ನಿಂದ ಧನಸಹಾಯವನ್ನು ಪಡೆದುಕೊಳ್ಳುತ್ತದೆ. ಆದರೆ, ಯಾರಿಗೂ ಗೊತ್ತಿಲ್ಲದ ವಿದೇಶಿ ತಂಡಗಳಿಗೆ ಖರ್ಚು ಮಾಡಲು ಹೊರಟಿದೆ” ಎಂದು ಪ್ರಶ್ನೆ ಮಾಡಿದ್ದಾರೆ. ಅಲ್ಲದೆ, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ಗೆ ಈ ಬಗ್ಗೆ ಟ್ಯಾಗ್‌ ಮಾಡಿ ತಮ್ಮ ಆಕ್ರೋಶ ಹೊರಹಾಕಿದ್ದರು.

Continue Reading

ಕ್ರೀಡೆ

KMF Nandini Logo: ನಂದಿನಿ ಲೋಗೋ ಇರುವ ಜೆರ್ಸಿ ಅನಾವರಣಗೊಳಿಸಿದ ಸ್ಕಾಟ್ಲೆಂಡ್

KMF Nandini Logo: ಸ್ಕಾಟ್ಲೆಂಡ್ ತಂಡದ ಉಪನಾಯಕ ಮ್ಯಾಥ್ಯೂ ಕ್ರಾಸ್ ಮತ್ತು ಬಲಗೈ ಮಧ್ಯಮ ವೇಗಿ ಕ್ರಿಸ್ ಸೋಲ್ ನಂದಿನಿ ಲೋಗೋ ಇರುವ ಜೆರ್ಸಿಯನ್ನು ಅನಾವರಣಗೊಳಿಸಿದರು. ಈ ಬಗ್ಗೆ ಮಾಹಿತಿ ನೀಡಿರುವ ಕೆಎಂಎಫ್‌ ವ್ಯವಸ್ಥಾಪಕ ನಿರ್ದೇಶಕ ಎಂ.ಕೆ. ಜಗದೀಶ್ ನಮ್ಮ ಬ್ರಾಂಡ್​ ಟಿ20 ವಿಶ್ವಕಪ್​ನಲ್ಲಿ ಕಾಣಿಸಿಕೊಳ್ಳುವುದು ಕರ್ನಾಟಕದ ಪ್ರತಿಯೊಬ್ಬರಿಗೂ ಹೆಮ್ಮೆಯ ಕ್ಷಣವಾಗಿದೆ ಎಂದು ಹೇಳಿದರು.

VISTARANEWS.COM


on

T20 World Cup 2024
Koo

ಬೆಂಗಳೂರು: ವೆಸ್ಟ್​ ಇಂಡೀಸ್​ ಮತ್ತು ಅಮೆರಿಕ ಆತಿಥ್ಯದಲ್ಲಿ ಜೂನ್ 1 ರಿಂದ ಆರಂಭವಾಗಲಿರುವ ಪುರುಷರ ಟಿ20 ವಿಶ್ವಕಪ್​ ಟೂರ್ನಿಯಲ್ಲಿ(T20 World Cup 2024) ಕರ್ನಾಟಕ ಹಾಲು ಮಹಾ ಮಂಡಳಿ(KMF) ಈಗಾಗಲೇ 2 ತಂಡಗಳಾದ ಸ್ಕಾಟ್ಲೆಂಡ್(Scotland) ಮತ್ತು ಐರ್ಲೆಂಡ್(Ireland) ತಂಡಗಳ ಪ್ರಾಯೋಜಕತ್ವ ಪಡೆದಿದೆ. ಈ ಮೂಲಕ ಕೆಎಂಎಫ್‌ ಕ್ರಿಕೆಟ್‌ ಲೋಕಕ್ಕೆ ಕಾಲಿಟ್ಟು ನಂದಿನಿ(nandini milk) ಲೋಗೋವನ್ನು ಜಾಗತಿಕ ಮಟ್ಟದಲ್ಲಿ ಪ್ರಚಾರ ಮಾಡಲು ಮುಂದಾಗಿದೆ. ಜತೆಗೆ ಅಮೂಲ್‌ಗೆ ತೀವ್ರ ಪೈಪೋಟಿ ನೀಡಲಿದೆ. ಇದೀಗ ನಂದಿನಿ ಲೋಗೋ(KMF Nandini Logo) ಇರುವ ಜೆರ್ಸಿಯನ್ನು ‘ಕ್ರಿಕೆಟ್ ಸ್ಕಾಟ್ಲೆಂಡ್’ ಅನಾವರಣಗೊಳಿಸಿದೆ.

