ನವದೆಹಲಿ: ವೆಸ್ಟ್ ಇಂಡೀಸ್‌ನಲ್ಲಿ ನಡೆದ ಐಸಿಸಿ ಟಿ-20 ವಿಶ್ವಕಪ್ (T20 World Cup 2024) ಟೂರ್ನಿಯ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಬಗ್ಗುಬಡಿದ ರೋಹಿತ್ ಶರ್ಮಾ (Rohit Sharma) ನೇತೃತ್ವದ ಭಾರತದ ಕ್ರಿಕೆಟ್ ತಂಡವು ಭಾರತಕ್ಕೆ ಆಗಮಿಸಿದೆ. ಏರ್ ಇಂಡಿಯಾ ಏರ್‌ಲೈನ್ಸ್‌ನ ವಿಶೇಷ ಚಾರ್ಟರ್ಡ್ ವಿಮಾನದಲ್ಲಿ ಭಾರತ ತಂಡದ (Team India) ಆಟಗಾರರು ದೆಹಲಿಗೆ ಆಗಮಿಸಿದ್ದಾರೆ. ಪ್ರತಿಕೂಲ ಹವಾಮಾನದ ಕಾರಣದಿಂದ ಆಟಗಾರರು ಕೆಲವು ದಿನ ಬಾರ್ಬಡಾಸ್ನಲ್ಲೇ ಸಿಲುಕಿ ಹಾಕಿಕೊಂಡಿದ್ದರು. ಇದೀಗ ತವರಿಗೆ ಆಗಮಿಸಿದ ವಿಶ್ವಕಪ್ ಹೀರೋಗಳಿಗೆ ಅಭಿಮಾನಿಗಳು ಭರ್ಜರಿ ಸ್ವಾಗತ ಕೋರಿದ್ದಾರೆ.
#WATCH | Delhi: Men's Indian Cricket Team en route to ITC Maurya, after winning the #T20WorldCup2024 trophy.
— ANI (@ANI) July 4, 2024
India defeated South Africa by 7 runs on June 29, in Barbados. pic.twitter.com/fgEYy7AeFB
ಸಹಾಯಕ ಸಿಬ್ಬಂದಿ, ಆಟಗಾರರ ಕುಟುಂಬ ಸದಸ್ಯರು, ಕ್ರಿಕೆಟ್ ಮಂಡಳಿಯ ಅಧಿಕಾರಿಗಳು ಮತ್ತು ಪತ್ರಕರ್ತರೊಂದಿಗೆ ಭಾರತೀಯ ತಂಡದ ಆಟಗಾರರು ಗ್ರಾಂಟ್ಲಿ ಆಡಮ್ಸ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬುಧವಾರ ವಿಶೇಷ ಚಾರ್ಟರ್ ವಿಮಾನ ಏರಿದ್ದರು. ಏರ್ ಇಂಡಿಯಾ ಚಾಂಪಿಯನ್ಸ್ 24 ವರ್ಲ್ಡ್ ಕಪ್ (Air India Champions 24 World Cup) ಎನ್ನುವ ಹೆಸರಿನ ವಿಮಾನವು ಬೆಳಿಗ್ಗೆ 6:20ರ ಸುಮಾರಿಗೆ ದೆಹಲಿಯ ಇಂದಿರಾ ಗಾಂಧಿ ಇಂಟರ್ನ್ಯಾಷನ್ ವಿಮಾನ ನಿಲ್ದಾಣಕ್ಕೆ ಬಂದಿಳಿಯಿತು.
ಬೆರಿಲ್ ಚಂಡಮಾರುತದಿಂದ ಉಂಟಾದ ವಿಳಂಬದಿಂದಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ವಿಶೇಷ ಚಾರ್ಟರ್ ವಿಮಾನದ ವ್ಯವಸ್ಥೆ ಮಾಡಿತ್ತು. ಭಾರತೀಯ ಪತ್ರಕರ್ತರು, ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ ಮತ್ತು ಕಾರ್ಯದರ್ಶಿ ಜಯ್ ಶಾ ವಿಮಾನದಲ್ಲಿದ್ದರು ಎಂದು ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ತಿಳಿಸಿದ್ದಾರೆ. ವಿಮಾನ ಬಂದಿಳಿಯುತ್ತಿದ್ದಂತೆ ಅಭಿಮಾನಿಗಳು ಜಯಘೋಷ ಕೂಗಿ ಸ್ವಾಗತಿಸಿದರು.
