Virat Kohli | ಅಡಿಲೇಡ್‌ಗೆ ತಲುಪಿದ ಟೀಮ್‌ ಇಂಡಿಯಾ, ಫೋಟೊ ಶೇರ್ ಮಾಡಿದ ವಿರಾಟ್ ಕೊಹ್ಲಿ - Vistara News

T20 ವಿಶ್ವಕಪ್

Virat Kohli | ಅಡಿಲೇಡ್‌ಗೆ ತಲುಪಿದ ಟೀಮ್‌ ಇಂಡಿಯಾ, ಫೋಟೊ ಶೇರ್ ಮಾಡಿದ ವಿರಾಟ್ ಕೊಹ್ಲಿ

ಬಾಂಗ್ಲಾ ವಿರುದ್ಧದ ಪಂದ್ಯಕ್ಕಾಗಿ ಅಡಿಲೇಡ್‌ ತಲುಪಿರುವ ಚಿತ್ರವನ್ನು ವಿರಾಟ್‌ ಕೊಹ್ಲಿ (Virat kohli) ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ಮಾಡಿದ್ದಾರೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಅಡಿಲೇಡ್‌ : ಟಿ೨೦ ವಿಶ್ವ ಕಪ್‌ನ ಸೂಪರ್-೧೨ ಹಂತದಲ್ಲಿ ಭಾರತದ ತಂಡಕ್ಕೆ ನಾಲ್ಕನೇ ಸವಾಲು ಬಾಂಗ್ಲಾದೇಶ ವಿರುದ್ಧ. ಗುಂಪು ೨ರ ತಂಡಗಳ ನಡುವಿನ ಈ ಪಂದ್ಯ ಬುಧವಾರ ಅಡಿಲೇಡ್‌ನ ಓವಲ್‌ ಗ್ರೌಂಡ್‌ನಲ್ಲಿ ನಡೆಯಲಿದೆ. ಪರ್ತ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಹಣಾಹಣಿಯಲ್ಲಿ ಐದು ವಿಕೆಟ್‌ಗಳ ಸೋಲು ಅನುಭವಿಸಿರುವ ರೋಹಿತ್‌ ಶರ್ಮ ನೇತೃತ್ವದ ಭಾರತ ತಂಡಕ್ಕೆ ಇನ್ನುಳಿದ ಪಂದ್ಯಗಳಲ್ಲಿ ಗೆಲುವು ಅನಿವಾರ್ಯವಾಗಿದ್ದು, ಹಾಗಾದರೆ ಮಾತ್ರ ಸೆಮೀಸ್‌ ಹಂತಕ್ಕೆ ಸುಲಭ ದಾರಿ ಕಂಡುಕೊಳ್ಳಬಹುದು. ಹೀಗಾಗಿ ಭಾರತೀಯ ಕ್ರಿಕೆಟ್‌ ಅಭಿಮಾನಿಗಳು ನೆರೆಯ ಬಾಂಗ್ಲಾ ವಿರುದ್ಧದ ಗೆಲುವಿನ ನಿರೀಕ್ಷೆಯಲ್ಲಿದ್ದಾರೆ.

ಈ ಪಂದ್ಯದಲ್ಲಿ ಪಾಲ್ಗೊಳ್ಳಲು ಟೀಮ್‌ ಇಂಡಿಯಾದ ಆಟಗಾರರು ಸೋಮವಾರ ಅಡಿಲೇಡ್‌ ತಲುಪಿದ್ದು, ಅಲ್ಲಿ ಅಭ್ಯಾಸ ಆರಂಭಿಸಿದ್ದಾರೆ. ಪರ್ತ್‌ನ ಹೋಟೆಲ್‌ ಬಿಟ್ಟ ಟೀಮ್‌ ಆಟಗಾರರು ನೇರವಾಗಿ ಅಡಿಲೇಡ್‌ನ ಹೋಟೆಲ್‌ ಸೇರಿಕೊಂಡಿದ್ದು, ಒಂದು ದಿನದ ವಿಶ್ರಾಂತಿ ಬಳಿಕ ನೆಟ್‌ಪ್ರಾಕ್ಟೀಸ್ ಆರಂಭಿಸಿದ್ದಾರೆ.

ಟೀಮ್‌ ಇಂಡಿಯಾದ ಮಾಜಿ ನಾಯಕ ಹಾಗೂ ಸ್ಟಾರ್ ಆಟಗಾರ ವಿರಾಟ್‌ ಕೊಹ್ಲಿ ಅಡಿಲೇಡ್‌ಗೆ ತಲುಪಿರುವ ಫೋಟೊವನ್ನು ತಮ್ಮ ಟ್ವಿಟರ್ ಖಾತೆಯಲ್ಲಿ ಪ್ರಕಟಿಸಿದ್ದಾರೆ. ಚಿತ್ರದಲ್ಲಿ ಸೂರ್ಯಕುಮಾರ್‌ ಯಾದವ್‌, ಯಜ್ವೇಂದ್ರ ಚಹಲ್‌ ಹಾಗೂ ಮೀಸಲು ಆಟಗಾರ ಮೊಹಮ್ಮದ್ ಸಿರಾಜ್‌ ಅವರಿದ್ದಾರೆ.

ಬಾಂಗ್ಲಾದೇಶ ತಂಡ ಪ್ರಸಕ್ತ ಆವೃತ್ತಿಯ ವಿಶ್ವ ಕಪ್‌ನಲ್ಲಿ ಪ್ರಭಾವಿ ಪ್ರದರ್ಶನ ತೋರುತ್ತಿಲ್ಲ. ಆದಾಗ್ಯೂ ಟಿ೨೦ ಮಾದರಿಯಲ್ಲಿ ಯಾವುದೇ ತಂಡಗಳ ಸಾಮರ್ಥ್ಯವನ್ನು ಅಲ್ಲಗೆಳೆಯುವಂತೆ ಇಲ್ಲ. ಹೀಗಾಗಿ ಈ ಪಂದ್ಯವನ್ನು ಗೆಲ್ಲುವ ನಿಟ್ಟಿನಲ್ಲಿ ಭಾರತ ತಂಡ ಭರ್ಜರಿ ರಣತಂತ್ರ ರೂಪಿಸಬೇಕಾಗಿದೆ.

