ಬೆಂಗಳೂರು: ಅಪಘಾತದ ಬಳಿಕ ಚೇತರಿಕೆ ಪ್ರತಿಯೊಂದು ಹಂತವನ್ನು ಸಾಮಾಜಿಕ ಜಾಲತಾಣದ ಮೂಲಕ ಅಭಿಮಾನಿಗಳಿಗೆ ಅಪ್ಡೇಟ್(Rishabh Pant injury update) ನೀಡುತ್ತಿರುವ ರಿಷಭ್ ಪಂತ್(Rishabh Pant) ಇದೀಗ ಜಿಮ್ನಲ್ಲಿ ದೀರ್ಘ ಅವಧಿಯ ವರೆಗೆ ಸೈಕ್ಲಿಂಗ್ ಮಾಡಿರುವ ವಿಡಿಯೊವನ್ನು ಹಂಚಿಕೊಂಡಿದ್ದಾರೆ. ಈ ಮೂಲಕ ತಾನು ಮತ್ತಷ್ಟು ಚೇತರಿಕಂಡಿದ್ದು ವಿಶ್ವಕಪ್(ICC World Cup 2023) ವೇಳೆ ತಂಡಕ್ಕೆ ಮರಳುವ ಸಾಧ್ಯತೆ ಇದೆ ಎಂಬ ಸುಳಿವನ್ನು ನೀಡಿದ್ದಾರೆ. ಸಾಧಿಸುವ ದೃಢ ಛಲವೊಂದಿದ್ದರೆ ಯಾವುದೇ ಕಷ್ಟವನ್ನು ಎದುರಿಸಿ ಮತ್ತೆ ಎದ್ದು ನಿಲ್ಲಬಹುದು ಎಂಬುದಕ್ಕೆ ಪಂತ್ ಅವರ ಈ ಚೇತರಿಕೆಯ ಪರಿಶ್ರಮವೇ ನಮಗೆಲ್ಲ ಉತ್ತಮ ನಿದರ್ಶನ.
ಅಭ್ಯಾಸ ಪಂದ್ಯ ಆಡಿದ್ದ ಪಂತ್
ಎರಡು ವಾರಗಳ ಹಿಂದೆ ರಿಷಭ್ ಪಂತ್ ಅವರು ಕರ್ನಾಟಕದ JSW ವಿಜಯನಗರದಲ್ಲಿ ನಡೆದ ಅಭ್ಯಾಸ ಪಂದ್ಯದಲ್ಲಿ ಬ್ಯಾಟಿಂಗ್ ನಡೆಸಿ ಗಮನ ಸೆಳೆದಿದ್ದರು. ಈ ಪಂದ್ಯದಲ್ಲಿ ಪಂತ್ ಅವರು ತಮ್ಮ ಹಿಂದ ಬ್ಯಾಟಿಂಗ್ ಶೈಲಿಯಲ್ಲೇ ಸಿಕ್ಸರ್ ಮತ್ತು ಬೌಂಡರಿ ಬಾರಿಸಿದ್ದರು. ಪಂತ್ ಬ್ಯಾಟಿಂಗ್ನ ವಿಡಿಯೊ ವೈರಲ್ ಕೂಡ ಆಗಿತ್ತು. ಇದೀಗ ಜಿಮ್ನಲ್ಲಿ ಸೈಕ್ಲಿಂಗ್ ಮಾಡಿದ್ದಾರೆ.
ಇದನ್ನೂ ಓದಿ Rishabh Pant : ಭಾರತೀಯ ಕ್ರಿಕೆಟ್ ತಂಡಕ್ಕೆ ಗುಡ್ ನ್ಯೂಸ್ ಕೊಟ್ಟ ರಿಷಭ್ ಪಂತ್
ವಿಶ್ವಕಪ್ ಆಡುವ ಸಾಧ್ಯತೆ
ರಿಷಭ್ ಪಂತ್ ಅವರ ಗಂಭೀರ ಗಾಯವನ್ನು ಕಂಡ ಅನೇಕರು ಪಂತ್ ಕ್ರಿಕೆಟ್ ಬಾಳ್ವೆ ಇನ್ನು ಮಂದೆ ಕಷ್ಟ, ಒಂದೊಮ್ಮೆ ಅವರು ಕ್ರಿಕೆಟ್ಗೆ ಮರಳಬೇಕಾದರೂ ಹಲವು ವರ್ಷ ಬೇಕಾದಿತು ಹೀಗೆ ಹಲವು ಅಭಿಪ್ರಯಾಗಳನ್ನು ವ್ಯಕ್ತಪಡಿಸಿದ್ದರು. ಆದರೆ ಪಂತ್ ಮಾತ್ರ ಇದ್ಯಾವುದಕ್ಕೂ ತಲೆ ಕೆಡಿಸಿಕೊಳ್ಳದೆ ಶಸ್ತ್ರಚಿಕಿತ್ಸೆ ನಡೆದ ಒಂದೆರಡು ದಿನಗಳಿಂದಲೇ ಕಠಿಣ ವ್ಯಾಯಾಮ ನಡೆಸಲು ಆರಂಭಿಸಿದ್ದರು. ಇದೀಗ ಅವರು ಕೀಪಿಂಗ್ ಮತ್ತು ಬ್ಯಾಟಿಂಗ್ ಅಭ್ಯಾಸವನ್ನು ನಡೆಸಿ ಶೀಘ್ರದಲ್ಲೇ ಕ್ರಿಕೆಟ್ಗೆ ಕಮ್ಬ್ಯಾಕ್ ಮಾಡುವ ಸೂಚನೆ ನೀಡಿದ್ದಾರೆ. ಅವರ ಈ ಕ್ಷಿಪ್ರ ಪ್ರಗತಿಯ ಚೇತರಿಕೆ(rishabh pant recovery) ಕಂಡು ಅನೇಕರು ಅಚ್ಚರಿಗೊಳಗಾಗಿದ್ದಾರೆ. ಇನ್ನು ಕೆಲವರು ಅಕ್ಟೋಬರ್ನಲ್ಲಿ ನಡೆಯುವ ವಿಶ್ವಕಪ್ನಲ್ಲಿ(icc world cup 2023) ಆಡುವ ಸಾಧ್ಯತೆ ಇದೆ ಎಂದು ಹೇಳಲಾರಂಭಿಸಿದ್ದಾರೆ.
ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡಿರುವ ವಿಡಿಯೊಗೆ ಪಂತ್ ಅವರು ಗ್ರಿಪ್,ಟ್ವಿಸ್ಟ್, ಪೆಡಲ್ ಎಂದು ಬರೆದುಕೊಂಡಿದ್ದಾರೆ. ಸೈಕಲ್ ಪೆಡಲ್ ತುಳಿಯಲು ನನ್ನ ಸಾಮರ್ಥ್ಯ ಉತ್ತಮ ಹಂತದಲ್ಲಿ ವೃದ್ದಿಸಿದ್ದು ಶೀಘ್ರದಲ್ಲೇ ಕ್ರಿಕೆಟ್ ಕಮ್ಬ್ಯಾಕ್ ಮಾಡಲಿದ್ದೇನೆ ಎನ್ನುವ ಅರ್ಥದಲ್ಲಿ ಈ ಶೀರ್ಷಿಕೆ ನೀಡಿದ್ದಾರೆ.
ಭೀಕರ ಕಾರು ಅಪಘಾತದಲ್ಲಿ ಗಾಯಗೊಂಡಿದ್ದ ಪಂತ್
ಕಳೆದ ಡಿಸೆಂಬರ್ 30ರಂದು(rishabh pant accident date) ರಿಷಭ್ ಪಂತ್ ಅವರು ಚಲಾಯಿಸಿಕೊಂಡು ಹೋಗುತ್ತಿದ್ದ ಕಾರು ಡಿವೈಡರ್ಗೆ ಡಿಕ್ಕಿ(rishabh pant accident) ಹೊಡೆದಿತ್ತು. ಘಟನೆಯಲ್ಲಿ ಅವರ ಕಾರು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿತ್ತು. ಸುಟ್ಟ ಗಾಯಗಳು ಹಾಗೂ ಮಂಡಿಯ ಗಾಯಗೊಂಡಿಗೆ ರಿಷಭ್ ಪಂತ್ ಪಾರಾಗಿದ್ದರು. ಡೆಹ್ರಾಡೂನ್ನಲ್ಲಿ ಆರಂಭದಲ್ಲಿ ಚಿಕಿತ್ಸೆ ಪಡೆದಿದ್ದ ಅವರನ್ನು ಬಳಿಕ ಮುಂಬಯಿಯ ಕೋಕಿಲಾ ಬೆನ್ ಆಸ್ಪತ್ರೆಗೆ ದಾಖಲಿಸಿ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಮೊದಲ ಬಾರಿಗೆ ಪಂತ್ ಅವರು ತಮ್ಮ ಚೇತರಿಕೆ ಅಪ್ಡೇಟ್ ನೀಡಿದ್ದು ಊರುಗೋಲಿನ ಸಹಾಯದಿಂದ ನಡೆದಾಡುವ ಫೋಟೊ ಹಂಚಿಕೊಂಡು ಬಳಿಕ ಸ್ವಿಮಿಂಗ್ ಪೂಲ್ನಲ್ಲಿ ನಡೆದಾಡಿದ್ದು ಹೀಗೆ ಹಲವು ಚೇತರಿಕೆಯ ಹಂತವನ್ನು ಅವರು ಸಾಮಾಜಿಕ ಜಾಲತಾಣದ ಮೂಲಕ ಹಂಚಿಕೊಳ್ಳುತ್ತಿದ್ದಾರೆ. ಆದಷ್ಟು ಬೇಗ ಕ್ರಿಕೆಟ್ ಮೈದಾನಕ್ಕೆ)rishabh pant comeback) ಬರಲಿ ಎಂಬುದು ಅವರ ಅಭಿಮಾನಿಗಳ(rishabh pant fans) ಆಶಯಾಗಿದೆ.