Site icon Vistara News

Team India: ಮೋದಿಗೆ ನಮೋ ಹೆಸರಿನ ಟೀಮ್​ ಇಂಡಿಯಾ ಜೆರ್ಸಿ ಉಡುಗೊರೆ ನೀಡಿದ ಬಿಸಿಸಿಐ

Team India

Team India: PM Modi Receives Special Indian Cricket Jersey from Bcci

ನವದೆಹಲಿ: ಐಸಿಸಿ ಟಿ20 ವಿಶ್ವಕಪ್(T20 World Cup 2024)​ ಟ್ರೋಫಿ ಗೆದ್ದು ತವರಿಗೆ ಮರಳಿದ ಟೀಮ್​ ಇಂಡಿಯಾ (Team India) ಆಟಗಾರರನ್ನು ಪ್ರಧಾನಿ ನರೇಂದ್ರ ಮೋದಿ (Narendra Modi) ತಮ್ಮ ನಿವಾಸದಲ್ಲಿ ಸನ್ಮಾನಿಸಿದರು. ಈ ವೇಳೆ ಬಿಸಿಸಿಐ ಕಡೆಯಿಂದ ಮೋದಿಗೆ(PM Modi) ನಮೋ ನಂ.1 ಎಂದು ಬರೆದ ಟೀಮ್​ ಇಂಡಿಯಾ ಜೆರ್ಸಿಯನ್ನು(Indian Cricket Jersey) ಉಡುಗೊರೆಯಾಗಿ ನೀಡಲಾಯಿತು.

ಇಂದು(ಗುರುವಾರ) ಬೆಳಗ್ಗೆ ದೆಹಲಿಗೆ ಆಗಮಿಸಿದ ಆಟಗಾರರು ಬಳಿಕ ಲೋಕ ಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಿ ಅವರ ನಿವಾಸಕ್ಕೆ ಭೇಟಿ ನೀಡಿದ್ದರು. ವಿಶ್ವಕಪ್​ ಗೆಲುವಿನ ಕುರಿತು ಆಟಗಾರರು ಪ್ರಧಾನಿ ಜತೆ ತಮ್ಮ ಅನುಭವ ಹಂಚಿಕೊಂಡರು. ಮೋದಿ ಕೂಡ ಆಟಗಾರರೊಂದಿಗೆ ಕೆಲ ಕಾಲ ಕುಶಲೋಪರಿ ನಡೆಸಿದರು. ಬಳಿಕ ವಿಶ್ವ ಕಪ್​ ಟ್ರೋಫಿ ಜತೆ ಆಟಗಾರರೊಂದಿಗೆ ಗ್ರೂಫ್​ ಫೋಟೊ ತೆಗೆಸಿಕೊಂಡರು. ಆಟಗಾರರಿಗೆ ವಿಶೇಷ ಭೋಜನ ಕೂಟವನ್ನು ಕೂಡ ಏರ್ಪಡಿಸಲಾಗಿತ್ತು. ಈ ಎಲ್ಲ ಕಾರ್ಯಕ್ರಮದ ಬಳಿಕ ಬಿಸಿಸಿಐ ಅಧ್ಯಕ್ಷ ರೋಜರ್​ ಬಿನ್ನಿ ಮತ್ತು ಬಿಸಿಸಿಐ ಕಾರ್ಯದರ್ಶಿ ಜಯ್​ ಶಾ ಅವರು ನಮೋ ಎಂದು ಬರೆದ ಟೀಮ್​ ಇಂಡಿಯಾ ಜೆರ್ಸಿಯನ್ನು ನೆನಪಿನ ಕಾಣಿಕೆಯಾಗಿ ನೀಡಿದರು. ಈ ಫೋಟೊವನ್ನು ಬಿಸಿಸಿಐ ತನ್ನ ಅಧಿಕೃತ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಶೇರ್​ ಮಾಡಿದೆ.

ಇದನ್ನೂ ಓದಿ Team India victory parade: ಸಂಜೆ 5ರಿಂದ 7ರವರೆಗೆ ಮುಂಬಯಿಯಲ್ಲಿ ಟೀಮ್ ಇಂಡಿಯಾ ಭರ್ಜರಿ ರೋಡ್ ಶೋ; ನೇರ ಪ್ರಸಾರ ವೀಕ್ಷಣೆ ಹೇಗೆ?