ಇದನ್ನೂ ಓದಿ ವ| IND vs SA | ಕಳಪೆ ಫೀಲ್ಡಿಂಗ್‌ನಲ್ಲೂ ನಾವಿಬ್ಬರೂ ಸಮಾನರು ಎಂಬುದನ್ನು ಸಾಬೀತುಪಡಿಸಿದ ರೋಹಿತ್‌, ವಿರಾಟ್‌!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕ್ರೀಡೆ

ICC Women’s T20 World Cup: ಮಹಿಳಾ ಟಿ20 ವಿಶ್ವಕಪ್​ ವೇಳಾಪಟ್ಟಿ ಪ್ರಕಟ; ಒಂದೇ ಗುಂಪಿನಲ್ಲಿ ಭಾರತ-ಪಾಕ್​

ICC Women’s T20 World Cup: ಐಸಿಸಿ ಮಹಿಳಾ ಟಿ20 ವಿಶ್ವಕಪ್​ ಟೂರ್ನಿಯ(ICC Women’s T20 World Cup) ವೇಳಾಪಟ್ಟಿ ಪ್ರಕಟಗೊಂಡಿದ್ದು, ಭಾರತ ತಂಡ ಅಕ್ಟೋಬರ್ 4 ರಂದು ನ್ಯೂಜಿಲ್ಯಾಂಡ್​ ವಿರುದ್ಧ ಆಡುವ ಮೂಲಕ ತಮ್ಮ ಅಭಿಯಾನ ಆರಂಭಿಸಲಿದೆ.

VISTARANEWS.COM


on

ICC Women's T20 World Cup
Koo

ದುಬೈ: ಒಂಬತ್ತನೇ ಆವೃತ್ತಿಯ ಐಸಿಸಿ ಮಹಿಳಾ ಟಿ20 ವಿಶ್ವಕಪ್​ ಟೂರ್ನಿಯ(ICC Women’s T20 World Cup) ವೇಳಾಪಟ್ಟಿ ಪ್ರಕಟಗೊಂಡಿದ್ದು, ಭಾರತ ತಂಡ ಹಾಲಿ ಚಾಂಪಿಯನ್​ ಆಸ್ಟ್ರೇಲಿಯಾ, ನ್ಯೂಜಿಲ್ಯಾಂಡ್​ ಮತ್ತು ಪಾಕಿಸ್ತಾನ ಜತೆ ‘ಎ’ ಗುಂಪಿನಲ್ಲಿ ಸ್ಥಾನ ಪಡೆದಿದೆ. ಈ ವರ್ಷದ ಅಕ್ಟೋಬರ್ 3 ರಿಂದ 20 ರವರೆಗೆ ಬಾಂಗ್ಲಾದೇಶದಲ್ಲಿ ಟೂರ್ನಿ ನಡೆಯಲಿದೆ. ಸಿಲ್ಹೆಟ್‌ನಲ್ಲಿ ತಮ್ಮ ಎಲ್ಲಾ ಗುಂಪು ಪಂದ್ಯಗಳು ನಡೆಯಲಿದ್ದು, ಭಾರತವು ಅಕ್ಟೋಬರ್ 4 ರಂದು ನ್ಯೂಜಿಲ್ಯಾಂಡ್​ ವಿರುದ್ಧ ಆಡುವ ಮೂಲಕ ತಮ್ಮ ಅಭಿಯಾನ ಆರಂಭಿಸಲಿದೆ.

ಸಾಂಪ್ರದಾಯಿ ಬದ್ಧ ಎದುರಾಳಿ ಪಾಕಿಸ್ತಾನ ವಿರುದ್ಧ ಭಾರತದ ವನಿತೆಯರು ಅಕ್ಟೋಬರ್ 6 ರಂದು ಪಂದ್ಯವನ್ನಾಡಲಿದ್ದಾರೆ. ಅಕ್ಟೋಬರ್ 13 ರಂದು ಆರು ಬಾರಿ ವಿಶ್ವ ಚಾಂಪಿಯನ್ ಆಸ್ಟ್ರೇಲಿಯಾದ ವಿರುದ್ಧ ಆಡಲಿದೆ. ಒಂದು ಪಂದ್ಯ ಕ್ವಾಲಿಫೈಯರ್​ನಲ್ಲಿ ಗೆದ್ದು ಬಂದ ತಂಡದ ವಿರುದ್ಧ ಆಡಲಿದೆ. ಆತಿಥೇಯ ಬಾಂಗ್ಲಾದೇಶ, ದಕ್ಷಿಣ ಆಫ್ರಿಕಾ, ಇಂಗ್ಲೆಂಡ್, ವೆಸ್ಟ್ ಇಂಡೀಸ್ ‘ಬಿ’ ಗುಂಪಿನಲ್ಲಿ ಸ್ಥಾನ ಪಡೆದಿದೆ.

ಇದನ್ನೂ ಓದಿ T20 World Cup : ಉನ್ಮುಕ್ತ್​ ಚಾಂದ್​ಗೆ ತೆರೆಯದ ಭಾಗ್ಯದ ಬಾಗಿಲು; ಯುಎಸ್​ ತಂಡದಲ್ಲಿ ಇಲ್ಲ ಚಾನ್ಸ್​!

