Site icon Vistara News

Taekwondo | ವಿಶ್ವ ಚಾಂಪಿಯನ್‌ಷಿಪ್‌ನಲ್ಲಿ ಮಂಗಳೂರಿನ ಸಂಹಿತಾಗೆ ಬೆಳ್ಳಿ

Taekwondo

ಕೌಲಲಾಂಪುರ/ ಮಂಗಳೂರು : ಮಲೇಷ್ಯಾ ಕೌಲಾಲಂಪುರದ ಜುರಾ ಸ್ಟೇಡಿಯಂನಲ್ಲಿ ನಡೆದ 14ನೇ ಅಂತಾರಾಷ್ಟ್ರೀಯ ಮಟ್ಟದ ಟೇಕ್ವಾಂಡೋ (Taekwondo) ಚಾಂಪಿಯನ್‌ಪಿಪ್‌ನ ಮಹಿಳೆಯರ (ಕಿರಿಯ) ವಿಭಾಗದಲ್ಲಿ ಭಾರತವನ್ನು ಪ್ರತಿನಿಧಿಸಿದ ಮಂಗಳೂರಿನ ಸಂಹಿತಾ ಅಲೆವೂರಾಯ ಬೆಳ್ಳಿ ಪದಕ ಗೆದ್ದುಕೊಂಡಿದ್ದಾರೆ.

ಮಂಗಳೂರಿನ ಶಾರದಾ ವಿದ್ಯಾಲಯದ ಪ್ರಥಮ ಪಿಯುಸಿ ವಿದ್ಯಾರ್ಥಿನಿಯಾಗಿರುವ ಸಂಹಿತಾ, ಕದ್ರಿ ವಾಸುದೇವ ಭಟ್‌ ಕುಂಜತ್ತೋಡಿ ಮತ್ತು ದೀಪಾ ಕೆ.ಎಸ್.‌ ಅವರ ಪುತ್ರಿ. ಸಾಧಕಿ ಸಂಹಿತಾ ಅವರು ಕೋಚ್‌ ಗುರುರಾಜ್‌ ಇಟಗಿ ಅವರ ಬಳಿ ತರಬೇತಿ ಪಡೆಯುತ್ತಿದ್ದಾರೆ. ಸಂಹಿತಾ ಅವರು 2022ರಲ್ಲಿ ನೇಪಾಳದಲ್ಲಿ ನಡೆದ ವಿಶ್ವಮಟ್ಟದ ಟೇಕ್ವಾಂಡೋ ಕೂಟದಲ್ಲಿ ಚಿನ್ನದ ಪದಕ ಗಳಿಸಿದ್ದಾರೆ.

Exit mobile version