ಅಹ್ಮದಾಬಾದ್: ಐಸಿಸಿ ಕ್ರಿಕೆಟ್ ವಿಶ್ವಕಪ್ ಫೈನಲ್ ಪಂದ್ಯಕ್ಕಾಗಿ ರೋಹಿತ್ ಶರ್ಮಾ ನೇತೃತ್ವದ ಭಾರತ ಕ್ರಿಕೆಟ್ ತಂಡ ಭಾನುವಾರ ಅಹಮದಾಬಾದ್ ತಲುಪಿದೆ. ನ್ಯೂಜಿಲೆಂಡ್ ವಿರುದ್ಧದ ಭಾರತದ ಗೆಲುವಿನ ನಂತರ ಕಳೆದ ರಾತ್ರಿ ತಂಡದ ಹೋಟೆಲ್ನಿಂದ ಹೊರಟಿದ್ದ ವಿರಾಟ್ ಕೊಹ್ಲಿ ವಿಮಾನ ನಿಲ್ದಾಣದಲ್ಲಿ ಮತ್ತೆ ತಂಡವನ್ನು ಸೇರಿಕೊಂಡರು. ಭಾರತ ಕ್ರಿಕೆಟ್ ತಂಡವು ಶುಕ್ರವಾರ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಅಭ್ಯಾಸವನ್ನು ನಡೆಸಲಿದೆ.
The 🐐 has arrived at Ahmedabad for the World Cup finals. pic.twitter.com/1EdjOkOxyI
— Johns. (@CricCrazyJohns) November 16, 2023
ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಐಸಿಸಿ ಪುರುಷರ ಕ್ರಿಕೆಟ್ ವಿಶ್ವಕಪ್ 2023 ರ ಫೈನಲ್ನಲ್ಲಿ ನ್ಯೂಜಿಲೆಂಡ್ ತಂಡವನ್ನು ಸೋಲಿಸಿದ ನಂತರ ಭಾರತ ಕ್ರಿಕೆಟ್ ತಂಡ ಫೈನಲ್ಗೆ ಪ್ರವೇಶಿಸಿದೆ. ವಿರಾಟ್ ಕೊಹ್ಲಿ, ಮೊಹಮ್ಮದ್ ಶಮಿ ಮತ್ತು ಶ್ರೇಯಸ್ ಅಯ್ಯರ್ ಈ ಆಟದ ಅತ್ಯುತ್ತಮ ಪ್ರದರ್ಶನ ನೀಡಿದರು. ಇದೀಗ ಎರಡನೇ ಸೆಮಿ ಫೈನಲ್ ಪಂದ್ಯದಲ್ಲಿ ಗೆದ್ದಿರುವ ಆಸ್ಟ್ರೇಲಿಯಾ ತಂಡವನ್ನು ಪ್ರಶಸ್ತಿ ಫೈಟ್ನಲ್ಲಿ ಎದುರಿಸಲಿದೆ.
ಮುಖಾಮುಖಿ
ಕೊಲ್ಕತ್ತಾದಲ್ಲಿ ನಡೆಯಲಿರುವ ದಕ್ಷಿಣ ಆಫ್ರಿಕಾ ಮತ್ತು ಆಸ್ಟ್ರೇಲಿಯಾ ನಡುವಿನ ಸೆಮಿಫೈನಲ್ ಪಂದ್ಯದ ವಿಜೇತ ಆಸೀಸ್ ತಂಡ ಭಾರತಕ್ಕೆ ಸೆಡ್ಡು ಹೊಡೆಯಲಿದೆ. ಈ ತಂಡ 2003ರ ವಿಶ್ವ ಕಪ್ನ ಫೈನಲ್ ಪಂದ್ಯದಲ್ಲಿ ಪರಸ್ಪರ ಎದುರಾಗಿತ್ತು. ಅಲ್ಲಿ ಭಾರತ ತಂಡ ಹೀನಾಯವಾಗಿ ಸೋತು ರನ್ನರ್ ಅಪ್ ಪ್ರಶಸ್ತಿ ಗೆದ್ದಿತ್ತು.
ಭಾರತ ಐಸಿಸಿ ಟ್ರೋಫಿಯ 10 ವರ್ಷಗಳ ಬರ ನೀಗಿಸಲು ಭಾರತಕ್ಕೆ ಅತ್ಯುತ್ತಮ ಅವಕಾಶವಾಗಿದೆ. ರೋಹಿತ್ ಶರ್ಮಾ ಬಳಗ ಹಾಲಿ ವಿಶ್ವಕಪ್ ನಲ್ಲಿ 10 ಪಂದ್ಯಗಳ ಗೆಲುವಿನ ಹಾದಿಯಲ್ಲಿದೆ. ಮತ್ತೊಂದು ಗೆಲುವು ವಿಶ್ವಕಪ್ನಲ್ಲಿ ಆಸ್ಟ್ರೇಲಿಯಾದ 11 ಗೆಲುವುಗಳ ದಾಖಲೆಯನ್ನು ಸರಿಗಟ್ಟಲು ಭಾರತಕ್ಕೆ ಸಹಾಯ ಮಾಡುತ್ತದೆ. ಜತೆಗೆ ಟ್ರೋಫಿಯೂ ದೊರಕುತ್ತದೆ.