ಟೂರ್ನಮೆಂಟ್‌ನಲ್ಲಿ ಪ್ರತಿ ತಂಡವು ನಾಲ್ಕು ಗುಂಪು ಪಂದ್ಯಗಳನ್ನು ಆಡುತ್ತದೆ, ಪ್ರತಿ ಗುಂಪಿನಿಂದ ಅಗ್ರ ಎರಡು ತಂಡಗಳು ಸೆಮಿಫೈನಲ್‌ ಪ್ರವೇಶಿಸಲಿದೆ. ಸೆಮಿಫೈನಲ್​ ಪಂದ್ಯಗಳು ಅಕ್ಟೋಬರ್ 17 ಮತ್ತು 18 ರಂದು ನಡೆಯಲಿದೆ. ಫೈನಲ್​ ಪಂದ್ಯ ಅಕ್ಟೋಬರ್​ 20 ರಂದು ಢಾಕಾದಲ್ಲಿ ನಡೆಯಲಿದೆ ಎಂದು ಐಸಿಸಿ ತನ್ನ ಅಧಿಕೃತ ಪ್ರಕಟನೆಯಲ್ಲಿ ತಿಳಿಸಿದೆ. ಅರ್ಹತಾ ಸುತ್ತಿನಲ್ಲಿ ಫೈನಲ್​ ಪ್ರವೇಶಿಸಿದ 2 ತಂಡಗಳು ಪ್ರಧಾನ ಸುತ್ತಿನಲ್ಲಿ ಆಡಲಿದೆ.

ಟೂರ್ನಿಯಲ್ಲಿ ಒಟ್ಟು 23 ಪಂದ್ಯಗಳನ್ನು ಆಡಲಾಗುತ್ತದೆ. 19 ದಿನ ಪಂದ್ಯಾವಳಿ ಸಾಗಲಿದೆ. ಢಾಕಾ ಮತ್ತು ಸಿಲ್ಹೆಟ್‌ನಲ್ಲಿ ಪಂದ್ಯಗಳು ನಡೆಯಲಿವೆ. ಲೀಗ್​ ಹಂತದ ಯಾವುದೇ ಪಂದ್ಯಗಳಿಗೆ ಮೀಸಲು ದಿನವಿಲ್ಲ. ಕೇಲವ ಸೆಮಿಫೈನಲ್​ ಮತ್ತು ಫೈನಲ್​ ಪಂದ್ಯಗಳಿಗೆ ಮಾತ್ರ ಮೀಸಲು ದಿನ ನಿಗದಿಯಾಗಿದೆ.

Continue Reading

ಕ್ರಿಕೆಟ್

T20 World Cup 2024: ಟಿ20 ವಿಶ್ವಕಪ್​ನ ಅಧಿಕೃತ ಹಾಡು ಬಿಡುಗಡೆ; ಕುಣಿದು ಕುಪ್ಪಳಿಸಿದ ಕ್ರಿಸ್​ ಗೇಲ್​, ಉಸೇನ್‌ ಬೋಲ್ಟ್

T20 World Cup 2024: ಎಂಟು ಬಾರಿಯ ಒಲಂಪಿಕ್ ಚಿನ್ನದ ಪದಕ ವಿಜೇತ ಉಸೇನ್ ಬೋಲ್ಟ್, ವೆಸ್ಟ್ ಇಂಡೀಸ್ ಕ್ರಿಕೆಟ್ ಐಕಾನ್‌ಗಳಾದ ಕ್ರಿಸ್ ಗೇಲ್, ಶಿವನಾರಾಯಣ್ ಚಂದ್ರಪಾಲ್ ಮತ್ತು ಮಹಿಳಾ ಆಟಗಾರ್ತಿ ಸ್ಟಾಫಾನಿ ಟೇಲರ್, ಅಮೆರಿಕದ ಬೌಲರ್ ಅಲಿ ಖಾನ್ ಸೇರಿದಂತೆ ಇತರ ಪ್ರಮುಖ ಕೆರಿಬಿಯನ್ ವ್ಯಕ್ತಿಗಳು ಈ ಗೀತೆಯಲ್ಲಿ ಕಾಣಿಸಿಕೊಂಡಿದ್ದಾರೆ.

VISTARANEWS.COM


on

T20 World Cup 2024
Koo

ನವದೆಹಲಿ: ಅಮೆರಿಕ ಮತ್ತು ವೆಸ್ಟ್​ ಇಂಡೀಸ್​ ಜಂಟಿ ಆತಿಥ್ಯದಲ್ಲಿ ನಡೆಯುವ ಐಸಿಸಿ(ICC) ಪುರುಷರ ಟಿ20 ವಿಶ್ವಕಪ್​ ಟೂರ್ನಿ(T20 World Cup 2024) ಆರಂಭಕ್ಕೆ ಇನ್ನು ಕೇವಲ ಬೆರಳೆಣಿಕೆಯ ದಿನಗಳು ಮಾತ್ರ ಬಾಕಿ ಉಳಿದಿವೆ. ವಿಶ್ವಕಪ್​ ಪಂದ್ಯವಾವಳಿಗಳು ಜೂನ್​ 1ರಿಂದ ಆರಂಭವಾಗಿ ಜೂನ್​ 29ಕ್ಕೆ ಮುಕ್ತಾಯ ಕಾಣಲಿದೆ. ಒಟ್ಟು 55 ಪಂದ್ಯಗಳು ಇರಲಿದೆ. ಟೂರ್ನಿ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಂತೆಯೇ ಐಸಿಸಿ ಪಂದ್ಯಾವಳಿಯ ಅಧಿಕೃತ ಗೀತೆಯನ್ನು ಅನಾವರಣಗೊಳಿಸಿದೆ.