ಸ್ಕಾಟ್ಲೆಂಡ್ ತಂಡದ ಉಪನಾಯಕ ಮ್ಯಾಥ್ಯೂ ಕ್ರಾಸ್ ಮತ್ತು ಬಲಗೈ ಮಧ್ಯಮ ವೇಗಿ ಕ್ರಿಸ್ ಸೋಲ್ ನಂದಿನಿ ಲೋಗೋ ಇರುವ ಜೆರ್ಸಿಯನ್ನು ಅನಾವರಣಗೊಳಿಸಿದರು. ಈ ಬಗ್ಗೆ ಮಾಹಿತಿ ನೀಡಿರುವ ಕೆಎಂಎಫ್‌ ವ್ಯವಸ್ಥಾಪಕ ನಿರ್ದೇಶಕ ಎಂ.ಕೆ. ಜಗದೀಶ್ ನಮ್ಮ ಬ್ರಾಂಡ್​ ಟಿ20 ವಿಶ್ವಕಪ್​ನಲ್ಲಿ ಕಾಣಿಸಿಕೊಳ್ಳುವುದು ಕರ್ನಾಟಕದ ಪ್ರತಿಯೊಬ್ಬರಿಗೂ ಹೆಮ್ಮೆಯ ಕ್ಷಣವಾಗಿದೆ ಎಂದು ಹೇಳಿದರು.

ಸ್ಕಾಟ್ಲೆಂಡ್ ಮತ್ತು ಐರ್ಲೆಂಡ್ ತಂಡಗಳ ಎಡಗೈ ಬ್ಯಾಟ್ಸ್‌ಮನ್‌ಗಳಿಗೆ ಬಲಗೈ ಮತ್ತು ಬಲಗೈ ಬ್ಯಾಟ್ಸ್‌ಮನ್‌ಗಳ ಎಡಗೈ ಮೇಲೆ ನಂದಿನಿ ಲೋಗೋ ಕಾಣಿಸಿಕೊಳ್ಳಲಿದೆ. ಐರ್ಲೆಂಡ್ ತಂಡ ಜೆರ್ಸಿ ಇನ್ನಷ್ಟೇ ಅನಾವರಣಗೊಳ್ಳಬೇಕಿದೆ. ಮಿನಿ ವಿಶ್ವಕಪ್​ ಟೂರ್ನಿಯಲ್ಲಿ ಒಟ್ಟು 55 ಪಂದ್ಯಗಳು ನಡೆಯಲಿವೆ. ಜೂನ್ 1ರಿಂದ 18ರವರೆಗೆ ಗುಂಪು ಹಂತದಲ್ಲಿ 40 ಪಂದ್ಯಗಳು ನಡೆಯಲಿವೆ. ಜೂನ್ 19 ರಿಂದ 24 ರವರೆಗೆ ಸೂಪರ್ 8 ಪಂದ್ಯಗಳು ನಡೆಯಲಿವೆ.

ಭಾರತ ತನ್ನ ಮೊದಲ ಪಂದ್ಯವನ್ನು ಜೂನ್‌ 5 ರಂದು ಐರ್ಲೆಂಡ್​ ವಿರುದ್ಧ ಆಡಲಿದೆ. ಭಾರತವು ತನ್ನ ಗುಂಪು ಹಂತದ ಎಲ್ಲಾ ಪಂದ್ಯಗಳನ್ನು ಅಮೆರಿಕದಲ್ಲೇ ಆಡಲಿದೆ. ಸಾಂಪ್ರದಾಯಿಕ ಬದ್ಧ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ನಡುವಣ ಪಂದ್ಯ ಜೂನ್ 9 ರಂದು ನ್ಯೂಯಾರ್ಕ್‌ನಲ್ಲಿ ನಡೆಯಲ್ಲಿದೆ. ಲೀಗ್​ ಮುಕ್ತಾಯದ ಬಳಿಕ ಮುಂದಿನ ಹಂತಕ್ಕೆ ಅರ್ಹತೆ ಪಡೆದರೆ, ಸೂಪರ್ 8 ಪಂದ್ಯಗಳನ್ನು ಸಹ ಇಲ್ಲೇ ಆಡಲಿದೆ.

