Site icon Vistara News

Team India Arrival: ಪ್ರಧಾನಿ ಮೋದಿ ಔತಣ ಕೂಟಕ್ಕೆ ತೆರಳಿದ ಟೀಮ್​ ಇಂಡಿಯಾ

Team India Arrival

Team India Arrival: Rohit Sharma and Co. reach PM Narendra Modi's residence with T20 World Cup trophy

ನವದೆಹಲಿ: ಟಿ20 ವಿಶ್ವಕಪ್​ ಟ್ರೋಫಿಯೊಂದಿಗೆ ತವರಿಗೆ ಮರಳಿದ ಟೀಮ್​ ಇಂಡಿಯಾ ಇದೀಗ ದೆಹಲಿಯ ಲೋಕ ಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಿ ನರೇಂದ್ರ ಮೋದಿ (PM Narendra Modi)ಅವರ ನಿವಾಸಕ್ಕೆ(Team India Arrival) ಭೇಟಿ ನೀಡಿದೆ. ವಿಶ್ವಕಪ್​ ಗೆಲುವಿನ ಕುರಿತು ಆಟಗಾರರು ಪ್ರಧಾನಿ ಜತೆ ತಮ್ಮ ಅನುಭವ ಹಂಚಿಕೊಂಡ ಬಳಿಕ ಮೋದಿ ಜತೆ ಭೋಜನಕೂಟದಲ್ಲಿ ಭಾಗವಹಿಸಲಿದ್ದಾರೆ. ಇದಾದ ಬಳಿಕ ಆಟಗಾರರು ವಿಶೇಷ ವಿಮಾನದಲ್ಲಿ ಮುಂಬೈಗೆ ತೆರಳಲಿದ್ದಾರೆ. ಅಲ್ಲಿ ತೆರೆದ ವಾಹನದಲ್ಲಿ ಆಟಗಾರರನ್ನು ಮೆರವಣಿಗೆ ನಡೆಸಿ ಬಳಿಕ ಅದ್ಧೂರಿ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ.

ವೆಸ್ಟ್‌ ಇಂಡೀಸ್‌ನಲ್ಲಿ ನಡೆದ ಐಸಿಸಿ ಟಿ-20 ವಿಶ್ವಕಪ್‌ (T20 World Cup 2024) ಟೂರ್ನಿಯ ಫೈನಲ್‌ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಬಗ್ಗುಬಡಿದ ರೋಹಿತ್‌ ಶರ್ಮಾ (Rohit Sharmaನೇತೃತ್ವದ ಭಾರತದ ಕ್ರಿಕೆಟ್‌ ತಂಡವು ಭಾರತಕ್ಕೆ ಆಗಮಿಸಿದೆ. ಏರ್‌ ಇಂಡಿಯಾ ಏರ್‌ಲೈನ್ಸ್‌ನ ವಿಶೇಷ ಚಾರ್ಟರ್ಡ್‌ ವಿಮಾನದಲ್ಲಿ ಭಾರತ ತಂಡದ (Team India) ಆಟಗಾರರು ದೆಹಲಿಗೆ ಆಗಮಿಸಿದ್ದಾರೆ. ಪ್ರತಿಕೂಲ ಹವಾಮಾನದ ಕಾರಣದಿಂದ ಆಟಗಾರರು ಕೆಲವು ದಿನ ಬಾರ್ಬಡಾಸ್​ನಲ್ಲೇ ಸಿಲುಕಿ ಹಾಕಿಕೊಂಡಿದ್ದರು. ಇದೀಗ ತವರಿಗೆ ಆಗಮಿಸಿದ ವಿಶ್ವಕಪ್‌ ಹೀರೋಗಳಿಗೆ ಅಭಿಮಾನಿಗಳು ಭರ್ಜರಿ ಸ್ವಾಗತ ಕೋರಿದ್ದಾರೆ.

ಬೆರಿಲ್ ಚಂಡಮಾರುತದಿಂದ ಉಂಟಾದ ವಿಳಂಬದಿಂದಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ವಿಶೇಷ ಚಾರ್ಟರ್ ವಿಮಾನದ ವ್ಯವಸ್ಥೆ ಮಾಡಿತ್ತು. ಭಾರತೀಯ ಪತ್ರಕರ್ತರು, ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ ಮತ್ತು ಕಾರ್ಯದರ್ಶಿ ಜಯ್ ಶಾ ವಿಮಾನದಲ್ಲಿದ್ದರು ಎಂದು ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ತಿಳಿಸಿದ್ದಾರೆ. ವಿಮಾನ ಬಂದಿಳಿಯುತ್ತಿದ್ದಂತೆ ಅಭಿಮಾನಿಗಳು ಜಯಘೋಷ ಕೂಗಿ ಸ್ವಾಗತಿಸಿದರು.

ಇದನ್ನೂ ಓದಿ Team India: ತವರಿಗೆ ಬಂದ ಖಷಿಯಲ್ಲಿ ಕುಣಿದು ಕುಪ್ಪಳಿಸಿದ ನಾಯಕ ರೋಹಿತ್​, ಹಾರ್ದಿಕ್​, ಪಂತ್; ವಿಡಿಯೊ ವೈರಲ್​​

ವಿಜಯಯಾತ್ರೆಗೆ ಸಕಲ ಸಿದ್ಧತೆ

ವಿಶ್ವಕಪ್‌ ಗೆದ್ದ ಭಾರತ ತಂಡದ ಆಟಗಾರರಿಗೆ ಮುಂಬೈನಲ್ಲಿ ಗುರುವಾರ ಸಂಜೆ ವಿಜಯಯಾತ್ರೆ ಆಯೋಜಿಸಲಾಗಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಸಂಜೆ 5 ಗಂಟೆಗೆ ಭಾರತ ತಂಡದ ಆಟಗಾರರನ್ನು ಅದ್ಧೂರಿಯಾಗಿ ಸ್ವಾಗತಿಸಲಾಗುತ್ತದೆ. ಇದಕ್ಕೂ ಮೊದಲು ಅಂದರೆ, ಸಂಜೆ 4 ಗಂಟೆಗೆ ಮರೀನ್‌ನಿಂದ ವಾಂಖೆಡೆ ಸ್ಟೇಡಿಯಂವರೆಗೆ ತೆರೆದ ವಾಹನದಲ್ಲಿ ಮೆರವಣಿಗೆ ಬರಲಿದ್ದಾರೆ. ವಿಕ್ಟರಿ ಪರೇಡ್‌ನಲ್ಲಿ ಸಾವಿರಾರು ಜನ ಪಾಲ್ಗೊಳ್ಳುವ ನಿರೀಕ್ಷೆ ಇದೆ. ಎಲ್ಲರೂ ಬನ್ನಿ ಎಂಬುದಾಗಿ ರೋಹಿತ್‌ ಶರ್ಮಾ ಅವರು ಈಗಾಗಲೇ ಆಹ್ವಾನ ನೀಡಿದ್ದಾರೆ.

Exit mobile version