ಗ್ರ್ಯಾಮಿ ಪ್ರಶಸ್ತಿ ವಿಜೇತ ಕಲಾವಿದ ಸೀನ್ ಪಾಲ್ ಮತ್ತು ಸೋಕಾ ಸೂಪರ್‌ಸ್ಟಾರ್ ಕೇಸ್ ಅವರು ‘ಔಟ್ ಆಫ್ ದಿಸ್ ವರ್ಲ್ಡ್’ ಎಂಬ ಶೀರ್ಷಿಕೆಯ ಗೀತೆಯನ್ನು ರಚಿಸಿದ್ದಾರೆ. ಇದು ಸಂಗೀತ ಮತ್ತು ಕ್ರೀಡೆಗಳೆರಡರಲ್ಲೂ ಕೆಲವು ಪ್ರಮುಖ ವ್ಯಕ್ತಿಗಳ ನಡುವಿನ ಸಹಯೋಗವನ್ನು ಇದು ಒಳಗೊಂಡಿದೆ. ಅಮೆರಿಕದ ಈ ಮೂರು ಕ್ರೀಡಾಂಗಣಗಳಲ್ಲಿ 16 ಪಂದ್ಯಗಳು ನಡೆಯಲಿದೆ. ಉಳಿದ 39 ಪಂದ್ಯಗಳಿಗೆ ವೆಸ್ಟ್ ಇಂಡೀಸ್ ಆತಿಥ್ಯ ವಹಿಸಿದೆ. 

ಎಂಟು ಬಾರಿಯ ಒಲಂಪಿಕ್ ಚಿನ್ನದ ಪದಕ ವಿಜೇತ ಉಸೇನ್ ಬೋಲ್ಟ್, ವೆಸ್ಟ್ ಇಂಡೀಸ್ ಕ್ರಿಕೆಟ್ ಐಕಾನ್‌ಗಳಾದ ಕ್ರಿಸ್ ಗೇಲ್, ಶಿವನಾರಾಯಣ್ ಚಂದ್ರಪಾಲ್ ಮತ್ತು ಮಹಿಳಾ ಆಟಗಾರ್ತಿ ಸ್ಟಾಫಾನಿ ಟೇಲರ್, ಅಮೆರಿಕದ ಬೌಲರ್ ಅಲಿ ಖಾನ್ ಸೇರಿದಂತೆ ಇತರ ಪ್ರಮುಖ ಕೆರಿಬಿಯನ್ ವ್ಯಕ್ತಿಗಳು ಈ ಗೀತೆಯಲ್ಲಿ ಕಾಣಿಸಿಕೊಂಡಿದ್ದಾರೆ. ಬೀಚ್​ ಒಂದರಲ್ಲಿ ಟಿ20 ವಿಶ್ವಕಪ್​ ಎಂದು ಬರೆದಿರುವ ಚೆಂಡೊಂದು ಬಿದ್ದಿರುತ್ತದೆ. ಇದನ್ನು ಹೆಕ್ಕುವ ಮೂಲಕ ಗೀತೆ ಆರಂಭೊಂಡಿದೆ. ವಿರಾಟ್​ ಕೊಹ್ಲಿ, ರೋಹಿತ್​ ಶರ್ಮ, ಜಾಸ್​ ಬಟ್ಲರ್​, ಗ್ಲೆನ್​ ಮ್ಯಾಕ್ಸ್​ವೆಲ್ ಅವರ ಕ್ರಿಕೆಟ್​ ಶಾಟ್​ಗಳ ಶೈಲಿಯಲ್ಲಿ ನೃತ್ಯ ಮಾಡಿದ್ದು ಕೂಡ ಈ ದೃಶ್ಯದಲ್ಲಿ ನೋಡಬಹುದಾಗಿದೆ.

ಇದನ್ನೂ ಓದಿ T20 World Cup 2024: ಟಿ20 ವಿಶ್ವಕಪ್​ಗೆ ಪಾಕಿಸ್ತಾನ ತಂಡ ಪ್ರಕಟಿಸಲು ಹೆದರುತ್ತಿರುವುದಕ್ಕೆ ಇದುವೇ ಅಸಲಿ ಕಾರಣ

ಕ್ರಿಕೆಟ್ ಯಾವಾಗಲೂ ಕೆರಿಬಿಯನ್ ಸಂಸ್ಕೃತಿಯ ಪ್ರಮುಖ ಭಾಗವಾಗಿದೆ. ಆದ್ದರಿಂದ ಟಿ20 ವಿಶ್ವಕಪ್‌ಗಾಗಿ ಅಧಿಕೃತ ಗೀತೆಯನ್ನು ಬರೆಯಲು ಮತ್ತು ರೆಕಾರ್ಡ್ ಮಾಡಲು ನನಗೆ ಗೌರವವಿದೆ. ಈ ಗೀತೆಗೆ ಸ್ಫೂರ್ತಿ ನೀಡಿದ ಸೃಜನಾತ್ಮಕ ಇನ್‌ಪುಟ್‌ನ ಸಂಪೂರ್ಣ ಸಿಬ್ಬಂದಿಗೆ ಗೌರವವು ಸಲ್ಲುತ್ತದೆ ಎಂದು ಸೋಕಾ ಸೂಪರ್‌ಸ್ಟಾರ್ ಕೆಸ್ ಹೇಳಿದ್ದಾರೆ.