ಇದನ್ನೂ ಓದಿ T20 World Cup 2024: ಭಾರತ ಕೇವಲ ಒಂದು ಅಭ್ಯಾಸ ಪಂದ್ಯ ಮಾತ್ರ ಆಡಲಿದೆ; ಕಾರಣ ಏನು?

ಮೋಹನ್‌ದಾಸ್‌ ಪೈ ವಿರೋಧ


ಉದ್ಯಮಿ ಮೋಹನ್‌ದಾಸ್‌ ಪೈ (Mohandas Pai) ಅವರು ಸ್ಕಾಟ್ಲೆಂಡ್, ಐರ್ಲೆಂಡ್‌ ತಂಡಗಳಿಗೆ KMF ಪ್ರಾಯೋಜಕತ್ವ ಪಡೆದ ಕಾರಣ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದರು. ಕೆಎಂಎಫ್‌ಗೆ ಕರ್ನಾಟಕ ರಣಜಿ ತಂಡ, ರಾಜ್ಯದ ಕ್ರೀಡಾಪಟುಗಳು, ಕಲಾವಿದರು, ರೈತರ ಮಕ್ಕಳು ಕಾಣುವುದಿಲ್ಲವೇ? ಇವುಗಳಿಗೇಕೆ ಪ್ರಾಯೋಜಕತ್ವ ನೀಡಿಲ್ಲ ಎಂದು ಪ್ರಶ್ನೆ ಮಾಡಿದ್ದರು.

ಕೆಎಂಎಫ್‌ನಿಂದ ವಿದೇಶಿ ಕ್ರಿಕೆಟ್ ತಂಡಗಳಿಗೆ ಪ್ರಾಯೊಜಕತ್ವ ಪಡೆದ ವಿಚಾರದ ಬಗ್ಗೆ ಸೋಷಿಯಲ್‌ ಮೀಡಿಯಾ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಮೋಹನ್‌ ದಾಸ್‌ ಪೈ, ಕರ್ನಾಟಕದ ರಣಜಿ ತಂಡ, ರಾಜ್ಯದ ಕ್ರೀಡಾಪಟುಗಳು, ಕಲಾವಿದರು, ರೈತರ ಮಕ್ಕಳು, ಬಡವರಿಗೆ ವಿದ್ಯಾರ್ಥಿ ವೇತನಗಳಿಗೆ ಏಕೆ ಕೆಎಂಎಫ್‌ ಪ್ರಾಯೋಜಕತ್ವವನ್ನು ನೀಡಬಾರದು? ಕೆಎಂಎಫ್ ಕನ್ನಡಿಗ ತೆರಿಗೆದಾರರ ಹಣ, ಸಬ್ಸಿಡಿ ಮತ್ತು ಬಜೆಟ್‌ನಿಂದ ಧನಸಹಾಯವನ್ನು ಪಡೆದುಕೊಳ್ಳುತ್ತದೆ. ಆದರೆ, ಯಾರಿಗೂ ಗೊತ್ತಿಲ್ಲದ ವಿದೇಶಿ ತಂಡಗಳಿಗೆ ಖರ್ಚು ಮಾಡಲು ಹೊರಟಿದೆ” ಎಂದು ಪ್ರಶ್ನೆ ಮಾಡಿದ್ದಾರೆ. ಅಲ್ಲದೆ, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ಗೆ ಈ ಬಗ್ಗೆ ಟ್ಯಾಗ್‌ ಮಾಡಿ ತಮ್ಮ ಆಕ್ರೋಶ ಹೊರಹಾಕಿದ್ದರು.