ಫೈನಲ್ ಪ್ರವೇಶಿಸಿದ ಭಾರತ ಕ್ರಿಕೆಟ್ ತಂಡ
ಏಕದಿನ ವಿಶ್ವಕಪ್ 2023 ರಲ್ಲಿ ಭಾರತ ಕ್ರಿಕೆಟ್ ತಂಡದ ಪ್ರಯಾಣವು ಅದ್ಭುತವಾಗಿದೆ. ಗುಂಪು ಹಂತದ ಮುಖಾಮುಖಿಗಳನ್ನು ಗೆದ್ದಿರುವುದರಿಂದ ಹಿಡಿದು ಸೆಮಿಫೈನಲ್ನಲ್ಲಿ ಅದ್ಭುತ ಪ್ರದರ್ಶನವನ್ನು ನೀಡುವವರೆಗೆ, ರೋಹಿತ್ ಶರ್ಮಾ ಮತ್ತು ತಂಡವು ತಮ್ಮ ಸ್ಥಿರತೆ ಮತ್ತು ಕೌಶಲವನ್ನು ಪ್ರದರ್ಶಿಸಿದೆ.
ಇದನ್ನೂ ಓದಿ: ICC World Cup 2023 : ಸಮಾರೋಪಕ್ಕೆ ಅಹಮದಾಬಾದ್ ಸಜ್ಜು, ಏರ್ ಶೋ ಫಿಕ್ಸ್?
2023ರ ವಿಶ್ವಕಪ್ನಲ್ಲಿ ಆಡಿರುವ ಎಲ್ಲ 10 ಪಂದ್ಯಗಳನ್ನು ಗೆದ್ದು ಫೈನಲ್ ಪ್ರವೇಶಿಸುವ ಅಜೇಯ ತಂಡವಾಗಿದೆ. ಫೈನಲ್ ಪಂದ್ಯವು ಕ್ರಿಕೆಟ್ ಇತಿಹಾಸದಲ್ಲಿ ತಮ್ಮ ಹೆಸರನ್ನು ಬರೆಯಲು ಮತ್ತು ಅಪೇಕ್ಷಿತ ವಿಶ್ವಕಪ್ ಟ್ರೋಫಿಯನ್ನು ಮನೆಗೆ ತರಲು ತಂಡಕ್ಕೆ ಅವಕಾಶವನ್ನು ಒದಗಿಸುತ್ತದೆ.
ಭಾರತದ ಫೈನಲ್ ಹಾದಿ
- ಚೆನ್ನೈನಲ್ಲಿ ನಡೆದ ಮೊದಲ ಪಂದ್ಯದಲ್ಲಿ ಭಾರತ 6 ವಿಕೆಟ್ ಗಳಿಂದ ಆಸ್ಟ್ರೇಲಿಯಾವನ್ನು ಮಣಿಸಿದೆ.
- ಅಫ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲಿ ಭಾರತ 8 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ
- ಅಹ್ಮದಾಬಾದ್ ನಲ್ಲಿ ನಡೆದ ಪಂದ್ಯದಲ್ಲಿ ಭಾರತ 7 ವಿಕೆಟ್ ಗಳಿಂದ ಪಾಕಿಸ್ತಾನವನ್ನು ಮಣಿಸಿತು.
- ಪಂದ್ಯ 4ರಲ್ಲಿ ಬಾಂಗ್ಲಾದೇಶವನ್ನು 7 ವಿಕೆಟ್ ಗಳಿಂದ ಮಣಿಸಿದ ಭಾರತ.
- ಧರ್ಮಶಾಲಾದಲ್ಲಿ ನಡೆದ 5ನೇ ಪಂದ್ಯದಲ್ಲಿ ಭಾರತ 4 ವಿಕೆಟ್ ಗಳಿಂದ ನ್ಯೂಜಿಲೆಂಡ್ ತಂಡವನ್ನು ಮಣಿಸಿತು.
- ಪಂದ್ಯ 6ರಲ್ಲಿ ಲಕ್ನೋದಲ್ಲಿ ಇಂಗ್ಲೆಂಡ್ ವಿರುದ್ಧ ಭಾರತಕ್ಕೆ 100 ರನ್ ಗಳ ಜಯ.
- ಮುಂಬೈನಲ್ಲಿ ನಡೆದ ಪಂದ್ಯದಲ್ಲಿ ಭಾರತ 302 ರನ್ ಗಳಿಂದ ಶ್ರೀಲಂಕಾವನ್ನು ಮಣಿಸಿತು.
- ಕೋಲ್ಕತಾದಲ್ಲಿ ನಡೆದ ಪಂದ್ಯದಲ್ಲಿ ಭಾರತ 243 ರನ್ ಗಳಿಂದ ದಕ್ಷಿಣ ಆಫ್ರಿಕಾವನ್ನು ಮಣಿಸಿತು.
- ಪಂದ್ಯ 9 ರಲ್ಲಿ ನೆದರ್ಲೆಂಡ್ಸ್ ವಿರುದ್ಧ ಭಾರತಕ್ಕೆ 160 ರನ್ ಗಳ ಜಯ.
- ಮುಂಬೈನಲ್ಲಿ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಭಾರತ 70 ರನ್ ಗಳಿಂದ ನ್ಯೂಜಿಲೆಂಡ್ ತಂಡವನ್ನು ಮಣಿಸಿತು.