ವಿಶ್ವಕಪ್​ಗೆ ಮುನ್ನ ಎಲ್ಲ 20 ತಂಡಗಳು ತಮ್ಮ ಆಗಮನಕ್ಕೆ ತಕ್ಕಂತೆ ತಲಾ 2 ಅಭ್ಯಾಸ ಪಂದ್ಯಗಳನ್ನು ಆಡಲಿವೆ. ಟೂರ್ನಿಯ ಲೀಗ್​ ಮತ್ತು ಸೂಪರ್​ 8 ಪಂದ್ಯಗಳಿಗೆ ಯಾವುದೇ ಮೀಸಲು ದಿನ ಇಲ್ಲ. ಈ ಪಂದ್ಯಗಳಿಗೆ ಮಳೆ ಬಂದು ಪಂದ್ಯ ರದ್ದಾದರೆ ಸಮಾನ ಅಂಕ ನೀಡಲಾಗುತ್ತದೆ. ಆದರೆ, ಸೆಮಿಫೈನಲ್​ ಮತ್ತು ಫೈನಲ್​ ಪಂದ್ಯಗಳಿಗೆ ಮೀಸಲು ದಿನ ಇರಲಿದೆ. ಒಂದೊಮ್ಮೆ ಸೆಮಿ ಮತ್ತು ಫೈನಲ್​ ಫೈನಲ್​ ಪಂದ್ಯಗಳು ಕೂಡ ಮೀಸಲು ದಿನವೂ ನಡೆಯದಿದ್ದರೆ ಆಗ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಪಡೆದ ತಂಡಕ್ಕೆ ಲಾಭ ಸಿಗಲಿದೆ.

Continue Reading

ಕ್ರೀಡೆ

T20 World Cup 2024: ಟಿ20 ವಿಶ್ವಕಪ್​ಗೆ ಪಾಕಿಸ್ತಾನ ತಂಡ ಪ್ರಕಟಿಸಲು ಹೆದರುತ್ತಿರುವುದಕ್ಕೆ ಇದುವೇ ಅಸಲಿ ಕಾರಣ

T20 World Cup 2024: ಮೇ 24 ತಂಡದಲ್ಲಿ ಬದಲಾವಣೆ ಮಾಡಿಕೊಳ್ಳಲು ಅಂತಿಮ ದಿನವಾಗಿದೆ. ಹೀಗಾಗಿ ಪಾಕ್​ ಇದೇ ದಿನ ತನ್ನ ತಂಡವನ್ನು ಪ್ರಕಟಿಸಲು ಯೋಜನೆಯೊಂದನ್ನು ಹಾಕಿಕೊಂಡಂತಿದೆ. ಆದರೆ ಮೇ 1 ತಂಡದ ಆಯ್ಕೆಗೆ ಅಂತಿಮ ದಿನವಾದ ಕಾರಣ ಐಸಿಸಿ ಇದಕ್ಕೆ ಅನುಮತಿ ನೀಡಲಿದೆಯೇ ಎಂದು ಕಾದು ನೋಡಬೇಕಿದೆ.

VISTARANEWS.COM


on

T20 World Cup 2024
Koo

ಕರಾಚಿ: ಮುಂಬರುವ ಟಿ20 ವಿಶ್ವಕಪ್​ಗೆ(T20 World Cup 2024) ಈಗಾಗಲೇ ಭಾರತ, ಆಸ್ಟ್ರೇಲಿಯಾ, ಇಂಗ್ಲೆಂಡ್​, ನ್ಯೂಜಿಲ್ಯಾಂಡ್​ ಸೇರಿ ಹಲವು ದೇಶಗಳು ತಮ್ಮ ತಂಡವನ್ನು ಪ್ರಕಟಿಸಿದೆ. ತಂಡ ಪ್ರಕಟಿಸಲು ಮೇ 1 ಅಂತಿಮ ದಿನವಾಗಿದ್ದರೂ ಕೂಡ ಪಾಕ್​ ಇದುವರೆಗೆ ತಂಡವನ್ನು ಪ್ರಕಟಿಸಿಲ್ಲ. ಇದಕ್ಕೆ ಕಾರಣ ಏನೆಂಬುದು ತಿಳಿದು ಬಂದಿದೆ. ಹೌದು, ಕೆಲವು ಪ್ರಮುಖ ಆಟಗಾರರು ಫಿಟ್‌ನೆಸ್‌ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎನ್ನಲಾಗಿದೆ. ಹೀಗಾಗಿ ಮೇ 23 ಅಥವಾ 24ರ ವೇಳೆ ತಂಡವನ್ನು ಪ್ರಕಟಿಸುವುದು ಪಿಸಿಬಿ ಯೋಜನೆಯಾಗಿದೆ.

ಪ್ರಮುಖ ಟಿ20 ಆಟಗಾರರಾದ ಮೊಹಮ್ಮದ್‌ ರಿಜ್ವಾನ್‌, ಆಜಂ ಖಾನ್‌, ಇರ್ಫಾನ್‌ ಖಾನ್‌ ನಿಯಾಜಿ ಮತ್ತು ಹ್ಯಾರಿಸ್‌ ರೌಫ್ ಅವರು ಫಿಟ್‌ನೆಸ್‌ ಹೊಂದಿಲ್ಲ. ಹೀಗಾಗಿ ಇವರನ್ನು ಮುಂಬರುವ ಐರ್ಲೆಂಡ್‌, ಇಂಗ್ಲೆಂಡ್‌ ಸರಣಿಗಳಲ್ಲಿ ಆಡಿಸಿ ನೋಡುವುದು ಪಾಕ್​ನ ಉದ್ದೇಶವಾಗಿದೆ. ಮೇ 24 ತಂಡದಲ್ಲಿ ಬದಲಾವಣೆ ಮಾಡಿಕೊಳ್ಳಲು ಅಂತಿಮ ದಿನವಾಗಿದೆ. ಹೀಗಾಗಿ ಪಾಕ್​ ಇದೇ ದಿನ ತನ್ನ ತಂಡವನ್ನು ಪ್ರಕಟಿಸಲು ಯೋಜನೆಯೊಂದನ್ನು ಹಾಕಿಕೊಂಡಂತಿದೆ. ಆದರೆ ಮೇ 1 ತಂಡದ ಆಯ್ಕೆಗೆ ಅಂತಿಮ ದಿನವಾದ ಕಾರಣ ಐಸಿಸಿ ಇದಕ್ಕೆ ಅನುಮತಿ ನೀಡಲಿದೆಯೇ ಎಂದು ಕಾದು ನೋಡಬೇಕಿದೆ.