Continue Reading

ಕ್ರೀಡೆ

T20 World Cup 2024: ಭಾರತ ಕೇವಲ ಒಂದು ಅಭ್ಯಾಸ ಪಂದ್ಯ ಮಾತ್ರ ಆಡಲಿದೆ; ಕಾರಣ ಏನು?

T20 World Cup 2024: ಭಾರತೀಯ ಆಟಗಾರರು ವ್ಯಾಪಕ ಪ್ರಯಾಣ ಮತ್ತು ಐಪಿಎಲ್​ನಿಂದ ದಣಿದಿರುವ ಕಾರಣ ಕೇವಲ ಒಂದು ಅಭ್ಯಾಸ ಪಂದ್ಯಕ್ಕೆ ಮೊರೆ ಹೋಗಿದ್ದಾರೆ ಎಂದು ಕ್ರಿಕ್​ಬಜ್ ತಿಳಿಸಿದೆ.

VISTARANEWS.COM


on

T20 World Cup 2024
Koo

ಮುಂಬಯಿ: ಅಮೆರಿಕ ಮತ್ತು ವೆಸ್ಟ್​ ಇಂಡೀಸ್​ ಜಂಟಿ ಆತಿಥ್ಯದಲ್ಲಿ ಜೂನ್​ 1ರಿಂದ 29ರ ತನಕ ನಡೆಯಲಿರುವ ಟಿ20 ವಿಶ್ವಕಪ್​ ಟೂರ್ನಿಯಲ್ಲಿ(T20 World Cup 2024) ಭಾರತ ತಂಡ(Team India) ಕೇವಲ 1 ಅಭ್ಯಾಸ ಪಂದ್ಯವನ್ನಾಡಲು ನಿರ್ಧರಿಸಿದೆ ಎಂದು ವರದಿಯಾಗಿದೆ. ವಿಶ್ವಕಪ್​ಗೆ ಮುನ್ನ ಎಲ್ಲ 20 ತಂಡಗಳು ತಮ್ಮ ಆಗಮನಕ್ಕೆ ತಕ್ಕಂತೆ ತಲಾ 2 ಅಭ್ಯಾಸ ಪಂದ್ಯಗಳನ್ನು ಆಡಲಿವೆ. ಆದರೆ ಭಾರತಕ್ಕೆ ಇದು ಸಾಧ್ಯವಾಗುದಿಲ್ಲ ಎನ್ನಲಾಗಿದೆ.

ಕ್ರಿಕ್​ಬಜ್​ ವರದಿಯ ಪ್ರಕಾರ, ಭಾರತ ಕೇವಲ ಒಂದು ಅಭ್ಯಾಸ ಪಂದ್ಯವನ್ನಾಡಲಿ ಎಂದು ತಿಳಿಸಿದೆ. ಹೌದು, ವೇಳಾಪಟ್ಟಿ ಪ್ರಕಾರ ಭಾರತ ತಂಡವು ಮೇ 21 ರಂದು ನ್ಯೂಯಾರ್ಕ್‌ಗೆ ತೆರಳ ಬೇಕಿತ್ತು. ಆದರೆ, ಐಪಿಎಲ್​ ಟೂರ್ನಿ ಮೇ 26ಕ್ಕೆ ಮುಕ್ತಾಯ ಕಾಣಲಿದೆ. ಹೀಗಾಗಿ ಆಟಗಾರರಿಗೆ ಮುಂಚಿತವಾಗಿ ಪ್ರಯಾಣಿಸಲು ಸಾಧ್ಯವಾಗುತ್ತಿಲ್ಲ. ಜತೆಗೆ ಭಾರತೀಯ ಆಟಗಾರರು ವ್ಯಾಪಕ ಪ್ರಯಾಣ ಮತ್ತು ಐಪಿಎಲ್​ನಿಂದ ದಣಿದಿರುವ ಕಾರಣ ಕೇವಲ ಒಂದು ಅಭ್ಯಾಸ ಪಂದ್ಯಕ್ಕೆ ಮೊರೆ ಹೋಗಿದ್ದಾರೆ ಎಂದು ಕ್ರಿಕ್​ಬಜ್ ತಿಳಿಸಿದೆ.

