ಬೆಂಗಳೂರು: ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಐಸಿಸಿ ಟಿ೨೦ ವಿಶ್ವ ಕಪ್(T20 World Cup) ಕ್ರಿಕೆಟ್ ಸಮರದಲ್ಲಿ ಸೆಮಿ ಫೈನಲ್ ಪಂದ್ಯಗಳಿಗೂ ಮುನ್ನ ಯಾವ ತಂಡ ಫೈನಲ್ ಪ್ರವೇಶಿಸಲಿದೆ, ಯಾವ ತಂಡ ಚಾಂಪಿಯನ್ ಆಗಲಿದೆ ಎಂದು ದಕ್ಷಿಣ ಆಫ್ರಿಕಾದ ಮಾಜಿ ಸ್ಫೋಟಕ ಬ್ಯಾಟರ್ ಎಬಿ ಡಿ ವಿಲಿಯರ್ಸ್ ಭವಿಷ್ಯ ನುಡಿದಿದ್ದಾರೆ.
ಮಂಗಳವಾರ ಸಂದರ್ಶನವೊಂದರಲ್ಲಿ ಮಾತನಾಡಿದ ಮಿಸ್ಟರ್ ೩೬೦ ಖ್ಯಾತಿಯ ಎಬಿಡಿ, ಈ ಬಾರಿ ಟಿ೨೦ ವಿಶ್ವ ಕಪ್‌ನಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು ಫೈನಲ್ ಪ್ರವೇಶಿಸಲಿವೆ. ಆದರೆ ಫೈನಲ್‌ನಲ್ಲಿ ಟೀಮ್ ಇಂಡಿಯಾ ಚಾಂಪಿಯನ್ ಆಗಲಿದೆ ಎಂದು ತಿಳಿಸಿದ್ದಾರೆ.
“ಸೂರ್ಯಕುಮಾರ್ ಯಾದವ್ ಮತ್ತು ವಿರಾಟ್ ಕೊಹ್ಲಿ ಅದ್ಭುತ ಫಾರ್ಮ್‌ನಲ್ಲಿದ್ದಾರೆ. ಇಡೀ ಭಾರತ ತಂಡ ಉತ್ತಮ ಸಾಮರ್ಥ್ಯ ಹೊಂದಿದೆ. ಟೂರ್ನಿಯುದ್ದಕ್ಕೂ ಭಾರತ ತಂಡ ಉತ್ತಮ ಪ್ರದರ್ಶನವನ್ನು ತೋರಿದೆ. ಈ ನಿಟ್ಟಿನಲ್ಲಿ ಭಾರತ ತಂಡ ಚಾಂಪಿಯನ್ ಆಗುವುದರಲ್ಲಿ ಯಾವುದೇ ಅನುಮಾನವಿಲ್ಲ” ಎಂದು ಎಬಿ ಡಿ ವಿಲಿಯರ್ಸ್ ತಿಳಿಸಿದ್ದಾರೆ.
ನಮ್ಮ ತಂಡದ ಸೋಲು ಬೇಸರ ತಂದಿದೆ
ಆರಂಭಿಕ ಹಂತದಲ್ಲಿ ಉತ್ತಮ ಪ್ರದರ್ಶನ ತೋರುವ ಮೂಲಕ ಆತ್ಮವಿಶ್ವಾಸ ಮೂಡಿಸಿದ್ದ ನಮ್ಮ ತಂಡ ಸೆಮಿಫೈನಲ್‌ಗೇರದ ಬಗ್ಗೆ ನನಗೆ ಬೇಸರವಿಲ್ಲ. ಆದರೆ ಕೂಟದ ಬಲಿಷ್ಠ ತಂಡವಾದ ಭಾರತವನ್ನು ಸೋಲಿಸಿದರೂ ದುರ್ಬಲ ನೆದರ್ಲೆಂಡ್ಸ್ ತಂಡದ ವಿರುದ್ಧದ ಸೋಲು ಮಾತ್ರ ನಿರಾಶಾದಾಯಕವಾಗಿದೆ. ದುರದೃಷ್ಟವಶಾತ್ ಯಾವುದೋ ಒಂದು ಹಂತದಲ್ಲಿ ನಾನು ಅಂದುಕೊಂಡದ್ದು ತಪ್ಪಾಯಿತು. ನೆದರ್ಲೆಂಡ್ಸ್ ವಿರುದ್ಧ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿದ್ದೇ ಸೋಲಿಗೆ ಪ್ರಮುಖ ಕಾರಣ ಎಂದು ನನಗನಿಸುತ್ತಿದೆ ಎಂದು ಎಬಿಡಿ ತಿಳಿಸಿದ್ದಾರೆ.
ಇದನ್ನೂ ಓದಿ | T20 World Cup | ಅಂಪೈರ್‌ಗಳ ಪಟ್ಟಿ ಕಂಡು ಟೀಮ್ ಇಂಡಿಯಾ ಅಭಿಮಾನಿಗಳಲ್ಲಿ ಸಂತಸ; ಕಾರಣ ಏನು?