ಭಾರತ ಮತ್ತು ಪಾಕಿಸ್ತಾನ ತಂಡಗಳು ಜೂನ್​ 9ರಂದು ನಡೆಯುವ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ. ಈ ಪಂದ್ಯಕ್ಕಾಗಿ ಉಭಯ ದೇಶಗಳ ಅಭಿಮಾನಿಗಳು ಚಾತಕ ಪಕ್ಷಿಯಂತೆ ಕಾದು ಕುಳಿತಿದ್ದಾರೆ. ನ್ಯೂಯಾರ್ಕ್​ನಲ್ಲಿ ತಾತ್ಕಾಲಿಕವಾಗಿ ತಲೆ ಎತ್ತಿದ ನಸ್ಸೌ ಕೌಂಟಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ(Nassau County International Cricket Stadium)ನಲ್ಲಿ ಇತ್ತಂಡಗಳ ನಡುವಣ ಪಂದ್ಯ ನಡೆಯಲಿದೆ.

34 ಸಾವಿರ ಪ್ರೇಕ್ಷಕರು ಕೂರುವಷ್ಟು ಸಾಮರ್ಥ್ಯದ ಸ್ಟೇಡಿಯಂ ಇದಾಗಿದ್ದು. ಭಾರತ-ಪಾಕ್​ ಪಂದ್ಯಕ್ಕಾಗಿಯೇ ಇದನ್ನು ತಾತ್ಕಾಲಿಕವಾಗಿ ನಿರ್ಮಿಸಲಾಗಿದೆ. ಪಂದ್ಯದ ನಂತರ ಇದನ್ನು ಕೆಡವಲಾಗುತ್ತದೆ. ಎಂದು ತಿಳಿಸಲಾಗಿದೆ. ಭಾರತ ಮತ್ತು ಪಾಕ್​ ನಡುವಣ ಪಂದ್ಯ ನ್ಯೂಯಾರ್ಕ್‌ನಲ್ಲಿಯೇ ನಡೆಸಲು ಕಾರಣವೂ ಕೂಡ ಇದೆ. ಏಕೆಂದರೆ ಈ ಪ್ರದೇಶದಲ್ಲಿ 7,11,000 ಭಾರತೀಯ ಮತ್ತು ಸುಮಾರು 1,00,000 ಪಾಕಿಸ್ತಾನ ಮೂಲದ ಜನರು ವಾಸಿಸುತ್ತಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ T20 World Cup 2024: ಡ್ರಾಪ್ -ಇನ್ ಪಿಚ್ ಅಳವಡಿಕೆ ಕಾರ್ಯ ಆರಂಭಿಸಿದ ಐಸಿಸಿ

ನ್ಯೂಯಾರ್ಕ್ ಮತ್ತು ನವದೆಹಲಿ ನಡುವೆ 10.5 ಗಂಟೆಗಳ ಸಮಯದ ವ್ಯತ್ಯಾಸವಿರುವುದರಿಂದ, ಸಂಘಟಕರು ಕೆಲವು ಪಂದ್ಯಗಳನ್ನು, ವಿಶೇಷವಾಗಿ ಭಾರತವನ್ನು ಒಳಗೊಂಡ ಪಂದ್ಯಗಳನ್ನು ಬೆಳಗ್ಗೆ ಪ್ರಾರಂಭಿಸಲು ಒಪ್ಪಿಕೊಂಡಿದ್ದಾರೆ. ಇದು ಭಾರತೀಯ ದೂರದರ್ಶನ ಪ್ರೇಕ್ಷಕರಿಗೆ ತಮ್ಮ ಅನುಕೂಲದ ಸಮಯದಲ್ಲಿ ಪಂದ್ಯವನ್ನು ನೋಡಲು ಸಹಾಯ ಮಾಡಲಿದೆ. ಜೂನ್​ 9 ಕೂಡ ಭಾನುವಾರವಾಗಿದೆ. ಅಮೆರಿಕದಲ್ಲಿ ರಾತ್ರಿ ಪಂದ್ಯ ಆಯೋಜಿಸಿದರೆ, ಭಾರತದಲ್ಲಿ ಸೋಮವಾರ ಮುಂಜಾನೆ ಪಂದ್ಯ ಪ್ರಸಾರವಾಗುತ್ತದೆ. ಹೀಗಾಗಿ ಅಮೆರಿಕದಲ್ಲಿ ರಾತ್ರಿ ಪಂದ್ಯ ನಡೆಸುವುದಾದರೆ ಜೂನ್​ 8ರಂದೇ ನಡೆಯಲಿದೆ. ಆಗ ಭಾರತದಲ್ಲಿ ಭಾನುವಾರ ಬೆಳಗ್ಗೆ ಪಂದ್ಯ ಪ್ರಸಾರವಾಗಲಿದೆ.

