ಮುಂಬಯಿ: ಗೌತಮ್ ಗಂಭೀರ್(Gautam Gambhir) ಅವರು ಟೀಮ್ ಇಂಡಿಯಾದ ಮುಂದಿನ ಕೋಚ್(Team India Coach) ಆಗುವುದು ಬಹುತೇಖ ಖಚಿತ ಎನ್ನಲಾಗಿದೆ. ಅಧಿಕೃತ ಘೋಷಣೆಯೊಂದು ಮಾತ್ರ ಬಾಕಿ ಉಳಿದಿದೆ. ಈ ಮಧ್ಯೆ ಭಾರತಕ್ಕೆ 2 ವಿಶ್ವಕಪ್ ಗೆದ್ದ ಮಹೇಂದ್ರ ಸಿಂಗ್ ಧೋನಿ(MS Dhoni) ಕೋಚ್ ಆದರೆ ಉತ್ತಮ ಎಂದು ಕೆಲವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆದರೆ ಧೋನಿ ಕೋಚ್ ಹುದ್ದೆಗೆ ಅನರ್ಹರು ಎಂದು ತಿಳಿದುಬಂದಿದೆ.
ಹೌದು, ಬಿಸಿಸಿಐ(BCCI) ನಿಯಮಗಳ ಪ್ರಕಾರ ಭಾರತ ತಂಡದ ಕೋಚ್ ಹುದ್ದೆಗೆ ಅರ್ಜಿ ಸಲ್ಲಿಸುವವರು ಎಲ್ಲಾ ಮಾದರಿಯ ಕ್ರಿಕೆಟ್ಗೆ ವಿದಾಯ ಹೇಳಿರಬೇಕು. ಧೋನಿ ಇನ್ನೂ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ. ಹೀಗಾಗಿ ಅವರು ಅರ್ಜಿ ಸಲ್ಲಿಸಿದರೂ ಕೂಡ ಅದು ಅನರ್ಹಗೊಳ್ಳಲಿದೆ. ಧೋನಿ ಎಲ್ಲ ಕ್ರಿಕೆಟ್ ವಿದಾಯ ಹೇಳಿದರೆ ಅವರು ಕೂಡ ಕೋಚ್ ಹುದ್ದೆಗೆ ಅರ್ಹರಾಗಿತ್ತಾರೆ. 2021 ರಲ್ಲಿ ಭಾರತದ ಆತಿಥ್ಯದಲ್ಲಿ ಯುಎಇಯಲ್ಲಿ ನಡೆದಿದ್ದ ಟಿ 20 ವಿಶ್ವಕಪ್‌ನಲ್ಲಿ ಎಂಎಸ್ ಧೋನಿ ಭಾರತ ತಂಡಕ್ಕೆ ಮೆಂಟರ್ ಆಗಿ ಕಾರ್ಯನಿರ್ವಹಿಸಿದ್ದರು.
ಇದನ್ನೂ ಓದಿ Team India Coach: ಟೀಮ್ ಇಂಡಿಯಾದ ಕೋಚ್ ಹುದ್ದೆಗೆ ಅರ್ಜಿ ಸಲ್ಲಿಸಿದ ಪ್ರಧಾನಿ ಮೋದಿ, ಅಮಿತ್ ಶಾ!
ಈ ಬಾರಿಯ ಐಪಿಎಲ್ ಬಳಿಕ ಧೋನಿ ನಿವೃತ್ತಿ ಹೊಂದುತ್ತಾರೆ ಎಂದು ಎಲ್ಲರೂ ಭಾವಿಸಿದ್ದರು. ಆದರೆ ಮೂಲಗಳ ಪ್ರಕಾರ ಧೋನಿ ಮುಂದಿನ ಆವೃತ್ತಿಯ ಐಪಿಎಲ್ನಲ್ಲಿಯೂ ಆಡುತ್ತಾರೆ ಎನ್ನಲಾಗಿದ್ದು ಇದೇ ಕಾರಣಕ್ಕೆ ಅವರು ನಿವೃತ್ತಿ ಘೋಷಿಸಿಲ್ಲ ಎನ್ನಲಾಗಿದೆ.