ಭಾರತದ ಅಭ್ಯಾಸ ಪಂದ್ಯಗಳು ಫ್ಲೋರಿಡಾದಲ್ಲಿ ಮತ್ತು ನ್ಯೂಯಾರ್ಕ್‌ನಲ್ಲಿ ನಡೆಯಲಿದೆ. ಆದರೆ, ಭಾರತ ನ್ಯೂಯಾರ್ಕ್‌ನಲ್ಲಿ ನಡೆಯುವ ಅಭ್ಯಾಸ ಪಂದ್ಯದಲ್ಲಿ ಮಾತ್ರ ಆಡಲಿದೆ ಎನ್ನಲಾಗಿದೆ. ನ್ಯೂಯಾರ್ಕ್​ನಿಂದ ಫ್ಲೋರಿಡಾಕ್ಕೆ(ಹೋಗಲು ಮತ್ತು ಬರಲು) ಒಟ್ಟು 34 ಗಂಟೆಗಳ ಪ್ರಯಾಣದ ಅವಧಿ ತಗುಲುತ್ತದೆ. ಭಾರತದ ಎಲ್ಲ ಲೀಗ್​ ಪಂದ್ಯಗಳು ಕೂಡ ನ್ಯೂಯಾರ್ಕ್​ನಲ್ಲಿ ನಡೆಯಲಿದೆ. ಕೇವಲ ಒಂದು ಅಭ್ಯಾಸ ಪಂದ್ಯಕ್ಕಾಗಿ ಫ್ಲೋರಿಡಾಕ್ಕೆ ಹೋಗಿ ಬಂದರೆ ಆಟಗಾರರು ಮತ್ತಷ್ಟು ದಣಿಯುತ್ತಾರೆ. ಇದನ್ನು ತಪ್ಪಿಸುವ ಸಲುವಾಗಿ ಒಂದು ಪಂದ್ಯ ಮಾತ್ರ ಆಡಲು ತೀರ್ಮಾನಿಸಲಾಗಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ T20 World Cup 2024: 20 ತಂಡಗಳ ಪೈಕಿ 19 ತಂಡ ಪ್ರಕಟ; ಪಾಕಿಸ್ತಾನ ಮಾತ್ರ ಬಾಕಿ

ಟೂರ್ನಿಯ ಸಂಘಟಕರು ಭಾರತದ ಈ ನಿಲುವಿಗೆ ಒಪ್ಪಿಕೊಳ್ಳುತ್ತಾರೆಯೇ ಎನ್ನುವುದು ಕೂಡ ಇಲ್ಲಿ ಮುಖ್ಯವಾಗಿದೆ. ಏಕೆಂದರೆ ಭಾರತದ ಪಂದ್ಯ ಎಂದರೆ ವಾಣಿಜ್ಯ ಮೌಲ್ಯವನ್ನು ಹೊಂದಿದಿದ್ದು, ಸಾಕಷ್ಟು ಹಣಗಳಿಕೆಯ ಅವಕಾಶಗಳ ಕಾರಣದಿಂದಾಗಿ ಯಾವಾಗಲೂ ದೂರದರ್ಶನದಲ್ಲಿ ಪ್ರಸಾರವಾಗುತ್ತದೆ. ಜಾಹಿರಾತುದಾರರು ಕೂಡ ಕೋಟಿ ಮೊತ್ತದ ಬಂಡವಾಳ ಹಾಕಿರುತ್ತಾರೆ. ಹೀಗಾಗಿ ಸಂಘಟಕರ ಸಮ್ಮತಿಯೂ ಕೂಡ ಇಲ್ಲಿ ಪ್ರಧಾನ ಪಾತ್ರವಹಿಸುತ್ತದೆ.