Continue Reading

ಕ್ರೀಡೆ

T20 World Cup: ರೋಹಿತ್​, ಅಗರ್ಕರ್​ ಜಂಟಿ ಸುದ್ದಿಗೋಷ್ಠಿಗೆ ಕ್ಷಣಗಣನೆ

T20 World Cup: ಕಳಪೆ ಫಾರ್ಮ್​ನಿಂದ ಬಳಲುತ್ತಿರುವ ಹಾರ್ದಿಕ್​ ಪಾಂಡ್ಯಗೆ ಅವಕಾಶ ನೀಡಿದ್ದು ಮಾತ್ರವಲ್ಲದೆ ಉಪನಾಯಕನ ಸ್ಥಾನ ನೀಡಿದ್ದರ ಬಗ್ಗೆ ಈಗಾಗಲೇ ಅನೇಕ ಮಾಜಿ ಆಟಗಾರರಿಂದ ಟೀಕೆಗಳು ವ್ಯಕ್ತವಾಗಿದೆ. ಗುಜರಾತಿ ಲಾಬಿ ಎಂದು ಕೆಲವರು ಬಿಸಿಸಿಐ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

VISTARANEWS.COM


on

T20 World Cup
Koo

ಮುಂಬೈ: ಅಮೆರಿಕ ಮತ್ತು ವೆಸ್ಟ್​ ಇಂಡಿಸ್​ ಜಂಟಿ ಆತಿಥ್ಯದಲ್ಲಿ ನಡೆಯುವ ಟಿ20 ವಿಶ್ವಕಪ್​ಗೆ(T20 World Cup) ಭಾರತ ತಂಡ (Team India) ಆಯ್ಕೆ ಮಾಡಿದ ಬೆನ್ನಲ್ಲೇ ಇಂದು(ಗುರುವಾರ) ಆಯ್ಕೆ ಸಮಿತಿಯ ಮುಖ್ಯಸ್ಥ ಅಜಿತ್ ಅಗರ್ಕರ್(Ajit Agarkar) ಮತ್ತು ತಂಡದ ನಾಯಕ ರೋಹಿತ್ ಶರ್ಮಾ(Rohit Sharma) ಮುಂಬೈಯ ಬಿಸಿಸಿಐ ಪ್ರಧಾನ ಕಚೇರಿಯಲ್ಲಿ ಮಹತ್ವದ ಸುದ್ದಿಗೋಷ್ಠಿ ನಡೆಸಲಿದ್ದಾರೆ.

ಮಂಗಳವಾರ ಬಿಸಿಸಿಐ ಕಾರ್ಯದರ್ಶಿ ಜಯ್​ ಶಾ ಮತ್ತು ಅಜಿತ್​ ಅಗರ್ಕರ್​ ಅಹಮದಾಬಾದ್​ನಲ್ಲಿ ಔಪಚಾರಿಕ ಸಭೆ ನಡೆಸಿ ಟ್ವೀಟರ್​ನಲ್ಲಿ ಪೋಸ್ಟ್​ ಮಾಡುವ ಮೂಲಕ ತಂಡವನ್ನು ಪ್ರಟಿಸಿದ್ದರು. ಇದೀಗ ನಾಯಕ ರೋಹಿತ್​ ಮತ್ತು ಅಗರ್ಕರ್​ ಜಂಟಿಯಾಗಿ ಸುದ್ದಿಗೋಷ್ಠಿ ನಡೆಸಿ ಆಟಗಾರರ ಆಯ್ಕೆ ಬಗ್ಗೆ ಮಾಹಿತಿ ನೀಡಲಿದ್ದಾರೆ. ಕೆಲ ಆಟಗಾರರಿಗೆ ಅವಕಾಶ ನೀಡದ ಬಗ್ಗೆಯೂ ಈ ಸುದ್ದಿಗೋಷ್ಠಿಯಲ್ಲಿ ಉತ್ತರ ಸಿಗುವ ಸಾಧ್ಯತೆ ಇದೆ. ಅದರಲ್ಲಿಯೂ ಅನುಭವಿ ಆಟಗಾರ ಕೆಎಲ್ ರಾಹುಲ್​ಗೆ ಮತ್ತು ರಿಂಕು ಸಿಂಗ್​ಗೆ ಅವಕಾಶ ನೀಡದ್ದರ ಕುರಿತು ಹಲವು ಪ್ರಶ್ನೆಗಳು ಎದುರಾಗಬಹುದು.

ಇದನ್ನೂ ಓದಿ T20 World Cup: ಟಿ20 ವಿಶ್ವಕಪ್​ ತಂಡ ಸೇರಲು ರಾಹುಲ್​ಗೆ ಇನ್ನೂ ಇದೆ ಅವಕಾಶ

ಕಳಪೆ ಫಾರ್ಮ್​ನಿಂದ ಬಳಲುತ್ತಿರುವ ಹಾರ್ದಿಕ್​ ಪಾಂಡ್ಯಗೆ ಅವಕಾಶ ನೀಡಿದ್ದು ಮಾತ್ರವಲ್ಲದೆ ಉಪನಾಯಕನ ಸ್ಥಾನ ನೀಡಿದ್ದರ ಬಗ್ಗೆ ಈಗಾಗಲೇ ಅನೇಕ ಮಾಜಿ ಆಟಗಾರರಿಂದ ಟೀಕೆಗಳು ವ್ಯಕ್ತವಾಗಿದೆ. ಗುಜರಾತಿ ಲಾಬಿ ಎಂದು ಕೆಲವರು ಬಿಸಿಸಿಐ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಪಾಂಡ್ಯ ಆಯ್ಕೆಯ ಬಗ್ಗೆಯೂ ರೋಹಿತ್​ಗೆ ಪ್ರಶ್ನೆಗಳ ಸುರಿಮಳೆ ಬರುವ ಸಾಧ್ಯತೆಯೂ ಕಂಡುಬಂದಿದೆ. ಇಂದು ಸಂಜೆ 4 ಗಂಟೆಗೆ ಸುದ್ದಿಗೋಷ್ಠಿ ನಡೆಯಲಿದೆ.