2011ರಲ್ಲಿ ಗ್ಯಾರಿ ಕಸ್ಟನ್ ಮಾರ್ಗದರ್ಶನದಲ್ಲಿ ಭಾರತ 2ನೇ ಬಾರಿಗೆ ವಿಶ್ವಕಪ್ ಗೆದ್ದಿತ್ತು. ಬಳಿಕ 2013ರಲ್ಲಿ ಡಂಕನ್ ಪ್ಲೆಚರ್ ಮಾರ್ಗದರ್ಶನದಲ್ಲಿ ಭಾರತ ಐಸಿಸಿ ಚಾಂಪಿಯನ್ಸ್ ಟ್ರೋಫಿ ಜಯಿಸಿತ್ತು. ಇದಾದ ಬಳಿಕ ಭಾರತ ಇದುವರೆಗೂ ಯಾವುದೇ ಐಸಿಸಿ ಟ್ರೋಫಿ ಗೆದ್ದಿಲ್ಲ. ರವಿಶಾಸ್ತ್ರಿ ಮತ್ತು ರಾಹುಲ್ ದ್ರಾವಿಡ್ ಮಾರ್ಗದರ್ಶನಲ್ಲಿ 2 ಏಕದಿನ ವಿಶ್ವಕಪ್ ಆಡಿದರೂ ಭಾರತ ಕಪ್ ಗೆಲ್ಲಲು ಸಾಧ್ಯವಾಗಿಲ್ಲ. ಹೀಗಾಗಿ ವಿದೇಶಿ ಕೋಚ್ ಆಯ್ಕೆಯೇ ಉತ್ತಮ ಎಂದು ಬಿಸಿಸಿಐ ಆರಂಭಿಕ ಹಂತದಲ್ಲಿ ಯೋಚಿಸಿತ್ತು. ಆದರೆ ಅನೇಕ ವಿದೇಶಿ ಆಟಗಾರರು ಕೋಚ್ ಆಗಲಿ ಆಸಕ್ತಿ ಹೊಂದಿಲ್ಲ ಎಂದು ಬಹಿರಂಗವಾಗಿಯೇ ಹೇಳಿಕೆ ನೀಡಿದ್ದರು. ಹೀಗಾಗಿ ಬಿಸಿಸಿಐ ದೇಶೀಯ ಆಟಗಾರರ ಮೊರೆ ಹೋದಂತಿದೆ.
ಮೂಲಗಳ ಪ್ರಕಾರ ಗೌತಮ್ ಗಂಭೀರ್ ಅವರು ಭಾರತ ತಂಡದ ಕೋಚ್ ಆಗುವ ಸಾಧ್ಯತೆ ಕಂಡುಬಂದಿದೆ. ಭಾನುವಾರ ಮುಕ್ತಾಯ ಕಂಡ 17ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಕೆಕೆಆರ್ ಚಾಂಪಿಯನ್ ಪಟ್ಟ ಅಲಂಕರಿಸಿತ್ತು. ಗೌತಮ್ ಗಂಭೀರ್ ತಂಡದ ಮೆಂಟರ್ ಆಗಿದ್ದರು. ಪಂದ್ಯದ ಮುಕ್ತಾಯದ ಬಳಿಕ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರು ಗಂಭೀರ್ ಜತೆ ಅತ್ಯಂತ ಆತ್ಮೀಯವಾಗಿ ಸುರ್ದೀಘ ಚರ್ಚೆ ಕೂಡ ನಡೆಸಿದ್ದರು. ಇದನ್ನೆಲ್ಲ ನೋಡುವಾಗ ಗಂಭೀರ್ ಕೋಚ್ ಆಗುವುದು ಬಹುತೇಖ ಖಚಿತವಾದಂತಿದೆ. ಐಪಿಎಲ್ ಫ್ರಾಂಚೈಸಿಯೊಂದರ ಅತಿ ಪ್ರಭಾವಿ ಮಾಲಕರೊಬ್ಬರು ಗೌತಮ್ ಗಂಭೀರ್ ಕೋಚ್ ಆಗುವ ಒಪ್ಪಂದ ನಡೆದಾಗಿದೆ ಎಂದು ಹೇಳಿದ್ದಾರೆ. ಜತೆಗೆ ಸದ್ಯದಲ್ಲೇ ಈ ಬಗ್ಗೆ ಅಧಿಕೃತ ಘೋಷಣೆಯಾಗಲಿದೆ ಎಂದಿದ್ದಾರೆ.