Virat Kohli along with Team India arrives at Delhi airport 😍🔥#IndianCricketTeam pic.twitter.com/NS5pFpMejD
— Virat Kohli Fan Club (@Trend_VKohli) July 4, 2024
ಭಾರತ ತಂಡದ ಆಟಗಾರರು 11 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಅವರ ಜತೆ ಬೆಳಗ್ಗಿನ ತಿಂಡಿ ಸವಿಯಲಿದ್ದಾರೆ. ನರೇಂದ್ರ ಮೋದಿ ಅವರು ತಮ್ಮ ನಿವಾಸದಲ್ಲಿಯೇ ಭಾರತ ಕ್ರಿಕೆಟ್ ತಂಡದ ಆಟಗಾರರನ್ನು ಭೇಟಿಯಾಗಿ, ಅವರ ಜತೆ ತಿಂಡಿ ತಿನ್ನಲಿದ್ದಾರೆ. ಇದೇ ವೇಳೆ ಆಟಗಾರರಿಗೆ ಮೋದಿ ಅವರು ಅಭಿನಂದನೆ ಸಲ್ಲಿಸಲಿದ್ದಾರೆ.
#WATCH | Men's Indian Cricket Team leaves from Delhi airport.
— ANI (@ANI) July 4, 2024
India defeated South Africa by 7 runs on June 29, in Barbados. pic.twitter.com/2oG4qMeGHt
ವಿಜಯಯಾತ್ರೆಗೆ ಸಕಲ ಸಿದ್ಧತೆ
ವಿಶ್ವಕಪ್ ಗೆದ್ದ ಭಾರತ ತಂಡದ ಆಟಗಾರರಿಗೆ ಮುಂಬೈನಲ್ಲಿ ಗುರುವಾರ ಸಂಜೆ ವಿಜಯಯಾತ್ರೆ ಆಯೋಜಿಸಲಾಗಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಸಂಜೆ 5 ಗಂಟೆಗೆ ಭಾರತ ತಂಡದ ಆಟಗಾರರನ್ನು ಅದ್ಧೂರಿಯಾಗಿ ಸ್ವಾಗತಿಸಲಾಗುತ್ತದೆ. ಇದಕ್ಕೂ ಮೊದಲು ಅಂದರೆ, ಸಂಜೆ 4 ಗಂಟೆಗೆ ಮರೀನ್‌ನಿಂದ ವಾಂಖೆಡೆ ಸ್ಟೇಡಿಯಂವರೆಗೆ ತೆರೆದ ವಾಹನದಲ್ಲಿ ಮೆರವಣಿಗೆ ಬರಲಿದ್ದಾರೆ. ವಿಕ್ಟರಿ ಪರೇಡ್‌ನಲ್ಲಿ ಸಾವಿರಾರು ಜನ ಪಾಲ್ಗೊಳ್ಳುವ ನಿರೀಕ್ಷೆ ಇದೆ. ಎಲ್ಲರೂ ಬನ್ನಿ ಎಂಬುದಾಗಿ ರೋಹಿತ್ ಶರ್ಮಾ ಅವರು ಈಗಾಗಲೇ ಆಹ್ವಾನ ನೀಡಿದ್ದಾರೆ.
ಇದನ್ನೂ ಓದಿ: Team India: ಟಿ-20 ವಿಶ್ವಕಪ್ ಗೆದ್ದು ಭಾರತದತ್ತ ಟೀಮ್ ಇಂಡಿಯಾ; ಫ್ಲೈಟ್ ಟ್ರ್ಯಾಕರ್‌ನಲ್ಲಿ ಹೊಸ ದಾಖಲೆ
ಜೂನ್ 29ರಂದು ಬಾರ್ಬಡೋಸ್ನ ಕೆನ್ಸಿಂಗ್ಟನ್ ಓವಲ್ನಲ್ಲಿ ಜೂನ್ 29ರಂದು ನಡೆದ ಟಿ20 ವಿಶ್ವಕಪ್ 2024 ಫೈನಲ್ನಲ್ಲಿ ಟೀಮ್ ಇಂಡಿಯಾ ದಕ್ಷಿಣ ಆಫ್ರಿಕಾವನ್ನು ಏಳು ರನ್ಗಳ ಅಂತರದಿಂದ ಸೋಲಿಸುವ ಮೂಲಕ ಚಾಂಪಿಯನ್ ಆಗಿ ಹೊರ ಹೊಮ್ಮಿತ್ತು. ಆ ಮೂಲಕ ಸುಮಾರು 17 ವರ್ಷಗಳ ಬಳಿಕ ಟಿ-20 ವಿಶ್ವಕಪ್ ಮುಡಿಗೇರಿಸಿಕೊಂಡಿದೆ.