ಭಾರತ ತನ್ನ ಎಲ್ಲ ಲೀಗ್‌ ಪಂದ್ಯಗಳನ್ನು ಅಮೆರಿಕದಲ್ಲೇ ಆಡಲಿದೆ. ಇದರಲ್ಲಿ ಮೂರು ಪಂದ್ಯಗಳು ನ್ಯೂಯಾರ್ಕ್‌ ಮತ್ತು ಒಂದು ಪಂದ್ಯ ಫ್ಲೋರಿಡಾದಲ್ಲಿ ನಡೆಯಲಿದೆ. ಜೂನ್‌ 5 ರಂದು ಐರ್ಲೆಂಡ್​ ವಿರುದ್ಧ ಆಡುವ ಮೂಲಕ ಭಾರತ ತನ್ನ ಅಭಿಯಾನ ಆರಂಭಿಸಲಿದೆ. ದ್ವಿತೀಯ ಪಂದ್ಯವನ್ನು ಜೂನ್‌ 9 ರಂದು ಸಾಂಪ್ರದಾಯಿಕ ಬದ್ಧ ಎದುರಾಳಿ ಪಾಕ್​ ವಿರುದ್ಧ ಆಡಲಿದೆ. ಟೂರ್ನಿಯಲ್ಲಿ ಒಟ್ಟು 55 ಪಂದ್ಯಗಳು ನಡೆಯಲಿವೆ. ಜೂನ್ 1ರಿಂದ 18ರವರೆಗೆ ಗುಂಪು ಹಂತದಲ್ಲಿ 40 ಪಂದ್ಯಗಳು ನಡೆದರೆ, ಜೂನ್ 19 ರಿಂದ 24 ರವರೆಗೆ ಸೂಪರ್ 8 ಪಂದ್ಯಗಳು ನಡೆಯಲಿವೆ. ಜೂನ್​ 29ಕ್ಕೆ ಫೈನಲ್​ ಪಂದ್ಯ ಸಾಗಲಿದೆ.

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್​ ಕೀಪರ್​), ಸಂಜು ಸ್ಯಾಮ್ಸನ್ (ವಿಕೆಟ್​ ಕೀಪರ್​), ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಯುಜ್ವೇಂದ್ರ ಚಾಹಲ್, ಅರ್ಶದೀಪ್​ ಸಿಂಗ್​, ಜಸ್​ಪ್ರೀತ್​ ಬುಮ್ರಾ, ಮೊಹಮ್ಮದ್​ ಸಿರಾಜ್. ಮೀಸಲು ಆಟಗಾರರು ಶುಭಮನ್ ಗಿಲ್, ರಿಂಕು ಸಿಂಗ್, ಖಲೀಲ್ ಅಹ್ಮದ್ ಮತ್ತು ಅವೇಶ್ ಖಾನ್

Continue Reading
Advertisement
karnataka Weather Forecast
ಮಳೆ27 mins ago

Karnataka Weather : ಇಂದು ಮಳೆ ಬರುತ್ತಾ? ಯಾವ ಜಿಲ್ಲೆಗಳಲ್ಲಿದೆ ಹೀಟ್‌ ವೇವ್‌?

Pain relievers
ಆರೋಗ್ಯ57 mins ago

Pain Relievers: ಸೈಡ್‌ ಎಫೆಕ್ಟ್‌ ಇಲ್ಲದ ಪ್ರಕೃತಿದತ್ತ ನೋವು ನಿವಾರಕಗಳಿವು

Dina bhavishya
ಭವಿಷ್ಯ2 hours ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Ramanagara News
ಕರ್ನಾಟಕ7 hours ago

Channapatna News: ಮದುವೆಯಲ್ಲಿ ಐಸ್ ಕ್ರೀಂ ತಿಂದು 50ಕ್ಕೂ ಹೆಚ್ಚು ಮಂದಿ ಅಸ್ವಸ್ಥ

Narendra Modi
ದೇಶ7 hours ago

Narendra Modi: ರಾಮಲಲ್ಲಾನಿಗೆ ಮೋದಿ ಸಾಷ್ಟಾಂಗ ನಮಸ್ಕಾರ; ಇಲ್ಲಿವೆ ಅಯೋಧ್ಯೆ ಭೇಟಿ Photos

IPL 2024
ಪ್ರಮುಖ ಸುದ್ದಿ7 hours ago

IPL 2024 : ಇವರೇ ನೋಡಿ ಐಪಿಎಲ್​ 2024ರ ಮೊದಲ ಕನ್​ಕಷನ್​ ಬದಲಿ ಆಟಗಾರ

Prajwal Revanna Case
ಪ್ರಮುಖ ಸುದ್ದಿ7 hours ago

Prajwal Revanna Case: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೊ ಶೇರ್‌ ಮಾಡಿದ್ರೆ ಕೇಸ್‌ ಗ್ಯಾರಂಟಿ; ಎಸ್‌ಐಟಿ ಎಚ್ಚರಿಕೆ

IPL 2024
ಕ್ರೀಡೆ7 hours ago

IPL 2024 : ಲಕ್ನೊ ವಿರುದ್ಧ ಕೆಕೆಆರ್​​ಗೆ 98 ರನ್​ಗಳ ಬೃಹತ್​ ಜಯ

Narendra Modi
ದೇಶ7 hours ago

Narendra Modi: ಮತಬ್ಯಾಂಕ್‌ ಗುತ್ತಿಗೆದಾರರ ಸ್ನೇಹಕ್ಕೆ ಮುಸ್ಲಿಮರು ವಿದಾಯ; ಕಾಂಗ್ರೆಸ್‌ಗೆ ಮೋದಿ ಟಾಂಗ್!

Prajwal Revanna Case
ಕರ್ನಾಟಕ8 hours ago

Prajwal Revanna Case: ಜಡ್ಜ್‌ ಮುಂದೆಯೂ ನಿಂಬೆ ಹಣ್ಣು ಹಿಡಿದುಕೊಂಡಿದ್ದ ಎಚ್‌.ಡಿ.ರೇವಣ್ಣ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina bhavishya
ಭವಿಷ್ಯ2 hours ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ11 hours ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ13 hours ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ13 hours ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ2 days ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ3 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ3 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ4 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ4 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

ಟ್ರೆಂಡಿಂಗ್‌