Site icon Vistara News

Team India: ಟೀಮ್ ಇಂಡಿಯಾದ ವಿಕ್ಟರಿ ಪೆರೇಡ್​ಗೆ ಕ್ಷಣಗಣನೆ; ಮುಂಬೈ ತಲುಪಿದ ಆಟಗಾರರು

Team India

Team India: T20 World Cup Celebration Live Updates; Packed Marine drive and Wankhede Stadium awaits Rohit Sharma and Co

ಮುಂಬಯಿ: ಟಿ20 ವಿಶ್ವಕಪ್(T20 World Cup) ವಿಜೇತ ಟೀಮ್​ ಇಂಡಿಯಾದ(Team India) ವಿಕ್ಟರಿ ಪೆರೇಡ್​ಗೆ ಕ್ಷಣಗಣನೆ ಶುರುವಾಗಿದೆ. ವಿಶ್ವ ವಿಜೇತರನ್ನು ಅಭಿನಂದಿಸಲು(Team India victory parade) ಮುಂಬೈ ನಗರಿ ಸಿದ್ಧವಾಗಿ ನಿಂತಿದೆ. ಆಟಗಾರರು ಈಗಾಗಲೇ ಮುಂಬೈ ತಲುಪಿದ್ದಾರೆ. ಈ ವಿಜಯಯಾತ್ರೆಯನ್ನು ಸ್ಟಾರ್ ಸ್ಪೋರ್ಟ್ಸ್ ನೇರ ಪ್ರಸಾರ ಮಾಡುವುದಾಗಿ ಘೋಷಿಸಿದೆ. ಹಾಗೆಯೇ ಸ್ಪೋರ್ಟ್ಸ್ 18ನಲ್ಲಿ, ಜಿಯೋ ಸಿನಿಮಾ ಆ್ಯಪ್​ನಲ್ಲಿಯೂ ಈ ವಿಜಯೋತ್ಸವದ ನೇರ ಪ್ರಸಾರ ಇರಲಿದೆ.

ಸಂಭ್ರಮಾಚರಣೆಗೆ ಆಹ್ವಾನ ನೀಡಿದ್ದ ರೋಹಿತ್​


ಮುಂಬೈನವರೇ ಆಗಿರುವ ನಾಯಕ ರೋಹಿತ್ ಶರ್ಮ ತಮ್ಮ ತವರಿನ ಅಭಿಮಾನಿಗಳಿಗೆ ಈ ಬೃಹತ್ ಮೆರವಣಿಯಲ್ಲಿ ಪಾಲ್ಗೊಳ್ಳುವಂತೆ ವಿಶೇಷವಾಗಿ ಮನವಿ ಮಾಡಿದ್ದರು. ಭಾರತಕ್ಕೆ ಬರುವ ಮುನ್ನವೇ ರೋಹಿತ್​ ‘ಇಂತಹ ವಿಶೇಷ ಸಂಭ್ರಮವನ್ನು ನಿಮ್ಮೊಂದಿಗೆ ಆಚರಿಸುವ ಬಯಕೆಯಿದೆ. ಮರೈನ್ ಡ್ರೈವ್ ಹಾಗೂ ವಾಂಖೇಡೆ ಕ್ರೀಡಾಂಗಣದಲ್ಲಿ ನಮ್ಮೊಂದಿಗೆ ನೀವೂ ಜತೆಯಾಗಿ’ ಎಂದು ಟ್ವೀಟ್ ಮಾಡಿದ್ದರು. ಈಗಾಗಲೇ ಅಭಿಮಾನಿಗಳು ಟೀಮ್​ ಇಂಡಿಯಾ ಜೆರ್ಸಿ ತೊಟ್ಟು ಸ್ಟೇಡಿಯಂಗೆ ಆಗಮಿಸಿದ್ದಾರೆ.

ತೆರೆದ ಬಸ್​ನಲ್ಲಿ ರೋಡ್ ಶೋ


ಆಟಗಾರರು ಮುಂಬೈಗೆ ತಲುಪಿದೊಡನೆ ‘ಮುಂಬೈನ ನರೀಮನ್ ಪಾಯಿಂಟ್‌ನಿಂದ ಸರಿಯಾಗಿ 5 ಗಂಟೆಗೆ ರೋಡ್‌ ಶೋ ಆರಂಭವಾಗಲಿದೆ. ಅದಾದ ಮೇಲೆ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಆಟಗಾರರನ್ನು ಮತ್ತು ಮತ್ತು ಸಿಬ್ಬಂದಿ ಬಳಗವನ್ನು ಸನ್ಮಾನಿಸಲಾಗುತ್ತದೆ. ಇದಾದ ಬಳಿಕ ಬಿಸಿಸಿಐ ಘೋಷಿಸಿರುವ 125 ಕೋಟಿ ಬಹುಮಾನ ಮೊತ್ತವನ್ನು ಕೂಡ ಪ್ರದಾನ ಮಾಡಲಾಗುತ್ತದೆ.