ಟೂರ್ನಿಯಲ್ಲಿ ಒಟ್ಟು 55 ಪಂದ್ಯಗಳು ನಡೆಯಲಿವೆ. ಜೂನ್ 1ರಿಂದ 18ರವರೆಗೆ ಗುಂಪು ಹಂತದಲ್ಲಿ 40 ಪಂದ್ಯಗಳು ನಡೆಯಲಿವೆ. ಜೂನ್ 19 ರಿಂದ 24 ರವರೆಗೆ ಸೂಪರ್ 8 ಪಂದ್ಯಗಳು ನಡೆಯಲಿವೆ. ಸಾಂಪ್ರದಾಯಿಕ ಬದ್ಧ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ನಡುವಣ ಪಂದ್ಯ ಜೂನ್ 9 ರಂದು ನ್ಯೂಯಾರ್ಕ್‌ನಲ್ಲಿ ನಡೆಯಲ್ಲಿದೆ. ಭಾರತ ತನ್ನ ಮೊದಲ ಪಂದ್ಯವನ್ನು ಜೂನ್‌ 5 ರಂದು ಐರ್ಲೆಂಡ್​ ವಿರುದ್ಧ ಆಡಲಿದೆ. ಭಾರತವು ತನ್ನ ಗುಂಪು ಹಂತದ ಎಲ್ಲಾ ಪಂದ್ಯಗಳನ್ನು ಅಮೆರಿಕದಲ್ಲೇ ಆಡಲಿದೆ. ಲೀಗ್​ ಮುಕ್ತಾಯದ ಬಳಿಕ ಮುಂದಿನ ಹಂತಕ್ಕೆ ಅರ್ಹತೆ ಪಡೆದರೆ, ಸೂಪರ್ 8 ಪಂದ್ಯಗಳನ್ನು ಸಹ ಇಲ್ಲೇ ಆಡಲಿದೆ.

ಉಚಿತ ಪ್ರಸಾರ


ಟಿ20 ವಿಶ್ವಕಪ್​ ಟೂರ್ನಿ ಆರಂಭಕ್ಕೂ ಮುನ್ನವೇ ​ಡಿಸ್ನಿ + ಹಾಟ್‌ಸ್ಟಾರ್(Disney+ Hotstar) ಕ್ರಿಕೆಟ್​ ಅಭಿಮಾನಿಗಳಿಗೆ ಸಿಹಿ ಸುದ್ದಿಯೊಂದನ್ನು ನೀಡಿದೆ. ಭಾರತದಲ್ಲಿನ ಸ್ಮಾರ್ಟ್‌ಫೋನ್ ಬಳಕೆದಾರರು ಈ ವರ್ಷದ ಐಸಿಸಿ ಪುರುಷರ ಟಿ20 ಕ್ರಿಕೆಟ್ ವಿಶ್ವಕಪ್ ಅನ್ನು OTT ಪ್ಲಾಟ್‌ಫಾರ್ಮ್‌ನಲ್ಲಿ ಉಚಿತವಾಗಿ ವೀಕ್ಷಿಸಲು ಸಾಧ್ಯವಾಗುತ್ತದೆ ಎಂದು ಡಿಸ್ನಿ + ಹಾಟ್‌ಸ್ಟಾರ್ ಈಗಾಗಲೇ ಘೋಷಿಸಿದೆ. ಕಳೆದ ವರ್ಷ ಏಕದಿನ ವಿಶ್ವಕಪ್ ಮತ್ತು ಏಷ್ಯಾ ಕಪ್‌ ಟೂರ್ನಿಯನ್ನು ಕೂಡ ಡಿಸ್ನಿ + ಹಾಟ್‌ಸ್ಟಾರ್, ಮೊಬೈಲ್​ ಬಳಕೆ ದಾರರಿಗೆ ಉಚಿತ ವೀಕ್ಷಣೆಯನ್ನು ನೀಡಿತ್ತು. ಇದೀಗ ಟಿ20 ವಿಶ್ವಕಪ್​ ಟೂರ್ನಿಯಲ್ಲಿಯೂ ಇದೇ ನಿಲುವನ್ನು ಮುಂದುವರಿಸಿದೆ.