ವಿಶ್ವ ವಿಜೇತ ತಂಡವನ್ನು ಭೇಟಿ ಮಾಡಿದ ಫೋಟೊವನ್ನು ಮೋದಿ ಕೂಡ ತನ್ನ ಟ್ವಿಟರ್​ ಎಕ್ಸ್​ನಲ್ಲಿ ಹಂಚಿಕೊಂಡಿದ್ದು, ನಮ್ಮ ಚಾಂಪಿಯನ್‌ಗಳೊಂದಿಗೆ ಉತ್ತಮ ಸಭೆ!…ಪಂದ್ಯಾವಳಿಯ ಸ್ಮರಣೀಯ ಸಂಭಾಷಣೆy ಅನುಭವವನ್ನು ಕೇಳಿ ನಿಜವಾಗಿಯೂ ಸಂತಸ ತಂದಿತು ಎಂದು ಬರೆದುಕೊಂಡಿದ್ದಾರೆ.

ಆಟಗಾರರಿಗೆ ಕರೆ ಮಾಡಿದ್ದ ಮೋದಿ

ಜೂನ್‌ 29ರಂದು ನಡೆದ ಫೈನಲ್‌ ಪಂದ್ಯದಲ್ಲಿ ಭಾರತ ದಕ್ಷಿಣ ಆಫ್ರಿಕಾದ ವಿರುದ್ಧ ಭಾರತ 7 ರನ್‌ಗಳಿಂದ ಜಯ ಸಾಧಿಸಿತ್ತು. ಆ ವೇಳೆ ಆಟಗಾರರಿಗೆ ಕರೆ ಮಾಡಿ ಮೋದಿ ಅಭಿನಂದನೆ ಸಲ್ಲಿಸಿದ್ದರು. ಮೋದಿ ಅವರು ಟೀಮ್‌ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರೊಂದಿಗೆ ಮಾತನಾಡಿ, ಅದ್ಭುತ ನಾಯಕತ್ವಕ್ಕಾಗಿ ಅಭಿನಂದನೆ ತಿಳಿಸಿದರು. ಅವರ ಟಿ20 ವೃತ್ತಿ ಜೀವನವನ್ನು ಶ್ಲಾಘಿಸಿದರು. ಜತೆಗೆ ಪ್ರಧಾನಿ ಫೈನಲ್‌ ಪಂದ್ಯದಲ್ಲಿ ಭಾರತವು ಸ್ಪರ್ಧಾತ್ಮಕ ಸ್ಕೋರ್ ಗಳಿಸಲು ಸಹಾಯ ಮಾಡಿದ ವಿರಾಟ್ ಕೊಹ್ಲಿ (76 ರನ್) ಅವರ ಆಟವನ್ನೂ ಮೆಚ್ಚಿಕೊಂಡರು. ಜತೆಗೆ ಭಾರತೀಯ ಕ್ರಿಕೆಟ್‌ಗೆ ಕೊಹ್ಲಿ ನೀಡಿದ ಕೊಡುಗೆಯನ್ನೂ ನೆನಪಿಸಿಕೊಂಡಿದ್ದರು.

ಜತೆಗೆ ಜಸ್​ಪ್ರೀತ್​ ಬುಮ್ರಾ ಮತ್ತು ಹಾರ್ದಿಕ್ ಪಾಂಡ್ಯ ಅವರಿಗೂ ಪ್ರಧಾನಿ ಮೆಚ್ಚುಗೆ ಸೂಚಿಸಿದ್ದರು. ಮಾತ್ರವಲ್ಲ ಅದ್ಭುತ ಕ್ಯಾಚ್‌ ಹಿಡಿದು ಪಂದ್ಯದ ಗತಿಯನ್ನೇ ಬದಲಾಯಿಸಿದ ಸೂರ್ಯ ಕುಮಾರ್ ಯಾದವ್ ಅವರನ್ನು ಉಲ್ಲೇಖಿಸಲು ಪ್ರಧಾನಿ ಮರೆತಿರಲಿಲ್ಲ. ಗೆಲುವಿಗಾಗಿ ಮುಖ್ಯ ಕೊಡುಗೆ ನೀಡಿದ ಭಾರತದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರಿಗೆ ಮೋದಿ ಧನ್ಯವಾದ ಅರ್ಪಿಸಿದ್ದರು. ಈ ಕುರಿತಾದ ಫೋಟೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿತ್ತು. ಪ್ರಧಾನಿ ಅವರ ನಡೆಗೆ ಕ್ರೀಡಾಪ್ರೇಮಿಗಳು ಮೆಚ್ಚುಗೆ ಸೂಚಿಸಿದ್ದರು.

Exit mobile version