ಮುಂಬೈಗೆ ತೆರಳುವ ಮುನ್ನ ಟೀಮ್​ ಇಂಡಿಯಾ ಆಟಗಾರರು ದೆಹಲಿಯ ಲೋಕ ಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಿ ನರೇಂದ್ರ ಮೋದಿ (PM Narendra Modi)ಅವರ ನಿವಾಸಕ್ಕೆ(Team India Arrival) ಭೇಟಿ ನೀಡಿ ವಿಶ್ವಕಪ್​ ಗೆಲುವಿನ ಕುರಿತು ಪ್ರಧಾನಿ ಜತೆ ತಮ್ಮ ಅನುಭವ ಹಂಚಿಕೊಂಡರು. ಮೋದಿ ಕೂಡ ಆಟಗಾರರೊಂದಿಗೆ ಕೆಲ ಕಾಲ ಕುಶಲೋಪರಿ ನಡೆಸಿದರು. ಜತೆಗೆ ಗ್ರೂಫ್​ ಫೋಟೊ ತೆಗೆಸಿಕೊಂಡರು. ಆಟಗಾರರಿಗೆ ವಿಶೇಷ ಭೋಜನ ಕೂಟವನ್ನು ಕೂಡ ಏರ್ಪಡಿಸಲಾಗಿತ್ತು. ಈ ವೇಳೆ ಬಿಸಿಸಿಐ ಕಡೆಯಿಂದ ಮೋದಿಗೆ(PM Modi) ನಮೋ ನಂ.1 ಎಂದು ಬರೆದ ಟೀಮ್​ ಇಂಡಿಯಾ ಜೆರ್ಸಿಯನ್ನು(Indian Cricket Jersey) ಉಡುಗೊರೆಯಾಗಿ ನೀಡಲಾಯಿತು.

ಇದನ್ನೂ ಓದಿ Team India: ಮೋದಿಗೆ ನಮೋ ಹೆಸರಿನ ಟೀಮ್​ ಇಂಡಿಯಾ ಜೆರ್ಸಿ ಉಡುಗೊರೆ ನೀಡಿದ ಬಿಸಿಸಿಐ

ವಿಶ್ವ ವಿಜೇತ ತಂಡವನ್ನು ಭೇಟಿ ಮಾಡಿದ ಫೋಟೊವನ್ನು ಮೋದಿ ಕೂಡ ತನ್ನ ಟ್ವಿಟರ್​ ಎಕ್ಸ್​ನಲ್ಲಿ ಹಂಚಿಕೊಂಡಿದ್ದು, ನಮ್ಮ ಚಾಂಪಿಯನ್‌ಗಳೊಂದಿಗೆ ಉತ್ತಮ ಸಭೆ!…ಪಂದ್ಯಾವಳಿಯ ಸ್ಮರಣೀಯ ಸಂಭಾಷಣೆy ಅನುಭವವನ್ನು ಕೇಳಿ ನಿಜವಾಗಿಯೂ ಸಂತಸ ತಂದಿತು ಎಂದು ಬರೆದುಕೊಂಡಿದ್ದಾರೆ.

ಸಂಚಾರ ದಟ್ಟಣೆಯನ್ನು ನಿಯಂತ್ರಿಸಲು ಸಾರ್ವಜನಿಕ ಸಾರಿಗೆಯನ್ನು ಬಳಸುವಂತೆ ಮುಂಬೈ ಪೊಲೀಸರು ಜನರನ್ನು ಒತ್ತಾಯಿಸಿದ್ದಾರೆ. ಮುಂಬೈ ವಲಯ 1ರ ಡಿಸಿಪಿ ಪ್ರವೀಣ್ ಮುಂಡೆ ಮಾಧ್ಯಮದೊಂದಿಗೆ ಮಾತನಾಡಿ, ”ಟಿ20 ವಿಶ್ವಕಪ್ ಗೆದ್ದಿರುವ ಭಾರತ ಕ್ರಿಕೆಟ್ ತಂಡ ಮುಂಬೈಗೆ ಆಗಮಿಸುತ್ತಿದೆ. ನಾರಿಮನ್ ಪಾಯಿಂಟ್ ಮತ್ತು ವಾಂಖೆಡೆ ಸ್ಟೇಡಿಯಂ ನಡುವೆ ಮರೈನ್ ಡ್ರೈವ್‌ನಲ್ಲಿ ಸಂಜೆ 5ರಿಂದ 7 ಗಂಟೆಗೆ ತೆರೆದ ಬಸ್‌ನಲ್ಲಿ ವಿಜಯೋತ್ಸವ ಮೆರವಣಿಗೆ ನಡೆಸಲಾಗುತ್ತಿದೆ. ಮೆರವಣಿಗೆಯಲ್ಲಿ ಪಾಲ್ಗೊಳ್ಳಲು ಸಂಜೆ 4:30 ಕ್ಕೆ ಮೊದಲು ತಲುಪಿ ಮತ್ತು ರಸ್ತೆಯಲ್ಲಿ ಯಾರೂ ದಟ್ಟಣೆ ಸೇರಬೇಡಿ ಎಂದಿದ್ದಾರೆ.

Exit mobile version