Continue Reading
Advertisement
JP Nadda
Lok Sabha Election 20246 mins ago

JP Nadda: ಬಿಜೆಪಿ ಈಗ ಬೆಳೆದಿದೆ, ಸಶಕ್ತವಾಗಿದೆ; ಆರ್‌ಎಸ್‌ಎಸ್ ನೆರವಿನ ಪ್ರಶ್ನೆಗೆ ನಡ್ಡಾ ಉತ್ತರ

IPL 2024
ಪ್ರಮುಖ ಸುದ್ದಿ8 mins ago

IPL 2024 : ಬೆಂಗಳೂರಿನ ಬೀದಿ ಬೀದಿಗಳಲ್ಲಿ ‘ಧೋನಿ, ಧೋನಿ’ ಘೋಷಣೆ, ಇಲ್ಲಿದೆ ವಿಡಿಯೊ

Prajwal Revanna Case pen drive and hard disk were found during the raids in Hassan and Bengaluru
ಕ್ರೈಂ17 mins ago

Prajwal Revanna Case: ವಿದೇಶದಿಂದ ಪ್ರಜ್ವಲ್‌ ಕರೆತರೋಕೆ ಎಸ್‌ಐಟಿ ಮಾಸ್ಟರ್‌ ಸ್ಟ್ರೋಕ್!‌

Singer Suchitra makes shocking aligeations against shahrukh khan
ಬಾಲಿವುಡ್33 mins ago

Singer Suchitra: ಶಾರುಖ್ – ಕರಣ್ ಸಲಿಂಗಿಗಳು ಎಂದು ಹೇಳಿ ವಿವಾದ ಸೃಷ್ಟಿಸಿದ ತಮಿಳು ಗಾಯಕಿ!

Lok Sabha Election 2024
ವೈರಲ್ ನ್ಯೂಸ್43 mins ago

Lok Sabha Election 2024: ʼನನ್ನ ಸ್ಟೈಲು ಬೇರೇನೆ…ʼ; ಕತ್ತೆ ಮೂಲಕ ಪ್ರಚಾರ ನಡೆಸುವ ಅಭ್ಯರ್ಥಿಯ ಕಾರ್ಯ ವೈಖರಿ ಈಗ ವೈರಲ್‌

IPL 2024
ಕ್ರೀಡೆ44 mins ago

IPL 2024 : ಹಾರ್ದಿಕ್ ಪಾಂಡ್ಯಗೆ ನಿಷೇಧ ಹೇರಿದ ಬಿಸಿಸಿಐ; ಮುಂದಿನ ಪಂದ್ಯದಲ್ಲಿ ಆಡದಂತೆ ತಾಕೀತು

natural ice cream 1 rajamarga coumn
ಅಂಕಣ51 mins ago

ರಾಜಮಾರ್ಗ ಅಂಕಣ: ಅವರ ನೆನಪೇ ನ್ಯಾಚುರಲ್‌ ಐಸ್‌ಕ್ರೀಂನ ತಾಜಾ ಹಣ್ಣಿನ ರುಚಿ, ಪರಿಮಳದಂತೆ!

naturals ic cream raghunandan kamath
ಶ್ರದ್ಧಾಂಜಲಿ1 hour ago

Raghunandan Kamath: ʼನ್ಯಾಚುರಲ್ಸ್‌ʼ ಖ್ಯಾತಿಯ ʼಐಸ್‌ಕ್ರೀಂ ಮ್ಯಾನ್‌ʼ ರಘುನಂದನ ಕಾಮತ್‌ ಇನ್ನಿಲ್ಲ

IPL 2024
ಪ್ರಮುಖ ಸುದ್ದಿ1 hour ago

IPL 2024 : ಸಹ ಆಟಗಾರ ರೊಮಾರಿಯೊ ಶೆಫರ್ಡ್​ಗೆ ಆಟೋಗ್ರಾಫ್​ ಕೊಟ್ಟ ರೋಹಿತ್​ , ಚಿತ್ರಗಳು ಇಲ್ಲಿವೆ

Kajal Aggarwal Kannappa Movie Entry
ಟಾಲಿವುಡ್2 hours ago

Kajal Aggarwal: ವಿಷ್ಣು ಮಂಚು `ಕಣ್ಣಪ್ಪ’ ಚಿತ್ರಕ್ಕೆ ಕಾಜಲ್ ಅಗರ್​ವಾಲ್​​ ಎಂಟ್ರಿ; ಪಾತ್ರ ಏನಿರಬಹುದು?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case JDS calls CD Shivakumar pen drive gang
ರಾಜಕೀಯ15 hours ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ1 day ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ2 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು2 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ3 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ3 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ4 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20244 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